ಮುಂಬೈನಿಂದ ಉಡುಪಿ-ಶಿರ್ವ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಸರ್ಕಾರಿ ಐರಾವತ ಬಸ್ಸಿನಲ್ಲಿ ಕೂತಿದ್ದ ಪ್ರಯಾಣಿಕರೋರ್ವರು ಪ್ರಯಾಣ ಮಾಡುತ್ತಿದ್ದಾಗಲೇ ಕೂತಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಕುಮಟಾ ಮೂಲದ ಪ್ರಯಾಣಿಕ ನಲ್ವತ್ತೈದು ವರ್ಷ ವಯಸ್ಸಿನ ಸತ್ಯ ಭಂಢಾರಿ ಮೃತ ದುರ್ದೈವಿ. ಇವರ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇವರ ಮೃತದೇಹವನ್ನು ಆ್ಯಂಬುಲೆನ್ಸ್ ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
Author: main-admin
ಬೆಂಗಳೂರು : ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಹಿನ್ನಲೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಹೈಕೋರ್ಟ್ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶದಿಂದಾಗಿ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯಲ್ಲಿ ಏಪ್ರಿಲ್ 15 ಮತ್ತು 19 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸ್ಸು ಮಾಡಲಾಗಿತ್ತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿಕೆ ಅನುಸಾರ, ಹೈಕೋರ್ಟ್ ಆಡಳಿತ ವ್ಯವಸ್ಥೆ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ. ನ್ಯಾ. ಹೇಮಂತ್ ಚಂದನ ಗೌಡರ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ, ನ್ಯಾ.ಕೃಷ್ಣನ್ ನಟರಾಜನ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ, ನ್ಯಾ. ಎನ್. ಶ್ರೀನಿವಾಸ ಸಂಜಯ್ ಗೌಡ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ, ನ್ಯಾ.ಕೃಷ್ಣ ದೀಕ್ಷಿತ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ, ನ್ಯಾ.ಪೆರುಗು…
ಬೆಂಗಳೂರು : ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಈ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆಯಿಂದೀಚೆಗೆ ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿಯನ್ನು ಎಚ್‌ಎಸ್‌ಆರ್ ಲೇಔಟ್ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದರು. ಇಂದು ಪಲ್ಲವಿಯನ್ನು ಬಂಧನಕ್ಕೊಳಪಡಿಸುವ ಔಪಚಾರಿಕತೆ ಮಾಡಲಾಯಿತು. ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲೆ ಓಂ ಪ್ರಕಾಶ್ ನಿನ್ನೆ ಸಂಜೆ ಭೀಕರವಾಗಿ ಹತ್ಯೆಯಾಗಿದ್ದಾರೆ. ಪತ್ನಿ ಮತ್ತು ಮಗಳು ಸೇರಿಕೊಂಡು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಪುತ್ರ ಕಾರ್ತಿಕೇಶ್ ನೀಡಿದ ದೂರಿನಂತೆ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಲ್ಲವಿ, ಪುತ್ರಿ ಕೃತಿ, ಪುತ್ರ ಕಾರ್ತಿಕೇಶ್ ಸೇರಿದಂತೆ ಕುಟುಂಬಸ್ಥರು ಮತ್ತು ಸಂಬಂಧಿಕರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮೂರು ಮೊಬೈಲ್ ಸೀಜ್ ಮಾಡಿದ್ದಾರೆ. ಪ್ರಾಥಮಿಕ ವಿಚಾರಣೆ ವೇಳೆ ಆತ್ಮರಕ್ಷಣೆಗಾಗಿ ಕೊಲೆ ಮಾಡಿರುವುದಾಗಿ ಪತ್ನಿ ಪಲ್ಲವಿ ಎಸಿಪಿ ವಾಸುದೇವ್ ಮುಂದೆ ಹೇಳಿಕೊಂಡಿದ್ದಾಳೆ. ಮೊದಲು ಓಂ ಪ್ರಕಾಶ್ ಮೇಲೆ ಖಾರದ ಪುಡಿ…
ಉಡುಪಿ: ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡದ ಕಾರಣಕ್ಕೆ ಒಂಭತ್ತು ಮಂದಿ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಕೆ. ಆದೇಶ ನೀಡಿದ್ದಾರೆ. ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಗೊತ್ತಿದ್ದರೂ ಕೂಡಾ ಗಂಗೊಳ್ಳಿ, ಬೈಂದೂರು ಮತ್ತು ಕೊಲ್ಲೂರು ಠಾಣೆಗಳ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಇವರು ಮಾಹಿತಿ ನೀಡದ ಕಾರಣ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಬೇರೆ ವ್ಯಾಪ್ತಿಯ ಪೊಲೀಸರು ದಾಳಿ ನಡೆಸಿದ್ದರು.
ಅಪ್ರಾಪ್ತ ಪುತ್ರನಿಗೆ ಬೈಕ್ ನೀಡಿದ್ದ ತಂದೆಗೆ ದಾವಣಗೆರೆ ಸಂಚಾರಿ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ನಗರದ ಉತ್ತಮ್ ಚಂದ್ ಬಡಾವಣೆ ನಿವಾಸಿಗೆ ದಾವಣಗೆರೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಬರೋಬ್ಬರಿ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ನಗರದ ಎಆರ್ ಜಿ ಕಾಲೇಜ್ ಬಳಿ ಮಗ ಬೈಕ್ ಚಾಲನೆ ಮಾಡಿದ್ದಾನೆ. ತಪಾಸಣೆ ವೆಳೆ ಅಪ್ರಾಪ್ತನಿಗೆ ಬೈಕ್ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಹೀಗಾಗಿ ಅಪ್ರಾಪ್ತ ಬಾಲಕನ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ್ದು, ಪುನರಾವರ್ತೆಯಾದ್ರೆ ಎಫ್ ಐಆರ್ ದಾಖಲಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಪತ್ನಿಯೇ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಮೊದಲು ಓಂ ಪ್ರಕಾಶ್ ಹತ್ಯೆ ಬಗ್ಗೆ ಅವರ ಪತ್ನಿ ಮಾಹಿತಿ ನೀಡಿದ್ದರು. ಆದರೆ ತದನಂತರ ಸ್ವತಹ ಓಂ ಪ್ರಕಾಶ್ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಕೊಡಲೇ ಅವರ ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ್ದರು. 1981ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್, ಬಳಿಕ 2015ರಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದರು. ಅಲ್ಲದೇ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಮರಣೋತ್ತರ ಪರೀಕ್ಷೆಗಾಗಿ ಸದ್ಯ ಓಂ ಪ್ರಕಾಶ್ ಅವರ ಮೃತದೇಹವನ್ನು ಸೈಂಟ್ ಜಾನ್ಸ್ ಆಸ್ಪತ್ರೆಗೆ…
ಮಂಗಳೂರು: ಬಜಾಲ್ ಕಟ್ಟಪುಣಿಯಲ್ಲಿ ವಾಸವಾಗಿದ್ದ ಕೊಪ್ಪಳ ಮೂಲದ ಶಿವಪುತ್ರಪ್ಪ ಎಂಬವರ ಪುತ್ರಿ ಯಲ್ಲಮ್ಮ (18) ಅವರು ಎ.14ರಂದು ಮನೆಯಿಂದ ನಾಪತ್ತೆಯಾಗಿದ್ದಾರೆ. ಶಿವಪುತ್ರಪ್ಪ ಬೆಳಗ್ಗೆ 7ಕ್ಕೆ ಉಳ್ಳಾಲ ಆಜಾದ್ ನಗರಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದು ಅವರ ಪತ್ನಿ ಕೂಡ ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪುತ್ರಿ ಯಲ್ಲಮ್ಮ ಮನೆಯಲ್ಲಿದ್ದಳು. ಸಂಜೆ ಬಂದು ನೋಡಿದಾಗ ಮನೆಗೆ ಬೀಗ ಹಾಕಿದ್ದು ಯಲ್ಲಮ್ಮ ಮನೆಯಲ್ಲಿ ಇರಲಿಲ್ಲ. ಬೀಗದ ಕೈ ಪಕ್ಕದಲ್ಲಿತ್ತು. ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಎಲ್ಲ ಕಡೆ ಹುಡುಕಾಡಿದರೂ ಆಕೆ ಪತ್ತೆಯಾಗಿಲ್ಲ. 4 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಪೂರ ಶರೀರ, ದುಂಡು ಮುಖ ಚೂಡಿದಾರ ಧರಿಸಿದ್ದು, ಕನ್ನಡ ಭಾಷೆ ಬಲ್ಲವರಾಗಿದ್ದಾರೆ. ಈ ಯುವತಿ ಪತ್ತೆಯಾದಲ್ಲಿ ಕಂಕನಾಡಿ ನಗರ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ನಗರದ ಅತ್ತಾವರದಲ್ಲಿ 2014ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೇರಳ ಕಾಸರಗೋಡಿನ ಚೆರ್ಕಳ ಎಂಬಲ್ಲಿನ ಮುಹಜೀರ್ ಸನಾಫ್ (25), ಕಾಸರಗೋಡು ವಿದ್ಯಾನಗರದ ಇರ್ಷಾದ್ (24) ಹಾಗೂ ಸಫ್ವಾನ್ (24) ಶಿಕ್ಷೆಗೊಳಗಾದ ಆರೋಪಿಗಳು. ಇವರು ನಾಫೀರ್ ಮತ್ತು ಫಾಹಿಮ್ ಎಂಬವರನ್ನು ಕೊಲೆಗೈದಿದ್ದರು. ನಾಫೀರ್ ಮತ್ತು ಫಾಹಿಮ್ ಗೆಳೆಯರಾಗಿದ್ದರು. ನಾಫೀರ್ ವಿದೇಶದಿಂದ ಚಿನ್ನದ ಗಟ್ಟಿಗಳನ್ನು ತಂದಿದ್ದ. ಅವುಗಳನ್ನು ಮಾರಾಟ ಮಾಡಲು ಮೂವರು ಆರೋಪಿಗಳು ಸಹಕರಿಸಿದ್ದರು. ಚಿನ್ನ ಮಾರಾಟ ಮಾಡಿ ಬಂದ ಹಣದ ವಿಚಾರದಲ್ಲಿ ನಫೀರ್ ಮತ್ತು ಫಾಹಿಮ್ ತಕರಾರು ಮಾಡಿದರು ಎಂಬ ದ್ವೇಷದಿಂದ ಮೂವರು ಆರೋಪಿಗಳು ಸೇರಿ 2014ರ ಜು.1ರಂದು ಕೊಲೆ ಮಾಡಿದ್ದರು. ಕೊಲೆ ಮಾಡಿ ಶವಗಳನ್ನು ಹೂತು ಹಾಕುವ ಉದ್ದೇಶದಿಂದ ಆರೋಪಿಗಳು ಕಾಸರಗೋಡಿನ ಬೇಡಡ್ಕ ಎಂಬಲ್ಲಿ 10 ಸೆಂಟ್ಸ್ ಜಾಗವನ್ನು 2014ರ ಮೇ 15ರಂದು ಖರೀದಿಸಿದ್ದರು. 3ನೇ ಆರೋಪಿ ಸಫ್ಘಾನ್ ಹೆಸರಿಗೆ…
ಮಂಗಳೂರು: ಕರಾವಳಿಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಶನಿವಾರ ನಗರದ ಫಾ.ಮುಲ್ಲರ್ ಆಸ್ಪತ್ರೆ ಬಳಿ ನೆರವೇರಿತು. ಫಾ.ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ನಿರ್ದೇಶಕ ವಂ|ಫಾ|ರಿಚಾರ್ಡ್ ಕುವೆಲ್ಲೊ ಅವರು ಆಶೀರ್ವದಿಸಿ, ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡು ಜನರ ಬಳಕೆಗೆ ಶೀಘ್ರ ಸಿಗುವಂತಾಗಲಿ ಎಂದರು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಕಳೆದೊಂದು ತಿಂಗಳಲ್ಲೇ ರೋಹನ್ ಸಂಸ್ಥೆಯ ನಾಲ್ಕು ಪ್ರಮುಖ ಯೋಜನೆಗಳಿಗೆ ಶಿಲಾನ್ಯಾಸ ಮಾಡಲಾಗಿದೆ, ಬಹುತೇಕ ಎಲ್ಲ ಫ್ಲಾಟ್‌ಗಳೂ ಮಾರಾಟಗೊಂಡಿವೆ, ಕಂಕನಾಡಿಯ ಪ್ರಮುಖ ಆಯಕಟ್ಟಿನ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ಇಥೋಸ್‌ನ ಉಳಿದ ಫ್ಲಾಟ್‌ಗಳೂ ಕೂಡಾ ಶೀಘ್ರ ಮಾರಾಟಗೊಳ್ಳಲಿವೆ, ಜನರ ಅಭಿರುಚಿಗೆ ತಕ್ಕಂತೆಯೇ, ಸದೃಢವಾದ ಹಾಗೂ ಸಮಕಾಲೀನ ಶೈಲಿಯ ಕಟ್ಟಡಗಳನ್ನು ನಿರ್ಮಿಸುವ ಕಾರಣ ಇದು ಸಾಧ್ಯವಾಗಿದೆ ಎಂದರು. ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಅವರು ಮಾತನಾಡಿ, ಕಂಕನಾಡಿ ಪ್ರದೇಶದಲ್ಲಿ ಫಾದರ್ ಮುಲ್ಲರ್‍ಸ್ ಆಸ್ಪತ್ರೆ ಒಂದು ಹೆಗ್ಗುರುತಾಗಿದೆ, ಈಗ ನಿರ್ಮಾಣಗೊಳ್ಳಲಿರುವ ರೋಹನ್ ಇಥೋಸ್ ಇನ್ನೊಂದು ಆಕರ್ಷಕ…
ಮಂಗಳೂರು: ವಕ್ಫ್ ತಿದ್ದುಪಡಿ ಕಾನೂನು ವಿರೋಧಿಸಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ವಾಹನದಲ್ಲೇ ಪ್ರತಿಭಟನೆಕಾರರಿಗೆ ಡ್ರಾಪ್ ಕೊಡಲಾಗಿತ್ತು ಎಂಬ ವೀಡಿಯೊ ವೈರಲ್ ಆಗಿತ್ತು. ಹೆದ್ದಾರಿ ಬಂದ್ ಮಾಡಿದ ಪ್ರತಿಭಟನೆಕಾರರನ್ನು ಎಸಿಪಿ ವಾಹನದಲ್ಲೇ ಕರೆದೊಯ್ದಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಲಾಗಿತ್ತು. ಆದರೆ ಇದು ಪ್ರತಿಭಟನೆಕಾರರಿಗೆ ಡ್ರಾಪ್ ಕೊಟ್ಟದ್ದಲ್ಲ, ಗಾಯಗೊಂಡ ಓರ್ವ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೀಡಿಯೊ ಎಂದು ಪೊಲೀಸರು ಸ್ಪಷ್ಟನೆ ಕೊಟ್ಟಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಕೆಲ ಪ್ರತಿಭಟನಾಕಾರರನ್ನು ಪೊಲೀಸರು ತಮ್ಮ ವಾಹನದಲ್ಲೇ ಕರೆದೊಯ್ದರು ಎಂಬ ವೀಡಿಯೊಕ್ಕೆ ಬಹಳ ಆಕ್ರೋಶ ವ್ಯಕ್ತವಾಗಿತ್ತು. ಮಂಗಳೂರು ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ಅವರ ಸರ್ಕಾರಿ ಕಾರಿನಲ್ಲಿ ಕೆಲ ಪ್ರತಿಭಟನಾಕಾರರನ್ನು ಕರೆದೊಯ್ದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರ ಸರ್ಕಾರಿ ವಾಹನಗಳನ್ನು ದುರ್ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.ಇದು ಪ್ರತಿಭಟನಾಕಾರರನ್ನು ಸಾಗಿಸಿದ್ದು ಅಲ್ಲ. ಟೆಂಪೋ ಟ್ರಾವೆಲ್ಲರ್ ವಾಹನ ಬಾಲಕನೊಬ್ಬನಿಗೆ ಗುದ್ದಿತ್ತು. ಬಾಲಕನ ಕಾಲಿನ ಅದರ ಮೇಲೆ ಚಕ್ರ ಹರಿದು ಹೋಗಿತ್ತು. ಗಾಯಗೊಂಡ ಬಾಲಕನನ್ನು…









