ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್‌ನ ತುಳುಭವನ ಸಿರಿ ಚಾವಡಿಯಲ್ಲಿ 16 ನವೆಂಬರ್ 2025 ರಂದು ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ 72ನೇ ಸಹಕಾರ ಸಪ್ತಾಹ ಆಚರಣೆಯ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಶ್ರೀ ಯೋಗೀಶ್ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ಮೂಡುಬಿದಿರೆಯ ಜೈನಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಶಿವ ದುರ್ಗಾಂಬಾ ಮಠದ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ, ಮಾಜಿ ಸಚಿವ ಶ್ರೀ ಕೃಷ್ಣ ಪಾಲೆಮಾರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು.ಗೌರವ ಸೂಚಕವಾಗಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ…
Author: main-admin
ಬೆಂಗಳೂರಲ್ಲಿ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ನಡೆದಿದ್ದು, 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಟರ್ ಮೈಂಡ್ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಹೌದು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಇದರ ನಡುವೆ ದರೋಡೆಯ ಮಾಸ್ಟರ್ ಮೈಂಡ್ ಓರ್ವ ಪೊಲೀಸ್ ಕಾನ್ಸ್ಟೇಬಲ್ ಎಂಬ ಶಂಕೆ ವ್ಯಕ್ತವಾಗಿದೆ. ದರೋಡೆ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿದೆ. ಅಣ್ಣಪ್ಪ ನಾಯ್ಕ್ ರಾಬರಿ ಮಾಡಲು ಹುಡುಗರ ಗ್ಯಾಗ್ ರೆಡಿ ಮಾಡಿದ್ದನು. ಕಳ್ಳತನ ಹೇಗೆ ಮಾಡಬೇಕು.? ಹೇಗೆ ತಪ್ಪಿಸಿಕೊಳ್ಳಬೇಕು ಎಂದು ಈತ ಹುಡುಗರಿಗೆ ಟ್ರೈನಿಂಗ್ ಕೂಡ ಕೊಟ್ಟಿದ್ದನು. ಈತನ ಪ್ಲ್ಯಾನ್ ನಂತೆ ಹುಡುಗರು 7.11 ಕೋಟಿ ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ವಾಟ್ಸಪ್ ಕಾಲ್ ಬಳಕೆ ಮಾಡಿರೋದು ಖಾತರಿಯಾಗುತ್ತಿದ್ದಂತೆ ಪೊಲೀಸರು ಸಿಸಿಟಿವಿಗಳ…
ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ ಕಲ್ಪಿಸಿದ್ದು, ಈವರೆಗೆ 180 ಜನ ಮೀಸಲಾತಿಯನ್ನು ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರಿನ ಆಡುಗೋಡಿ ಸಿಎಆರ್ ಕವಾಯತು ಮೈದಾನದಲ್ಲಿ ಇಂದು ನಡೆದ ‘ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025’ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಕ್ರೀಡಾ ಮೀಸಲಾತಿಯ ಸದ್ಬಳಕೆ ಮಾಡಿಕೊಂಡು 180 ಜನ ಪಿಎಸ್‌ಐ, ಪೇದೆ ಹುದ್ದೆಗಳಿಗೆ ನೇಮಕಾತಿ ಹೊಂದಿದ್ದಾರೆ. ಅದೇರೀತಿ, ಪೊಲೀಸ್ ಕುಟುಂಬದಿಂದ ಬಂದ ಮಕ್ಕಳಿಗೆ ಸಿಇಟಿಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು. ಕ್ರೀಡೆ ದೈಹಿಕವಾಗಿ ಮಾತ್ರವಲ್ಲದೇ, ಮಾನಸಿಕವಾಗಿಯೂ ನಮ್ಮನ್ನು ಹೆಚ್ಚು ಸದೃಡಗೊಳಿಸುತ್ತದೆ. ನಮ್ಮ ಜೀವನದ ಅನೇಕ ಸಂದರ್ಭಗಳಲ್ಲಿ ಸೋಲು-ಗೆಲುವುಗಳ ಅನುಭವಗಳು ಎದುರಾಗುತ್ತವೆ. ಸೋತಾಗ ನಿರಾಶೆಯಾಗುತ್ತದೆ. ಕ್ರೀಡೆಗಳು ಆತ್ಮಸ್ಥೈರ್ಯ ಹೆಚ್ಚಿಸುತ್ತದೆ. ಕರ್ನಾಟಕ ಪೊಲೀಸ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಅನೇಕ ಸಂದರ್ಭಗಳಲ್ಲಿ ಸದನದ…
ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಮತ್ತೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಶೇ.50ರಷ್ಟು ದಂಡ ಪಾವತಿಗೆ ಡಿಸೆಂಬರ್.12ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಆದೇಶ ಹೊರಡಿಸಿದ್ದಾರೆ. ವಾಹನ ಸವಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.50ರಷ್ಟು ದಂಡ ಪಾವತಿಗೆ ನವೆಂಬರ್.21ರಿಂದ ಡಿಸೆಂಬರ್.12ರವರೆಗೆ ಅವಧಿ ವಿಸ್ತರಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ನಾಳೆಯಿಂದ ಡಿಸೆಂಬರ್ 12ರವರೆಗೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಲಾಗಿದೆ. ದಂಡದ ಮೊತ್ತ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಆದೇಶಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಪಾವತಿಸಲು ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ.
ಪುತ್ತೂರು: ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕಬಕದ ಮಹಮ್ಮದ್ ಮುಸ್ತಫಾ(36) ಎಂದು ಗುರುತಿಸಲಾಗಿದೆ. ಆರೋಪಿ ಮುಕ್ರಂಪಾಡಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ 14 ಗ್ರಾಂ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದನು. ಆರೋಪಿಯ ವಿರುದ್ಧ ಈಗಾಗಲೇ ಪೋಕ್ಸೋ ಪ್ರಕರಣ ಸಹ ದಾಖಲಾಗಿ, ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಸಹ ಮುಗಿಸಿದ್ದ ಎಂದು ತಿಳಿದು ಬಂದಿದೆ. 2024 ರಲ್ಲಿಯೂ ಈತನ ವಿರುದ್ಧ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಪ್ರಕರಣಗಳು ದಾಖಲಾಗಿದ್ದವು.
ಮಂಗಳೂರು: ಗಂಡನ ಮೇಲಿನ ಕೋಪದಲ್ಲಿ ಟೆಕ್ಸ್ ಟೈಲ್ ಅಂಗಡಿಗೆ ಬುಧವಾರ ಸಂಜೆ ವೇಳೆಗೆ ಬುರ್ಖಾ ಧರಿಸಿ ಬಂದಿದ್ದ ಪತ್ನಿಯೇ ತನ್ನ ಪತಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ಸಂಭವಿಸಿದೆ. ಕೃಷ್ಣ ಕುಮಾರ್ ಸೋಮಯಾಜಿ ಹಲ್ಲೆಗೀಡಾದವರಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದು ಹಲ್ಲೆ ಮಾಡಿದ್ದಾರೆ. ಬಿ.ಸಿ ರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ಸಂಜೆ ಏಳು ಗಂಟೆ ವೇಳೆಗೆ ಬುರ್ಖಾ ಧರಿಸಿ ಗ್ರಾಹಕನ ಸೋಗಿನಲ್ಲಿ ಬಂದಿದ್ದ ಪತ್ನಿ ಕ್ಯಾಶ್ ಕೌಂಟರ್ ನಲ್ಲಿ ಕುಳಿತ್ತಿದ್ದ ಪತಿಗೆ ಕತ್ತಿಯಲ್ಲಿ ಕಡಿದು ಪರಾರಿಯಾಗಿದ್ದರು. ಕೈಗೆ ಗಂಭೀರ ಗಾಯಗೊಂಡ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇತ್ತೀಚೆಗೆ ಗಂಡ – ಹೆಂಡತಿ ಮಧ್ಯೆ ಕೌಟುಂಬಿಕ ಕಲಹ ಉಂಟಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದೇ ವಿಷಯದಲ್ಲಿ ಪತ್ನಿ ನೇರವಾಗಿ ಅಂಗಡಿಗೆ ಬಂದು ಕತ್ತಿಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ (51) ಬುಧವಾರ ಬೆಳಿಗ್ಗೆ ಕರ್ತವ್ಯದಲ್ಲಿರುವಾಗ ಹೃದಯಾಘಾತದಿಂದ ನಿಧನರಾದರು. ಗಣೇಶ್ ಎಂದಿನಂತೆ ಶಾಲೆಗೆ ಬಂದಿದ್ದರು, ಆದರೆ ಕರ್ತವ್ಯದ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡ ನಂತರ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಅವರನ್ನು ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರನ್ನು ಬದುಕಿಸಲು ಪ್ರಯತ್ನಿಸಿದರು, ಆದರೆ ಅವರ ಪ್ರಯತ್ನಗಳ ಹೊರತಾಗಿಯೂ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಮಾರ್ಪಳ್ಳಿಯ ನಿವಾಸಿಯಾಗಿದ್ದ ಅವರು, ಸ್ಥಳೀಯ ಸ್ನೇಹಿತರ ಸಂಘಗಳು, ಭಜನಾ ಮಂಡಳಿ ಮತ್ತು ಗದ್ದಿಗೆ ಅಮ್ಮನವರ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಕ್ಕಾಗಿ ಆ ಪ್ರದೇಶದಲ್ಲಿ ಪ್ರಸಿದ್ಧರಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಬೆಂಗಳೂರು : ದ್ವಿಚಕ್ರ ವಾಹನಗಳಲ್ಲಿ ಮಕ್ಕಳು ಹಿಂಬದಿ ಸವಾರಿ ಮಾಡುವಾಗ ಗರಿಷ್ಠ ವೇಗ ಮಿತಿಯನ್ನು ಸೂಚಿಸುವ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು 2022 ರ ನಿಯಮ 138 (7) ರ ಅನುಷ್ಠಾನಕ್ಕೆ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠವು ಈ ವಿಚಾರಣೆ ನಡೆಸಿದ್ದು, ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯ ಅಧಿಕಾರಿಗಳು ಕೆಲವು ಕ್ರಮಗಳನ್ನು ತೆಗೆದುಕೊಂಡಿದ್ದರೂ, ವಾಸ್ತವವಾಗಿ ಈ ನಿಯಮವನ್ನು ಇನ್ನೂ ಜಾರಿಗೆ ತಂದಿಲ್ಲ. ಈ ನಿಯಮವನ್ನು ಜಾರಿಗೆ ತರಬೇಕೆಂಬ ಯಾವುದೇ ಅನುಮಾನವಿಲ್ಲ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ, ಈ ನಿಯಮವನ್ನು ಜಾರಿಗೆ ತರಲು ರಾಜ್ಯವು ಈಗ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಈ ನಿಯಮವನ್ನು ಜಾರಿಗೆ ತರಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಕ್ಕೆ ನಿರ್ದೇಶಿಸುವ ಮೂಲಕ ನಾವು ಅರ್ಜಿಯನ್ನು ವಿಲೇವಾರಿ ಮಾಡಿದ್ದೇವೆ.” 9…
ಉಡುಪಿ: ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ತಲವಾರಿನಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಣಜಾರು ಪರಾರಿ ಮನೆ ನಿವಾಸಿ ಮಂಜುನಂದ ಹೆಗ್ಡೆ(49) ಹಾಗೂ ಕೊಪ್ಪಲ ನಿವಾಸಿ ಜಗದೀಶ್ ಹೆಗ್ಡೆ(48) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಕಬ್ಬಿಣದ ರಾಡನ್ನು ವಶಪಡಿಸಿಕೊಳ್ಳಲಾಗಿದೆ. ನ.15ರಂದು ರಾತ್ರಿ ವೇಳೆ ಶಿವರಾಜ್ ಎಂಬವರು ಕೆಲಸ ಮುಗಿಸಿ ವಾಪಾಸ್ಸು ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕಣಜಾರು ಗ್ರಾಮದ ಕೊಪ್ಪಲ ಎಂಬಲ್ಲಿ ಮಂಜುನಂದ ಹೆಗ್ಡೆ ಅಡ್ಡಗಟ್ಟಿ ತಲವಾರಿನಲ್ಲಿ ತಲೆಗೆ ಮಾರಣಾಂತಿಕವಾಗಿ ಹಲ್ಲೆಗೈದು ಕೊಲೆಗೆ ಯತ್ನಿಸಿದ್ದನು. ಬೈಕ್‌ನಿಂದ ಕೆಳಗೆ ಬಿದ್ದ ಶಿವರಾಜ್‌ಗೆ ಮಂಜುನಂದ ತಲವಾರಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಮಂಜುನಂದ ಹೆಗ್ಡೆ ಜೊತೆ ಜಯಾನಂದ ಹೆಗ್ಡೆ, ಚಂದ್ರಹಾಸ ಹೆಗ್ಡೆ ಹಾಗೂ ಇತರ 7 ರಿಂದ 8 ಮಂದಿ ಇದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಹಿರಿಯಡ್ಕ ಪೊಲೀಸ್ ಉಪನಿರೀಕ್ಷಕ ಪುನೀತ್…
ಮಂಗಳೂರು: ಸುಮಾರು ಎಂಟು ವರ್ಷಗಳ ಹಿಂದೆ ಆಗಸ್ಟ್ 25, 2018 ರಂದು ಪೀಟರ್ ಮೆಂಡೋನ್ಸಾ ಅವರು ಕಾಣೆಯಾದ ಪ್ರಕರಣದ ಬಗ್ಗೆ ಕಂಕನಾಡಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ, ನೆರೆಯ ಜಿಲ್ಲೆಗಳು ಮತ್ತು ಇತರ ರಾಜ್ಯಗಳಲ್ಲಿ ವ್ಯಾಪಕವಾಗಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿತ್ತು. ಈ ಕಾರ್ಯಾಚರಣೆಯ ಭಾಗವಾಗಿ ವಿವಿಧ ಆಶ್ರಮಗಳು ಮತ್ತು ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಲಾಗಿತ್ತು. ಪೀಟರ್ ಮೆಂಡೋನ್ಸಾ ಅವರು ಇದೀಗ ನವೆಂಬರ್ 8 ರಂದು ನಗರದ ವೆಲೆನ್ಸಿಯಾ ಚರ್ಚ್ ಬಳಿಯ ಆಶ್ರಮವೊಂದರಲ್ಲಿ ಪತ್ತೆಯಾಗಿದ್ದಾರೆ. ಕಂಕನಾಡಿ ಟೌನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಟಿ. ಡಿ. ನಾಗರಾಜ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಅನಿತಾ ಮತ್ತು ಶಿವಕುಮಾರ್, ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಶಿವಾನಂದ ಅವರನ್ನೊಳಗೊಂಡ ತಂಡವು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.









