Author: main-admin

ಮಂಗಳೂರು: ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾಡು,ಹೊರನಾಡು ಮತ್ತು ವಿದೇಶಗಳಲ್ಲಿರುವ ವಿವಿಧ ಕ್ಷೇತ್ರಗಳ 74 ಮಂದಿ ಸಾಧಕರನ್ನು ಗುರುತಿಸಿ ಈ ಬಾರಿಯ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನೀಡಿದೆ. ಮೇ 22ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಖ್ಯಾತ ಉದ್ಯಮಿ, ಸಾಮಾಜಿಕ ಮತ್ತು ಶಿಕ್ಷಣ ಕ್ಷೇತ್ರದ ಸಾಧಕ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು 2025 ಸಾಲಿನ ಆರ್ಯಭಟ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.ಬೊಂಡಾಲ ಸರಕಾರಿ ಶಾಲೆಯನ್ನು ದತ್ತು ಪಡೆದು ‘ದಿ.ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆ’ ಎಂಬ ಹೆಸರಿನಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಿದ್ದಲ್ಲದೆ ತಮ್ಮ ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಡಿರುವ ಸಮಾಜ ಸೇವೆ ಮತ್ತು ಯಕ್ಷಗಾನ ಸೇವೆಗಾಗಿ ಸಚ್ಚಿದಾನಂದ ಶೆಟ್ಟರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ.ಅಶೋಕ್ ಬಿ. ಹಿಂಚಿಗೇರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾಕ್ಟರ್ ಎಚ್.ಎಲ್.ಎನ್.ರಾವ್…

Read More

ಮಂಗಳೂರು: ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನು ಬದಿಗೆ ಸರಿಸಲು ಹೇಳಿದ್ದಕ್ಕೆ ಸಿಟ್ಟಾದ ಆಟೋ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲಕ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾವನ್ನು ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ ಹೇಳಿದ್ದಾರೆ. ಇಷ್ಟಕ್ಕೇ ಕುಪಿತಗೊಂಡ ಚಾಲಕ ಬಶೀರ್ ತನ್ನ ಸಹಚರ ರಿಕ್ಷಾ ಚಾಲಕರೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಬೇಕರಿಯೊಳಗಿದ್ದ ಅಶ್ವಿನ್ ಅವರ ತಾಯಿ ಮತ್ತು ಸಿಬ್ಬಂದಿ ಯುವತಿ ರಿಕ್ಷಾ ಚಾಲಕರನ್ನು ತಡೆದಿದ್ದು ಅವರನ್ನೂ ತಳ್ಳಿ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಶಿವಸಾಗರ್ ಹೊಟೇಲಿನ ಮಾಲಕ ಅವರು ಮಧ್ಯ ಪ್ರವೇಶಿಸಿ ಬೇಕರಿ ಮಾಲೀಕನಿಗೆ ಹಲ್ಲೆಗೆ ಮುಂದಾಗಿದ್ದ ರಿಕ್ಷಾ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 7 ಗ್ರಾ.ಪಂ.ಗಳ 7 ಕ್ಷೇತ್ರಗಳಲ್ಲಿ ಮೇ 25 ರಂದು ನಡೆಯುವ ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ 23ರ ಸಂಜೆ 5 ಗಂಟೆಯಿಂದ ಮೇ 25 ರ ಸಂಜೆ 5 ಗಂಟೆಯವರೆಗೆ ಉಳ್ಳಾಲ ತಾಲೂಕಿನ ಕಿನ್ಯಾ ಮುನ್ನೂರು, ಬಂಟ್ವಾಳ ತಾಲೂಕಿನ ವಿಟ್ಲ ಮುಡೂರು, ಬಾಳ್ತಿಲ, ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಪುದುವೆಟ್ಟು, ಸುಳ್ಯ ತಾಲೂಕಿನ ಕನಕಮಜಲು ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳನ್ನು, ಮದ್ಯ ತಯಾರಿಕಾ ಘಟಕಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್‌ ಕೆ ಆದೇಶಿಸಿದ್ದಾರೆ.

Read More

ಮಂಗಳೂರು: ಖಾಸಗಿ ಸಂಘ, ಸಂಸ್ಥೆಗಳು ಆಯೋಜಿಸುವ ತುಳು ಭಾಷೆ, ಸಾಹಿತ್ಯ , ಸಂಸ್ಕ್ರತಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮಂಗಳೂರಿನ ತುಳು ಭವನದಲ್ಲಿ ವಿಶೇಷವಾಗಿ ಶೇಕಡಾ ಐವತ್ತರಷ್ಟು ರಿಯಾಯಿತಿಯಲ್ಲಿ ಸಭಾಂಗಣವನ್ನು ನೀಡಲಾಗುತ್ತಿದೆ. ಇದೇ ವೇಳೆ ಯಕ್ಷಗಾನ , ನಾಟಕ ಆಯೋಜಿಸುವವರಿಗೆ ಇನ್ನೂ ಹೆಚ್ಚಿನ ರಿಯಾಯಿತಿಯಲ್ಲಿ ಸಭಾಂಗಣವನ್ನು ಒದಗಿಸಲಾಗುತ್ತದೆ, ಯಾವುದೇ ರಿಯಾಯಿತಿಯನ್ನು ರದ್ದುಪಡಿಸಲಾಗಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಘ ಸಂಸ್ಥೆಗಳು ಅಕಾಡೆಮಿಯೊಂದಿಗೆ ಸಹಭಾಗಿತ್ವದಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಉಚಿತವಾಗಿ ಸಭಾಂಗಣ ಒದಗಿಸಲಾಗುತ್ತದೆ. ಸಾಹಿತ್ಯ , ಸಾಂಸ್ಕ್ರತಿಕ ಹೊರತುಪಡಿಸಿದ ಖಾಸಗಿ ಕಾರ್ಯಕ್ರಮಗಳಿಗೆ ಮಾತ್ರ ಪೂರ್ತಿ ಬಾಡಿಗೆ ಪಡೆಯಲಾಗುತ್ತಿದೆ.ಯಾವುದೇ ಸಂಘ , ಸಂಸ್ಥೆಗಳು ನಡೆಸುವ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸರ್ಟಿಫಿಕೇಟ್ ನೀಡುವುದು ಅಕಾಡೆಮಿ ಕಾರ್ಯವ್ಯಾಪ್ತಿಗೆ ಸಂಬಂಧಿಸಿದ ವಿಚಾರವಾಗಿರುವುದಿಲ್ಲ ಅಥವಾ ಅಕಾಡೆಮಿಯು ಪರೀಕ್ಷೆ ಪ್ರಾಧಿಕಾರವಾಗಿರುವುದಿಲ್ಲ. ಅಕಾಡೆಮಿಯ ವತಿಯಿಂದ ನೇರವಾಗಿ ಅಥವಾ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸುವ ತರಬೇತಿ ಶಿಬಿರ , ಕಮ್ಮಟ, ಸೆಮಿನಾರ್ ಗಳಲ್ಲಿ ಭಾಗವಹಿಸುವವರಿಗೆ ಸರ್ಟಿಫೀಕೇಟ್ ಆಯಾ ಸಂದರ್ಭದಲ್ಲಿ…

Read More

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ. ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸೀಮಂತದ ಸಂಭ್ರದಲ್ಲಿ ಕುಟುಂಬದಲ್ಲಿ ಈಗ ಆಕ್ರಂದನ ಮುಗಿಲು ಮುಟ್ಟಿದೆ.

Read More

ಕಾಸರಗೋಡು: ಚಲಿಸುತ್ತಿದ್ದ ಕಾರು ಅಗ್ನಿಗಾಹುತಿಯಾದ ಘಟನೆ ಚೆರ್ಕಳ ಸಮೀಪದ ಬೇವಿಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಕಾರಲ್ಲಿದ್ದ ಐವರು ಅಪಾಯದಿಂದ ಪಾರಾಗಿದ್ದಾರೆ. ಮುಂಬೈಯಿಂದ ಕಣ್ಣೂರಿನ ಕಣ್ಣಾಪುರಕ್ಕೆ ತೆರಳುತ್ತಿದ್ದ ಕಾರು ಬೇವಿಂಜೆಗೆ ತಲುಪಿದಾಗ ಬೋನೆಟ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಎಲ್ಲರೂ ಹೊರಬಂದರು. ಕ್ಷಣಾರ್ಧದಲ್ಲಿ ಕಾರು ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಕರಕಲಾಗಿದೆ. ಕಾರಿನೊಳಗಿದ್ದ ಹಣ, ನಾಲ್ಕು ಪವನ್ ಚಿನ್ನಾಭರಣ, ಎರಡು ಮೊಬೈಲ್ ಫೋನ್, ಕ್ಯಾಮರಾ ಮೊದಲಾದವು ಹೊತ್ತಿ ಉರಿದಿವೆ ಎಂದು ತಿಳಿದು ಬಂದಿದೆ. ಮುಂಬೈ ನಲ್ಲಿರುವ ಇಕ್ಬಾಲ್ ಅಹ್ಮದ್ ಎಂಬವರು ಪತ್ನಿ , ಮಕ್ಕಳ ಸಹಿತ ಕಣ್ಣಾಪುರದಲ್ಲಿರುವ ಪತ್ನಿಯ ಸಹೋದರನ ಮನೆಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಒಂದೂವರೆ ತಿಂಗಳ ಹಿಂದೆಯಷ್ಟೆ ಸಿ. ಎನ್.ಜಿ ಕಾರು ಖರೀದಿಸಿದ್ದರು ಎನ್ನಲಾಗಿದೆ. ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More

ಬೆಳ್ತಂಗಡಿ: ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಎಂಬವರು ಬಂಧಿತ ಆರೋಪಿಗಳು. ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ದರು. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು ಹಿಡಿದುಕೊಂಡು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಲು ಬಂದಿದ್ದು, ಈ ವೇಳೆ ಪ್ರವೀಣ್ ತಪ್ಪಿಸಿಕೊಂಡು ಮನೆಯೊಳಗೆ ಹೋಗಿ ಬಾಗಿಲು ಹಾಕಿದ್ದಾನೆ. ಈ ವೇಳೆ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಿಗಳು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಪ್ರವೀಣ್‌ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ‌ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಮೇ22…

Read More

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕಾಞಾಂಗಾಡ್ ನ ಮಾಣಿಕ್ಕೋತ್‌ನಲ್ಲಿ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಮೃತಪಟ್ಟ ಮಕ್ಕಳು. ಅನ್ವರ್ ನ ಸಹೋದರ ಹಾಶಿಮ್ ನನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಣಿ ಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದು ನಾಗರಿಕರು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಪೊಲೀಸರು ಮಕ್ಕಳನ್ನು ಹೊರ ತೆಗೆದರೂ ಇಬ್ಬರು ಮೃತಪಟ್ಟಿದ್ದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Read More

ಮಂಗಳೂರು: ಚೂರಿಯಿಂದ ಇರಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಅವರ ಇಬ್ಬರು ಪುತ್ರರು ಗಾಯಗೊಂಡಿರುವ ಘಟನೆ ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ಎಂಬಲ್ಲಿ ಮೇ 22ರ ರಾತ್ರಿ ನಡೆದಿದೆ. ಮೃತರನ್ನು ವಾಮಂಜೂರು ನಿವಾಸಿ ಪುತ್ರ ಸುಲೈಮಾನ್ (50) ಎಂದು ಗುರುತಿಸಲಾಗಿದೆ. ಅವರ ಪುತ್ರರಾದ ಸಿಯಾಬ್ ಹಾಗೂ ರಿಯಾಬ್ ಮೇಲೂ ಆರೋಪಿ ಮುಸ್ತಾಫ(30) ಹಲ್ಲೆ ನಡೆಸಿದ್ದಾನೆ. ಪ್ರಾಥಮಿಕ ತನಿಖೆಯ ಪ್ರಕಾರ, ಮದುವೆ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ಸುಲೈಮಾನ್, ಸುಮಾರು ಎಂಟು ತಿಂಗಳ ಹಿಂದೆ ತನ್ನ ಸಂಬಂಧಿ, ಆರೋಪಿ ಮುಸ್ತಫಾನೊಂದಿಗೆ ಶಾಹೀನಾಜ್ ಎಂಬ ಮಹಿಳೆಯ ಮದುವೆ ಏರ್ಪಡಿಸಿದ್ದರು. ಆದರೆ ವೈವಾಹಿಕ ಭಿನ್ನಾಭಿಪ್ರಾಯದಿಂದಾಗಿ, ಘಟನೆಯ ಎರಡು ತಿಂಗಳ ಮೊದಲು ಶಾಹೀನಾಜ್ ತನ್ನ ತವರು ಮನೆಗೆ ಹಿಂದಿರುಗಿದ್ದರು. ಇದರಿಂದಾಗಿ ಮುಸ್ತಫಾ ಮತ್ತು ಸುಲೈಮಾನ್ ನಡುವೆ ವೈಮನಸ್ಸು ಉಂಟಾಗಿತ್ತು. ಘಟನೆ ನಡೆದ ರಾತ್ರಿ, ಮುಸ್ತಫಾ ಸುಲೈಮಾನ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರೆ ಮಾಡಿದ್ದಾನೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಸುಲೈಮಾನ್ ತನ್ನ ಪುತ್ರರಾದ ರಿಯಾಬ್ ಮತ್ತು ಸಿಯಾಬ್ ಜೊತೆ ವಿಷಯವನ್ನು ಬಗೆಹರಿಸಲು ವಳಚ್ಚಿಲ್‌ನಲ್ಲಿರುವ…

Read More

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ಬಿಹಾರ ಮೂಲದ ಬ್ರಹ್ಮದೇವ್ ಯಾದವ್ (37) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಆರೋಪಿಯಿಂದ 60,680 ರೂ. ಮೌಲ್ಯದ 690 ಗ್ರಾಂ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ, ಅಧಿಕಾರಿಗಳು ಮೊಬೈಲ್ ಫೋನ್, 680 ರೂ. ನಗದು ಮತ್ತು ಇತರೆ ವಸ್ತುಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿರುವ ಮಣಿಪಾಲ ರೈಲ್ವೆ ನಿಲ್ದಾಣ ರಸ್ತೆಯ ಸಮೀಪದ ಡಯಾನಾ ಟಾಕೀಸ್ ರಸ್ತೆಯ ಕ್ರಾಸ್‌ರೋಡ್ ಬಳಿ ಆರೋಪಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಎಂದು ವರದಿಯಾಗಿದೆ. ಉಪ ಪೊಲೀಸ್ ಅಧೀಕ್ಷಕ ಎ.ಸಿ. ಲೋಕೇಶ್ ಮತ್ತು ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ಅವರ ಮೇಲ್ವಿಚಾರಣೆಯಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ತಂಡವು ಈ ಬಂಧನ ಕಾರ್ಯಾಚರಣೆಯನ್ನು ನಡೆಸಿದೆ. ಈ ಕಾರ್ಯಾಚರಣೆಯಲ್ಲಿ ಎಎಸ್‌ಐ ಉಮೇಶ್, ಪ್ರವೀಣ್ ಕುಮಾರ್, ಪ್ರವೀಣ್, ರಾಜೇಶ್, ರಾಘವೇಂದ್ರ, ವೆಂಕಟೇಶ್, ಸಂತೋಷ್, ಧರ್ಮಪ್ಪ, ಅರುಣ್ ಕುಮಾರ್, ದೀಕ್ಷಿತ್, ಪವನ್, ನಿಲೇಶ್, ಪರಶುರಾಮ್, ಮುತ್ತಪ್ಪ,…

Read More