ಮಂಗಳೂರು : ಭಕ್ತಿಯ ಕೇಂದ್ರವಾದ ದೈವಸ್ಥಾನದ ಪೂಜಾ ಪರಿಕರಗಳನ್ನು ಕದ್ದುಕೊಂಡು ಹೋಗಿದ್ದ ಕಳ್ಳರಿಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮನೆಯ ಛಾವಣಿಯ ಹಂಚು ತೆಗೆದು ಒಳನುಗ್ಗಿ, ದೈವಗಳ ಮೂರ್ತಿ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ್ದ ಅನ್ಯಮತೀಯ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ.ಕುಳಾಯಿ ಗ್ರಾಮದ ಅಮಿತಾ ಎಂಬವರ ತಾಯಿ ಮನೆಯಲ್ಲಿ ದೈವಗಳ ಆರಾಧನೆ ನಡೆಯುತ್ತಿತ್ತು. ಆದರೆ ಮನೆಯಲ್ಲಿ ಯಾರೂ ಖಾಯಂ ವಾಸವಿಲ್ಲ. ಜನ ವಾಸವಿಲ್ಲದ ಈ ಮನೆಯನ್ನೇ ಗುರಿಯಾಗಿಸಿಕೊಂಡ ಕಳ್ಳರು ಕಳೆದ ಡಿ.26ರ ರಾತ್ರಿ ಹೆಂಚು ತೆಗೆದು ಒಳ ಪ್ರವೇಶಿಸಿ ಪೊಸಪ್ಪೆ ದೈವ, ಮಂತ್ರದೇವತೆ, ಕಲ್ಲುರ್ಟಿ ಪಂಜುರ್ಲಿ ದೈವಗಳ ಮೂರ್ತಿಗಳು, ಬೆಳ್ಳಿಯ ಕಡ್ಸಲೆ (ಖಡ್ಗ), ಘಂಟೆ ಹಾಗೂ ಎಲ್.ಇ.ಡಿ ಟಿವಿ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಹೊತ್ತೊಯ್ದಿದ್ದರು. ಪ್ರಕರಣ ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು ಸಿಸಿಟಿವಿ ಹಾಗೂ ತಾಂತ್ರಿಕ ತನಿಖೆ ನಡೆಸಿದಾಗ ಸಿಕ್ಕಿಬಿದ್ದವನೇ ವಾಜೀದ್ ಜೆ @ ವಾಜಿ (27). ಈತ ಸಾಮಾನ್ಯ ಕಳ್ಳನಲ್ಲ, ಸುರತ್ಕಲ್ ಠಾಣೆಯ ‘ಬಿ’ ರೌಡಿ ಶೀಟರ್. ಮಂಗಳೂರು, ಉಡುಪಿ,…
Author: main-admin
ಮಂಗಳೂರು: ಕೇರಳದ ಕೊಟ್ಟಾಯಂನಲ್ಲಿ ಕಾರೊಂದು ಅಪಘಾತಕ್ಕೀಡಾಗಿ ಸುರತ್ಕಲ್ ಕಾನ ನಿವಾಸಿ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೂಲತಃ ಮುಲ್ಕಿ ತಾಲೂಕಿನ ಅಂಗರಗುಡ್ಡೆ ನಿವಾಸಿ, ಪ್ರಸಕ್ತ ಕಾನದ ಚಿರಾಗ್ ಫ್ಲ್ಯಾಟ್ ನಲ್ಲಿ ವಾಸವಿದ್ದ ಶಾನವಾಝ್ ಯಾನೆ ಶಮೀಮ್(32) ಮೃತಪಟ್ಟವರು. ಇವರ ಜೊತೆ ಕಾರಿನಲ್ಲಿದ್ದ ಕಾಟಿಪಳ್ಳದ ಸಿರಾಜ್, ಕಾನ ನಿವಾಸಿ ಅಶ್ಫಾಕ್, ಸೂರಿಂಜೆ ನಿವಾಸಿ ಶಬೀರ್ ಹಾಗೂ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಸಿರಾಜ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಶಮೀಮ್ ಸೇರಿದಂತೆ ಐವರು ಕೇರಳದ ಕೊಟ್ಟಾಯಂನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ಬೌನ್ಸರ್ ಗಳಾಗಿ ತೆರಳಿದ್ದರು ಎನ್ನಲಾಗಿದೆ. ಅಲ್ಲಿ ಇಂದು ಬೆಳಗ್ಗೆ ಉಪಹಾರ ಸೇವಿಸಲೆಂದು ಕಾರಿನಲ್ಲಿ ಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇಕ್ಕಟ್ಟಾದ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಸುಮಾರು 20 ಅಡಿ ಆಳಕ್ಕೆ ಉರುಳಿಬಿದ್ದಿದೆ ಎನ್ನಲಾಗಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶಾನವಾಝ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿರಾಜ್ ರಿಗೆ ಗಂಭೀರ ಗಾಯಗಾಳಾಗಿದ್ದು,…
ಮಲ್ಪೆ: ಕೋಡಿ ಕನ್ಯಾನ ಗ್ರಾಮದ ಕೋಡಿಬೇಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ತೀವ್ರ ವಾಗಿ ಅಸ್ವಸ್ಥಗೊಂಡಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ಈ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೇರಿದೆ. ಮೃತರನ್ನು ಮೈಸೂರಿನ ಉದಯಗಿರಿ ಸಮೀಪದ ಜಲಪುರಿ ನಿವಾಸಿ ಶಿವಣ್ಣ ಎಂಬವರ ಮಗಳು ದೀಶಾ(೨೩) ಎಂದು ಗುರುತಿಸಲಾಗಿದೆ. ಈ ದುರಂತದಲ್ಲಿ ಸೋಮವಾರ ಚಾಮರಾಜನಗರದ ಜಿಲ್ಲೆಯ ಹರವೆ ಗ್ರಾಮದ ಶಂಕರಪ್ಪ(೨೭) ಹಾಗೂ ಚಾಮರಾಜನಗರದ ಜಿಲ್ಲೆಯ ನರಸೀಪುರ ತಾಲೂಕಿನ ಮೂಗೂರು ನಿವಾಸಿ ಸಿಂಧು(೨೫) ಮೃತಪಟ್ಟಿದ್ದರು.ತೀವ್ರವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧರ್ಮರಾಜ(೨೬) ಇದೀಗ ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವರೆಲ್ಲ ಮೈಸೂರು ಗೋಲ್ ಕ್ರಿಸ್ಟ್ ಇಂಡಿಯಾ ಪ್ರೆÊವೇಟ್ ಲಿಮಿಟೆಡ್ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದಾರೆ.
ನವದೆಹಲಿ: ಮಹಾರಾಷ್ಟ್ರದ 8 ನೇ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಭಾರತದ ಪ್ರಮುಖ ರಾಜಕಾರಣಿ ಅಜಿತ್ ಪವಾರ್ ಬುಧವಾರ (ಜನವರಿ 28) ವಿಮಾನ ಅಪಘಾತದಲ್ಲಿ ನಿಧನರಾದರು. ಬಾರಾಮತಿಯಲ್ಲಿ ಇಳಿಯಲು ಪ್ರಯತ್ನಿಸುವಾಗ ವಿಮಾನವು ನಿಯಂತ್ರಣ ಕಳೆದುಕೊಂಡಿತು, ರನ್ ವೇಯಿಂದ ಹೊರನಡೆದಿತು ಮತ್ತು ಪರಿಣಾಮದ ನಂತರ ಬೆಂಕಿಗೆ ಆಹುತಿಯಾಯಿತು. ಜಿಲ್ಲಾ ಪರಿಷತ್ ಚುನಾವಣೆಗೆ ಮುಂಚಿತವಾಗಿ ಬಾರಾಮತಿಯಲ್ಲಿ ನಿಗದಿಯಾಗಿರುವ ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಅವರು ತಮ್ಮ ಊರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಈ ಕಾರ್ಯಕ್ರಮವನ್ನು ಬೆಳಿಗ್ಗೆ 10:00 ರಿಂದ ಸಂಜೆ 7:00 ರವರೆಗೆ ನಡೆಸಲು ಯೋಜಿಸಲಾಗಿತ್ತು. ಪವಾರ್ ವಿಮಾನದಲ್ಲಿ ಇತರ ಆರು ಜನರೊಂದಿಗೆ ಪ್ರಯಾಣಿಸುತ್ತಿದ್ದರು. ತುರ್ತು ಪ್ರತಿಕ್ರಿಯೆ ತಂಡಗಳು ಅಪಘಾತದ ಸ್ಥಳಕ್ಕೆ ಧಾವಿಸಿದವು ಮತ್ತು ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ. ಸತತ ಆರು ಬಾರಿ ಸೇವೆ ಸಲ್ಲಿಸಿದ ಅವರು ರಾಜ್ಯದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಉಪ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಹೊಂದಿದ್ದಾರೆ
ಪುತ್ತೂರು : ಬೆಟ್ಟಂಪಾಡಿ, ಇರ್ದೆ, ರೆಂಜ ಹಾಗೂ ಅರ್ಲಪದವು ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಪುತ್ತೂರಿನ ಮೊಹಮ್ಮದ್ ಹರ್ಷದ್, ಮಹಮ್ಮದ್ ಆರೀಶ್, ಇಬ್ರಾಹಿಂ ಅಶ್ರಫ್ ಹಾಗೂ ಅವರಿಗೆ ಮಾದಕ ವಸ್ತು ಪೂರೈಸುತ್ತಿದ್ದ ಬಂಟ್ವಾಳದ ಮುಸ್ತಾಫ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 50,000 ರೂ. ಮೌಲ್ಯದ 6.39 ಗ್ರಾಂ ಎಂಡಿಎಂಎ ಹಾಗೂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಡ್ರಗ್ಸ್ ಮಾಫಿಯಾದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ ಸುಮಾರು ₹6.50 ಲಕ್ಷ ಎಂದು ಅಂದಾಜಿಸಲಾಗಿದ್ದು, ಇದರಲ್ಲಿ ಕೃತ್ಯಕ್ಕೆ ಬಳಸಲಾದ ಎರಡು ಕಾರುಗಳು ಹಾಗೂ ಮೊಬೈಲ್ ಫೋನ್‌ಗಳು ಸೇರಿವೆ. ಈ ಯಶಸ್ವಿ ಕಾರ್ಯಾಚರಣೆಯನ್ನು ಪುತ್ತೂರು ಗ್ರಾಮಾಂತರ ಠಾಣೆಯ ಉಪನಿರೀಕ್ಷಕ ಗುಣಪಾಲ ಜೆ. ಮತ್ತು ಸುಷ್ಮಾ ಭಂಡಾರಿ ನೇತೃತ್ವದ ವಿಶೇಷ ತಂಡ ನಡೆಸಿದ್ದು, ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ: ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ನೀಡಿದ್ದಂತ ಮಾತ್ರೆಯನ್ನು ಸೇವಿಸಿ 59 ಮಕ್ಕಳು ಅಸ್ವಸ್ಥಗೊಂಡಿರುವಂತ ಘಟನೆ ಅರಳಿಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿಯಲ್ಲಿ ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳಿಗೆ ಖನಿಜಾಂಶದ ಮಾತ್ರೆ ನೀಡಲಾಗಿತ್ತು. ಅನಿಮಿಯಾ ತಡೆಗಟ್ಟೋ ಸಂಬಂಧ ವಾರಕ್ಕೊಮ್ಮೆ ಖನಿಜಾಂಶದ ಮಾತ್ರೆಯನ್ನು ನೀಡಲಾಗುತ್ತಿತ್ತು. ಇಂದು ಕೂಡ ಖನಿಜಾಂಶ ಯುಕ್ತ ಮಾತ್ರೆಯನ್ನು ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗಿತ್ತು. ಈ ಮಾತ್ರೆಯನ್ನು ಸೇವಿಸಿದ್ದಂತಿಂದ 59 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಮಂಗಳೂರು : ಇನೋವಾ ಕಾರು ಖರೀದಿ ಮಾಡುವ ನೆಪದಲ್ಲಿ ₹8 ಲಕ್ಷಕ್ಕೂ ಅಧಿಕ ಮೊತ್ತ ವಂಚನೆ ಮಾಡಿರುವ ಆರೋಪ ಮಂಗಳೂರಿನ ಪಾಂಡೇಶ್ವರ ಮೂಲದ ತಾಯಿ–ಮಗಳ ಮೇಲೆ ಕೇಳಿಬಂದಿದೆ. ವಂಚನೆಗೆ ಒಳಗಾದ ವ್ಯಕ್ತಿ ಅಶ್ರಫ್ MRPL ಉದ್ಯೋಗಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಇದುವರೆಗೂ ಯಾವುದೇ ಕಾನೂನು ಕ್ರಮ ಜರುಗಿಸಿಲ್ಲ ಎಂದು ಆರೋಪಿಸಲಾಗಿದೆ. ಪೀಡಿತ ವ್ಯಕ್ತಿಯ ಸ್ನೇಹಿತ ನಾದ ಗಂಗಾಧರ ಅವರು ಹರಿಯಾಣ ರಾಜ್ಯದಿಂದ HR-83-0630 ನಂಬರ್‌ನ ಇನೋವಾ ಕಾರನ್ನು ಖರೀದಿಸಿ ತಂದಿದ್ದರು. ನಂತರ ಕಾರು ಅವರಿಗೆ ಇಷ್ಟವಾಗದ ಕಾರಣ, ಅದನ್ನು ಮಾರಾಟ ಮಾಡಿ ಹಣ ಹಿಂತಿರುಗಿಸುವಂತೆ ಪೀಡಿತರಿಗೆ ಮನವಿ ಮಾಡಿದ್ದರು. ಈ ನಡುವೆ, ದಿನಾಂಕ 1 ಏಪ್ರಿಲ್ 2025 ರಂದು ಪೀಡಿತರ ನೆರೆಹೊರೆಯ ಶಾಹಿದ್ ಎಂಬವರು ತಮ್ಮ ಪರಿಚಯದ ಗ್ರಾಹಕರಿದ್ದಾರೆ ಎಂದು ಹೇಳಿ, ಬೀ. ಫಾತಿಮ (ಪತಿ: ಅಬ್ದುಲ್ ಮಜಿದ್) ಹಾಗೂ ಅವರ ಮಗಳು ರೆಹಮತ್ (ಪತಿ: ಅಬ್ದುಲ್ ರೆಹಮಾನ್ ಅಶ್ಫಾಕ್) ಅವರನ್ನು ಪರಿಚಯಿಸಿದರು. ಆರೋಪಿಗಳು ಇನೋವಾ ಕಾರನ್ನು ₹8,60,000ಕ್ಕೆ…
ಮೂಡುಬಿದಿರೆ: ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಕಾರ್ಕಳ ಕಡೆಯಿಂದ ಹೊಸ್ಮಾರು ಕಡೆಗೆ ತೆರಳುತ್ತಿದ್ದ ಗೂಡ್ಸ್ ಟೆಂಪೋ ಮತ್ತು ಹೊಸ್ಮಾರು ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಅಪಘಾತಕ್ಕೊಳಗಾದ ಗೂಡ್ಸ್ ಟೆಂಪೋದಲ್ಲಿ ಕಾರ್ಕಳ ಕಡೆಯಿಂದ ಮನೆ ಖಾಲಿ ಸಾಮಗ್ರಿಗಳನ್ನು ಸ್ಥಳಾಂತರಿಸಲು ತೆರಳುತ್ತಿದ್ದ ಒಂದು ಕುಟುಂಬ ಪ್ರಯಾಣಿಸುತ್ತಿತ್ತು. ಟೆಂಪೋದಲ್ಲಿದ್ದ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಮಾಹಿತಿ ಪಡೆದ ತಕ್ಷಣ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು : ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ದಿನಗಳ ಬಳಿಕ ಕೊನೆಗೆ ಆರೋಪಿ ರಾಜೀವ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಜನವರಿ12ರಂದು ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಕಲ್ಟ್ ಸಿನಿಮಾ ಬ್ಯಾನರ್ ತೆರವು ಮಾಡಿದ್ದಕ್ಕೆ ರಾಜೀವ್ ಗೌಡ ಧಮ್ಕಿ ಹಾಕಿದ್ದ. ಜನವರಿ 14ರಂದು ಈ ಬಗ್ಗೆ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ 13 ದಿನಗಳಿಂದ ಚಿಕ್ಕಬಳ್ಳಾಪುರ ಬಿಟ್ಟು ಪರಾರಿಯಾಗಿದ್ದ. ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡನಿಗೆ ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಬಳಿ 3 ದಿನದಿಂದ ಆಶ್ರಯ ಪಡೆದಿದ್ದ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್…
ಉಡುಪಿ: ಜಿಲ್ಲೆಯ ಮಲ್ಪೆ ಕೋಡಿಬೆಂಗ್ರೆ ಸಮೀಪದ ಅರಬ್ಬಿ ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬೋಟ್ ಮಗುಚಿ ಬಿದ್ದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಪ್ರವಾಸಿಗರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ಸರಸ್ವತಿಪುರಂನಿಂದ ಪ್ರವಾಸಕ್ಕೆ ಆಗಮಿಸಿದ್ದ ಬಿಪಿಒ ಕಾಲ್ ಸೆಂಟರ್ ಉದ್ಯೋಗಿಗಳ ತಂಡದವರು ಎರಡು ಪ್ರವಾಸಿ ಬೋಟ್‌ಗಳಲ್ಲಿ ವಿಹಾರಕ್ಕೆ ತೆರಳಿದ್ದ ವೇಳೆ, ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ಸಮುದ್ರದ ಭಾರೀ ಅಲೆಗಳಿಗೆ ಸಿಲುಕಿದ ಒಂದು ಬೋಟ್ ಅಚಾನಕ್ ಮಗುಚಿ ಬಿದ್ದಿತ್ತು. ಅಪಘಾತದಲ್ಲಿ ಸಮುದ್ರದಲ್ಲಿ ಮುಳುಗಿದ್ದ ಪ್ರವಾಸಿಗರನ್ನು ಸ್ಥಳೀಯರು ಮತ್ತು ಮೀನುಗಾರರು ಸಮಯಕ್ಕೆ ಸರಿಯಾಗಿ ರಕ್ಷಿಸಿ ಹೊರತೆಗೆದಿದ್ದರು. ಅಪಘಾತದಲ್ಲಿ ಶಂಕರಪ್ಪ (22) ಮತ್ತು ಸಿಂಧು (23) ಸೇರಿದಂತೆ ನಾಲ್ವರು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಈ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ದೃಢಪಡಿಸಿವೆ. ಧರ್ಮರಾಜ್ ಮತ್ತು ದಿಶಾ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಿಗೆ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ…










