ಬೆಳ್ತಂಗಡಿ : ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತನಿಗೆ ಮಾನ್ಯ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ದಿನಾಂಕ 23-07-2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ‘ಪಾಪುಲರ್ ಫ್ರಂಟ್ ಆಫ್ ಇಂಡಿಯಾ’ (PFI) ಬೆಳ್ತಂಗಡಿ ವಲಯ ಸಂಘಟನೆಯ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತ ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಉದ್ರೇಕಕಾರಿ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿದ್ದ ಎನ್ನಲಾಗಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 315/2015 ರಂತೆ, ಭಾರತೀಯ ದಂಡ ಸಂಹಿತೆ (IPC) ಕಲಂ 153(A) ಮತ್ತು 295(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ತನಿಖಾಧಿಕಾರಿಯಾಗಿದ್ದ ರವಿ ಬಿ.ಎಸ್. ಅವರು ಪ್ರಕರಣದ ಕಂಪ್ಲೀಟ್ ತನಿಖೆ ನಡೆಸಿ, ಅಗತ್ಯ…
Author: main-admin
ಕಾರ್ಕಳ : ರೆಸಿಡೆನ್ಸಿಯೊಂದರಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಆ.3ರ ರಾತ್ರಿ ನಿಟ್ಟೆಯಲ್ಲಿ ನಡೆದಿದೆ. ದಾಳಿ ವೇಳೆ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಹೋಟೆಲ್ ಮಾಲೀಕರಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ. ಎಸ್. ನೇತೃತ್ವದ ತಂಡ ದಾಳಿ ನಡೆಸಿದ್ದು, ಸುಜೀತ್, ಅಭಿಮನ್ಯು ಮಹೇಶ್, ಧೀರಜ್, ನರೇಶ್ ಕುಮಾರ್ ಹಾಗೂ ಪ್ರಶಾಂತ್ ಸೇರಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಯಶೋಧರ (ಅಣ್ಣು), ನೂರು ಮಹಮ್ಮದ್, ರವಿಶೆಟ್ಟಿ ಹಾಗೂ ಸತೀಶ್ ಎಂಬ ನಾಲ್ವರು ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯ ವೇಳೆ ಜುಗಾರಿಗೆ ಬಳಸಲಾಗಿದ್ದ 16,350 ರೂ. ನಗದು, ಇಸ್ಪೀಟು ಎಲೆಗಳು, ಏಳು ಮೊಬೈಲ್ ಫೋನ್‌ಗಳು ಹಾಗೂ ಕುರ್ಚಿ ಸೇರಿದಂತೆ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು 43,850 ರೂ. ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದ ಜನನಿ ಬಾರ್ & ರೆಸ್ಟೋರೆಂಟ್ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿದ ನಿಟ್ಟೆ ಕಾಲೇಜಿನ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 2ರಂದು ರಾತ್ರಿ ಸುಮಾರು 11.50 ಗಂಟೆಗೆ ಯಶ್‌ರಾಜ್ ಅವರು ತಮ್ಮ ಸಹೋದರ ಪವನ್ ಕುಮಾರ್ ಹಾಗೂ ಸ್ನೇಹಿತ ಶ್ರೇಯಸ್ ಅವರೊಂದಿಗೆ ಈಶ್ವರನಗರದ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ, ಎರಡು ಕಾರುಗಳಲ್ಲಿ ಬಂದ ಆರೋಪಿತರು ಪವನ್ ಕುಮಾರ್ ಅವರನ್ನು ತಡೆದು ನಿಲ್ಲಿಸಿ ವಿನಾಕಾರಣ ಜಗಳ ಆರಂಭಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಕ್ಷಯ್ ಎ. (21), ಪುನೀತ್ ಎಸ್. (21), ಶಮಂತ ಕೆ.ಆರ್. (21) ಹಾಗೂ ಯಶವಂತ್ ಬಿ.ಜೆ. (21) ಬಂಧಿತರು. ಇವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪವನ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೇ ವೇಳೆ ಮಧ್ಯಪ್ರವೇಶಿಸಿದ ಯಶ್‌ರಾಜ್ ಹಾಗೂ ಶ್ರೇಯಸ್ ಅವರ ಮೇಲೆಯೂ ಹಲ್ಲೆ ನಡೆಸಿ, ಕಾಲಿನಿಂದ ತುಳಿದು, ಬಟ್ಟೆಗಳನ್ನು ಹರಿದು…
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಿನ ಅಮಲಿನಲ್ಲಿದ್ದ ಆರೋಪದ ಮೇರೆಗೆ ಓರ್ವನ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವೈಜ್ಞಾನಿಕ ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ನಿವಾಸಿ ಶ್ರೀರಾಜ್ ಶೆಟ್ಟಿ (36) ಎಂದು ಗುರುತಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್ 2ರ ಸಂಜೆ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಆನಂದ್ ಎಂ. ಅವರು ಸಿಬ್ಬಂದಿಯೊಂದಿಗೆ ಕುವೆಟ್ಟು ಗ್ರಾಮದ ಪೊಟ್ಟುಕೆರೆ ಪ್ರದೇಶದಲ್ಲಿ ನಿಯಮಿತ ಗಸ್ತು ನಡೆಸುತ್ತಿದ್ದರು. ಈ ವೇಳೆ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಹಾಗೂ ಮಾದಕ ವಸ್ತುವಿನ ಅಮಲಿನಲ್ಲಿರುವಂತೆ ಕಂಡುಬಂದ ವ್ಯಕ್ತಿಯನ್ನು ಪೊಲೀಸರು ತಡೆದು ವಿಚಾರಣೆ ನಡೆಸಿದರು.ವಿಚಾರಣೆ ವೇಳೆ ಆತ ಸಮರ್ಪಕ ಉತ್ತರ ನೀಡದೆ ಅಮಲಿನ ಸ್ಥಿತಿಯಲ್ಲೇ ಮಾತನಾಡುತ್ತಿದ್ದ ಎನ್ನಲಾಗಿದೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಿದಾಗ, ನಿಷೇಧಿತ ಮಾದಕ ವಸ್ತುವನ್ನು ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ನಂತರ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ…
ಮಂಗಳೂರು: ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ ನಮ್ಮ ಸ್ವಾರ್ಥ ಮತ್ತು ಬೇಜವಾಬ್ದಾರಿತನವೇ ಮೂಲ ಕಾರಣ ಎಂದು ಜಿಲ್ಲಾ ನಗರಾಭಿವೃದ್ಧಿ ಸೆಲ್‌ನ ಯೋಜನಾ ನಿರ್ದೇಶಕ ಡಾ| ಜಿ. ಸಂತೋಷ್ ಕುಮಾರ್ ಹೇಳಿದರು. ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಪರಿಸರ ಆಯೋಗದ ನೇತೃತ್ವದಲ್ಲಿ ನಗರದ ಬೆಂದೂರ್ ಚರ್ಚ್‌ನ ಸಭಾಂಗಣದಲ್ಲಿ ಪರಿಸರ ಆಯೋಗದ ಸಂಚಾಲಕರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ಪರಿಸರ ಮಾಹಿತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಶದಲ್ಲಿ ಪರಿಸರವನ್ನು ಉಳಿಸಿ, ಸಂರಕ್ಷಿಸುವ ಕಾರ್ಯ ಯುದ್ಧೋಪಾದಿಯಲ್ಲಿ ಆಗಬೇಕು. ಪ್ರಕೃತಿಯನ್ನು ಹಾಳು ಮಾಡಿದ್ದರಿಂದಲೇ ಇಂದು ನಾವು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಪರಿಸರವನ್ನು ಕಾಪಾಡಿ, ಅದನ್ನು ನಮ್ಮ ಮುಂದಿನ ತಲೆಮಾರಿಗೆ ಸುರಕ್ಷಿತವಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ| ರಾಜೇಂದ್ರ ಕಲ್ಬಾವಿ ಹಾಗೂ ಹಸಿರು ದಳದ ಪ್ರಾಜೆಕ್ಟ್ ಮ್ಯಾನೇಜರ್ ನಾಗರಾಜ್ ಬಜಾಲ್…
ಉಳ್ಳಾಲ: ಜಿಒಎಸ್ ಆಫ್ ( ಗ್ರೂಪ್ ಆಪರೇಟೆಡ್ ಸ್ವಿಚ್) ಮಾಡದೆ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್ ಮೆನ್ ಓರ್ವ ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝಮೀರ್(49) ಮೃತಪಟ್ಟ ವ್ಯಕ್ತಿ. ಉಚ್ಚಿಲ ನಯಾಪಟ್ಟದ ಟ್ರಾನ್ಸ್ ಫಾರ್ಮರ್ ನಲ್ಲಿ ದೋಷದ ಬಗ್ಗೆ ಮೆಸ್ಕಾಂಗೆ ದೂರು ಬಂದ ಹಿನ್ನೆಲೆಯಲ್ಲಿ ಶೇಖ್ ಝಮೀರ್ ಹಾಗೂ ಸಹೋದ್ಯೋಗಿ ಸಂಗಪ್ಪ ಎಂಬವರು ಇಂದು ಬೆಳಗ್ಗೆ ಸ್ಥಳಕ್ಕೆ ದುರಸ್ತಿಗೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಜಿಒಎಸ್ ಆಫ್ ಆಗಿದೆಯೆಂದು ಗ್ರಹಿಸಿ ಟ್ರಾನ್ಸ್ ಫಾರ್ಮರ್ ಏರಿದ ಝಮೀರ್ ವಿದ್ಯುತ್ ಆಘಾತಕ್ಕೊಳಗಾಗಿ ಕೆಳಗೆಸೆಯಲ್ಪಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಝಮೀರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾರಿ ಮಧ್ಯದಲ್ಲೇ ಅವರು ಸಾಗಿಸುವ ಕೊನೆಯುಸಿರೆಳೆದಿದ್ದಾರೆ. ಮೃತ ಝಮೀರ್ ಪತ್ನಿ ಮತ್ತು ಓರ್ವ ಹೆಣ್ಣು ಮಗಳನ್ನ ಅಗಲಿದ್ದಾರೆ.
ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್ ಪಿಂಟೊ (48) ಅವರ ಮೃತದೇಹ ಸೋಮವಾರ ಬೆಳಗ್ಗೆ ಅರಳ ಗ್ರಾಮದ ಪಂಬದಗಡ್ಡೆ ಪ್ರದೇಶದಲ್ಲಿ ಪತ್ತೆಯಾಗಿದೆ. ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೊ ಅವರ ಪುತ್ರ ಜೀವನ್ ಪಿಂಟೊ ಅವರು ಶನಿವಾರ ರಾತ್ರಿ ನಾಪತ್ತೆಯಾಗಿದ್ದರು. ಘಟನಾ ಸ್ಥಳದ ಸಮೀಪ ತುಂಬಿ ಹರಿಯುತ್ತಿದ್ದ ಹಳ್ಳದ ಬಳಿ ಅವರ ಚಪ್ಪಲಿ ಹಾಗೂ ಟಾರ್ಚ್ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ, ಅವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿತ್ತು. ಘಟನೆಯ ಮಾಹಿತಿ ದೊರಕಿದ ತಕ್ಷಣ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ತಂಡಗಳು ರಾತ್ರಿ ವೇಳೆಯಿಂದಲೇ ನಿರಂತರ ಶೋಧ ಕಾರ್ಯಾಚರಣೆ ನಡೆಸಿದ್ದವು. ಭಾರಿ ಮಳೆ ಹಾಗೂ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾದರೂ ಶೋಧ ಮುಂದುವರಿಸಲಾಗಿತ್ತು. ಸೋಮವಾರ ಬೆಳಗ್ಗೆ ಅರಳ ಗ್ರಾಮದ ಪಂಬದಗಡ್ಡೆ ಸಮೀಪದ ನೀರಿನಲ್ಲಿ ಜೀವನ್ ಪಿಂಟೊ ಅವರ ಮೃತದೇಹ ಪತ್ತೆಯಾಗಿದೆ…
ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸರು ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯೋರ್ವನನ್ನು ಆಗಸ್ಟ್ 2 ರಂದು ವಶಕ್ಕೆ ಪಡೆದಿದ್ದಾರೆ. ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ಕರ್ತವ್ಯ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅಡಗಿದ್ದ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಬಂಧಿತನ ಹೆಸರು ಉಮ್ಮರ್ ನವಾಫ್ (33) , ತಂದೆ ಅಬ್ದುಲ್ ಖಾದರ್. ಮೂಲತಃ ಈತ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮಾರ್ಗತಲೆ ನಿವಾಸಿಯಾಗಿದ್ದಾರೆ. ಪ್ರಸ್ತುತ ಈತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಮಂಜೇಶ್ವರದ ಪಾವೂರು ಪೋಸ್ಟ್ ವ್ಯಾಪ್ತಿಯ ಕುಂಡಪ್ಪು ಗೇರುಕಟ್ಟೆಯ ನಾಜಿಯಾ ಮಂಜೀಲ್ ನಲ್ಲಿ ವಾಸವಾಗಿದ್ದ. ಆರೋಪಿ ಉಮ್ಮರ್ ನವಾಫ್ ಮೇಲೆ ಸುಮಾರು 13 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯಕ್ಕೆ ನಿರಂತರವಾಗಿ ಗೈರು ಹಾಜರಾಗಿದ್ದ ಕಾರಣ ಘನ ನ್ಯಾಯಾಲಯವು ಈತನ ವಿರುದ್ಧ 30 ಕ್ಕೂ ಹೆಚ್ಚು ವಾರಂಟ್‍ಗಳನ್ನು…
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಪ್ರಭಾವಿ ಹುದ್ದೆಗಳಿಗಾಗಿ ನಡೆಯುವ ರಾಜಕೀಯ ಶಿಫಾರಸು ಹಾಗೂ ಲಾಬಿಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ (PI) ಮತ್ತು ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (DySP) ಹುದ್ದೆಗಳ ವರ್ಗಾವಣೆ ನಿಯಮಾವಳಿಗಳನ್ನು ಗೃಹ ಇಲಾಖೆ ಪರಿಷ್ಕರಿಸಿದ್ದು, ಕಡ್ಡಾಯ ಐದು ವರ್ಷಗಳ ಕೂಲಿಂಗ್-ಆಫ್ ಅವಧಿ (Cooling-off period) ನಿಯಮವನ್ನು ಜಾರಿಗೆ ತಂದಿದೆ. ಹೊಸ ಮಾರ್ಗಸೂಚಿಯ ಪ್ರಕಾರ, ಬಡ್ತಿ ಪಡೆದ ಡಿವೈಎಸ್ಪಿಗಳು ಕಾರ್ಯನಿರ್ವಾಹಕ ಹುದ್ದೆಗೆ (Executive Posting) ಅರ್ಹರಾಗಲು ಮೊದಲು ಕಾರ್ಯನಿರ್ವಾಹಕೇತರ (Non-Executive) ಹುದ್ದೆಯಲ್ಲಿ ಕನಿಷ್ಠ ಎರಡು ವರ್ಷ ಸೇವೆ ಸಲ್ಲಿಸಿರಬೇಕು. ಇದೇ ರೀತಿ, ಬಡ್ತಿ ಪಡೆದ ಪೊಲೀಸ್ ಇನ್‌ಸ್ಪೆಕ್ಟರ್‌ಗಳು ಕೂಡ ಕಾರ್ಯನಿರ್ವಾಹಕೇತರ ಜವಾಬ್ದಾರಿಗಳಲ್ಲಿ ಎರಡು ವರ್ಷ ಪೂರ್ಣಗೊಳಿಸಿದ ಬಳಿಕವೇ ಕಾರ್ಯನಿರ್ವಾಹಕ ಹುದ್ದೆಗೆ ನೇಮಕವಾಗಲು ಅರ್ಹರಾಗುತ್ತಾರೆ. ಇದರ ಜೊತೆಗೆ, ಬಡ್ತಿ ಪಡೆದ ಅಧಿಕಾರಿಗಳು ಎರಡು ವರ್ಷದೊಳಗೆ ನಾಲ್ಕು ವಾರಗಳ ಪುನರ್‌ತರಬೇತಿ (Refresher Training) ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ತರಬೇತಿಯನ್ನು ಪೂರ್ಣಗೊಳಿಸದ ಅಧಿಕಾರಿಗಳಿಗೆ ಕಾರ್ಯನಿರ್ವಾಹಕ ಹುದ್ದೆ ನೀಡುವುದಿಲ್ಲ ಎಂದು…
ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ನಿವಾಸಿಯ ವ್ಯಕ್ತಿಯೊಬ್ಬರು ತೋಡು ದಾಟುವಾಗ ಕಾಲು ಜಾರಿ ತೋಡಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾಣೆಯಾದವರನ್ನು ಜೀವನ್ ಪಿಂಟೊ(48) ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತೋಡಿನ ಆಚೆ ಇರುವ ತಮ್ಮ ಮಾವನ ಮನೆಗೆ ತೆರಳಲು ತೋಡು ದಾಟುವ ವೇಳೆ ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ ಘಟನಾ ಸ್ಥಳದಲ್ಲಿ ಜೀವನ್ ಪಿಂಟೊ ಅವರ ಚಪ್ಪಲಿ ಹಾಗೂ ಟಾರ್ಚ್ಲೈಟ್ ಪತ್ತೆಯಾಗಿದ್ದು, ಅವರು ತೋಡಿಗೆ ಬಿದ್ದಿರುವ ಅನುಮಾನ ಮತ್ತಷ್ಟು ಬಲಗೊಂಡಿದೆ. ಆದರೆ ಅವರು ತೋಡಿಗೆ ಬಿದ್ದಿರುವುದು ಅಥವಾ ಬೇರೆಡೆ ತೆರಳಿರುವುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ವ್ಯಕ್ತಿ ಕೊಚ್ಚಿ ಹೋದ ವ್ಯಕ್ತಿಯ ಪತ್ತೆಗೆ ಎನ್ ಡಿ ಆರ್ ಆಫ್ ತಂಡದಿಂದ ಶೋಧ ಕಾರ್ಯ ನಡೆದಿದ್ದು ಸಂಜೆಯ ವರೆಗೂ ಪತ್ತೆಯಾಗದ ಕಾರಣ ಸೋಮವಾರ ಮತ್ತೆ ಶೋಧ…










