Author: main-admin

ಮಂಗಳೂರು: ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ರಾಜಾರೋಷವಾಗಿ ನಡೆಯುತ್ತಿದೆ. ಮತ್ತೆ ಭಜರಂಗದಳ ಕಾರ್ಯಕರ್ತರು ಅದನ್ನು ತಡೆದು ಗೋವುಗಳನ್ನು ರಕ್ಷಣೆ ಮಾಡಿರುವ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಇಂದು ನಡೆದಿದೆ. ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಘಟನೆ ವೇಳೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

Read More

ಉಪ್ಪಿನಂಗಡಿ: ರಾಜ್ಯವನ್ನೇ ಬೆಚ್ಚಿಬಿಳಿಸಿದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೈ ಪಾತಾಜೆ ತಂಡದಿಂದ ತಲ್ವಾರ್ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ನೆಕ್ಕಿಲಾಡಿ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿನ್ನೆ ಸಂಜೆ ಸ್ಕೂಟರ್ ನಲ್ಲಿ ಇಬ್ಬರು ಹೋಗುತ್ತಿರುವಾಗ ತಡೆದು ತಲ್ವಾರ್ ನಿಂದ ಕಡಿದಿದ್ದಾರೆ ಎಂಬ ಮಾಹಿತಿ ದೊರಕಿದೆ. ಗಂಭೀರ ಗಾಯಗೊಂಡು ಇಬ್ಬರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರು ದೀಕ್ಷಿತ್ ಮತ್ತು ಜಯರಾಮ ಎಂದು ತಿಳಿದು ಬಂದಿದೆ.ಗಂಭೀರ ಗಾಯಗೊಂಡ ದೀಕ್ಷಿತ್ ಎಂಬಾತನನ್ನ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ದೊರಕಿದೆ. ಕೆಲ ದಿನಗಳ ಹಿಂದೆ ಕೇರಳ ದೇವಸ್ಥಾನಕ್ಕೆ ಕನ್ನಡ ಚಿತ್ರನಟ ದರ್ಶನ್ ಜೊತೆ ಪ್ರಜ್ವಲ್ ರೈ ಭೇಟಿ ನೀಡಿದ ಫೋಟೋ ವೈರಲ್ ಆಗಿತ್ತು. ಕೇರಳದಲ್ಲಿ ರೇಣುಕಾ ಸ್ವಾಮಿ ಕೊಲೆ ಆರೋಪಿಯೊಂದಿಗೆ ಜಲೀಲ್ ಕರೋಪಾಡಿ ಕೊಲೆ ಆರೋಪಿ ಎಂಬ ಶೀರ್ಷಿಕೆಯಲ್ಲಿ ಮಾಧ್ಯಮದಲ್ಲಿ ವರದಿಯಾಗಿತ್ತು.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತಿದ್ದಾರೆ.

Read More

ಪೊಲೀಸ್ ಸಬ್‌ಇನ್ಸ್ ಪೆಕ್ಟರ್ ತನ್ನ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಪೊಲೀಸ್ ಬೆಲ್ಟ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬಯಲಾಗಿದೆ. ಪತ್ನಿಗೆ ವರದಕ್ಷಿಣೆ ಕಿರುಕುಳ, ಕೊಲೆಗೆ ಯತ್ನಿಸಿರುವ ಆರೋಪದಲ್ಲಿ ಸಿಲುಕಿರುವ ಧರ್ಮಸ್ಥಳ ಠಾಣೆಯ ಪಿಎಸ್‌ಐ ಪಿ.ಕಿಶೋರ್ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪತಿ, ಕಿಶೋರ್ ಎಸಗಿರುವ ಕ್ರೌರ್ಯದ ಕುರಿತು ದಾಖಲೆ ಹಾಗೂ ವೈದ್ಯಕೀಯ ವರದಿ ಸಮೇತ ಪೊಲೀಸರಿಗೆ ದೂರು ನೀಡಿರುವ ಅವರ ಪತ್ನಿ ವರ್ಷಾ (27) ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಿನ ನಾಗರಬಾವಿ ಟೀಚರ್ಸ್ ಕಾಲೊನಿಯ ಮಾನಸ ನಗರದ ನಿವಾಸಿ ಆರ್. ವರ್ಷಾ ಅವರು ಪತಿ ಧರ್ಮಸ್ಥಳ ಪಿಎಸ್‌ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧ 14 ವರದಕ್ಷಿಣೆಗಾಗಿ ಕಿರುಕುಳ ನೀಡಿದ ಕುರಿತು ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆಗೆ ದೂರು ನೀಡಿದ್ದು, ದೂರು ದಾಖಲಾದ ಬೆನ್ನಲ್ಲೇ ಪಿಎಸ್‌ಐ ಕಿಶೋರ್ ರಜೆಯಲ್ಲಿ ತೆರಳಿರುವುದಾಗಿ ತಿಳಿದು ಬಂದಿದೆ. ವರದಕ್ಷಿಣೆ ತರುವಂತೆ ಪದೇ ಪದೆ…

Read More

ಪುತ್ತೂರು: ಮಹಿಳೆ ಮೇಲೆ ತಲ್ವಾರ್ ಬೀಸಿ ಹಲ್ಲೆಗೆ ಯತ್ನಿಸಿದ ಘಟನೆ ಸಂಪ್ಯದ ಮೂಲೆ ಎಂಬಲ್ಲಿ ಇಂದು ನಡೆದಿದೆ. ಹಸೈನಾರ್ ಎಂಬಾತ ಸಂಪ್ಯದಮೂಲೆ ನಿವಾಸಿ ರೇಖನಾಥ್‍ ರೈ ಅವರ ಸಹೋದರಿ ಪುಷ್ಪಾವತಿ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Read More

ಬೆಳ್ತಂಗಡಿ: ಬಾಲಕಿಯೋರ್ವಳಿಗೆ ದೊಡ್ಡಮ್ಮನ ಮಗನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಎಂಬಲ್ಲಿ ನಡೆದಿದೆ. ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳವಾದ ಬಗ್ಗೆ ಶಿಕ್ಷಕಿಯೊಬ್ಬರಿಗೆ ಮಾಹಿತಿ ಸಿಕ್ಕಿದ್ದು, ಅವರು ಬಾಲಕಿಯನ್ನು ವಿಚಾರಣೆ ನಡೆಸಿದಾಗ ದೊಡ್ಡಮ್ಮನ ಮಗನು ದೇವರ ಗುಡ್ಡೆಯ ಮನೆಯಲ್ಲಿ ಹಾಗೂ ಮೂರು ಸಲ ಕುತ್ತೂರಿನ ಅಜ್ಜನ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ತಿಳಿಸಿದ್ದಳು. ಬಳಿಕ ಬಾಲಕಿಗೆ ತಾಯಿಗೆ ತಿಳಿಸಲಾಗಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Read More

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಕಾರನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್‌ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಸಾವನ್ನಪ್ಪಿದ ಘಟನೆ ಮಾ.26 ರಂದು ನಡೆದಿದೆ. ಬೆಳ್ತಂಗಡಿ ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ(42) ಮೃತಪಟ್ಟವರು.ಸಯ್ಯದ್ ಪಾಶ ಅವರು ತಮ್ಮ ಬೈಕ್‌ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಲ್ಕಣಿ ಬಳಿಯಲ್ಲಿ ಕಾರನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಅಪಘಾತ ಸಂಭವಿಸಿತು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪುತ್ತೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ 25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ. ಇದು ತುಸು ನಿರ್ಜನ ಪ್ರದೇಶವಾಗಿದ್ದು ಇಳಿಜಾರಿನಿಂದ ಕೂಡಿದೆ. ಬಿದ್ದ ಸ್ಥಳದಿಂದ 25 ಅಡಿಗಳಷ್ಟು ಕೆಳಭಾಗಕ್ಕೆ ಜಾರಿಗೊಂಡು ಹೋಗಿದ್ದ ಯುವಕ ಅಲ್ಲಿ ಮೋರಿಯ ಪಕ್ಕ ಮಲಗಿದ ಸ್ಥಿತಿಯಲ್ಲೇ ಬಾಕಿಯಾಗಿದ್ದರು. ರಾತ್ರಿ ವೇಳೆ ಯುವಕ ರೈಲಿನಿಂದ ಬೀಳುವುದನ್ನು ಸಹ ಪ್ರಯಾಣಿಕರು ಗಮನಿಸಿದ್ದು ನೆಟ್ಟಣ ತಲುಪಿದ ವೇಳೆ ರೈಲ್ವೆ ಮಾಸ್ಟರ್ ಗಮನಕ್ಕೆ ತಂದಿದ್ದರು. ಆದರೆ ಯುವಕ ಬಿದ್ದ ಜಾಗ ಯಾವುದು ಎನ್ನುವುದು ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ ಪತ್ತೆ ಕಾರ್ಯವೂ ಸಾಧ್ಯವಾಗಿರಲಿಲ್ಲ. ಮಾ.26ರಂದು ಸುಣ್ಣಾಜೆ ಬಳಿ ಕೊಳವೆಬಾವಿಯ ಪಂಪ್ ಎಳೆಯಲು ಹೋಗಿದ್ದ ದಿನೇಶ್ ಆಚಾರ್ಯ, ಸಂತೋಷ್ ಅಲೆಕ್ಕಾಡಿ ಪ್ರತಾಪ್ ಪರಣೆ ಮತ್ತಿತರರಿಗೆ ಮೋರಿ ಸಮೀಪ ವ್ಯಕ್ತಿ ನರಳುವುದು ಕೇಳಿಸಿತು.…

Read More

ಉಡುಪಿ : ಅಪಘಾತದಿಂದ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ಸಂಭವಿಸಿದೆ. ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್‌ ಮೂಲ್ಯ (51)ಮೃತಪಟ್ಟ ಬೈಕ್‌ ಸವಾರ. ರಮೇಶ್‌ ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪುತ್ರನ ಸಾವಿನ ಶೋಕದಿಂದ ಸಾವನ್ನಪ್ಪಿದ ಇಂದಿರಾ ಮೂಲ್ಯ (74) ಮೃತರ ತಾಯಿ ಎಂದು ತಿಳಿದು ಬಂದಿದೆ. ಮಾ.23 ರಂದು ಬಂಟಕಲ್ಲಿನಿಂದ ಬಿ ಸಿ ರೋಡ್‌-ಪಾಂಬೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಪಾಂಬೂರು ಬಳಿ ಢಿಕ್ಕಿ ಹೊಡೆದು ಬೈಕ್‌ ಸವಾರ ನಿವಾಸಿ ರಮೇಶ್‌ ಮೂಲ್ಯ ತೀವ್ರ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಾ.24 ರಂದು ರಾತ್ರಿ ಅವರು ಮೃತಪಟ್ಟಿದ್ದರು. ಅಪಘಾತದಿಂದ ಮೃತಪಟ್ಟ ರಮೇಶ್‌ ಅವರ ಮೃತ ದೇಹವನ್ನು ಅವರ ಅಂತಿಮ ಸಂಸ್ಕಾರಕ್ಕಾಗಿ ಮಂಗಳವಾರ ಶಿರ್ವ ಕೊಲ್ಲಬೆಟ್ಟುವಿನ…

Read More

ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್‌ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದ್ದು, ಇದೀಗ ಮಾರ್ಚ್ 31 HSRP ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿದೆ. ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ. ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ…

Read More

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸೆಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಮಾಣಿಲ ಗ್ರಾಮದಲ್ಲಿ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಮಾಣಿಲ ಬಿಜೆಪಿ ಮುಖಂಡನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಹಾಗೂ ಪೋಕ್ಸೋ ಪ್ರಕರಣ ದಾಖಲಾಗಿದೆ. 16 ವರ್ಷದ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಕೀಳು ಮಟ್ಟದ ಶಬ್ದಗಳನ್ನು ಬಳಸಿದ ಆರೋಪದಲ್ಲಿ ಮಾಣಿಲ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಮಾಹಿತಿ ಹೊರ ಬರುತ್ತಿದ್ದಂತೆ ಕೃತ್ಯ ಎಸಗಿದ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Read More