ಬಂಟ್ವಾಳ : ವಾಟ್ಸ್ಆ್ಯಪ್ ಮೂಲಕ ಮಹಿಳೆಯೊಬ್ಬರಿಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿ, ಡಿಜಿಟಲ್ ಅರೆಸ್ಟ್ ಮಾಡಿ ಬಳಿಕ ಸುಮಾರು 1.16 ಕೋಟಿ ರೂ. ಲಪಟಾಯಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.24ರಂದು ಬೆಳಗ್ಗೆ ಮಹಿಳೆ ಮನೆಯಲ್ಲಿದ್ದ ಸಮಯ ವಾಟ್ಸ್ಆ್ಯಪ್ ಮೂಲಕ ವಿಡಿಯೊ ಕರೆ ಬಂದಿದ್ದು, ಟೆಲಿ ಕಮ್ಯುನಿಕೇಶನ್ ಡಿಪಾರ್ಟ್ಮೆಂಟ್ ದಿಲ್ಲಿಯಿಂದ ಮಾತನಾಡುವುದಾಗಿ ಹೇಳಿದ್ದರು. ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಬಳಸಿ ಮೊಬೈಲ್ ನಂಬರ್ ಖರೀದಿಸಿ ದಿಲ್ಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿದ್ದೀರಿ ಎಂದು ತಿಳಿಸಿದ್ದಾರೆ. ಅಲ್ಲದೆ ನಾನಾ ಮೊಬೈಲ್ ನಂಬರ್ಗಳಿಂದ ಆರೋಪಿಗಳು ವಿಡಿಯೋ ಕರೆ ಮಾಡಿ, ನಿಮ್ಮ ಮೇಲೆ ಕಾಂಬೋಡಿಯಾ ಹಾಗೂ ಮಂಗೋಲಿಯಾ ದೇಶಗಳಿಗೆ ಮಕ್ಕಳನ್ನು ಕಳ್ಳಸಾಗಣಿಕೆ ಮಾಡಿ ಹಣ ವರ್ಗಾವಣೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ ಎಂಬುದಾಗಿ ಹೆದರಿಸಿದ್ದು ನಿಮ್ಮನ್ನು ತನಿಖೆಯ ಸಲುವಾಗಿ ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ತಿಳಿಸಿದ್ದರು. ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿಯನ್ನೂ ಕೇಳಿದ್ದು ನೀವು…
Author: main-admin
ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಅಕ್ರಮದ ವಿಡಿಯೋ ವಿಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸ ಅಧಿಕಾರಕ್ಕೆ ಗೃಹ ಸಚಿವ ಜಿ ಪರಮೇಶ್ವರಿ ಸಭೆ ನಡೆಸಿದ್ದು ಸಭೆಯಲ್ಲಿ ಜೈಲು ಅಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ ಅವರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಹೌದು ಗೃಹ ಸಚಿವ ಪರಮೇಶ್ವರ ಜೊತೆ ಜೈಲಾಧಿಕಾರಿಗಳ ಸಭೆ ನಡೆಯುತ್ತಿದ್ದು, ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ ವಿಡಿಯೋ ಬಗ್ಗೆ ತರಾಟೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳಿಗೆ ಪರಮೇಶ್ವರ್ ಅವರು ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ಫೋಟೋಗಳನ್ನು ತೋರಿಸಿ ಪರಮೇಶ್ವರ್ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಾಜೆಕ್ಟ್ ನಲ್ಲಿ ಪ್ರದರ್ಶಿಸಿ ಸಚಿವರು ವಿವರಣೆ ಕೇಳಿದ್ದಾರೆ ಎಲ್ಲಾ ಫೋಟೋ ವಿಡಿಯೋಗಳನ್ನು ತೋರಿಸಿ ಪ್ರಶ್ನೆ ಕೇಳಿದ್ದಾರೆ ಜೈಲು ಅಧಿಕಾರಿಗಳು ಎದ್ದುನಿಂತು ಗೃಹ ಸಚಿವರಿಗೆ ಉತ್ತರ ನೀಡಿದ್ದಾರೆ ಯಾವ್ಯಾವ ಫೋಟೋ ಯಾವಾಗ ತೆಗೆದಿರುವುದು ಎಂಬುದರ ಕುರಿತು ಎಲ್ಲಾ ಮಾಹಿತಿಯನ್ನು ಗೃಹ ಸಚಿವ ಪರಮೇಶ್ವರ್ ಸಂಗ್ರಹಿಸುತ್ತಿದ್ದಾರೆ. ಬೆಂಗಳೂರಿನ ಕಾರಾಗೃಹ ಕಚೇರಿಯಲ್ಲಿ ಈ ಒಂದು ಮಹತ್ವದ ಸಭೆ ನಡೆಯುತ್ತಿದೆ.
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಫಲಿತಾಂಶವು ಪ್ರಕಟವಾಗಿದ್ದು, ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ದಿನಪತ್ರಿಕೆಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ 2025-28ನೆ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದರು. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದರು. ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಆಯ್ಕೆಯಾಗಿದ್ದಾರೆ. ಶ್ರೀನಿವಾಸ ನಾಯಕ್ 204 ಮತ ಪಡೆದರೆ, ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಅನ್ಸಾರ್ ಇನೋಳಿ 124 ಮತಗಳನ್ನು ಗಳಿಸಿದರು. ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮುಹಮ್ಮದ್ ಆರೀಫ್, ವಿಲೈಡ್ ಡಿ ಸೋಜ ಮತ್ತು ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಸತೀಶ್ ಇರಾ, ಸಿದ್ದೀಕ್ ನೀರಾಜೆ, ಸುರೇಶ್ ಪಳ್ಳಿ ಗೆಲುವು ಸಾಧಿಸಿದ್ದಾರೆ. ಕಾರ್ಯಕಾರಿ ಸಮಿತಿ…
ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಮತ್ತೊಮ್ಮೆ ಬಯಲಾಗಿದ್ದು ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಭಯೋತ್ಪಾದಕರು ಸೇರಿದಂತೆ ಹಲವು ಕೈದಿಗಳ ಕೈಯಲ್ಲಿ ಮೊಬೈಲ್ ಕಂಡುಬಂದಿದ್ದು ಈ ಒಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ. ಅಂಥವರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಇವಂದು ಘಟನೆಗಳು ಮಂಗಳೂರು ಬೆಳಗಾವ್ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇಪದೇ ಆಗಿದ್ದು ಕೇಳಿಬಂದಿದ್ದು ಇದೇ ಕೂಡ ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು. ಎಡಿಜಿಪಿ ಬಿ ದಯಾನಂದ ಜೊತೆಗೆ ನಾನು ಮಾತನಾಡಿದ್ದೇನೆ ಯಾರು ಹೊಣೆಗಾರರಾಗಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕೂಡಲೇ ವರದಿ ನೀಡುವಂತೆ ನಾನು…
ಬೆಂಗಳೂರು: ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಸ್ಮಶಾನದ ಬಳಿ ನಿನ್ನೆ (ನ.8) ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿದ್ದು, ಕಿಡ್ನಾಪ್ & ಇಬ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಆಂಧ್ರ ಮೂಲದ ರವಿ ಪ್ರಸಾದ್ ರೆಡ್ಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಉದ್ಯಮಿ ಬಾಲಪ್ಪ ರೆಡ್ಡಿ, ಮಾದೇಶ್ ಎಂಬುವರ ಕೊಲೆ ಪ್ರಕರಣದ ಸಂಬಂಧ ಆರೋಪಿ ರವಿ ಪ್ರಸಾದ್ ರೆಡ್ಡಿಯನ್ನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದರು. ಕೇಸ್ ಸಂಬಂಧ ಸ್ಥಳ ಮಹಜರಿಗೆ ಪೊಲೀಸರು ಕರೆದೊಯ್ದಿದ್ದ ವೇಳೆ ಆರೋಪಿ, ಹೆಡ್ ಕಾನ್ಸ್ಸ್ಟೇಬಲ್ ಅಶೋಕ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ಈ ವೇಳೆ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ವಾರ್ನಿಂಗ್ ನೀಡಿದರೂ ದಾಳಿ ನಿಲ್ಲಿಸದಿದ್ದಾಗ ಆರೋಪಿ ಮೇಲೆ ಹೆಬ್ಬಗೋಡಿ ಇನ್ಸ್ಪೆಕ್ಟರ್ ಸೋಮಶೇಖರ್ ಫೈರಿಂಗ್ ಮಾಡಿದ್ದಾರೆ. ರವಿ ಪ್ರಸಾದ್ ರೆಡ್ಡಿ…
ಬ್ರಹ್ಮಾವರದ ಹಿಂದುಳಿದ ವರ್ಗಗಳ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ನಿನ್ನೆ (ನ.8) ಬೆಳಗ್ಗೆ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದರು. ತನಿಖೆ ನಡೆಸಿದ ಬ್ರಹ್ಮಾವರ ಪೊಲೀಸರು ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೇ ಮೊಬೈಲ್ ಲೊಕೇಶನ್ ಆಧಾರದ ಮೇಲೆ ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಬ್ರಹ್ಮಾವರ ಪೊಲೀಸರು ಪೋಷಕರೊಂದಿಗೆ ಮಂಗಳೂರಿಗೆ ತೆರಳಿದ್ದು, ಅಲ್ಲಿಂದ ಕರೆತರುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಬ್ರಹ್ಮಾವರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ
ಪುತ್ತೂರು: ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸ್ ಠಾಣೆಯವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ.08, 2025 ರಂದು ಮಧ್ಯಾಹ್ನ ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಜನಾರ್ಧನ ಕೆ.ಎಂ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ 1 ಕಿಲೋ ಗಿಂತಲೂ ಹೆಚ್ಚು ಪ್ರಮಾಣದ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಸುಮಾರು 25 ಇಂಚು ಉದ್ದದ ಕತ್ತಿ ಪತ್ತೆಯಾಗಿದ್ದು, ಆಟೋ ಚಾಲಕನನ್ನು ವಿಚಾರಿಸಿದಾಗ ಆತ ಕಡಬ ತಾಲೂಕಿನ ಸವಣೂರು ನಿವಾಸಿ ಪ್ರಸಾದ್ ಇ (35) ಎಂದು ತಿಳಿದುಬಂದಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 106/2025ರಂತೆ NDPS ಕಾಯ್ದೆಯ ಸೆಕ್ಷನ್ 8(c), 20(ii)(c) ಹಾಗೂ Indian Arms Act ಸೆಕ್ಷನ್ 25(1B)(b) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು,…
ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನನ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ರೋಷನ್ ಸಲ್ಡಾನನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿದ್ದಾರೆ. ರೋಷನ್ ಸಲ್ಡಾನ ಸಾಲ ಕೊಡಿಸುವ ಆಮಿಷವೊಡ್ಡಿ ಶ್ರೀಮಂತ ವ್ಯಕ್ತಿಗಳು ಹಾಗೂ ಉದ್ಯಮಿಗಳಿಗೆ 200 ಕೋಟಿ ರೂ.ಗೂ ಅಧಿಕ ಹಣ ವಂಚನೆ ಮಾಡಿದ್ದ. ಈ ಸಂಬಂಧ ರೋಷನ್ ಸಲ್ಡಾನ, ಆತನ ಪತ್ನಿ ಢಫ್ನಿನೀತು ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಈ ಹಿಂದೆ ಸುಮಾರು 9.5 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಮಂಗಳೂರಿನಲ್ಲಿರುವ ಆತನ ಐಷಾರಾಮಿ ಬಂಗಲೆಯನ್ನು ಕಂಡು ಅಧಿಕಾರಿಗಳು ದಂಗಾಗಿದ್ದರು. ನೂರಾರು ಕೋಟಿ ಸಾಲ ಕೊಡಿಸುವುದಾಗಿ ಐದರಿಂದ ಹತ್ತು…
ಉಡುಪಿ: ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ರಾಗಿ ವಿ.ಎಸ್.ಹಾಲಮೂರ್ತಿ ರಾವ್ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಉಡುಪಿ ಠಾಣೆಯಲ್ಲಿ ಕಳೆದ ಸುಮಾರು ಒಂದು ವರ್ಷದಿಂದ ಡಿವೈಎಸ್ಪಿ ಹುದ್ದೆ ಖಾಲಿ ಇತ್ತು. ಈವರೆಗೆ ಪ್ರಭಾರ ಡಿವೈಎಸ್ಪಿಯಾಗಿ ನಿರೀಕ್ಷಕ ಮಂಜುನಾಥ್ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅಧಿಕಾರ ವಹಿಸಿಕೊಂಡಿರುವ ನೂತನ ಡಿವೈಎಸ್ಪಿ ಸಾರ್ವಜನಿಕರು ತಮ್ಮ ಯಾವುದೇ ದೂರುಗಳಿದ್ದಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದ್ದಾರೆ.
ಉಳ್ಳಾಲ: ಅಪ್ರಾಪ್ತಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿ ಅಮೀರ್ ನನ್ನು ಬಂಧನ ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಇಂದು ಮಂಗಳೂರಿನ FTSC-2ನೇ ನ್ಯಾಯಾಲಯವು CR. Mis 1024/2025 ಆರೋಪಿ ಅಮೀರ್ ಅವರಿಗೆ ಜಾಮೀನು ನೀಡಿ ಆದೇಶ ಮಾಡಿದೆ. ಆರೋಪಿ ಪರ ಹಿರಿಯ ನ್ಯಾಯವಾದಿ ಶ್ರೀ. S. S.KHAZI ವಾದಿಸಿದ್ದರು.










