Author: main-admin

ಉಪ್ಪಿನಂಗಡಿ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಅಶ್ರಫ್(30) ಎಂದು ಗುರುತಿಸಲಾಗಿದೆ. ಅಶ್ರಫ್ ಅಮಲು ಪದಾರ್ಥ ಸೇವನೆ ಮಾಡಿ ಮನೆಯವರೊಂದಿಗೆ ಪದೇ ಪದೇ ಜಗಳ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅಶ್ರಫ್‌ನ ಮೊದಲ ಪತ್ನಿ ತವರು ಮನೆಗೆ ಹೋಗಿದ್ದು ಎರಡನೇ ಪತ್ನಿ, ಅಶ್ರಫ್‌ನ ತಂದೆ, ತಾಯಿ, ಹಾಗೂ ಮಕ್ಕಳು ಪ್ರತ್ಯೇಕವಾಗಿ ವಾಸವಾಗಿದ್ದರು. ಅಶ್ರಫ್ ಕಳೆದ ಕೆಲ ಸಮಯಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ಇದರಿಂದ ಅವರು ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ಹೇಳಲಾಗಿದೆ. ಎ.2ರಂದು ಸಂಜೆ ಮನೆಯ ಸಿಟೌಟ್‌ನಲ್ಲಿದ್ದ ಕಬ್ಬಿಣದ ಪೈಪುಗೆ ಅಂಗಿಯ ಒಂದು ಬದಿಯನ್ನು ಕಟ್ಟಿ ಅದರ ಇನ್ನೊಂದು ಬದಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಅಶ್ರಫ್‌ನ ತಂದೆ ಖಾಸೀಂ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಅಶ್ರಫ್ ತಂದೆ, ತಾಯಿ, ಇಬ್ಬರು ಪತ್ನಿಯರು ಹಾಗೂ…

Read More

ಮಣಿಪಾಲ: ನಗರದ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಟೈಮಿಂಗ್‌ ವಿಚಾರಕ್ಕೆ ಗಲಾಟೆ ನಡೆದು ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಎ.2ರಂದು ಸಂಜೆ 4:30 ಗಂಟೆ ಸುಮಾರಿಗೆ ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಟೈಮಿಂಗ್‌ ವಿಚಾರದಲ್ಲಿ ಆನಂದ್‌ ಬಸ್‌ ನ ಕಂಡಕ್ಟರ್‌ ವಿಜಯ ಕುಮಾರ್‌ ಹಾಗೂ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌ ನಡುವೆ ಗಲಾಟೆ ನಡೆದಿದೆ.ಈ ವಿಡಿಯೋ ಈಗ ಎಲ್ಲಾ ಕಡೆ ವೈರಲ್ ಆಗಿದೆ.  ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಉಚ್ಚಿಲ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌(25), ಹಾಗೂ ಆನಂದ ಬಸ್ಸಿನ ಕಂಡಕ್ಟರ್‌ ವಿಜಯಕುಮಾರ್‌(25), ಚಿತ್ರದುರ್ಗ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ದಸ್ತಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,  ಬಸ್‌ಗಳನ್ನು ಅಮಾನತ್ತು ಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು  ತಿಳಿಸಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು…

Read More

ಬಜಪೆ: ಮೂಡಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಸೂರಲ್ಪಾಡಿ ಮಾರ್ಗವಾಗಿ 19 ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ. ವಾಹನವನ್ನು ಮಾರ್ಚ್‌ 28ರಂದು ಬಜರಂಗದಳ ಕಾರ್ಯಕರ್ತರು ಸೂರಲ್ಪಾಡಿ ಬಳಿ ಪತ್ತೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದರು. ಘಟನೆಗೆ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನ ಮಠೋಡಿ ಗ್ರಾಮದ ನಿವಾಸಿ ಮೊಹಮ್ಮದ್‌ ತೌಸಿಫ್‌ (26) ನನ್ನು ಪೊಲೀಸರು ಬಂಧಿಸಿ 6 ಲಕ್ಷ ರೂ ಮೌಲ್ಯದ ಹುಂಡೈ ಕಾರನ್ನು ವತಪಡಿಸಿಕೊಂಡಿದ್ದರು. ಘಟನೆಯ ಸಂದರ್ಭ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗಾಗಿ ಪೊಲೀಸರು. ವಿಶೇಷ ತಂಡ ರಚಿಸಿ ತನಿಖೆ ಚುರುಕುಗೊಳಿಸಿ ತಲೆಮರೆಸಿಕೊಂಡಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ತಾಲೂಕಿನ 62ನೇ ತೋಕೂರು. ಗ್ರಾಮದ ನಿವಾಸಿ ಅರಾಫತ್‌ ಆಲಿ(36), ಮೂಡಬಿದಿರೆ ತಾಲೂಕಿನ ಪ್ರಾಂತ್ಯ ಗ್ರಾಮದ ನಿವಾಸಿ ಅಬ್ದುಲ್‌ ನಜೀರ್‌(31), ಬೆಳ್ತಂಗಡಿ ತಾಲೂಕಿನ ಪೆರಂತಡ್ಕ ಕಾಶೀಪಟ್ಟ ನಿವಾಸಿ ಫಾರೀಸ್‌ NERA, ಮಂಗಳೂರು ತಾಲೂಕಿನ 62 ನೇ ತೋಕೂರು ಗ್ರಾಮದ ನಿವಾಸಿ ಮೊಹಮ್ಮದ್‌ ಅಪ್ಪಿದ್‌(27) ಎಂದು. ಗುರುತಿಸಲಾಗಿದೆ. ಪಕ್ತೆಕಾರ್ಯದಲ್ಲಿ ಬಜಪೆ ಪೊಲೀಸ ನಿರೀಕ್ಷಕ ಸಂದೀಪ್‌…

Read More

ಬೆಂಗಳೂರು: ಮುಡಾ ಹಗರಣ ಸಂಬಂಧ ಇಡಿ ಕೂಡ ಎಂಟ್ರಿಯಾಗಿತ್ತು. ಇದೀಗ ಇಡಿಯಿಂದ ಮುಡಾ ಪ್ರಕರಣದ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಮುಡಾ ಹಗರಣದ ಇತರೆ ಆರೋಪಿಗಳಿಗೂ ನಡುಕ ಶುರುವಾದಂತೆ ಆಗಿದೆ. ಈ ಸಂಬಂಧ ಹೈಕೋರ್ಟ್ ನ್ಯಾಯಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಸಲಾಯಿತು. ಡಿ.ಬಿ ನಟೇಶ್ ಅವರ ಹೇಳಿಕೆಯನ್ನು ಆಧರಿಸಿ ಹೈಕೋರ್ಟ್ ನ್ಯಾಯಪೀಠವು ಮುಡಾ ಹಗರಣ ಸಂಬಂಧ ಇಡಿ ತನಿಖೆಗೆ ಅನುಮತಿ ನೀಡಿದೆ. ಮುಡಾ ಪ್ರಕರಣದಲ್ಲಿ ಇಡಿ ತನಿಖೆಗೆ ಹೈಕೋರ್ಟ್ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ವಿಭಾಗೀಯ ಪೀಠವು ಅನುಮತಿ ನೀಡಿದೆ. ಹೀಗಾಗಿ ಮುಡಾ ಪ್ರಕರಣ ಈಗ ಮತ್ತೊಂದು ತಿರುವು ಪಡೆದಂತೆ ಆಗಿದೆ. ಇನ್ನೂ ಡಾ.ಡಿಬಿ ನಟೇಶ್ ವಿರುದ್ಧದ ಸಮನ್ಸ್ ರದ್ದು ಆದೇಶಕ್ಕೆ ತಡೆ ನೀಡಿಲ್ಲ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಕಾರ ವ್ಯಕ್ತಪಡಿಸಿದೆ. ಆದರೇ ಡಿ.ಬಿ ನಟೇಶ್ ಹೇಳಿಕೆ ಆಧರಿಸಿ ಇಡಿ ತನಿಖೆ ಮುದುವರೆಸಬಹುದು ಎಂಬುದಾಗಿ ಸಿಜೆ ಅಂಜಾರಿಯಾ, ನ್ಯಾಯಮೂರ್ತಿ ಅರವಿಂದ್ ಅವರಿದ್ದಂತ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಪೊಲೀಸ್‌ ಇಲಾಖೆ ಮಹತ್ತರವಾದ ಪಾತ್ರ ವಹಿಸುತ್ತದೆ. ಪೊಲೀಸ್‌ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಿದರೆ ಅಪರಾಧಗಳು ಕಡಿಮೆಯಾಗುತ್ತದೆ. ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು…

Read More

ಕಾರ್ಕಳ: ಕಾರ್ಕಳದ ಅಜೆಕಾರಿನಲ್ಲಿ ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಾಲಕೃಷ್ಣ ಎಂಬವರನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಅವರಿಬ್ಬರನ್ನು ಪೊಲೀಸರು ಬಂಧಿಸಿದ್ದರು. ಇಲ್ಲಿಯವರೆಗೆ ಅವರು ಹಾಕುತ್ತಿದ್ದ ಜಾಮೀನು ಅರ್ಜಿಯನ್ನು ಕೂಡಾ ನ್ಯಾಯಾಲಯ ರಿಜೆಕ್ಟ್ ಮಾಡುತ್ತಿತ್ತು. ಆದರೆ ಇದೀಗ ಆರೋಪಿ ದಿಲೀಪ್ ಹೆಗ್ಡೆಗೆ ರಾಜ್ಯ ಹೈಕೋರ್ಟ್ ನಿನ್ನೆ ಜಾಮೀನು ನೀಡಿ ಆದೇಶಿಸಿದೆ. ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆ ಆತ ಹೈಕೋರ್ಟ್ ಗೆ ಅರ್ಜಿ ಹಾಕಿದ್ದನು. ಆರೋಪಿ ಪರವಾಗಿ ವಕೀಲರು ನಿಶ್ಚಿತ್ ಕುಮಾರ್ ಶೆಟ್ಟಿ ವಾದ ಮಂಡಿಸಿದ್ದು ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರ ಏಕಸದಸ್ಯ ಪೀಠ ಜಾಮೀನು ನೀಡಿ ಆದೇಶಿಸಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಲೋಕಾಯುಕ್ತ ಬಂಧನದ ಭೀತಿಯಲ್ಲಿ ಪಿಐ ಪರಾರಿ ಆಗಿದ್ದು, ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾನೆ. ಲೋಕಾಯುಕ್ತ ಕಾರ್ಯಾಚರಣೆ ವೇಳೆ ಕುಮಾರ್ ಆಗಿದ್ದಾನೆ. ಸುಳ್ಳು ಕೇಸ್ ದಾಖಲಿಸಿ 4 ಕೋಟಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದಾನೆ ಎಂದು ಆರೋಪ ಕೇಳಿಬಂದಿದೆ. ನಾಗರಬಾವಿಯ ಖಾಸಗಿ ಹೋಟೆಲ್ ನಲ್ಲಿ ಡೀಲ್ ವೇಳೆ ಲೋಕಾಯುಕ್ತ ದಾಳಿ ನಡೆಸಿದೆ. ವಿಚಾರ ತಿಳಿದು ಮನೆಯಲ್ಲಿ ಪೊಲೀಸ್ ಜೀಪ್ ಬಿತ್ತು ಪಿಐ ಕುಮಾರ್ ಎಸ್ಕೆಪ್ ಆಗಿದ್ದಾನೆ. ಡೀಲ್ ಮಾಡುವ ವೇಳೆ ಇಬ್ಬರೂ ಪೊಲೀಸ್ ಕಾನ್ಸ್ಟೇಬಲ್ತಿದ್ದಾರೆ ಅಧಿಕಾರ ದುರ್ಬಳಕೆ ಆರೋಪದಡಿ ಇಬ್ಬರು ಪಿಸಿಗಳು ಸೇರಿ ಐವರನ್ನು ಅರೆಸ್ಟ್ ಮಾಡಲಾಗಿದೆ ಭ್ರಷ್ಟಾಚಾರ ತಡೆ ಕಾಯಿದೆಯ ಅಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಬಂಧಿಸಲಾಗಿದೆ. ಪಿಐ ವಿರುದ್ಧ ಆರೋಪವೇನು? ಸಿವಿಲ್ ಕಾಂಟ್ರಾಕ್ಟರ್ ಚನ್ನೇಗೌಡ ಪತ್ನಿ ಅನುಷಾಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪಿಐ ಕುಮಾರ್ ಇಂದ ಕಿರುಕುಳ ಆರೋಪ ಕೇಳಿ ಬಂದಿದ್ದು ಸುಳ್ಳು ಕೇಸ್ ದಾಖಲಿಸಿ 4 ಕೋಟಿ…

Read More

ಮಂಗಳೂರು: ಮನೆಯ ಲಾಕರ್‌ನಲ್ಲಿಟ್ಟ ಸುಮಾರು 1 ಕೆಜಿ ಚಿನ್ನವನ್ನು ಕಳ್ಳರು ಕದ್ದೊಯ್ದ ಘಟನೆ ಮಂಗಳೂರು ಬಜಪೆ ಸಮೀಪದ ಪೆರ್ಮುದೆಯಲ್ಲಿ ಸಂಭವಿಸಿದೆ.ಪೆರ್ಮುದೆಯ ಜಾನ್ವಿನ್‌ ಪಿಂಟೊ ಎಂಬವರ ಮನೆಯಲ್ಲಿ ಕಳ್ಳತನವಾಗಿರುವ ವಿಚಾರ ಮಂಗಳವಾರ ಬೆಳಕಿಗೆ ಬಂದಿದೆ. ಜಾನ್ವಿನ್‌ ಪಿಂಟೊ ಮತ್ತು ಅವರ ಪುತ್ರ ಪ್ರವೀಣ್‌ ಪಿಂಟೊ ಕುವೈಟ್‌ನಲ್ಲಿದ್ದಾರೆ. ಮನೆಗೆ ಬೀಗ ಹಾಕಿದ್ದು, ಮನೆಯ ಸುತ್ತ 16 ಸಿಸಿ ಕ್ಯಾಮರಾ ಅಳವಡಿಸಿದ್ದಾರೆ. ಆದರೆ ಕಳ್ಳರು ಸಿಸಿ ಕ್ಯಾಮರಾ ಇಲ್ಲದ ಕಡೆಯಿಂದ ಮನೆಗೆ ನುಗ್ಗಿ ಲಾಕರ್‌ನಲ್ಲಿದ್ದ ಅಪಾರ ಚಿನ್ನ ಕಳ್ಳತನ ಮಾಡಿದ್ದಾರೆ.ಕಿಟಿಕಿಯ ಕಬ್ಬಿಣದ ಗ್ರಿಲ್ಸ್‌ ಮುರಿದು ಕಳ್ಳರು ಒಳನುಗ್ಗಿದ್ದಾರೆ. ಮನೆಯಲ್ಲಿ ಮುಧೋಳ, ಜರ್ಮನ್‌ ಶೆಫರ್ಡ್‌ ಸೇರಿ 8 ನಾಯಿಗಳಿವೆ. ಚಾಣಾಕ್ಷ ಕಳ್ಳರು ಇವುಗಳ ಕಣ್ಣುತಪ್ಪಿಸಿ ಕಳ್ಳತನ ಮಾಡಿರುವುದು ಆಶ್ಚರ್ಯ ಉಂಟುಮಾಡಿದೆ. ಈ ನಾಯಿಗಳಿಗೆ ಆಹಾರ ಹಾಕಲು ಇಬ್ಬರು ಕೆಲದಾಳುಗಳು ಬರುತ್ತಿದ್ದು, ಮಂಗಳವಾರ ಬೆಳಗ್ಗೆ ಅವರು ಬಂದಾಗ ಕಳ್ಳತನವಾಗಿರುವುದು ತಿಳಿದುಬಂದಿದೆ. ಲಾಕರನ್ನು ಕೀ ಬಳಸಿ ತೆರೆದು ಅದರೊಳಗಿದ್ದ 1 ಕೆಜಿಯಷ್ಟು ಚಿನ್ನಾಭರಣಗಳು ಮತ್ತು ದುಬಾರಿ ಬೆಲೆಯ ಹಲವು ಕೈಗಡಿಯಾರಗಳನ್ನು…

Read More

ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ. ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಶಿಶುವನ್ನು ಪುತ್ತೂರಿನ ನೆಲ್ಲಿಕಟ್ಟೆಯ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರಕ್ಕೆ ಆರೈಕೆಗಾಗಿ ದಾಖಲಿಸಲಾಗಿದೆ. ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1 ನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಆಯುಕ್ತರಿಗೆ ಇಬ್ಬರು ಬ್ರೋಕರ್‌ಗಳು ಮಾನಹಾನಿಕರ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ. ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ಮೂಡಾ ಆಯುಕ್ತೆ ಉರ್ವ ಠಾಣೆಗೆ ದೂರು ನೀಡಿದ್ದಾರೆ. ಜನವರಿ 7 ರಂದು ಸಿಬ್ಬಂದಿ ಊಟಕ್ಕೆ ಹೋದ ಸಮಯದಲ್ಲಿ ಮುಡಾ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ ಮೇಜಿನ ಮೇಲಿದ್ದ ಕಡತಗಳನ್ನು ವಿರೂಪಗೊಳಿಸಿದ ಆರೋಪ, ಅಲ್ಲದೆ ಮೂಡಾದಲ್ಲಿ ನಡೆದಿರುವ ಕೆಲವು ವಿದ್ಯಾಮಾನ, ಮುಡಾ ಕಚೇರಿಯಲ್ಲಿನ ಏಕ-ಸ್ಥಳ ಅನುಮೋದನೆಗಳು ಮತ್ತು ಇತರ ಕೆಲಸಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಮಧ್ಯವರ್ತಿಗಳು ಹಸ್ತಕ್ಷೇಪ ಮಾಡುವುದನ್ನು ತಡೆಯಲು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಆಯುಕ್ತರು ಉರ್ವ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜನವರಿ 7 ಮತ್ತು ಮಾರ್ಚ್ 27ರ ನಡುವೆ, ಆರೋಪಿಗಳು ವಾಟ್ಸಾಪ್ ಗ್ರೂಪ್ ರಚಿಸಿ, ಇತರ ಮಧ್ಯವರ್ತಿಗಳನ್ನು ಒಟ್ಟುಗೂಡಿಸಿ, ಮೂಡಾ ಆಯುಕ್ತರ ಬಗ್ಗೆ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಫೋನ್ ಮೂಲಕ ಕೊಲೆ ಬೆದರಿಕೆ ಹಾಕಿದ್ದಾರೆ. ಕಚೇರಿಯಲ್ಲಿ ಅಧಿಕೃತ ಕರ್ತವ್ಯಗಳಿಗೆ ಆಗಾಗ್ಗೆ ಅಡ್ಡಿಪಡಿಸಲು…

Read More