ಬೆಳ್ತಂಗಡಿ ಕಸಬಾ ಗ್ರಾಮದ ಜೆರೋಮ್ ಬರ್ಬೋಝಾ (37) ಅವರ ದೂರಿನ ಮೇರೆಗೆ, ಯೂಟ್ಯೂಬ್‌ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿದ ಪ್ರಕರಣ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದೆ. ದೂರಿನ ಪ್ರಕಾರ, ಆಗಸ್ಟ್ 7ರಂದು ಜೆರೋಮ್ ಅವರು ಫೇಸ್‌ಬುಕ್‌ನಲ್ಲಿ ಸಂದೇಶಗಳನ್ನು ಪರಿಶೀಲಿಸುತ್ತಿರುವ ವೇಳೆ, ಆರೋಪಿತ ಪುನೀತ್ ಕೆರೆಹಳ್ಳಿ ಅವರು ಯೂಟ್ಯೂಬ್‌ನಲ್ಲಿ ಅಶ್ಲೀಲ ವಿಷಯ ಒಳಗೊಂಡ ವೀಡಿಯೋವನ್ನು ಹಂಚಿರುವುದು ಗಮನಕ್ಕೆ ಬಂದಿದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 80/2025, 0 296 BNS 2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Author: main-admin
ಉಡುಪಿ : ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟಣೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರಿನಲ್ಲಿ ನಡೆದಿದೆ. ಕೊಡವೂರು ಗ್ರಾಮದ 17 ವರ್ಷ ಪ್ರಾಯದ ಮೇಘಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೇಘಾ ಕಿದಿಯೂರು ಶ್ಯಾಮಿಲಿ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈಕೆಗೆ ಕಳೆದ ಒಂದು ವರ್ಷದಿಂದ ಪೀಡ್ಸ್ ಖಾಯಿಲೆಯಿದ್ದು, ಈ ಬಗ್ಗೆ ಉಡುಪಿ ಮಿತ್ರಾ ಆಸ್ಪತ್ರೆ ಮತ್ತು ದೊಡ್ಡಣಗುಡ್ಡೆ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆಗಸ್ಟ್ 6 ರಂದು ಸಂಜೆ 5:10 ಗಂಟೆಯಿಂದ 5:30 ಗಂಟೆ ನಡುವಿನ ಸಮಯದಲ್ಲಿ ಮನೆಯ ಎದುರು ಇರುವ ಸ್ನಾನಗೃಹದ ತಗಡು ಶೀಟಿನ ಮಾಡಿಗೆ ಅಳವಡಿಸಿದ ಕಬ್ಬಿಣದ ರಾಡ್‌ಗೆ ಚೂಡಿದಾರ ಶಾಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬೆಂಗಳೂರು : ಧರ್ಮಸ್ಥಳದಲ್ಲಿ ನಿನ್ನೆ ದಿನ ಎರಡು ಗುಂಪುಗಳ ಮಧ್ಯೆ ಗುಂಪು ಘರ್ಷಣೆ ಯಾಕಾಗಿದೆ, ಯಾರು ಕಾರಣಕರ್ತರು, ಎರಡು ಗುಂಪಿನ ಉದ್ದೇಶ ಏನಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಎಸ್‌ಐಟಿ ಮಾಡಲು ಒತ್ತಾಯಿಸಿದ್ದರು. ಬಹಳ ಎಚ್ಚರಿಕೆಯಿಂದ ಪರಿಶೀಲನೆ ಮಾಡಿ ಎಸ್‌ಐಟಿ ರಚಿಸಿದ್ದೇವೆ. ಅನಾಮಿಕ ವ್ಯಕ್ತಿ ಇಲ್ಲಿ ಕೊಲೆಯಾಗಿದೆ, ನಾನೇ ಅನೇಕ ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ. ಆ ವ್ಯಕ್ತಿ, ಮ್ಯಾಜಿಸ್ಟ್ರೇಟರ್ ಮುಂದೆ 164 ಹೇಳಿಕೆ ನೀಡಿದ್ದ. ಆತನ ಹೇಳಿಕೆ ಆಧರಿಸಿ ತನಿಖೆ ಮಾಡಬೇಕು ಎಂದು ಮ್ಯಾಜಿಸ್ಟ್ರೀಯಲ್ ಸೂಚನೆಯೂ ಇತ್ತು. ನಾವು ಕೂಡ ಸಾರ್ವಜನಿಕವಾಗಿ ಗಂಭೀರವಾಗಿ ಪರಿಗಣಿಸಿ ಎಸ್‌ಐಟಿ ಮಾಡಿದ್ದೇವೆ ಎಂದು ತಿಳಿಸಿದರು. ಧರ್ಮಸ್ಥಳದಲ್ಲಿ 13 ಸ್ಥಳಗಳಲ್ಲಿ ಹೆಣಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿಕೆ ಇತ್ತು. ಅದರ ಪ್ರಕಾರ 13 ಸ್ಥಳಗಳನ್ನು ತೆಗೆದಿದ್ದಾರೆ. 6ನೇ ಸ್ಥಳದಲ್ಲಿ ಗಂಡಸಿನ ಅಸ್ಥಿಪಂಜರ ಸಿಕ್ಕಿರುವ ಬಗ್ಗೆ…
ಬಂಟ್ವಾಳ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ ಹೊಡೆದುಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂ ಮುಂಭಾಗ ನಡೆದಿದೆ.ಘಟನೆ ಪರಿಣಾಮ ಬೈಕ್ ಸವಾರ ಕುದ್ರೆಬೆಟ್ಟು ನಿವಾಸಿ ಸುಶಾಂತ್ ಪೂಜಾರಿ ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ನಗರದ ಪಿಲಿಕುಳ ಜೈವಿಕ ಉದ್ಯಾನವನದ ಸರಕಾರಿ ಸ್ಥಳದಲ್ಲಿ ಬೆಳೆದು ನಿಂತಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅರಣ್ಯ ಇಲಾಖೆಯ ವಿಜಿಲೆನ್ಸ್ ಸ್ಕ್ವಾಡ್ ಮರದ ಡಿಪೋ ಮಾಲಕ ಸಹಿತ ಇಬ್ಬರ ಮೇಲೆ ಪ್ರಕರಣ ದಾಖಲಿಸಿದೆ. ಜೆಪ್ಪು ಮಾರ್ಕೇಟ್ ಬಳಿಯ ನಿವಾಸಿ ಮನೋಜ್ ಎ.(38) ಮತ್ತು ವಾಮಂಜೂರು ಬಳಿಯ ಮೂಡುಶೆಡ್ಡೆ ಬಡಕೆರೆ ಜಾರ ನಿವಾಸಿ ಲಕ್ಷಣ್(41) ಎಂಬ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ ಪಿಲಿಕುಳ ಜೈವಿಕ ಉದ್ಯಾನವನದ ಅಕೇಶಿಯಾ ಹಾಗೂ ಗಾಳಿ ಮರಗಳನ್ನು ಕಡಿದಿದ್ದಾರೆ. ಪಿಲಿಕುಳದಲ್ಲಿ ಪರವಾನಿಗೆ ಇದ್ದೂ ಕಡಿದರೂ ಮರಗಳು ಅರಣ್ಯ ಇಲಾಖೆಗೆ ಸೇರಬೇಕು. ಆದರೆ ಇಲ್ಲಿ ಕಡಿದ ಮರಗಳ ದಿಮ್ಮಿಗಳನ್ನು ಲಕ್ಷ್ಮಣ ಎಂಬಾತನ ಖಾಸಗಿ ಡಿಪೋಗೆ ಸಾಗಾಟ ಮಾಡಲಾಗಿದೆ. ಪಿಲಿಕುಳ ಜೈವಿಕ ಉದ್ಯಾನವನದೊಳಗಡೆ ಯಾವುದೇ ಕಾಮಗಾರಿ ಆಗಬೇಕಾದರೂ ಟೆಂಡರ್ ಕರೆಯಬೇಕು. ಆದರೆ ಯಾವುದೇ ಟೆಂಡರ್ ಇಲ್ಲದೆ, ಆದೇಶ ಪ್ರತಿಯನ್ನು ಪಡೆಯದೆ ಆರೋಪಿಗಳು ಮರ ಕಡಿಯುತ್ತಿದ್ದರು. ಆದ್ದರಿಂದ ಅರಣ್ಯ ಇಲಾಖೆ ದಾಳಿ ನಡೆಸಿ…
ಧರ್ಮಸ್ಥಳದಲ್ಲಿ ನಿನ್ನೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ, ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಸೇರಿದ್ದ ಜನರನ್ನು ಚದುರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿ ದಾಖಲಾಗಿರುವ ಪ್ರಕರಣಗಳು:1. ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಅವರುಗಳ ಎರಡು ವಾಹನಗಳಿಗೆ ಹಾನಿ ನಡೆಸಿದ ಬಗ್ಗೆ ಹಾಗೂ ಖಾಸಗಿ ನ್ಯೂಸ್ ಚಾನೆಲ್ ನ ವರದಿಗಾರನ ಮೇಲೆ ನಡೆದ ಹಲ್ಲೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಲಾಗುತ್ತಿದೆ. 2. ಧರ್ಮಸ್ಥಳ ಪಾಂಗಾಳದಲ್ಲಿ (ಲಾಠಿ ಚಾರ್ಜ್ ನಡೆದ ಸ್ಥಳದಲ್ಲಿ), ಧರ್ಮಸ್ಥಳ ಪೊಲೀಸ್ ಠಾಣಾ ಆವರಣದಲ್ಲಿ ಮತ್ತು ಆಸ್ಪತ್ರೆಯ ಮುಂದೆ ಕಾನೂನುಬಾಹಿರ ಗುಂಪು ಸೇರಿರುವ ಬಗ್ಗೆ ಪ್ರಕರಣ ದಾಖಲಿಸಲಾಗುತ್ತಿದೆ.ಹಲ್ಲೆಗೊಳಗಾದವರು ಚಿಕಿತ್ಸೆಗಾಗಿ ದಾಖಲಾಗಿರುವ ಆಸ್ಪತ್ರೆಯ ವೈದ್ಯರೊಂದಿಗೆ ವಿಚಾರಿಸಲಾಗಿ, ಪ್ರಾಥಮಿಕ ಆರೋಗ್ಯ ತಪಾಸಣೆಯಲ್ಲಿ ಯಾವುದೇ ಗಂಭೀರ ಗಾಯಗಳಾಗಿರುವುದು ಕಂಡುಬಂದಿಲ್ಲ ಎಂಬುದಾಗಿ ಮೌಖಿಕವಾಗಿ ತಿಳಿಸಿರುತ್ತಾರೆ. ಈ ದಿನ ನಡೆದ ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಧರ್ಮಸ್ಥಳ ಸುತ್ತಮುತ್ತ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ SITಗೆ ಕೆಲವೆಡೆ ಮಾನವರ ಅಸ್ಥಿ ಸಿಕ್ಕಿದ್ದು, ತನಿಖೆ ಮುಗಿದ ಬಳಿಕ ಅಕ್ರಮವಾಗಿ ಶವ ಹೂತಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೀದರ್ ನಲ್ಲಿಂದು ಕರ್ನಾಟಕ ಮಾಧ್ಯಮ ಅಕಾಡಮಿ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯದಲ್ಲಿ ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟರೆ, ಬೇಜವಾಬ್ದಾರಿತನ, ನಿರ್ಲಕ್ಷ್ಯ ತೋರಿದ ಅರಣ್ಯ ಅಧಿಕಾರಿ, ಸಿಬ್ಬಂದಿ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಮಂಗಳೂರು: ಸಂಸ್ಥೆಯ ಸಿಬ್ಬಂದಿ ಹಾಗೂ ಕಾರ್ಮಿಕರ ಉತ್ತಮ ಆರೋಗ್ಯದ ಕಡೆಗೆ ಕಾಳಜಿ ತೋರುವ ಉದ್ದೇಶದಿಂದ ರೋಹನ್ ಕಾರ್ಪೋರೇಶನ್ ಸಂಸ್ಥೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರ ಮಂಗಳೂರು ಬಿಜೈ ಮುಖ್ಯ ರಸ್ತೆಯಲ್ಲಿರುವ ರೋಹನ್ ಸಿಟಿ ಆವರಣದಲ್ಲಿ ನಡೆಯಿತು. ಶಿಬಿರವನ್ನು ಹಿಂದ್ ಕುಷ್ಟ್ ನಿವಾರಣ್ ಸಂಘ (ರಿ) ಮತ್ತು ಲಯನ್ಸ್ ಕ್ಲಬ್ ಮಂಗಳಾದೇವಿ ಈ ಎರಡು ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.ಬೆಳಿಗ್ಗೆಯಿಂದಲೇ ಶಿಬಿರದಲ್ಲಿ ನೂರಾರು ಉದ್ಯೋಗಿಗಳು ಮತ್ತು ಕಾರ್ಮಿಕರು ಭಾಗವಹಿಸಿದ್ದು, ತಜ್ಞ ವೈದ್ಯರ ತಂಡದಿಂದ ರಕ್ತದೊತ್ತಡ, ಡಯಾಬಿಟಿಸ್, ದಂತಚಿಕಿತ್ಸೆ, ಇ.ಸಿ. ಜಿ ,ಸಾಮಾನ್ಯ ತಪಾಸಣೆ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಿತು. ರೋಹನ್ ಕಾರ್ಪೋರೇಶನ್ ನ ಡೈರೆಕ್ಟರ್ ಡಿಯೋನ್ ಮೊಂತೇರೊರವರು “ನಮ್ಮ ಸಂಸ್ಥೆಯ ಬೆಳವಣಿಗೆಯಲ್ಲಿ ಕಾರ್ಮಿಕರ ಕೊಡುಗೆ ಅಮೂಲ್ಯವಾಗಿದೆ. ಅವರ ಆರೋಗ್ಯದ ಬಗ್ಗೆ ನಾವು ತೀವ್ರ ಕಾಳಜಿ ವಹಿಸುತ್ತಿದ್ದೇವೆ. ಈ ಶಿಬಿರವು ಕಾಳಜಿಯ ಪ್ರತಿಬಿಂಬವಾಗಿದೆ” ಎಂದು ಅಭಿಪ್ರಾಯಪಟ್ಟರು. ಮಂಗಳೂರು ಡಿಎಪಿಸಿಯು ಜಿಲ್ಲಾ ಮೇಲ್ವಿಚಾರಕರಾದ ಶ್ರೀ ಮಹೇಶ್ ರವರು “ಇದೊಂದು ಸಾಮಾನ್ಯ ಆರೋಗ್ಯ ತಪಾಸಣೆಯ…
ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಖಾಸಗಿ ಪಶು ವೈದ್ಯೆಯಾಗಿದ್ದ ಡಾ. ಕೀರ್ತನಾ ಜೋಶಿ (27) ಸೋಮವಾರ ತಡರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಡಾ. ಕೀರ್ತನಾ ಅವರು ಪಶು ವೈದ್ಯಕೀಯದಲ್ಲಿ ಎಂ.ಡಿ. ವಿದ್ಯಾಭ್ಯಾಸ ಪೂರೈಸಿದ್ದು, ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿ ಪ್ರಾಕ್ಟೀಸ್ ನಡೆಸುತ್ತಿದ್ದರು. ಮೃತರು ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ ಹಾಗೂ ಸಹೋದರಿ ಡಾ. ಮೇಘನಾ ಜೋಶಿ ಅವರನ್ನು ಅಗಲಿದ್ದಾರೆ.
ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಮತ್ತು ಸಜೀವ ಗುಂಡುಗಳನ್ನು ಹೊಂದಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನಗರದ ಪಂಪ್‌ವೆಲ್‌ನ ತೌಸಿಫ್ ಅಹ್ಮದ್ (38) ಮತ್ತು ಕೆ.ಸಿ.ರೋಡ್‌ನ ಅಬ್ದುಲ್ ಖಾದರ್(41) ಬಂಧಿತ ಆರೋಪಿಗಳಾಗಿದ್ದಾರೆ. ಕಂಕನಾಡಿ ನಗರ ಠಾಣೆಯ ಎಸ್ಸೈ ಶಿವಕುಮಾರ್ ಸಿಬ್ಬಂದಿಯ ಜೊತೆಗೂಡಿ ಸೋಮವಾರ ಅಪರಾಹ್ನ ರೌಂಡ್ಸ್ ಕರ್ತವ್ಯ ನಡೆಸುತ್ತಾ ಜೆಪ್ಪಿನಮೊಗರಿನಿಂದ ಕಲ್ಲಾಪು ಕಡೆಗೆ ಹೋಗುತ್ತಿದ್ದಾಗ ಕಡೆಕಾರ್ ಕ್ರಾಸ್ ಬಳಿ ನಿಂತಿದ್ದ ಇಬ್ಬರು ಪೊಲೀಸ್ ವಾಹನವನ್ನು ಕಂಡು ಓಡಿ ಹೋಗಲೆತ್ನಿಸಿದರು ಎನ್ನಲಾಗಿದೆ. ತಕ್ಷಣ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಿಸ್ತೂಲ್ ಹಾಗೂ 6 ಸಜೀವ ಗುಂಡುಗಳನ್ನು ಹೊಂದಿರುವುದು ಕಂಡುಬಂದಿದೆ. ಈ ವೇಳೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.









