Author: main-admin

ಕಡಬ: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಮರದ ದಿಮ್ಮಿಗಳ ಸಹಿತ ಲಾರಿಯನ್ನು ಅರಣ್ಯ ಇಲಾಖಾಧಿಕಾರಿಗಳ ತಂಡ ಸೋಮವಾರ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖಾಧಿಕಾರಿಗಳ ತಂಡ ಕಡಬ ತಾಲೂಕು   ಅಲಂಕಾರು ಪರಿಸರದ ಕಾಡಿನಿಂದ ಕಡಿದು ಬಿ.ಸಿ. ರೋಡ್‌ ಪರಿಸರದತ್ತ ಸಾಗಾಟ ಮಾಡಲಾಗುತ್ತಿದ್ದ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಹೊತ್ತು ಸಾಗಿಸುತ್ತಿದ್ದ ಲಾರಿಯನ್ನು ಸುಬ್ರಹ್ಮಣ್ಯ ಕ್ರಾಸ್‌ ಬಳಿ ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಾಣೆಮಂಗಳೂರು ನಿವಾಸಿ ಮಹಮ್ಮದ್‌ ಅಶ್ರಫ್ ಬಂಧಿತ. 1.09 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನು ಹಾಗೂ 6 ಲಕ್ಷ ರೂ. ಮೌಲ್ಯದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಉಪ ವಲಯ ಅರಣ್ಯಾಧಿಕಾರಿ ಜೆರಾಲ್ಡ್‌ ಡಿಸೋಜಾ, ಅರಣ್ಯ ಪಾಲಕರಾದ ಜಗದೀಶ್‌, ವಿನಯಚಂದ್ರ, ಅರಣ್ಯ ವೀಕ್ಷಕರಾದ ಕಿರಣ್‌, ರವಿ, ಕಿಶೋರ್‌ ಭಾಗವಹಿಸಿದ್ದರು. ಪ್ರಕರಣದ ಬಗ್ಗೆ ಪ್ರೊಬೆಷನರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಾ ಶೆಟ್ಟಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ.

Read More

ಬೆಳ್ತಂಗಡಿ : ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿ ಶಾಫಿ ಬೆಳ್ಳಾರೆ ಈಗಾಗಲೇ ಎನ್ ಐಎಯಿಂದ ಬಂಧನವಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ, 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಅವಹೇನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಟಿ ವಾರೆಂಟ್ ಮೇಲೆ ಪೊಲೀಸರು ಶಾಫಿ ಬೆಳ್ಳಾರೆಯನ್ನ ಕರೆದುಕೊಂಡು ಬಂದು ಬೆಳ್ತಂಗಡಿ ಕೋರ್ಟ್ಗೆ ಹಾಜರುಪಡಿಸಿದ್ದರು. ಈ ವೇಳೆ ಈ ಮುತ್ತು ಕೊಟ್ಟಿರುವ ಘಟನೆ ನಡೆದಿದೆ.

Read More

ಮಂಗಳೂರು: ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣಕರ್ತನಾದ ಪಿಎಸ್ಐ ಓರ್ವರ ಮಗನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಾಮುಕ ದ.ಕ ಜಿಲ್ಲೆಯ ಪಿಎಸ್ಐ ಓರ್ವರ ಮಗನಾಗಿದ್ದು ಆತನಿಗೆ ಮದುವೆಯಾಗಿ ಮಕ್ಕಳಿದ್ದಾರೆ‌. ಸದ್ಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಹದಿನೇಳು ವರ್ಷದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಒಬ್ಬಳೇ ಇದ್ದಾಗ ನೀರು ಕೇಳುವ ನೆಪದಲ್ಲಿ ಹೋಗಿ ಅತ್ಯಾಚಾರ ಎಸಗಿದ್ದಾನೆ. ಬೆದರಿಕೆಯೊಡ್ಡಿ ಹಿಂಸಾತ್ಮಕವಾಗಿ ಏಳೆಂಟು ಬಾರಿ ಈತ ಆಕೆಯ ಮೇಲೆ ತನ್ನ ಕಾಮತೃಷೆ ತೀರಿಸಿದ್ದು ಆಕೆ ಗರ್ಭಿಣಿಯಾದ ಬಳಿಕ ಕಾಮುಕನ ಕೃತ್ಯ ಬಯಲಾಗಿದೆ.

Read More

ಸುಳ್ಯ:ಸಮೀಪ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಸಂಭವಿಸಿದೆ ಎಂದು ತಿಳಿಯಲಾಗಿದೆ. ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ ಕಾರಿನ ಮೇಲ್ಭಾಗ ತೆರೆದು ಆ ಭಾಗದಿಂದ ಇಬ್ಬರು ಯುವಕರು ಮೇಲೆ ಬಂದ್ದಿದ್ದು, ಇಬ್ಬರು ಹಿಂದಿ ಸೀಟಿನ ಎಡ ಹಾಗೂ ಬಲ ಬದಿಯ ಡೋರ್ ಭಾಗದಿಂದ ಮೇಲೆ ಬಂದಿದ್ದು, ಇಬ್ಬರು ಮುಂದಿನ ಎಡರೂ ಡೋರ್‌ನ ಡ್ರೈವರ್ ಸೈಡ್ ಭಾಗದಿಂದಲೂ ಮೇಲೆದ್ದು ನಿಂತು ಹುಚ್ಚಾಟ ಮೆರೆಯುತ್ತಿರುವುದು ವಿಡಿಯೋದಲ್ಲಿದೆ. ಯುವಕರ ಕೃತ್ಯವನ್ನು ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದವರು ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಇದೀಗ ಎಲ್ಲಾ ಕಡೆ ವೈರಲ್ ಆಗಿದೆ. ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

Read More

ಮಂಗಳೂರಿನಿಂದ ಮೂಲ್ಕಿ ಕಾರ್ನಾಡು ಕಡೆಗೆ ಬರುತ್ತಿದ್ದ ರಿಕ್ಷಾ ಒಂದಕ್ಕೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಚಾಲಕ ಸೇರಿ ನಾಲ್ವರು ಗಾಯಗೊಂಡ ಘಟನೆ ಮೂಲ್ಕಿಯ ಕೊಲ್ಲಾಡು ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಅಬ್ದುಲ್ ಬಶೀರ್ (35), ಪ್ರಯಾಣಿಕರಾದ ಮರಕಡದ ಶೋಭಾ (55), ಕುಂಜತ್ತಬೈಲ್‌ನ ಭವಾನಿ (65) ಮತ್ತು ಪಣಂಬೂರಿನ ವಸಂತಿ (72) ಎನ್ನಲಾಗಿದೆ. ಕಾರು ಹತೋಟಿ ಕಳೆದುಕೊಂಡು ನಿಧಾನವಾಗಿ ಮೂಲ್ಕಿಯತ್ತ ಹೋಗುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ರಿಕ್ಷಾ ಚಾಲಕ ಒಂದಷ್ಟು ದೂರಕ್ಕೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಕ್ಷಾದಲ್ಲಿದ್ದ ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ ಎರಡೂ ವಾಹನ ಜಖಂ ಆಗಿದ್ದು, ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಧಾವಿಸಿ ಕೇಸು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More

ಮಂಗಳೂರು : ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮರೆಮಾಚಿ, ಹೆಲ್ಮೆಟ್ ಧರಿಸದೆ ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿ ಇದೀಗ ದಂಡ ಪಾವತಿಸುವಂತಾಗಿದೆ. ಮಾ.23ರಂದು ಸಂಜೆ 4 ಗಂಟೆಯಿಂದ 4:10ರ ಸಮಯಕ್ಕೆ ಬೆಂದೂರ್‌ವೆಲ್, ಕಂಕನಾಡಿ, ಪಂಪ್‌ವೆಲ್ ರಸ್ತೆಯಲ್ಲಿ ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಿ ಹೆಲ್ಮೆಟ್ ಧರಿಸದೆ ತೊಕ್ಕೊಟ್ಟು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿರುವ ವಿಡಿಯೋವನ್ನು ಸಾರ್ವಜನಿಕರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ನಗರದ ಸಂಚಾರ ಪೊಲೀಸರು ಕಾರ್ಯಪ್ರವೃತ್ತರಾಗಿ ಸ್ಕೂಟರ್ ಹಾಗೂ ಸ್ಕೂಟರ್ ಸವಾರನ ಪತ್ತೆ ಹಚ್ಚಿದ್ದಾರೆ. ಸಂಚಾರ ನಿಯಮವನ್ನು ಉಲ್ಲಂಘಿಸಿರುವ ಕೆಎ-19-ಎಚ್‌ಟಿ-1944 ಸ್ಕೂಟರ್‌ನ ದಾಖಲಾತಿಗಳನ್ನು ಪರಿಶೀಲನೆ ಮಾಡಿ, ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸವಾರನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿದ್ದಾರೆ. ಹೆಲ್ಮೆಟ್ ಧರಿಸದೇ, ನಂಬ್ರ ಪ್ಲೇಟ್ ಮರೆಮಾಚಿರುವ ಬಗ್ಗೆ ದೋಷಪೂರಿತ…

Read More

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ‘ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆ’ ಎಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಆಗ ಆತ ‘ನಿಮಗೆ ಯಾರೋ ಮಾಠ ಮಾಡಿದ್ದಾರೆ. ಅದನ್ನು ಮೊದಲು ತೆಗಿಸಬೇಕು’ ಎಂದು ಹೇಳಿ ನಂಬಿಸಿದ್ದಾನೆ. ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ಹೇಳಿ ಮಹಿಳೆಯನ್ನು ಆಗಾಗ ಬರಲು ಹೇಳುತ್ತಿದ್ದ ಅಬ್ದುಲ್. ಸಂತ್ರಸ್ತೆ ಮಹಿಳೆ ತನ್ನ ಅಕ್ಕನ ಜೊತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಈತ ಕೆಲವು ಬಾರಿ ಮಹಿಳೆಗೆ ಕುರಾನ್ ಓದಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಕೆ ಹೇಳಿದ್ದಾರೆ. 2022, ಫೆ.10 ರಂದು ಸಂತ್ರಸ್ತೆಯ ಅಕ್ಕನಿಗೆ…

Read More

ಪುತ್ತೂರು: ಕಾಲೇಜಿಗೆ ರಜೆ ಇದ್ದ ಸಂದರ್ಭಮನೆಯಲ್ಲಿದ್ದ ವೇಳೆ ಆಟೋ ಚಾಲಕನೊಬ್ಬ ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕ ಮಂಜುನಾಥ್ ಕಟ್ಟತ್ತಡ್ಕ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು ಕಳೆದ ಆಗಸ್ಟ್ ತಿಂಗಳಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭನೀರು ಕೇಳುವ ನೆಪದಲ್ಲಿ ಬಂದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಈ ವಿಚಾರ ಯಾರಿಗೂ ಹೇಳಬಾರದು ಎಂದು ಬೆದರಿಕೆ ಒಡ್ಡಿ ಬಳಿಕದ ದಿನಗಳಲ್ಲಿ ಇದೇ ರೀತಿ 7-8 ಬಾರಿ ದೈಹಿಕ ಸಂಪರ್ಕ ಮಾಡಿದ್ದಾನೆ ಎಂದು ಬಾಲಕಿ ನೀಡಿದ ದೂರಿನಲ್ಲಿ ಉಲ್ಲೇಕಿಸಲಾಗಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಕೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ. ಸದ್ಯ ಆರೋಪಿಯ ವಿರುದ್ಧ ದ ಕ ಮಹಿಳಾ ಪೊಲೀಸ್ 0 64(2)(m), 352(3) BNS 2023 2 0 5(1) ಜೊತೆಗೆ 6 ಪೋಕ್ಸ್ ಆಕ್ಟ್ 2012 ರಂತೆ ಪ್ರಕರಣ ದಾಖಲಾಗಿದೆ.

Read More

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಬದಿಗಳಲ್ಲಿ ಮಾತ್ರವಲ್ಲದೆ ಫ್ಲೈಓವರ್‌ಗಳಲ್ಲಿಯೂ ಅನಧಿಕೃತ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸುವುದರ ವಿರುದ್ಧ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕಠಿಣ ಎಚ್ಚರಿಕೆ ನೀಡಿದೆ. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ NHAI ಯ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ, ಹೆದ್ದಾರಿಗಳು, ಫ್ಲೈಓವರ್‌ಗಳು ಮತ್ತು ಜಂಕ್ಷನ್‌ಗಳಲ್ಲಿ ಹಾಕಲಾದ ಫ್ಲೆಕ್ಸ್ ಬೋರ್ಡ್‌ಗಳ ಕುರಿತು ದೂರುಗಳು ದಾಖಲಾಗಿವೆ ಎಂದು ದೃಢಪಡಿಸಿದರು. ಹೆದ್ದಾರಿ ಸಂಬಂಧಿತ ಕೆಲಸಗಳು ನಡೆಯುತ್ತಿರುವಾಗಲೂ, ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಹೆದ್ದಾರಿಗಳ ಪಕ್ಕದಲ್ಲಿರುವ ಸಾರ್ವಜನಿಕ ಸ್ಥಳಗಳನ್ನು ಜಾಹೀರಾತುಗಳಿಗಾಗಿ ಬಳಸಲಾಗುವುದಿಲ್ಲ ಎಂದು ಅವರು ಹೇಳಿದರು.

Read More

ಕುಂದಾಪುರ : ಕೃಷಿ ಗದ್ದೆಯಲ್ಲಿ ಸುಡುಮಣ್ಣು ಹಾಕಿದ್ದ ಬೆಂಕಿ ನಂದಿಸಲು ಹೋದ ಕೃಷಿಕರೊಬ್ಬರು ಸಜೀವ ದಹನವಾದ ಘಟನೆ ಕಾಳಾವರದ ಬಡಾಗುಡ್ಡೆ ಸಾಂತಾವರ ಎಂಬಲ್ಲಿ ಶನಿವಾರ ಮಧ್ಯಾಹ್ನದ ಹೊತ್ತಿಗೆ ನಡೆದಿದೆ. ಮೃತರನ್ನು ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ (83)ಎಂದು ಗುರುತಿಸಲಾಗಿದೆ. ಇವರು ಮಳೆಗಾಲದ ಕೃಷಿಗಾಗಿ ತಮ್ಮ ಗದ್ದೆಯಲ್ಲಿ ಮಗಳೊಂದಿಗೆ ಸುಡುಮಣ್ಣು ತಯಾರಿಗಾಗಿ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಗೆ ಸುತ್ತಲೂ ಪಸರಿಸಿದ್ದು ಸಮೀಪದ ನಾಗಬನಕ್ಕೂ ಬೆಂಕಿ ಹಬ್ಬಿದೆ. ಎಲ್ಲಾ ಕಡೆಗೂ ಹೊಗೆಯಿಂದ ಆವರಿಸಿದೆ ಕೂಡಲೇ ಎಚ್ಚೆತ್ತ ಮಗಳು ಬೇಬಿ ಅಲ್ಲಿಗೆ ತೆರಳಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿರುವಾಗಲೇ ತಂದೆ ಮಹಾಲಿಂಗ ದೇವಾಡಿಗ ಬೆಂಕಿಯ ಮಧ್ಯೆ ಸಿಲುಕಿದ್ದರು. ಕೂಡಲೇ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಲಾಯಿತು. ಆದರೆ ಅಗ್ನಿಶಾಮಕದಳದ ವಾಹನ ಬರುವಷ್ಟರಲ್ಲಿ ರೈತ ಮಹಾಲಿಂಗ ಅವರು ಸಜೀವ ದಹನವಾಗಿದ್ದಾರೆ. ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ಭೀಮಾಶಂಕರ್ ಹಾಗೂ ಸಿಬ್ಬಂದಿಗಳು, ಅಗ್ನಿಶಾಮಕದಳದವರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More