Author: main-admin

ಬಿ.ಕಾಂ ವಿದ್ಯಾರ್ಥಿನಿಯೊಬ್ಬಳು ಎದೆನೋವಿನಿಂದ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕವನ ಕೆವಿ (21) ಮೃತ ವಿದ್ಯಾರ್ಥಿನಿ. ಪಾಪಣ್ಣ ಹಾಗೂ ಗಾಯತ್ರಿ ದಂಪತಿಯ ಮಗಳು. ಹಾಸನ ನಗರದ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿದ್ದ ಕವನಳಿಗೆ ನಿನ್ನೆ ಸಂಜೆ ಮನೆಗೆ ಬಂದಾಗ ತೀವ್ರ ಎದೆನೋವು ಕಾಣಿಸಿ ಕೊಂಡಿದ್ದು, ಕುಡಿಯಲು ನೀರು ಕೊಡುವಂತೆ ಕೇಳಿದ್ದಾಳೆ. ನೀರು ತರುವಷ್ಟರಲ್ಲಿ ಏಕಾಏಕಿ ಕುಸಿದು ಬಿದ್ದ ಕವನಳನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಬರುವಷ್ಟರಲ್ಲೇ ಆಕೆ ಕೊನೆಯುಸಿರೆಳೆದಿದ್ದಳು. ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Read More

ಮಂಗಳೂರು: ಅಬ್ದುಲ್ ರಹಿಮಾನ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಮೂವರು ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ. ದೀಪಕ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಮಾಹಿತಿಯಿದ್ದು, ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಕಲಂದರ್ ಶಾಫಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ದೀಪಕ್ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Read More

ಮಂಗಳೂರು : ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 28/10/2024 ರಂದು ಅರ್ಜಿ ಸಲ್ಲಿಸಿದ್ದು. ಇದಕ್ಕೆ ಉಳ್ಳಾಲ ತಹಶಿಲ್ದಾರರು 21/03/2025 ರಂದು ಪ್ರಮಾಣ ಪತ್ರ ನೀಡಿರುತ್ತಾರೆ. ಆದ್ರೆ ಗಣಿ ಇಲಾಖೆಯಲ್ಲಿ ಅನುಮತಿ ಪತ್ರ ನೀಡಿರುವುದಿಲ್ಲ . ಈ ಬಗ್ಗೆ ವಿಚಾರಿಸಲು ಗಣಿ ಇಲಾಖೆಗೆ ಹೋದಾಗ ಉಪ ನಿರ್ದೇಶಕಿ ಕೃಷ್ಣವೇಣಿಯ ಕೊಠಡಿಗೆ ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಸಿ ಫೈಲಿಗೆ ಅನುಮತಿ 50 ಸಾವಿರ ಹಣ ತೆಗೆದುಕೊಳ್ಳಿ ನಂತರ ಸಹಿ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಉಪ ನಿರ್ದೇಶಕಿ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ವಿರುದ್ಧ ದೂರುದಾರ ದೂರು ನೀಡಿದ್ದರು. ಲಂಚದ ಹಣ 50 ಸಾವಿರ ರೂಪಾಯಿ ಮಂಗಳೂರು…

Read More

ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಬಾಕಿ ಇದೆ. ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇದರಲ್ಲಿ 219 ಪಿಎಸ್‌ಐಗಳನ್ನು ಬೆಂಗಳೂರು ನಗರಕ್ಕೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ‌. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್‌ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ ಪಟ್ಟುಕೊಳ್ಳದೇ, ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಹೇಳಿದರು. ರಾಜ್ಯದಾದ್ಯಂತ…

Read More

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊಳತ್ತಮಜಲು ನಲ್ಲಿ ಅಬ್ದುಲ್ ರಹಿಮಾನ್ ಅವರ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಇಂದು ಪ್ರಕರಣ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಯಾವುದೇ ಅಹಿತಕರ ಘಟನೆ ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ರೀತಿಯ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಅಬ್ದುಲ್ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೂಬಸ್ತ ಮಾಡಲಾಗಿದೆ ಎಂದರು.‌ ಬಿಜೆಪಿ ಶವಗಳ ಮೇಲೆ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದ ಸಚಿವರು, ಪ್ರಚೋದನಾಕಾರಿ ಭಾಷಣಗಳನ್ನ ಮಾಡಿ ಸಮಾಜದಲ್ಲಿ ಕೋಮು ದ್ವೇಷವನ್ನ ಮೂಡಿಸಲಾಗುತ್ತಿದೆ. ಹತ್ಯೆ ಮಾಡುವ ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ ಪ್ರಶ್ನೆಯೇ ಇಲ್ಲ. ಮಂಗಳೂರಿನಲ್ಲಿ ನಡೆದ ಹತ್ಯೆಗಳ ವಿಚಾರದಲ್ಲಿ ನಮ್ಮ ಸರ್ಕಾರ ನಿಸ್ಪಕ್ಷಪಾತವಾದ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಕೈಗೊಂಡಿದೆ. ಯಾವುದೇ ಭೇದ ಭಾವ ಮಾಡಿಲ್ಲ. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಇನ್ನು, ಪ್ರಕರಣ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೊಹಮ್ಮದ್ ನಿಸಾ‌ರ್ ಎಂಬುವರು ನೀಡಿದ ದೂರು ಆಧರಿಸಿ, ಅಬ್ದುಲ್ ರಹಿಮಾನ್​ಗೆ ಪರಿಚಯಸ್ಥರೇ ಆಗಿರುವ ದೀಪಕ್ ಮತ್ತು ಸುಮಿತ್ ಸೇರಿದಂತೆ 15 ಜನರ ವಿರುದ್ಧ ಬಿಎನ್​ಎಸ್​ ಕಾಯ್ದೆ 103, 109, 118(1), 118(2), 190, 191(1), 191(2), 191(3)ರ ಅಡಿ ಎಫ್​ಐಆರ್​ ದಾಖಲಾಗಿದೆ. “ಅಬ್ದುಲ್ ರಹಿಮಾನ್ ಮತ್ತು ನಾನು (ಕಲಂದರ್ ಶಾಫಿ) ಪಿಕ್ ಅಪ್ ವಾಹನದಲ್ಲಿನ ಮರಳನ್ನು ಅನ್​ ಲೋಡ್ ಮಾಡಲು ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ…

Read More

ಮಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಭೀಕರ ಕೊಲೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಯುವಕನೋರ್ವವನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೌದು ಯುವಕನ ಹತ್ಯೆಯ ಬಳಿಕ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ…

Read More

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲಿನ ಕೊಲೆಯತ್ನ ಪ್ರಕರಣ‌ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಹೊಳೆಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುವ ಸಮಯ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ…

Read More

ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಪಿಕಪ್ ಚಾಲಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ. ಕೊಳತ್ತಮಜಲು ನಿವಾಸಿ ರಹೀಮ್ ಎಂಬಾತ ಕೊಲೆಗೀಡಾದವರು ಎಂದು ಪೊಲೀಸರು ತಿಳಿಸಿದ್ದಾರೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ. ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು, ಆತನಿಗೂ ಕಡಿಯಲಾಗಿದೆ. ಆದರೆ ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿದ್ದಾರೆ.

Read More

ಪುತ್ತೂರು: ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಸಂಭವಿಸಿದೆ. ಗಾಯಾಳುಗಳನ್ನು ಅಂಡೆಪುನಿ ನಿವಾಸಿ ಈಶ್ವರ್ ಭಟ್, ಅವರ ಮಗಳು ಅಪೂರ್ವ ಹಾಗೂ ಮೊಮ್ಮಗು ಎಂದು ತಿಳಿದು ಬಂದಿದೆ. ಮಾಹಿತಿಯ ಪ್ರಕಾರ ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಇಂದು ಶ್ರಾದ್ಧ ಕಾರ್ಯಕ್ರಮದ ಹಿನ್ನೆಲೆ ಭಾಗವಹಿಸಲು ಅವರ ಮಗಳು ಅಪೂರ್ವ ಹಾಗೂ ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಆಗಮಿಸಿದ್ದರು. ಈಶ್ವರ್ ಭಟ್ ಅವರು ಪುತ್ತೂರು ಪೇಟೆಯಿಂದ ಇವರನ್ನು ತಮ್ಮ ಕಾರಿನಲ್ಲಿ ಮನೆಗೆ ಕರೆತರುತ್ತಿದ್ದ ವೇಳೆ, ಮುರ ಜಂಕ್ಷನ್ ಬಳಿ ಪಡೂರಿಗೆ ತೆರಳುವ ಒಳರಸ್ತೆಗೆ ಕಾರನ್ನು ತಿರುಗಿಸುತ್ತಿದ್ದರು. ಈ ಸಂದರ್ಭದಲ್ಲಿ ಪುತ್ತೂರಿನಿಂದ ಮಂಗಳೂರಿನತ್ತ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್, ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಹಲವು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ತಿಳಿದುಬಂದಿದೆ. ಅಪಘಾತ ನಡೆದ ಕೂಡಲೇ ಸ್ಥಳೀಯರು…

Read More