ಮಣಿಪಾಲದ ಸ್ಕೂಲ್ ಆಫ್ ಕಾಮರ್ಸ್ ಎಕೊನೋಮಿಕ್ ಅಕಾಡೆಮಿ ವಿದ್ಯಾರ್ಥಿಯೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪಟ್ಟೆಯಾಗಿದೆ. ಮೃತರನ್ನು ಛತ್ತಿಸ್‌ಗಡದ ಅನ್ಶುಲ್ ಯಾದವ್ (21) ಎಂದು ಗುರುತಿಸಲಾಗಿದೆ. ಇವರು ಬಿಬಿಎ (ಬ್ಯಾಚುಲರ್ ಆಫ್ ಬ್ಯುಸಿನೆಸ್ ಅಕಾಡೆಮಿ) ವ್ಯಾಸಾಂಗ ಮಾಡುತ್ತಿದ್ದು ಮಣಿಪಾಲದ ಎಂಐಟಿ ಹಾಸ್ಟೆಲ್ ನಲ್ಲಿ ವಾಸ್ತವ್ಯ ಮಾಡಿಕೊಂಡಿದ್ದರು. ಇವರು ತನ್ನ ಮೊದಲ ವರ್ಷದ ಸೆಕೆಂಡ್ ಸೆಮಿಸ್ಟರ್‌ನಲ್ಲಿ 4 ವಿಷಯ ಗಳಲ್ಲಿ ಅನುತ್ತೀರ್ಣಗೊಂಡ ವಿಚಾರದಲ್ಲಿ ಮನನೊಂದು ಮೇ 12ರಂದು ರಾತ್ರಿಯಿಂದ ಮೇ 18ರ ಬೆಳಗಿನ ಮಧ್ಯಾವಧಿಯಲ್ಲಿ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಏಜೆನ್ಸಿಯೊಂದು ಸುಮಾರು 300ಕ್ಕೂ ಅಧಿಕ ಮಂದಿಗೆ 9 ಕೋಟಿಗೂ ಅಧಿಕ ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದರೂ ಕ್ರಮಕೈಗೊಳ್ಳದೆ ಮತ್ತಷ್ಟು ವಂಚನೆ ಮಾಡಲು ಅವಕಾಶಕೊಟ್ಟ ಆರೋಪದ ಮೇಲೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಬೆಂದೂರ್‌ವೆಲ್‌ನಲ್ಲಿ ಒಂದು ವರ್ಷದಿಂದೀಚೆಗೆ ಕಾರ್ಯಾಚರಿಸುತ್ತಿದ್ದ ಹಯರ್ ಗ್ಲೋ ಎಲಿಗೆಂಟ್ ಓವರ್‌ಸೀಸ್ ಇಂಟರ್‌ನ್ಯಾಷನಲ್ ಪ್ರೈ.ಲಿ. ಸಂಸ್ಥೆಯು ನ್ಯೂಜಿಲೆಂಡ್‌ನಲ್ಲಿರುವ ವಲರಿಸ್ ಎಂಬ ರಿಗ್ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಜಿಲ್ಲೆಯ 185ಕ್ಕೂ ಅಧಿಕ ಮಂದಿಯಿಂದ ತಲಾ 1.65 ಲಕ್ಷ ರೂ.ನಿಂದ 1.80 ಲಕ್ಷ ರೂ.ವರೆಗೆ ಪಡೆದು ವಂಚಿಸಿದೆ.ಕರ್ನಾಟಕ ಮಾತ್ರವಲ್ಲದೆ ಕೇರಳ ಸೇರಿದಂತೆ ಇತರ ಕೆಲವು ರಾಜ್ಯಗಳ ಜನರೂ ವಂಚನೆಗೆ ಒಳಗಾಗಿದ್ದಾರೆ. ಇದೀಗ ವಂಚನೆಗೊಳಗಾದವರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ವಂಚನೆಯ ಕರಾಳ ಮುಖ ಅನಾವರಣಗೊಂಡಿದೆ.…
ಮಂಗಳೂರು: ನಗರದ ಕೊಡಿಯಾಲ್ ಬೈಲ್ ನ್ಲಲಿರುವ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಮತ್ತು ಮತ್ತೊಂದು ಗ್ಯಾಂಗ್ ನಡುವೆ ಹೊಡೆದಾಟ ನಡೆದಿದ್ದು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನೌಷದ್ ಮೇಲೆ ಇನ್ನೊಂದು ಗುಂಪಿನ ಕೈದಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ ಸೋಮವಾರ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಕೋರ್ಟ್ ಗೆ ಚೊಟ್ಟೆ ನೌಷಾದ್ ನನ್ನು ಪೊಲೀಸರು ಹಾಜರುಪಡಿಸಿದ್ದರು. ಬಳಿಕ ಮೈಸೂರು ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ನಿರ್ಧರಿಸಿದ್ದು ಈ ಮಧ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೊ ನೋಡಬೇಕು ಎಂದು ನೌಷಾದ್ ಹೇಳಿದ್ದ ಎನ್ನಲಾಗಿದೆ. ಜೈಲಿನಲ್ಲಿ ಮತ್ತೋರ್ವ ಖೈದಿ ಭೇಟಿಗಾಗಿ ನೌಷಾದ್ ನನ್ನು ಪೊಲೀಸರು ಕರೆದುಕೊಂಡು ಹೋಗಿದ್ದ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಕಲ್ಲು ಹಾಗೂ ಸಿಕ್ಕ ಸಿಕ್ಕ ವಸ್ತುಗಳನ್ನ ಎಸೆದು ಹಲ್ಲೆಗೆ ಯತ್ನ ನಡೆದಿದೆ. ಕೂಡಲೇ ಜೈಲು ಸಿಬಂದಿಗಳು ದಾಳಿಯನ್ನು…
ಉಳ್ಳಾಲ: ಯುವಕನೊಬ್ಬ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಘಟನೆ ನಡೆದಿದೆ. ಕುರ್ನಾಡು ಹೂವಿನಕೊಪ್ಪಲ ನಿವಾಸಿ ಸುಧೀರ್ (32) ಆತ್ಮಹತ್ಯೆ ಮಾಡಿಕೊಂಡವರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಂಬಂಧಿಕರಿಗೆ ನನ್ನ ಕಿಡ್ನಿಯನ್ನು ನೀಡಿ, ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸಬೇಡಿ’ ಎಂದು ಡೆತ್ ನೋಟ್ ಬರೆದಿಟ್ಟ ಯುವಕ ತಾನು ಕಲಿತ ಶಾಲೆಯ ಆವರಣದಲ್ಲಿ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ.ಪೇಂಟರ್ ಆಗಿದ್ದ ಸುಧೀರ್, ನಸುಕಿನ ಜಾವ ಬೈಕ್‌ನಲ್ಲಿ ಹಾಲು ತರಲು ಮನೆಯಿಂದ ತೆರಳಿದ್ದರು. ತಡವಾದರೂ ಮಗ ಬಾರದ ಕಾರಣ ಅವರ ತಾಯಿ ಸುಧೀರ್ ಅವರನ್ನು ಹುಡುಕೊಂಡು ಹೋದಾಗ ಮನೆ ಸಮೀಪದ ಶಾಲೆಯ ಹೊರಗಡೆ ಬೈಕ್ ಕೀ ಸಮೇತ ಪತ್ತೆಯಾಗಿತ್ತು. ಶಾಲೆಯೊಳಗೆ ಗಮನಿಸುವಾಗ ಸುಧೀರ್ ಅವರು ಶಾಲೆಯ ಮಹಡಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಅವಿವಾಹಿತರಾಗಿದ್ದ ಸುಧೀರ್ ಅವರ ಸಹೋದರಿಯ ಪತಿ ಕಿಡ್ನಿ ಸಮಸ್ಯೆಯಿಂದ…
ಮಂಗಳೂರು: ವಿದೇಶಗಳಲ್ಲಿ ವಂಚನೆಯ ಉದ್ಯೋಗ ನೇಮಕಾತಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಗಂಭೀರ ಲೋಪ ಎಸಗಿದ ಇಬ್ಬರು ಅಧಿಕಾರಿಗಳನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಹಿಂದಿನ ದೂರುಗಳು ಮತ್ತು ನಿರ್ದೇಶನಗಳನ್ನು ನೀಡಿದ್ದರೂ ಸಹ, ಮೆಸರ್ಸ್ ಹೈರ್ಗ್ಲೋ ಎಲಿಗಂಟ್ ಓವರ್ಸೀಸ್ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ವಿಫಲರಾದ ಕಾರಣ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸೋಮಶೇಖರ್ ಜಿ.ಸಿ. ಅವರನ್ನು ಅಮಾನತುಗೊಳಿಸಲಾಗಿದೆ. ಪೊಲೀಸರ ನಿಷ್ಕ್ರಿಯತೆ ಮತ್ತು ಮೇಲ್ವಿಚಾರಣೆಯ ಕೊರತೆಯು ಆರೋಪಿಗಳು ಹಲವಾರು ಉದ್ಯೋಗ ಆಕಾಂಕ್ಷಿಗಳಿಗೆ 1.82 ಕೋಟಿ ರೂ.ಗಳಿಗೂ ಹೆಚ್ಚು ವಂಚನೆ ಮಾಡಲು ಅವಕಾಶ ನೀಡಿದಂತಾಗಿದೆ ಪ್ರಸ್ತುತ ಬರ್ಕೆ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿರುವ ಮತ್ತು ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 235/2024 ರಲ್ಲಿ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಶ್ರೀ ಉಮೇಶ್ ಕುಮಾರ್ ಎಂ.ಎನ್. ಅವರನ್ನು ಬಹು ತನಿಖಾ ಲೋಪಗಳಿಗಾಗಿ ಅಮಾನತುಗೊಳಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ವಿಫಲವಾಗಿರುವುದು, ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಲು,…
ಬಂಟ್ವಾಳ: ಕೆಎಸ್ಸಾರ್ಟಿಸಿ ಐರಾವತ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. ಪಾಣೆಮಂಗಳೂರು – ನೆಹರೂ ನಗರದಲ್ಲಿ ರವಿವಾರ ತಡರಾತ್ರಿ ಸಂಭವಿಸಿದೆ. ಮಂಗಳೂರು ನಿವಾಸಿ ಆಲಿಸ್ಟರ್ ಡಿಸೋಜ (24) ಮೃತಪಟ್ಟವರು. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪಾಣೆಮಂಗಳೂರು – ನೆಹರೂ ನಗರದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಎದುರಿದ್ದ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸ್ಟೇಡಿಯಂಗೆ ನುಗ್ಗಿ ಕೊಹ್ಲಿ ಅಪ್ಪಿಕೊಳ್ಳುವುದಾಗಿ ವೀಡಿಯೋವನ್ನು ಇನ್ಸ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಂತ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಇದು ಹುಚ್ಚಾಟವಾಗಿದೆ. ಪ್ರಾಂಕ್ ಹೆಸರಿನಲ್ಲಿ ಹೀಗೆ ಹುಚ್ಚಾಟ ಮೆರೆದ್ರೆ ಅಂತವರ ವಿರುದ್ಧವೂ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ನಗರ ಪೊಲೀಸರು ಎಚ್ಚರಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ನಗರ ಪೊಲೀಸರು, ಸ್ಟೇಡಿಯಂಗೆ ನುಗ್ಗಿ ಕೊಹ್ಲಿ ಅಪ್ಪಿಕೊಳ್ಳುತ್ತೇನೆಂದು ಇನ್ಟಾಗ್ರಾಮ್ ನಲ್ಲಿ ವೀಡಿಯೋ ಹಾಕಿದ್ದಂತ ಶರಣ್ ಎಂಬಾತನನ್ನು ಬಂಧಿಸಲಾಗಿದೆ. ಅಶೋಕ್ ನಗರ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಬಂಧಿಸಿದ್ದಾಗಿ ತಿಳಿಸಿದೆ. ಈ ರೀತಿ ಮತ್ತೆ ಯಾರೇ ಮಾಡಿದ್ರೂ ಎಫ್ಐಆರ್ ದಾಖಲಿಸಲು ಸೂಚಿಸಲಾಗಿದೆ. ಹುಚ್ಚಾಟ ಮೆರೆಯುವ ಪುಂಡರಿಗೆ ಬೆಂಗಳೂರು ಪೊಲೀಸರು ಖಡಕ್ ಸಂದೇಶ ನೀಡಿದ್ದಾರೆ. ಪ್ರಾಂಕ್ ಹೆಸರಿನಲ್ಲಿ ಹುಚ್ಚಾಟ ಮೆರೆಯುವವರ ಮೇಲೂ ಪೊಲೀಸರು ಹದ್ದಿನ ಕಣ್ಣಿಡಲಾಗಿದೆ ಎಂಬುದಾಗಿ ತಿಳಿಸಿದೆ.
ಉಡುಪಿ: ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸರು ಭಾಜನರಾಗಿದ್ದಾರೆ. ಮಲ್ಪೆ ಕರಾವಳಿ ಕಾವಲು ಪೊಲೀಸ್ನ ಎಸ್ಸೈ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಗುರುದಾಸ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್ ಕಾನ್ಸ್ಟೇಬಲ್ ಸಂತೋಷ್ ಕೂಡ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪದಕವನ್ನು ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.
ಕುಂಬಕೋಣಂ: ತಂಜಾವೂರು ಜಿಲ್ಲೆಯ ಕುಂಬಕೋಣಂನ ಮೇಲಕವೇರಿ ಗ್ರಾಮದ ಪೆರುಮಂಡಿ ಉತ್ತರ ಬೀದಿಯ ನಿವಾಸಿ ಶ್ರೀ ಗಿರಿ ಅವರು ಆರು ತಿಂಗಳು ನಾಪತ್ತೆಯಾಗಿದ್ದ ನಂತರ, ಮೇ 15, 2025 ರಂದು ತಮ್ಮ ಕುಟುಂಬದೊಂದಿಗೆ ಅತೀ ಸಂತೋಷದಿಂದ ಪುನರ್ಮಿಲನಗೊಂಡರು. ಕಾಸರಗೋಡಿನ ಮಂಜೇಶ್ವರದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ನ ಸಹಾಯದಿಂದ ನಡೆದ ಈ ಪುನರ್ಮಿಲನವು ಅವರ ತಂದೆ, ತಾಯಿ ಮತ್ತು ಇಬ್ಬರು ಸಹೋದರಿಯರಿಗೆ ಅಪಾರ ಆನಂದ ತಂದಿತು. ವಿವಾಹವಾಗದಿರುವ ಶ್ರೀ ಗಿರಿ ಅವರು ಕಳೆದ ಎರಡು ವರ್ಷಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದರೂ, ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳದ ಕಾರಣ ಅವರ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿಲ್ಲ. ಇದು ಅವರು ಕಾಣೆಯಾದ ಮೊದಲ ಘಟನೆಯಲ್ಲ; ಈ ಹಿಂದೆಯೂ ಒಮ್ಮೆ ಕಾಣೆಯಾಗಿದ್ದರು. ಮಾರ್ಚ್ 22, 2025 ರಂದು ಶ್ರೀ ಗಿರಿ ಅವರನ್ನು ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ಗೆ ದಾಖಲಿಸಲಾಯಿತು. ಕರ್ನಾಟಕದ ಹೆಮ್ಮೆಯ ಪುತ್ರ, ಈಶ್ವರ್ ಮಲ್ಪೆ, ಜನಪ್ರಿಯವಾಗಿ “ಆಕ್ವಾ ಮ್ಯಾನ್” ಎಂದು ಕರೆಯಲ್ಪಡುವವರು, ಶ್ರೀ ಗಿರಿ ಅವರನ್ನು ಸ್ನೇಹಾಲಯಕ್ಕೆ ದಾಖಲಿಸುವಲ್ಲಿ…
ಮಂಗಳೂರು: ಇತ್ತೀಚಿಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಹಿಂದೂ ನಾಯಕಿ, ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದು ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು. ಈ ವೇಳೆ ಶ್ವೇತಾ ಪೂಜಾರಿ ಅವರು ಫೇಸ್ಬುಕ್ ಪೋಸ್ಟ್ ನಲ್ಲಿ “ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಯಾಕೆ ಮಾತಾಡುತ್ತಿಲ್ಲ?” ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಸದಸ್ಯೆಯೋರ್ವರು ಪೊಲೀಸರಿಗೆ ದೂರು ನೀಡಿದ್ದು ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇದು…










