Author: main-admin

ಮಂಗಳೂರು: ಸಮುದ್ರದ ಅಲೆಗೆ ಸಿಲುಕಿದ ಮುಂಬೈ ಮೂಲದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಎನ್ಐಟಿಕೆ ಬಳಿಯ ಕಡಲ ತೀರದಲ್ಲಿ ಜರುಗಿದೆ. ಮುಂಬೈನಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಧ್ಯಾನ್ ಬಂಜನ್ (18) ಮೃತ ವಿದ್ಯಾರ್ಥಿ. ಎಸ್ಎಸ್ಎಲ್‌ಸಿ ವಿದ್ಯಾರ್ಥಿ ಹನೀಶ್ ಕುಲಾಲ್ (15) ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಸುರತ್ಕಲ್‌ನಲ್ಲಿ ನಡೆದ ಮದುವೆಗೆ ಮುಂಬೈನಿಂದ ಬಂದಿದ್ದ ಹತ್ತು ಮಂದಿಯಿದ್ದ ಕುಟುಂಬ ಆಗಮಿಸಿತ್ತು. ಸುರತ್ಕಲ್ ಸಮೀಪದ ಸೂರಿಂಜೆಯ ಪ್ರಖ್ಯಾತ್ ಎಂಬವರ ಮನೆಗೆ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಮಂಗಳವಾರ ಸಂಜೆ 5.30ರ ವೇಳೆಗೆ ಎನ್ಐಟಿಕೆ ಬೀಚ್ ಬಳಿ ಈಜಾಡುತ್ತಿದ್ದರು. ನೀರಿನಲ್ಲಿ ಆಡುತ್ತಿದ್ದಾಗಲೇ ಧ್ಯಾನ್ ಮತ್ತು ಹನೀಶ್ ಕುಲಾಲ್ ನೀರಿನ ಅಲೆಯಲ್ಲಿ ಸಿಲುಕಿದ್ದು, ಈ ವೇಳೆ ಲೈಫ್ ಗಾರ್ಡ್ ಸಿಬ್ಬಂದಿ ಪ್ರದೀಪ್ ಆಚಾರ್ಯ ಅವರು, ಅಲೆಗಳ ಎಡೆಯಿಂದ ಧ್ಯಾನ್ ನನ್ನು ಎಳೆದು ಮೇಲಕ್ಕೆ ತಂದಿದ್ದಾರೆ. ಆದರೆ ಹನೀಶ್ ಕುಲಾಲ್ ಜೀವರಕ್ಷಕ ಸಿಬ್ಬಂದಿ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ. ಧ್ಯಾನ್‌ನನ್ನು ಕೂಡಲೇ ಸುರತ್ಕಲ್ ಪದ್ಮಾವತಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ…

Read More

ಬೆಂಗಳೂರು : ಇಂಡಿಯಾ ಜಸ್ಟೀಸ್ ರಿಪೋರ್ಟ್ (IGR) 2025 ರ ಪ್ರಕಾರ, ಕರ್ನಾಟಕವು ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗಳಲ್ಲಿ ಅಗ್ರಸ್ಥಾನ ಪಡೆದಿದೆ. ದಕ್ಷಿಣ ಭಾರತದ ರಾಜ್ಯಗಳು ಉತ್ತಮ ಪ್ರದರ್ಶನ ತೋರಿದರೆ, ಉತ್ತರ ಭಾರತದ ರಾಜ್ಯಗಳು ಹಿಂದುಳಿದಿವೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನಗಳಲ್ಲಿವೆ. ಈ ವರದಿಯು ನ್ಯಾಯ ಒದಗಿಸುವ ಸಾಮರ್ಥ್ಯದಲ್ಲಿ ರಾಜ್ಯಗಳನ್ನು ಶ್ರೇಣೀಕರಿಸುತ್ತದೆ. ಭಾರತ ನ್ಯಾಯ ವರದಿ (ಐಜೆಆರ್) 2025 ರಲ್ಲಿ ಕರ್ನಾಟಕ ತನ್ನ ಅಗ್ರ ಸ್ಥಾನವನ್ನು ಉಳಿಸಿಕೊಂಡಿದೆ, ಕಳೆದ ವರ್ಷ ಹೊಂದಿದ್ದ ಶ್ರೇಯಾಂಕವನ್ನು ಉಳಿಸಿಕೊಂಡಿದೆ. ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್ ಸ್ಥಾನ ಪಡೆದಿದೆ. ಕಳೆದ ವರ್ಷ ಐದನೇ ಸ್ಥಾನ ಪಡೆದ ಆಂಧ್ರಪ್ರದೇಶ ಎರಡನೇ ಸ್ಥಾನದಲ್ಲಿದೆ. 2019 ರಲ್ಲಿ ಹನ್ನೊಂದನೇ ಸ್ಥಾನ ಪಡೆದಿದ್ದ ತೆಲಂಗಾಣ ತನ್ನ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ. ಇನ್ನು ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್…

Read More

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ಎಂಟು ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ರೂ.ನಗದು ಕಳವುಗೈದ ಘಟನೆ ಪೆರ್ಲ ದಲ್ಲಿ ನಡೆದಿದೆ. ಪೆರ್ಲ ಇಡಿಯಡ್ಕದ ಅಬ್ಬಾಸ್ ಆಲಿರವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಕೋಣೆಯಲ್ಲಿದ್ದ ಕಪಟನ್ನು ಮುರಿದು ಕಳವು ಮಾಡಲಾಗಿದೆ. ಮನೆಯವರು ಮಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Read More

ಉಡುಪಿ: ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ‌ ಪತ್ತೆಯಾದ ಘಟನೆ ನಡೆದಿದೆ. ಮಸೀದಿಯ ವ್ಯವಸ್ಥಾಪಕ ಸುಹೇಲ್‌ ಅವರು ನಿನ್ನೆ ಶೌಚಾಲಯಕ್ಕೆ ಹೋದಾಗ ನವಜಾತ ಶಿಶು ಮೃತಪಟ್ಟ‌ ಸ್ಥಿತಿಯಲ್ಲಿ ಬಿದ್ದಿತ್ತು. ತಕ್ಷಣವೇ ಅವರು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು,‌ ಶಿಶು ಜನನಕ್ಕೆ ಮುಂಚೆ ಅಥವಾ ಆ ತರುವಾಯ ಅಥವಾ ಜನನದ ಕಾಲದಲ್ಲಿ ಮರಣ ಹೊಂದಿದ್ದು, ಯಾರೋ ಅಪರಿಚಿತರು ಆ ಮಗುವಿನ ಮೃತದೇಹವನ್ನು ರಹಸ್ಯವಾಗಿ ವಿಲೇ ಮಾಡಿ, ಮಗುವಿನ ಜನನವನ್ನು ಮರೆಮಾಚಲು ಯತ್ನಿಸಿರುವ ಸಾಧ್ಯತೆಯಿದೆಂದು ತಿಳಿಸಿರುತ್ತಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ತನಿಖೆ ಮುಂದುವರೆದಿದೆ

Read More

ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13.00 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ 1.30% ಎನ್.ಪಿ.ಎ. ದಾಖಲಿಸಿದೆ. ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2024–2025ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್ ಸ್ಥಾಪನೆಯಾದಂದಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದ್ದು, ವಿತ್ತೀಯ ವರ್ಷದಲ್ಲಿ ಬೆಳ್ತಂಗಡಿ ಮತ್ತು ಬೆಳ್ಮಣ್’ನಲ್ಲಿ ಕ್ರಮವಾಗಿ 18ನೇ ಮತ್ತು 19ನೇ ಶಾಖೆಯನ್ನು ತೆರೆದಿದ್ದು, ಬೈಂದೂರ್‌ನಲ್ಲಿ ಶೀಘ್ರದಲ್ಲೇ ಶಾಖೆಯನ್ನು ತೆರೆಯಲಾಗುವುದು. ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ಸೇವಾ ಸೌಲಭ್ಯವನ್ನು ನೀಡುವ ಕರ್ನಾಟಕದ ಪಟ್ಟಣ…

Read More

ಕಾಸರಗೋಡು: ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಯುವತಿಗೆ ಬೆಂಕಿ ಹಚ್ಚಿದ್ದ, ಪರಿಣಾಮ ಗಂಭೀರ ಸುಟ್ಟ ಗಾಯಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ಬೇಡಡ್ಕದಲ್ಲಿ ನಡೆದಿದೆ. ಬೇಡಡ್ಕದ ರಮಿತಾ (22) ಮೃತಪಟ್ಟ ಯುವತಿ. ಬೇಡಡ್ಕ ಮನ್ನಡ್ಕ ಎಂಬಲ್ಲಿ ಅವರು ಅಂಗಡಿ ನಡೆಸುತ್ತಿದ್ದರು.ಏಪ್ರಿಲ್ 8 ರಂದು ಈ ಘಟನೆ ನಡೆದಿತ್ತು. ಸಮೀಪದ ಪೀಠೋಪಕರಣ ಮಳಿಗೆ ಮಾಲಕ ತಮಿಳುನಾಡು ಮೂಲದ ರಾಮಕೃತ (57) ಎಂಬಾತ ಈ ಕೃತ್ಯ ಎಸಗಿದ್ದನು.ಪಾನಮತ್ತನಾಗಿ ಕಿರುಕುಳ ನೀಡಿದ ಬಗ್ಗೆ ರಮಿತಾ ಪೊಲೀಸರಿಗೆ ದೂರು ನೀಡಿದ್ದು, ಇದರಿಂದ ಈತ ಆಕೆಯ ದಿನಸಿ ಅಂಗಡಿಯೊಳಗೆ ನುಗ್ಗಿ ಟಿನ್ನರ್ ಸುರಿದು ಬೆಂಕಿ ಹಚ್ಚಿದ್ದ. ಪರಿಣಾಮ ಯುವತಿ ಗಂಭೀರ ಸುಟ್ಟ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರಮಿತಾ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ದಿನಂಪ್ರತಿ ರಾಮಕೃತ ಪಾನಮತ್ತನಾಗಿ ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ರಮಿತಾ ಬೇಡಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ ವೈಷಮ್ಯದಿಂದ ಏ. 8 ರ…

Read More

ಕಾರ್ಕಳ: ಉಡುಪಿ – ಕಾರ್ಕಳ ರಸ್ತೆಯ ಕೊಟ್ನಕಟ್ಟೆಯ ಸಮೀಪ ಬಸ್ ಮತ್ತು ಪಿಕ್’ಆಪ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪಿಕ್’ಆಪ್ ವಾಹನದಲ್ಲಿದ್ದ ಒರ್ವ ವ್ಯಕ್ತಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ ಆದರೆ ಅದು ಇನ್ನು ಕೂಡ ಧೃಡಪಟ್ಟಿಲ್ಲ. ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು ತಕ್ಷಣ ಕಾರ್ಯ ಪ್ರವೃತ್ತರಾದ ಸಾರ್ವಜನಿಕರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಬಸ್ ಉಡುಪಿಯಿಂದ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿತ್ತು.‌ಪಿಕ್’ಆಪ್ ಕಾರ್ಕಳದ ಕಡೆಯಿಂದ ಬರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನದ ಬಳಿಕ ಸುಂಟರಗಾಳಿ ಸಹಿತ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ದಿಢೀರ್ ಬಿಸಿದ ಸುಂಟರಗಾಳಿಗೆ ಜನರು ಭಯಭೀತರಾಗಿದ್ದು, ರಸ್ತೆಗಳಲ್ಲಿ ಧೂಳಿನಿಂದಾಗಿ ಸಂಚಾರಕ್ಕೆ ಸಂಕಷ್ಟವಾಗಿತ್ತು. ಹಿರಿಯಡಕದಲ್ಲಿ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಪಡುಭಾಗ ಗರಡಿ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ. ಮುಂಡುಜೆ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುಯಿಲಾಡಿ ಭಾಗದಲ್ಲಿ ಗಾಳಿಗೆ ನೂರಾರು ಅಡಿಕೆ ಮರಗಳು ಬಿದ್ದು ಭಾರಿ ನಷ್ಟ ಉಂಟಾಗಿದೆ. ಕಾರ್ಕಳ, ಮಣಿಪಾಲ, ಹಿರಿಯಡ್ಕ, ಉಡುಪಿ ಪಟ್ಟಣ ಮತ್ತು ಬ್ರಹ್ಮಾವರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಯಿತು. ಗಾಳಿ ವಿಶೇಷವಾಗಿ ಪ್ರಬಲವಾಗಿದ್ದ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿತು. ಬಲವಾದ ಗಾಳಿಯ ನಂತರ ತಕ್ಷಣವೇ ಮಳೆ ಪ್ರಾರಂಭವಾಯಿತು. ಮಲ್ಪೆ ಪರಿಸರದಲ್ಲೂ ಸುಂಟರಗಾಳಿ ಸಹಿತ ಮಳೆ ಸುರಿದಿದ್ದು ಮರಗಳು ಧರೆಗೆ ಒರಗಿ ಮನೆಗಳಿಗೆ ಹಾನಿಯಾಗಿವೆ.ನೂರಾರು ಕಡ ವಿದ್ಯುತ್ ತಂತಿಗಳ ಮೇಲೆ ಮರಗಳು ಒರಗಿದ್ದು, ವ್ಯಾಪಕ ಹಾನಿ…

Read More

ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ತುವಿನಲ್ಲಿ ನಡೆದಿದೆ. ಧರ್ಮಸ್ಥಳದದಿಂದ ಮುಂಡಾಜೆ ಕಡೆಗೆ ಸಂಚರಿಸುತ್ತಿದ್ದ ಕಾರು ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿಎರಡು ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Read More

ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳ ಗುಲ್ಜಾರ್‌ ಸ್ಟ್ರೀಟ್‌ ನಿವಾಸಿ ಆರೀಬ್‌ ಅಹಮ್ಮದ್‌(31) ಎಂದು ಗುರುತಿಸಲಾಗಿದೆ. ಆರೀಬ್‌ ಅಹಮ್ಮದ್‌ ಎ.13ರಂದು ಆಂಧ್ರಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ತಾಂಗೋಡೆ 2ನೇ ಕ್ರಾಸ್ ಗೆ ಬಂದಿದ್ದನು. ಇದನ್ನು ಖರೀದಿಸಲು ಅಪರಿಚಿತರು ಬರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ‌. ಬಂಧಿತ ಆರೋಪಿಯಿಂದ 5.75 ಲಕ್ಷ ಮೌಲ್ಯದ 7 ಕಿಲೋ, 304 ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಪೋನ್-2, 1520 ರೂ. ನಗದು ಸಹಿತ ಒಟ್ಟು 5,96,520 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ವಿಜಯವಾಡದ ಸೈಕಲ್‌ ರಿಕ್ಷಾವಾಲನಿಂದ ಗಾಂಜಾ ಖರೀದಿಸಿರುವ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾನೆ. ಈ ಕುರಿತು ಸೆನ್ ಅಪರಾಧ…

Read More