Author: main-admin

ಬೆಂಗಳೂರು : ಇತ್ತೀಚಿಗೆ RSS ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾನೂನು ಹೋರಾಟದಲ್ಲಿ ನೆರವಾಗಿದ್ದು, ಈ ಆದೇಶದಿಂದ ಸರ್ಕಾರದ ನಿರ್ಧಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಹೌದು ಆರೆಸ್ಸೆಸ್​ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್​ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಸಂಘದ ಸಮವಸ್ತ್ರ ಧರಿಸಿ, ಕೈನಲ್ಲಿ ದೊಣ್ಣೆ ಹಿಡಿದ ಗಣವೇಷಧಾರಿಯಾಗಿ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓ ಪ್ರವೀಣ್​ ಭಾಗವಹಿಸಿದ್ದರು. ಅಮಾನತು ಬೆನ್ನಲ್ಲೇ ಪ್ರವೀಣ್​ ಜೊತೆ ಈ ಬಗ್ಗೆ ಚರ್ಚಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಕಾನೂನುಬಾಹಿರ ಮತ್ತು ಅಕ್ರಮ ಅಮಾನತನ್ನು ಪ್ರಶ್ನಿಸಲು ನಾನು ವೈಯಕ್ತಿಕವಾಗಿ ಸಂಬಂಧಪಟ್ಟ ನ್ಯಾಯಾಧಿಕರಣ ಮತ್ತು ನ್ಯಾಯಾಲಯಗಳ ಮುಂದೆ ಹಾಜರಾಗುತ್ತೇನೆ ಎಂದು ಅವರಿಗೆ ಭರವಸೆ ನೀಡಿದ್ದರು. ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸರ್ಕಾರಿ ನೌಕರರ ಹಕ್ಕನ್ನು ಎತ್ತಿಹಿಡಿದಿರುವ ಹೈಕೋರ್ಟ್‌ಗಳ ಅನೇಕ ತೀರ್ಪುಗಳಿವೆ. ಈ ಅಕ್ರಮ ಅಮಾನತು ರದ್ದಾಗುವುದರಲ್ಲಿ…

Read More

ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ದೂರದಾರ ಚಿನ್ನಯ್ಯನ ಹೇಳಿಕೆ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಬುರುಡೆ ಗ್ಯಾಂಗ್ ಗಿರೀಶ್‌ ಮಟ್ಟಣ್ಣನವರ್‌ , ಮಹೇಶ್‌ ತಿಮರೋಡಿ, ಜಯಂತ್‌ ಹಾಗೂ ವಿಠಲ ಗೌಡ ಹೈಕೋರ್ಟ್‌ ಮೆಟ್ಟಿಲೇರಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್‌, ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್‌ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಗಿರೀಶ್‌ ಮಟ್ಟಣ್ಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಟಿ. ಜಯಂತ್‌ ಹಾಗೂ ವಿಠಲಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ರುವಾರ ವಿಚಾರಣೆಗೆ ನಿಗದಿಯಾಗಿದೆ. ಪ್ರತಿಭಟನೆಗೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದ ಪ್ರಕರಣದಲ್ಲಿ ಬುರುಡೆ ತಂದು ಆರೋಪಗಳ ಸುರಿಮಳೆಗೈದಿದ್ದ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದರಿಂದ ಇಡೀ ಬುರುಡೆ ಗ್ಯಾಂಗ್‌ ಸಂಕಷ್ಟಕ್ಕೆ ಸಿಲುಕಿದೆ ಎನ್ನಲಾಗಿದೆ. ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ ಐಟಿ ತನಿಖೆ ಮುಂದುವರಿದ ನಡುವೆಯೇ ಬುರುಡೆ ಗ್ಯಾಂಗ್‌ ನ…

Read More

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು , ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು ಕಾಣೆಯಾಗಿರುವ ವ್ಯಕ್ತಿ. ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ತನ್ನ ಬ್ಯಾಟರಿ ಚಾಲಿತ ರಿಕ್ಷಾವನ್ನು ಪಾಣೆಮಂಗಳೂರು ಹಳೆಯ ಸೇವೆಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಇದೀಗ ರಿಕ್ಷಾದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ರಿಕ್ಷಾ ನಿಲ್ಲಿಸಿ ನದಿಗೆ ಹಾರಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ನಗರ ಠಾಣಾ ಪೋಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯನಡೆಸುತ್ತಿದ್ದಾರೆ.

Read More

ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಎಸಗಿದ ದಂಪತಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೋರೋ (42) ಹಾಗೂ ಬೆಂಗಳೂರು ಅನೇಕಲ್ ತಾಕೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಪ್ರತಿ ವ್ಯಕ್ತಿಯಿಂದ 3 ರಿಂದ 4 ಲಕ್ಷ ರೂ ಹಣ ಪಡೆಯುತ್ತಿದ್ದರು. ಕಾವೂರು ಠಾಣೆಯಲ್ಲಿ 30 ಕ್ಕೂ ಹೆಚ್ಚು ಮಂದಿ ಇವರ ವಿರುದ್ಧ ದೂರು ನೀಡಿದ್ದು, ಎಫ್ ಐ ಆರ್ ದಾಖಲಾಗಿದೆ. ಯೂರೂಪ್ ರಾಷ್ಟ್ರಗಳಲ್ಲಿ ಕೆಲಸ ಕೊಡಿಸುತ್ತೇವೆ ಎಂದು ನಂಬಿಸಿ ಕೋಟ್ಯಾಂತರ ರೂ ಹಣ ವಸೂಲಿ ಮಾಡಿದ್ದರು. ನಂತರ ಅವರ ಸಂಪರ್ಕಕ್ಕೆ ಬಾರದೇ ವಂಚನೆ ಎಸಗುತ್ತಿದ್ದರು

Read More

ಬೆಳ್ತಂಗಡಿ: ಅನುಮತಿಯಿಲ್ಲದೆ ಪೊಲೀಸರ‌ ಸೂಚನೆಯನ್ನು ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿವಿಧಾನ ಸೌಧದ ಎದುರು ಸೋಮವಾರ ಅಕ್ರಮ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟುಮಾಡಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಸೌಜನ್ಯ ಪರ ಹೋರಾಟಗಾರರಾದ ಅನಿಲ್ ಅಂತರ, ಪ್ರಸನ್ನ ರವಿ ಸೇರಿದಂತೆ 20ಮಂದಿ ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎ.ಎಸ್.ಐ. ದುರ್ಗಾದಾಸ್ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಅ.27ರಂದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಸೌಜನ್ಯ ಪರ ಹೋರಾಟಗಾರರ ವಿರುದ್ಧ ಪೊಲೀಸರು ಸುಳ್ಳು ಪ್ರಕರಣ‌ ದಾಖಲಿಸುತ್ತಿದ್ದಾರೆ ಎಂದು ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುವ ಕಾರ್ಯಕ್ರಮವನ್ನು ಸೌಜನ್ಯ ಪರ ಹೋರಾಟಗಾರರು ಘೋಷಿಸಿದ್ದರು. ಪೊಲೀಸ್ ಇಲಾಖೆ ಈ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿತ್ತು. ಮನವಿ ನೀಡಲು ಬಂದಿದ್ದವರನ್ನು ಪೊಲೀಸರು ತಡೆದಾಗ ಒಂದಿಷ್ಟು ಗೊಂದಲವೂ ಉಂಟಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಪ್ರಕರಣ‌ದಾಖಲಿಸಿಕೊಂಡಿದ್ದಾರೆ. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ, ಪ್ರದೀಪ್ ಕುಲಾಲ್, ಶ್ರೀನಿವಾಸ…

Read More

ಬೆಳ್ತಂಗಡಿ: ದನಗಳನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಅಬ್ದುಲ್ ನಝೀರ್ ಮತ್ತು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಝಕಾರಿಯಾ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್ ಒಳಗಡೆ ಅಕ್ರಮವಾಗಿ ಜಾನುವಾರು ಕಡಿದು ಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸೋಮವಾರ ಮಧ್ಯಾಹ್ನ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ದಾಳಿ ವೇಳೆ 91 ಕೆ.ಜಿ ದನದ ಮಾಂಸ ಹಾಗೂ ಪರಿಕರಗಳನ್ನು ವಶಪಡಿಸಿಕೊಂಡಿದ್ದು ಗೋಮಾಂಸ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 17 ಮಂದಿ ಡಿವೈಎಸ್ ಪಿ (ಸಿವಿಲ್) ಹಾಗೂ ಪಿಐ (ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆ ಸಂಖ್ಯೆ: ಒಇ 359 (i) ಪಿಇಜಿ 2025, ದಿನಾಂಕ: 13.10.2025ರಲ್ಲಿ ಈ ಕೆಳಕಂಡ ಪಿಐ (ಸಿವಿಲ್) (ಉಳಿಕೆ ಮೂಲವೃಂದ) ವೃಂದದ ಅಧಿಕಾರಿಗಳಿಗೆ ವೇತನ ಶ್ರೇಣಿ ರೂ.83,700-1,55,200ರ ಡಿವೈಎಸ್‌ಪಿ (ಸಿವಿಲ್) (ಉಳಿಕೆ ಮೂಲವೃಂದ) ವೃಂದದಲ್ಲಿ ಕೆಸಿಎಸ್ ನಿಯಮ 32 ರಡಿ ಸ್ವತಂತ್ರ ಪ್ರಭಾರದಲ್ಲಿರಿಸಿದ್ದು, ಈ ಕೆಳಕಂಡಂತೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

Read More

ಮಂಗಳೂರು: ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಬಿಜೆಪಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದೆ. ಮಂಗಳೂರಿನಲ್ಲಿ ನಿನ್ನೆ ಬಿಜೆಪಿ ಶಾಸಕ ಡಾಸ. ಭರತ್‌ ಶೆಟ್ಟಿ ಸುದ್ದಿಗೋಷ್ಠಿ ಕರೆದು ಸ್ಪೀಕರ್‌ ಕಚೇರಿ ನವೀಕರಣ ಮತ್ತಿತರ ವ್ಯವಹಾರಗಳಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ಆರೋಪಿಸಿದ್ದರು. ಅದೇ ರೀತಿ ಬೆಂಗಳೂರು ಮತ್ತಿತರೆಡೆಗಳಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಠಿಗಳಲ್ಲಿ ಖಾದರ್‌ ವಿರುದ್ಧ ಅವ್ಯವಹಾರದ ಆರೋಪ ಹೊರಿಸಿ ಖಾದರ್‌ ಅವರಿಂದಾಗಿ ಸ್ಪೀಕರ್‌ ಹುದ್ದೆಯ ಘಟನತೆಗೆ ಕುಂದುಂಟಾಗಿದೆ ಎಂದು ಹೇಳಿದ್ದಾರೆ. ಸ್ಪೀಕರ್‌ ಅವಧಿಯಲ್ಲಿ ವಿವಾದ, ಗೊಂದಲ, ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ ಎಂದು ಸಂಸದ ಮತ್ತು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಂಗಳೂರಿನಲ್ಲಿ ಆರೋಪಿಸಿದ್ದಾರೆ. ಇದೇ ಆರೋಪವನ್ನು ಮಂಗಳೂರಿನಲ್ಲಿ ಶಾಸಕ ಡಾ.ಭರತ್‌ ಶೆಟ್ಟಿ ಮಾಡಿದ್ದಾರೆ. ಸ್ಪೀಕರ್ ಸ್ಥಾನದ ವಿರುದ್ಧ ಬಂದಿರುವ ಆರೋಪಗಳಿಂದ ಆ ಸ್ಥಾನವು ಮುಕ್ತವಾಗಬೇಕು. ಇದಕ್ಕಾಗಿ ಕಾರ್ಯನಿರತ ನ್ಯಾಯಮೂರ್ತಿಗಳಿಂದ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಸ್ಪೀಕರ್ ಕಾರ್ಯಾಲಯದ ಟೆಂಡರ್ ಮಂಗಳೂರು ಮೂಲದವರಿಗೇ ಯಾಕೆ ಸಿಗುತ್ತಿದೆ, ಅದೂ…

Read More

ಬೆಂಗಳೂರು: ಪೇದೆ, ಪಿಎಸ್‌ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. 8500 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಒಂದು ವಾರದಲ್ಲಿ ನೋಟಿಫಿಕೇಷನ್ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗೆ ಸಂಬಂಧಿಸಿದ ಅನೇಕ ಪ್ರಸ್ತಾವನೆಗಳಿಗೆ ಅನುಮೋದನೆ ಮಾಡಿಕೊಟ್ಟಿದ್ದಾರೆ. ಇನ್‌ಸ್ಪೆಕ್ಟರ್‌ ಹುದ್ದೆಯಿಂದ ಎಸ್‌ಪಿ ಹುದ್ದೆಯವರೆಗಿನ ಅಧಿಕಾರಿಗಳನ್ನು ಎರಡು ವರ್ಷದವರೆಗೆ ವರ್ಗಾವಣೆ ಮಾಡದಂತೆ ಕಾನೂನು ತಂದಿದ್ದೇವೆ. ಕನಿಷ್ಟ ಎರಡು ವರ್ಷ ಒಂದೇ ಸ್ಥಳದಲ್ಲಿ ಕೆಲಸ ಮಾಡಲು ಅವಕಾಶ ಮಾಡಿ ಕೊಟ್ಟರೆ ಅನುಕೂಲವಾಗುತ್ತದೆ ಎಂಬ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಬದಲಾವಣೆ ತಂದಿದ್ದೇವೆ. ಬಹಳ ಜನ ಇದನ್ನು ಪ್ರಶಂಸೆ ಮಾಡಿದ್ದಾರೆ. ಕೆಳ ಹಂತದ ಸಿಬ್ಬಂದಿಗಳಿಗೆ ಎಸ್‌ಪಿ ಹಂತದಲ್ಲಿ ವರ್ಗಾವಣೆ ಮಾಡಲು ಅವಕಾಶ ಮಾಡ ಕೊಟ್ಟಿದ್ದೇವೆ ಎಂದರು. ಪೇದೆ, ಪಿಎಸ್‌ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್…

Read More

ಬೆಂಗಳೂರು : ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯೊಂದು ಇಟ್ಟಿದ್ದು, ಮಾದಕವಸ್ತುಗಳ ಹಾವಳಿಯನ್ನು ನಿಗ್ರಹಿಸಲು ರಚಿಸಲಾದ ಮಾದಕದ್ರವ್ಯ ವಿರೋಧಿ ಕಾರ್ಯಪಡೆ (ANTF)ಗೆ ಇಂದು ಚಾಲನೆ ನೀಡಲಾಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಕಾರ್ಯಪಡೆಗೆ ಚಾಲನೆ ನೀಡಿದ್ದಾರೆ.66 ಸಿಬ್ಬಂದಿಗಳ ಅನುಮೋದಿತ ಬಲದೊಂದಿಗೆ ಮಾದಕವಸ್ತು ನಿಗ್ರಹ ದಳವನ್ನು ರಚಿಸಿ ಆಗಸ್ಟ್‌ನಲ್ಲಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರು ನೂತನ ಕಾರ್ಯಪಡೆಗೆ ಚಾಲನೆ ನೀಡಿದರು. ಹೇಗೆ ಕಾರ್ಯ ನಿರ್ವಹಿಸಲಿದೆ? ಕೇಂದ್ರ ತನಿಖಾ ಸಂಸ್ಥೆಯಾಗಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮಾದರಿಯಲ್ಲಿ ಕಾರ್ಯ ನಿರ್ವಹಿಸಿಸಲಿರುವ ರಾಜ್ಯ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳು ಮಾತ್ರವಲ್ಲದೆ ಜಿಲ್ಲೆಗಳಲ್ಲಿನ ಸಂಘಟಿತ ಮಾದಕವಸ್ತು ಜಾಲಗಳನ್ನು ಪತ್ತೆ ಹಚ್ಚಲು ಕಾರ್ಯ ನಿರ್ವಹಿಸಲಿದೆ. ಹಾಗೂ ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ…

Read More