ಮಲ್ಪೆ: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಬಿಕ್ಕಟ್ಟು ಎದುರಾಗಿರುವ ಸಂದರ್ಭದಲ್ಲಿ ಮಂಗಳೂರಿನ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಕುಳಿತಿದ್ದ ಮೀನುಗಾರರಿಗೆ ಒಮ್ಮೆಲೆ ದೊಡ್ಡ ಸದ್ದು ಕೇಳಿಸಿತು. ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಗಾಬರಿಯಿಂದ ಓಡಿದರು. ತತ್‌ಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ಗಾಯಗೊಂಡ ಐವರು ಮೀನುಗಾರರನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಇದರ ಹಿಂದಿನ ಅಸಲಿ ಎತ್ತು ಬೇರೆ ಇದೆ. ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು ಪ್ರದರ್ಶನವಷ್ಟೆ. ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕೆ ಇಲಾಖೆ, ಅಗ್ನಿಶಾಮಕ ದಳ, ಕಸ್ಟಮ್ಸ್ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. ಈ ಅಣಕು ಪ್ರದರ್ಶನವನ್ನು ಅಗ್ನಿಶಾಮಕ -ಪೊಲೀಸ್ ಇಲಾಖೆ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ತೋರಿಸಿ, ಅನಿರೀಕ್ಷಿತ ಯುದ್ಧದಂತಹ ಸಂದರ್ಭ ನಿಭಾಯಿಸಲು…
Author: main-admin
ಅಮರಾವತಿ: ವೈಎಸ್‌ಆರ್‌ಸಿಪಿ ಆಡಳಿತದ ಅವಧಿಯಲ್ಲಿ ನಡೆದ ಮದ್ಯ ಹಗರಣದಲ್ಲಿ ಲೂಟಿ ಮಾಡಿದ ಸಾವಿರಾರು ಕೋಟಿ ರೂಪಾಯಿ ಲಂಚದ ಹಣವನ್ನು ಶೆಲ್ ಕಂಪನಿಗಳಿಗೆ ವರ್ಗಾಯಿಸಿ ‘ಅಂತಿಮ ಫಲಾನುಭವಿ’ಗೆ ವರ್ಗಾಯಿಸುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಭಾರತಿ ಸಿಮೆಂಟ್ಸ್‌ನ ಪೂರ್ಣಾವಧಿ ನಿರ್ದೇಶಕ ಗೋವಿಂದಪ್ಪ ಬಾಲಾಜಿ ಅವರನ್ನು ಕೊನೆಗೂ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಅವರು 33 ನೇ ಆರೋಪಿ (A33) ಆಗಿದ್ದು, ಮಾಜಿ ಮುಖ್ಯಮಂತ್ರಿ ಜಗನ್ ಅವರಿಗೆ ತುಂಬಾ ಆಪ್ತರು. ಜಗನ್ ಪರವಾಗಿ ಅವರ ಪತ್ನಿ ಭಾರತಿ ಎಲ್ಲಾ ಹಣಕಾಸಿನ ವಿಷಯಗಳನ್ನು ನಿರ್ವಹಿಸುತ್ತಾರೆ. ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಗೋವಿಂದಪ್ಪ ಬಾಲಾಜಿಗಾಗಿ ಮೂರು ರಾಜ್ಯಗಳಲ್ಲಿ ಹುಡುಕಾಟ ನಡೆಸಿದ್ದ ಎಸ್‌ಐಟಿ ತಂಡಗಳು, ಮಂಗಳವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಎರಕನಗದ್ದೆ ಕಾಲೋನಿಯಲ್ಲಿರುವ ಕ್ಷೇಮ ಕೇಂದ್ರದ ಹೊರಗೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಟ್ರಾನ್ಸಿಟ್ ವಾರಂಟ್ ಮೇಲೆ ಅವರನ್ನು ಎಳಂದೂರು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಅವರನ್ನು ಬುಧವಾರ ಮಧ್ಯಾಹ್ನ ವಿಜಯವಾಡಕ್ಕೆ ಕರೆತಂದು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಬಾಲಾಜಿ ಬಂಧನದೊಂದಿಗೆ, ಈ ಹಗರಣದ ನಿಜವಾದ…
ಹಾವೇರಿ: 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ(PDO) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೆಗ್ಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಅಶೋಕ ಗೊಂದಿ ಬಂಧಿತ ತೆಗ್ಗಿಹಳ್ಳಿ ಗ್ರಾಮ ಪಂಚಾಯತಿ ಪಿಡಿಓ. ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ ಬಳಿ ಹೊಟೇಲ್‌ನಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ ಅಶೋಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪಿಡಿಓ ಅಶೋಕ್, 1 ಲಕ್ಷ 60 ಸಾವಿರದ ಗೋದಾಮು ನಿರ್ಮಾಣ ಕಾಮಾಗಾರಿಯ ಬಿಲ್ ಮಂಜೂರು ಮಾಡಲು 80 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಚಿತವಾಗಿ 50,000 ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ಬಗ್ಗೆ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸಂದೇಶವೊಂದು ವೈರಲ್ ಆಗಿದ್ದು, ಸಂದೇಶ ರವಾನಿಸಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ‘ಮಂಗಳೂರು ಮುಸ್ಲಿಂ ಯುವಸೇನೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಆರೋಪಿ ವಿಟ್ಲದ ಅನಾಸ್ ನನ್ನು ವಿಚಾರಣೆ ನಡೆಸಲಾಗಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಬಗ್ಗೆ ಮೂಡುಬಿದಿರೆ ರಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆಗಾಗಿ ಮಂಗಳೂರು ನಗರ ಸೆನ್ ಅಪರಾಧ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಉಡುಪಿ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಕುಟುಂಬ ಸದಸ್ಯರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯ ಕೋರಿದರು. ತಕ್ಷಣ ಸ್ಪಂದಿಸಿದ ನಿತ್ಯಾನಂದ ಒಳಕಾಡು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ನೀಡಿದ್ದಾರೆ.ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಭಾರೀ ಅಗ್ನಿ ದುರಂತವೊಂದು ತಪ್ಪಿದಂತಾಗಿದೆ.ಘಟನೆಯ ನಂತರ, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಕುಡಿದಿದ್ದ ವ್ಯಕ್ತಿಯನ್ನು ಸಮಾಧಾನಪಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವ್ಯಸನ ಮುಕ್ತಿ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಉಡುಪಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು 76 ಬಡಗುಬೆಟ್ಟು ಗ್ರಾಮದ ಬಲಾಯಿಪಾದೆ ಜಂಕ್ಷನ್ ಬಳಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಪ್ರಶಾಂತ್ ಹಾಗೂ ಪ್ರವೀಣ್ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರ ಬಳಿ ಇದ್ದ ವಿವಿಧ ಬ್ರ್ಯಾಂಡ್‌ನ ಮದ್ಯದ ಸಾಚೇಟ್, ಬೀಯರ್ ಬಾಟಲ್, ನೀರಿನ ಬಾಟಲ್‌ಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಗ್ಲಾಸ್‌ಗಳಿಗೆ ಕಪ್ಪು ಬಣ್ಣದ ಫಿಲ್ಮ್ ಸನ್ ಫಿಲ್ಮ್ ಅಥವಾ ಟಿಂಟೆಡ್ ಕ್ಲಾಸ್ ಅಂಟಿಸಿಕೊಂಡು ಸಂಚರಿಸುತ್ತಿರುವ ವಾಹನಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಮೇ 2ರಿಂದ 11ರ ವರೆಗೆ 10 ದಿನಗಳಲ್ಲಿ 504 ಕಾರುಗಳ ವಿರುದ್ಧ ಪ್ರಕರಣ ಕಾಖಲಿಸಿ ₹2.53 ಲಕ್ಷ ದಂಡ ವಿಧಿಸಲಾಗಿದೆ. ಅಲ್ಲದೇ ವಾಹನಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್, ಸ್ಟಿಕರ್‌ಗಳನ್ನು ವಾಹನ ಚಾಲಕರಿಂದಲೇ ತೆಗೆಸಿ ಸೂಕ್ತ ತಿಳಿವಳಿಕೆ ನೀಡಲಾಗಿದೆ. ಈ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ವತಿಯಿಂದ ವಿವಿಧ ಕಡೆಗಳಲ್ಲಿ ವಿಶೇಷ ಚೆಕ್‌ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣೆ ಹಾಗೂ ದಾಖಲಾತಿ ಪರಿಶೀಲನೆ ನಡೆಸಲಾಗುತ್ತಿದೆ. ವಾಹನಗಳಲ್ಲಿ ಟಿಂಟೆಡ್ ಗ್ಲಾಸ್ ಬಳಸದಂತೆ ಹಾಗೂ ಅಂತಹ ಟಿಂಟೆಡ್ ಗ್ಲಾಸ್‌ಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ನ ಆದೇಶ ಇದೆ. ವಾಹನಗಳ ಗಾಜುಗಳಿಗೆ ಇದನ್ನು ಅಂಟಿಸುವಂತಿಲ್ಲ. ಸಾರ್ವಜನಿಕರು ತಮ್ಮ ವಾಹನಗಳಿಗೆ ಅಂಟಿಸಿರುವ ಇಂತಹ ವಸ್ತುಗಳನ್ನು…
ಉಡುಪಿ : ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಪುಟ್ಟ ಮಗುವೊಂದು ಆಕಸ್ಮಿಕವಾಗಿ ದೇವಾಳಯದ ಕೆರೆಯಲ್ಲಿ ಮುಳುಗಿ ಸಾವನಪ್ಪಿ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ.ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38) ಮತ್ತು ಸೌಮ್ಯ ಅವರ ಪುತ್ರ ವಾಸುದೇವ (4) ಎಂದು ಗುರುತಿಸಲಾಗಿದೆ. ಸತ್ಯನಾರಾಯಣ ಅವರು ನೀಡಿದ ದೂರಿನ ಪ್ರಕಾರ, ಕುಟುಂಬವು ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿವಾಹಕ್ಕೆ ಹಾಜರಾಗಿತ್ತು. ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಸೌಮ್ಯ ಅವರು ತಮ್ಮ ಕಿರಿಯ ಮಗುವಿಗೆ ಸಭಾಂಗಣದ ಒಳಗೆ ಊಟ ಮಾಡಿಸುತ್ತಿದ್ದರು. ವಾಸುದೇವ ಕೂಡ ತಾಯಿಯ ಸಮೀಪವಿದ್ದನು. ಮಗುವಿಗೆ ಊಟ ಮಾಡಿಸಿದ ನಂತರ, ಸೌಮ್ಯ ಅವರು ಕೈ ತೊಳೆಯಲು ಹೊರಗೆ ಹೋದರು ಎನ್ನಲಾಗಿದೆ. ಹಿಂತಿರುಗಿದಾಗ, ವಾಸುದೇವ ಕಾಣೆಯಾಗಿರುವುದು ಅವರ ಗಮನಕ್ಕೆ ಬಂದಿತು. ತಕ್ಷಣ ಅವರು ಸಭಾಂಗಣದಲ್ಲಿದ್ದ ಕುಟುಂಬ ಸದಸ್ಯರು ಮತ್ತು ಸಂಬಂಧಿಕರಿಗೆ ತಿಳಿಸಿ ಆವರಣದಲ್ಲಿ ಹುಡುಕಾಟ ನಡೆಸಿದ್ದಾರೆ. ಎಷ್ಟು ಹುಡುಕಿದರೂ, ಮಗು ಸಭಾಂಗಣದ ಒಳಗೆ ಪತ್ತೆಯಾಗಲಿಲ್ಲ. ಸುಮಾರು 2:15…
ಬೆಂಗಳೂರು : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರಿಂದ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದು, ಅಪರಿಚಿತ ಲಿಂಕ್, ಇ-ಮೇಲ್ ಗಳ ಮೇಲೆ ನಿಗಾವಹಿಸಿ, ಎಕ್ಸ್ ಕ್ಲೂಸಿವ್ ನ್ಯೂಸ್ ಲಿಂಕ್ ಗಳು ಹಾಗೂ ಎಪಿಕೆ ಫೈಲ್ಸ್, ಅಪರಿಚಿತ ಫಾರ್ವರ್ಡ್ ಲಿಂಕ್ ಕ್ಲಿಕ್ ಮಾಡದಂತೆ ಸೂಚನೆ ನೀಡಿದ್ದಾರೆ. ವಾಟ್ಸಪ್ ಸೆಕ್ಯೂರಿಟಿ ಅಪ್ಡೇಟ್ ಮಾಡಿಕೊಳ್ಳಲು ಸೂಚನೆ ಸಹ ನೀಡಲಾಗಿದೆ. ನಾಗರಿಕರು ಜಾಗೃತರಾಗಿರುವಂತೆ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಸಾಲಿನ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದ ಸಭಾ ಭವನದಲ್ಲಿ ಇಂದು ಮೇ 11ರಂದು ಆದಿತ್ಯವಾರ ನಡೆಯಿತು. ನೂತನ ಕೇಂದ್ರೀಯ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಸರ್ವಾನುಮತದಿಂದ ಆಯ್ಕೆಯಾದರು. ಕೇಂದ್ರೀಯ ಆದ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರು ಚುನಾವಣೆಯ ಮೊದಲು ನೂತನ ಪೋಪ್ ಲಿಯೋ 14ರವರ ಚುನಾವಣೆಯನ್ನು ಸ್ಮರಿಸಿ ಅದೇ ರೀತಿ ಪ್ರಾರ್ಥನೆಯ ಮೂಲಕ ಚುನಾವಣೆಯನ್ನು ನಡೆಸಲು ಮಾರ್ಗದರ್ಶನ ನೀಡೀದರು. ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ, ಪ್ರಥಮ ಉಪಾಧ್ಯಕ್ಷ ಲೋರೆನ್ಸ್ ಡಿಸೋಜ ಸುರತ್ಕಲ್, ದ್ವಿತೀಯ ಉಪಾಧ್ಯಕ್ಷ ಲಿಯೋ ರೊಡ್ರಿಗಸ್ ಮಡಂತ್ಯಾರ್, ಪ್ರಧಾನ ಕಾರ್ಯದರ್ಶಿ ವಿಲ್ಮಾ ಮೊಂತೇರೊ ದೇರೆಬೈಲ್, ಸಹ ಕಾರ್ಯದರ್ಶಿ ಆಲ್ವಿನ್ ರೊಡ್ರಿಗಸ್ ಮೂಡಬಿದಿರೆ ಅಲಂಗಾರ್, ಖಜಾಂಚಿ ಫ್ರಾನ್ಸಿಸ್ ಮೊಂತೇರೊ ಮರಿಯಾಶ್ರಮ್ ತಲಪಾಡಿ, ಸಹ ಖಜಾಂಚಿ ಲವೀನಾ ಗ್ರೆಟ್ಟಾ ಡಿಸೋಜ ರಾಣಿಪುರ ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾದರು. ಮಾಜಿ ಅಧ್ಯಕ್ಷ ಲ್ಯಾನ್ಸಿ ಡಿಕುನ್ಹಾ ಚುನಾವಣಾಧಿಕಾರಿಯಾಗಿ ಮತ್ತು…









