ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎಪ್ರಿಲ್ 22ರಂದು ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ಸಂಸ್ಥೆಯಿಂದ ಸಿಪಿಆರ್ (ಕಾರ್ಡಿಯೊ ಪಲ್ಮನರಿ ರಿಸಸಿಟೇಶನ್) ಮತ್ತು ಪ್ರಥಮ ಚಿಕಿತ್ಸೆಯ ತರಬೇತಿಯನ್ನು ನೀಡಲಾಯಿತು. ಕೌಶಲ್ಯ ಸಬಲೀಕರಣದ ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ| ಪಿ. ಎಲ್ ಧರ್ಮ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಜಯರಾಜ್ ಅಮೀನ್ ಉಪಸ್ಥಿತರಿದ್ದರು. ಕಣಚೂರು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ| ರೋಹನ್ ಮೋನಿಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು, ಮೆಡಿಸಿನ್ ವಿಭಾಗದ ಡಾ| ಶ್ರೀನಿವಾಸ್ ಮತ್ತು ಡಾ| ಉಬೈದುಲ್ಲಾ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.
Author: main-admin
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದು, ಘಟನೆಯಲ್ಲಿ ಭಾಗಿಯಾದ ಇಬ್ಬರು ಭಯೋತ್ಪಾದಕರ ರೇಖಾಚಿತ್ರಗಳನ್ನು ಭದ್ರತಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಸರ್ವ ಪ್ರಯತ್ನಗಳನ್ನು ಮಾಡುತ್ತಿವೆ. ಭಯೋತ್ಪಾದಕ ದಾಳಿಯ ಕೆಲವೇ ಗಂಟೆಗಳಲ್ಲಿ, ಶಂಕಿತ ಭಯೋತ್ಪಾದಕನ ಮೊದಲ ಫೋಟೋ ಬಹಿರಂಗಗೊಂಡಿದೆ ಎಂದು ವರದಿಯಾಗಿದೆ. ವೀಡಿಯೊವೊಂದರಲ್ಲಿ ತೆಗೆದ ಸ್ಕ್ರೀನ್‌ಶಾಟ್‌ನಲ್ಲಿ, ಭಯೋತ್ಪಾದಕನೆಂದು ಶಂಕಿಸಲಾದ ವ್ಯಕ್ತಿಯೊಬ್ಬ ಕುರ್ತಾದಲ್ಲಿ ಎಕೆ ಸರಣಿಯ ಅಸಾಲ್ಟ್ ರೈಫಲ್‌ನೊಂದಿಗೆ ಕಾಣಿಸಿಕೊಂಡಿದ್ದಾನೆ. ಭದ್ರತಾ ಸಂಸ್ಥೆಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರಲ್ಲಿ ಇವನೂ ಒಬ್ಬ ಎಂಬುವುದಾಗಿ ಹೇಳಿದ್ದಾರೆ. ಶಸ್ತ್ರಾಸ್ತ್ರಗಳನ್ನು ಹಿಡಿದು ಪಠಾಣ್ ಸೂಟ್ ಧರಿಸಿರುವ ವ್ಯಕ್ತಿಯೊಬ್ಬ ವಿಡಿಯೋದಲ್ಲಿ ಸೆರೆಯಾಗಿದ್ದಾನೆ. ಈ ಫೋಟೋವನ್ನು ನಿನ್ನೆ ತಡರಾತ್ರಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸಿಆರ್‌ಪಿಎಫ್ ಮತ್ತು ಸೇನೆಯೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರಕ್ಕೆ ಧಾವಿಸಿ…
ಪುತ್ತೂರು: ಬಾಡಿಗೆಗೆಂದು ಹೋದ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬವರು ರಿಕ್ಷಾ ಸಮೇತ ನಾಪತ್ತೆಯಾಗಿರುವ ಕುರಿತು ಎ.21ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ 5.30ಕ್ಕೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಡಿಗೆ ಇದೆ ಎಂದು ಮನೆಯಿಂದ ಹೋದವರು ಮತ್ತೆ ಮನೆಗೆ ವಾಪಸಾಗಿಲ್ಲವೆಂದು ತಿಳಿದು ಬಂದಿದೆ. ಈ ಘಟನಾ ಕುರಿತು ಇತರ ಅಟೋ ರಿಕ್ಷಾದವರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಲೋಕೇಶ ಅವರ ಪತ್ನಿ ಸುವರ್ಣ ಬಿ.ಎಸ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಣಿಪಾಲ: ಎಪ್ರಿಲ್ 4 ರಂದು 12:00 ಗಂಟೆಯ ಸಮಯಕ್ಕೆ ಮಹೇಶ್ ಪ್ರಸಾದ್, ಪೊಲೀಸ್ ನಿರೀಕ್ಷಕರು ಮಣಿಪಾಲ ಪೊಲೀಸ್ ಠಾಣೆ ಇವರು ಠಾಣೆಯಲ್ಲಿದ್ದಾಗ ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮದ ಧಶರಥ ನಗರದ ಡೌನ್ ಟೌನ್ ಲಾಡ್ಜ್‌ನ ರೂಮ್ ನಂ 106 ರಲ್ಲಿ ಕೆಲವು ವ್ಯಕ್ತಿಗಳು ಮಾದಕವಸ್ತುವನ್ನು ತೆಗೆದುಕೊಳ್ಳಲು ಉಪಯೋಗಿಸುವ ಸಿರಿಂಜ್‌ಗಳನ್ನು ಹೊಂದಿದ ಬಗ್ಗೆ ಮಾಹಿತಿ ಬಂದಿದೆ. ನಂತೆ ಸಿಬ್ಬಂದಿಯವರ ಹಾಗೂ ಪಂಚರುಗಳ ಸಮಕ್ಷಮ ಡೌನ್ ಟೌನ್ ಲಾಡ್ಜ್‌ನ ರೂಮ್ ನಂ 106 ಕ್ಕೆ ದಾಳಿ ಮಾಡಿ ಆರೋಪಿಗಳಾದ 1. ಮಹಮ್ಮದ್ ಅಜರುದ್ದೀನ್ 2. ರಾಜೇಶ್ ಪ್ರಕಾಶ್ ಜಾದವ್, 3. ನಾಜೀಲ್ ಮಲ್ಪೆ ಇವರನ್ನು ಹಾಗೂ ಅವರ ವಶದಲ್ಲಿದ್ದ 40,000/- ರೂಪಾಯಿ ಮೌಲ್ಯದ ಒಟ್ಟು 13.70 ಗ್ರಾಂ ತೂಕದ MDMA ಮತ್ತು 10,500/- ರೂಪಾಯಿ ಮೌಲ್ಯದ 225 ಗ್ರಾಂ ಗಾಂಜಾ , ಪ್ಲಾಸ್ಟಿಕ್ ಸಣ್ಣ ಸಣ್ಣ ಕವರ್ 15 , 5 ಸಿರಿಂಜ್‌ಗಳು , Sterile water 5 ml ನ 3…
ಮಂಗಳೂರು : ಕಾವೂರು ಮತ್ತು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡಿದ ಪ್ರಕರಣದ ಸಂಬಂಧ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೋಂದೆಲ್ ಜಂಕ್ಷನ್ ಬಳಿ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದ ಮಂಜೇಶ್ವರ ಉದ್ಯಾವರ ನಿವಾಸಿ ಅಬ್ದುಲ್ ಆಜೀಜ್ (39), ಕುಂಜತ್ತೂರು ನಿವಾಸಿ ಅಪ್ಸರ್ (36) ಪಂಜಿಮೊಗರು ಜಂಕ್ಷನ್ ಬಳಿ ಪುತ್ತೂರು ನಿವಾಸಿ ಮುಹಮ್ಮದ್ ಫೈಜಲ್ (27) ಸೆಂಟ್ರಲ್ ಮಾರ್ಕೆಟ್ ಬಳಿ ಬಿಹಾರ ಮೂಲದ ಫಳ್ನೀರ್ ನಲ್ಲಿ ವಾಸವಿದ್ದ ಇಮ್ರಾನ್ ಆಲಮ್ (18) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಾಲ್ವರನ್ನು ವೈದ್ಯಕೀಯ ತಪಾಸನೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳೂರು: ನಗರದಲ್ಲಿ ಸ್ವಚ್ಛತೆ ಮತ್ತು ಸೇವಿಸುವ ಆಹಾರದಲ್ಲಿ ನೈರ್ಮಲ್ಯತೆಯನ್ನು ಕಾಪಾಡುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಕೆಲವು ಹೊಟೇಲ್ ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಜ್ಯೋತಿ ವೃತ್ತದಿಂದ ಬೆಂದೂರ್ವೆಲ್ ವರೆಗೆ ಪ್ರಸಿದ್ಧ ಹೊಟೇಲ್ ನವರೇ ಕಸ ವಿಂಗಡಣೆಯ ನಿಯಮವನ್ನು ಉಲ್ಲಂಘಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ದಿಢೀರ್ ರೈಡ್ ಮಾಡಲಾಯಿತು. ಮೊದಲ ಬಾರಿಗೆ ಐದು ಸಾವಿರ ರೂ ದಂಡ ವಿಧಿಸುವುದರೊಂದಿಗೆ ಇನ್ಮುಂದೆ ಇದೇ ನಿರ್ಲಕ್ಷ್ಯ ಮುಂದುವರೆದಲ್ಲಿ ಟ್ರೇಡ್ ಲೈಸೆನ್ಸ್ ರದ್ದು ಮಾಡಿ ಹೊಟೇಲ್ ಮುಚ್ಚಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಲಾಯಿತು.
ಮಂಗಳೂರು: ಕೇರಳದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕೊಡಮಾಡುವ ಅವ್ವ ಫೌಂಡೇಶನ್ ಹುಬ್ಬಳಿ ವತಿಯಿಂದ ನೀಡುವ ದತ್ತಿನಿಧಿ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘಟದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ. ಮೇ 3ರಂದು ಕಾಸರಗೋಡು ಜಿಲ್ಲೆಯ, ಸೀತಾಂಗೋಳಿ ಎಲೈನ್ಸ್ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸುಮಾರು 2 ದಶಕಗಳ ಸೇವೆಯಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಕೇರಳದಲ್ಲಿ ಜನಮನ್ನಣೆಗೆ ಪಾತ್ರವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಇಲ್ಲಿನ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಇತರ ಕನ್ನಡಪರ ಸಂಘ ಸಂಸ್ಥೆಗಳೊಂದಿಗೆ ಸೇರಿ ಶ್ರಮಿಸುತ್ತಿದೆ. ಕನ್ನಡ ಮತ್ತು ಮಲೆಯಾಳ ಪತ್ರಕರ್ತರ ಸ್ನೇಹಸೇತುವಾಗಿ ಈ ಸಂಘವು ಕಾರ್ಯಾಚರಿಸುತ್ತಿದೆ. ಸಂಘವು ವಾರ್ಷಿಕವಾಗಿ ದತ್ತಿನಿಧಿ ಪ್ರಶಸ್ತಿಯನ್ನು ಪ್ರದಾನಿಸುತ್ತಿದ್ದು, ಈ ಬಾರಿಯ ಅವ್ವ ಫೌಂಡೇಶನ್ ಹುಬ್ಬಳಿ ನೀಡುವ ದತ್ತಿನಿಧಿ ಪ್ರಶಸ್ತಿಗೆ ಶ್ರೀನಿವಾಸ ನಾಯಕ್ಇಂದಾಜೆ ಅವರನ್ನು ಆಯ್ಕೆ ಮಾಡಲಾಗಿದೆ. ದತ್ತಿನಿಧಿ ಪ್ರಶಸ್ತಿಯು ನಗದು, ಪ್ರಶಸ್ತಿ…
ಮಲ್ಪೆ: ಸಾರ್ವಜನಿಕ ಸ್ಥಳದಲ್ಲಿ ಹಣದ ಬೆಟ್ಟಿಂಗ್ ಮಾಡಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಸಿಕ್ಕ ಮಾಹಿತಿಯ ಮೇರೆಗೆ ಪೊಲೀಸರು ದಿಢೀರನೆ ಜುಗಾರಿ ಅಡ್ಡಕ್ಕೆ ದಾಳಿ ನಡೆಸಿರುವ ಘಟನೆ ಉಡುಪಿಯ ಕಿದಿಯೂರು ಗ್ರಾಮದ ಕಪ್ಪೆಟ್ಟು ಬ್ರಹ್ಮಬೈದರ್ಕಳ ಗರಡಿಯ ಬಳಿ ನಡೆದಿದೆ. ಶರತ್, ಸಂದೇಶ, ಜಯಕರ, ರಮೇಶ, ಅರುಣ್ ಕುಮಾರ್ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ಆರೋಪಿಗಳಾಗಿದ್ದಾರೆ. ಪೊಲೀಸರು ಈ ಸ್ಥಳದಲ್ಲಿ ಮರೆಯಲ್ಲಿ ನಿಂತು ನೋಡುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಕೋಳಿಗಳನ್ನು ಹಿಂಸಾತ್ಮಕವಾಗಿ ಕಾಲಿಗೆ ಬಾಳು ಕತ್ತಿಯನ್ನು ಕಟ್ಟಿ ಕೋಳಿ ಅಂಕ ನಡೆಸುತ್ತಿದ್ದುದರ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ. ದಾಳಿ ನಡೆಸಿದಾಗ ಹಣ ಸ್ಥಳದಲ್ಲಿಯೇ ಎಸೆದು ಕೆಲವರು ಎಸ್ಕೇಪ್ ಆಗಿದ್ದಾರೆ. ಸುಮಾರು ಹತ್ತು ಸಾವಿರ ರೂ ಮೌಲ್ಯದ ಕೋಳಿಗಳು, ಕಾಲಿಗೆ ಕಟ್ಟಿದ್ದ ಎರಡು ಕತ್ತಿಗಳನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ರಾಜ್ಯದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ಐಜಿ ಮತ್ತು ಡಿಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶಿಸಿದ್ದಾರೆ. ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿರುವುದಾಗಿ ಹೇಳಿದ್ದಾರೆ.ಅಂದಹಾಗೇ ನಿನ್ನೆ ಹೆಚ್ ಎಸ್ ಆರ್ ಲೇಔಟ್ ನಲ್ಲಿರುವಂತ ಅವರ ಮನೆಯಲ್ಲಿ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿತ್ತು. ತನಿಖೆ ನಡೆಸಿದಂತ ಪೊಲೀಸರಿಗೆ ಸ್ಥಳದಲ್ಲಿ ಖಾರದಪುಡಿ ಡಬ್ಬಿ, ಚಾಕು ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ಪತ್ನಿ ಪಲ್ಲವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನಿನ್ನೆ ಓಂ ಪ್ರಕಾಶ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಮುಂಬೈನಿಂದ ಉಡುಪಿ-ಶಿರ್ವ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಸರ್ಕಾರಿ ಐರಾವತ ಬಸ್ಸಿನಲ್ಲಿ ಕೂತಿದ್ದ ಪ್ರಯಾಣಿಕರೋರ್ವರು ಪ್ರಯಾಣ ಮಾಡುತ್ತಿದ್ದಾಗಲೇ ಕೂತಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಕುಮಟಾ ಮೂಲದ ಪ್ರಯಾಣಿಕ ನಲ್ವತ್ತೈದು ವರ್ಷ ವಯಸ್ಸಿನ ಸತ್ಯ ಭಂಢಾರಿ ಮೃತ ದುರ್ದೈವಿ. ಇವರ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇವರ ಮೃತದೇಹವನ್ನು ಆ್ಯಂಬುಲೆನ್ಸ್ ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.










