ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ಧಿಗಾರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ. ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ಸಹೋದರ ಆದಿಲ್ ಎಂಬಾತ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಸುಪಾರಿ ನೀಡಿದ್ದಾಗಿ ತಿಳಿಸಿದ್ದಾರೆ. ಇದರೊಂದಿಗೆ, ಅಣ್ಣ ಫಾಝಿಲ್ ಹತ್ಯೆ ಪ್ರತೀಕಾರಕ್ಕಾಗಿ ಆದಿಲ್ ಸುಹಾಸ್ ಶೆಟ್ಟಿ ಕೊಲೆಗೆ ಇಬ್ಬರು ಹಿಂದೂ ಯುವಕರನ್ನು ಬಳಸಿಕೊಂಡು ಪ್ರಕರಣವನ್ನು ತಿರುಚಲು ಖತರ್ನಾಕ್ ಪ್ಲಾನ್ ಮಾಡಿದ್ದಾನೆ ಎನ್ನಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ 8 ಆರೋಪಿಗಳಲ್ಲಿ ಅಬ್ದುಲ್ ಸಫ್ವಾನ್ ಪ್ರಮುಖ ಆರೋಪಿಯಾಗಿದ್ದು,ಕಳೆದ 2023ರಲ್ಲಿ ಅಬ್ದುಲ್ ಸಫ್ವಾನ್ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು.ಇತ್ತ ಸಫ್ವಾನ್‌ಗೆ ತನ್ನನ್ನು ಸುಹಾಸ್ ಶೆಟ್ಟಿ ಕೊಲೆ ಮಾಡುವ ಭಯ ಕಾಡುತ್ತಿತ್ತು ಈ ಹಿನ್ನೆಲೆಯಲ್ಲಿ ಸುಹಾಸ್ ಶೆಟ್ಟಿಯನ್ನು…
Author: main-admin
ಮಂಗಳೂರು: ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಸೀಮಿತವಾಗಿ ಪ್ರತ್ಯೇಕವಾಗಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು ಎಂದರು. ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬAಧಪಟ್ಟAತೆ ಈಗಾಗಲೇ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ನಡೆಯುವ ನಿಟ್ಟಿನಲ್ಲಿ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಮಂದಿರ ಎರಡು ವಾರಗಳಲ್ಲಿ ಆರಂಭವಾಗಲಿದೆ. ಈ ಟಾಸ್ಕ್ ಫೋರ್ಸ್ ಪೊಲೀಸರ ಜೊತೆಗೂಡಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೇರಳ…
ಮಂಗಳೂರು : ಬಜ್ಪೆ ಕಿನ್ನಿಪದವಿನಲ್ಲಿ ನಡೆದ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸುವಂತಹ ಪೋಸ್ಟ್ ಹಾಕಿದ್ದ ವ್ಯಕ್ತಿಗಳು ಮತ್ತು ಗುಂಪುಗಳ ವಿರುದ್ಧ ನಗರ ಪೊಲೀಸ್ ಕಮಿಷನರೇಟ್‌ನ ವಿವಿಧ ಠಾಣೆಗಳಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಮೂಲ್ಕಿ, ಕಾವೂರು ಮತ್ತು ಮಂಗಳೂರು ದಕ್ಷಿಣ ಠಾಣೆಗಳಲ್ಲಿ ತಲಾ ಎರಡು, ಮಂಗಳೂರು ಉತ್ತರ, ಪೂರ್ವ, ಉರ್ವ, ಬರ್ಕೆ, ಮೂಡುಬಿದಿರೆ ಮತ್ತು ಕಂಕನಾಡಿ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ತರುವ ಉದ್ದೇಶದಿಂದ ಪೋಸ್ಟ್ ಹಾಕಲಾಗಿದ್ದು ಭಾರತೀಯ ನ್ಯಾಯಸಂಹಿತೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ 8 ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಮಂಗಳೂರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಲಿದ್ದಾರೆ. ಇಂದು ಬೆಳಿಗ್ಗೆ ಕಮಿಷನರ್ ಕಚೇರಿಯಲ್ಲಿ 11 ಗಂಟೆಗೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತಂತೆ ಪೊಲೀಸರ ಜೊತೆಗೆ ಜಿ ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪರಮೇಶ್ವರ್ ಸಭೆ ನಡೆಸಲಿದ್ದು, ಗೃಹ ಸಚಿವ ಜಿ ಪರಮೇಶ್ವರ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಂಟಿಯಾಗಿ ಸಭೆ…
ಉಡುಪಿ: ನಿವೃತ್ತ ಪಿಎಸ್ಐ ರಾಜಗೋಪಾಲ್ ಕಟ್ಪಾಡಿ ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ನಿಧನ ಹೊಂದಿದ್ದಾರೆ. ಮಣಿಪಾಲ, ಉಡುಪಿ, ಕೋಟ, ಕಟಪಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಅನಾರೋಗ್ಯದಿಂದ ನಾರಾಯಣ ಹೃದಯಾಲಯದಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಹೆಂಡತಿ ಮತ್ತು ಕುಟುಂಬದವರನ್ನು ಅಗಲಿದ್ದಾರೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಕ್ಷಿಣ ಕನ್ನಡದ ಐದು ತಾಲೂಕುಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮು ಮುಗಿಲನ್ ಆದೇಶ ಹೊರಡಿಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ತತಕ್ಷಣದಿಂದಲೇ ಮದ್ಯದಂಗಡಿಗಳನ್ನು ಮುಚ್ಚಲಾಗಿದ್ದು, ನಾಳೆ(ಮೇ3) ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇದರ ಮಧ್ಯೆ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಅಟೋ ಚಾಲಕ ಅಬೂಬ್ಬಕರ್ ಮೇಲೆ ದಾಳಿ ಮಾಡಲಾಗಿರುವ ಕುರಿತು ವರದಿಯಾಗಿದೆ. ಆಟೋ ಅಡ್ಡಗಟ್ಟಿ ಚಾಲಕ ಅಬೂಬಕ್ಕರ್ ಕೊಲೆಗೆ ಯತ್ನ ಮಾಡಲಾಗಿದೆ. ಅಬೂಬಕ್ಕರನನ್ನು ಅಡ್ಡಗಟ್ಟಿ ಸುಶಾಂತ್, ಸಂದೇಶ್ ಪೂಜಾರಿ ಎಂಬುವವರು ಕೊಲೆಗೆ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ. ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧನ ಮಾಡಿದ್ದಾರೆ. ಪೊಲೀಸರ ವಿಚಾರಣೆ ಸಂದರ್ಭ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೃತ್ಯ ಎಸಗಿರುವುದಾಗಿ ಇಬ್ಬರು ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಇಲ್ಲಿನ ಬಜ್ಪೆಯಲ್ಲಿ ಹಿಂದುತ್ವ ಕಾರ್ಯಕರ್ತನರೊಬ್ಬರ ಕೊಲೆ ನಡೆದಿರುವ ಬೆನ್ನಿಗೇ ಅಡ್ಯಾರ್ ಕಣ್ಣೂರಿನಲ್ಲಿ ಮುಂಜಾನೆ ಯುವಕನೋರ್ವನ ಮೇಲೆ ದುಷ್ಕರ್ಮಿಗಳು ಚೂರಿ ಇರಿತ ನಡೆಸಿದ್ದಾರೆ.ಚೂರಿ ಇರಿತಕ್ಕೊಳಗಾದವರನ್ನು ನೌಷಾದ್ ಎಂದು ಗುರುತಿಸಲಾಗಿದ್ದು, ನಗರ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಈ ಘಟನೆ ನಡೆದಿದೆ. ನೌಶಾದ್ ಅವರು ತೊಕ್ಕೊಟ್ಟು ಸಮೀಪದ ಕಲ್ಲಾಪಿನ ಮಾರ್ಕೆಟ್‌ಗೆ ಹೋಗಲು ಮುಂಜಾನೆ 3 ಗಂಟೆಗೆ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ನಿಂತಿದ್ದ ವೇಳೆ ಎರಡು ದ್ವಿಚಕ್ರ ವಾಹನದಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ನೌಷಾದ್‌ರ ಬೆನ್ನಿಗೆ ಚೂರಿಯಿಂದ ಇರಿದರು ಎನ್ನಲಾಗಿದೆ.ಚೂರಿ ಇರಿತವಾದ ತಕ್ಷಣ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ನೌಷಾದ್ ಓಡಿ ಪರಾರಿಯಾಗಿದ್ದು, ಬಳಿಕ ಸ್ಥಳೀಯರು ಆತನನ್ನು ನಗರದ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
SSLC Result 2025ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಅಂದರೆ 02-05-2025 ರಂದು ಪ್ರಕಟಿಸಲಿದ್ದು, ನಿಮ್ಮ ಫಲಿತಾಂಶವನ್ನು ಪರಿಶೀಲಿಸಲು ಈ ಕೆಳಗೆ ನೇರವಾದ ಲಿಂಕ್ ನೀಡಲಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ SSLC Result 2025 ಈ ಬಾರಿಯ 10ನೇ ತರಗತಿಯ ಪರೀಕ್ಷೆಯು 21 ಮಾರ್ಚ್ ಇಂದ 04 ಎಪ್ರಿಲ್ ತನಕ ನಡೆಸಲಾಗಿದ್ದು, ಈಗಾಗಲೇ ಎಲ್ಲಾ ಪತ್ರಿಕೆಗಳ ಮೌಲ್ಯಮಾಪನ ಮುಗಿಸಿ, ಅದರಂತೆ ಈಗ ಎಸ್ಎಸ್ಎಲ್ ಸಿ ಪರೀಕ್ಷೆ-1 ಫಲಿತಾಂಶವನ್ನು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಿದ್ದು, ಅದರಂತೆ ಮಾನ್ಯ ಶಿಕ್ಷಣ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11.30 ಕ್ಕೆ ಸುದ್ದಿಘೋಷ್ಠಿ ಕರೆಯಲಾಗಿದೆ. ಇನ್ನು ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮೇ 02 ರಂದು ಮಧ್ಯಾಹ್ನ 12.30 ರ ನಂತರ ಈ ಕೆಳಗಿನ ಸರ್ಕಾರದ ಅಧಿಕೃತ ವೆಬ್ಸೈಟ್ ನಲ್ಲಿ ಚೆಕ್ ಮಾಡಬಹುದಾಗಿದೆ. SSLC Result 2025 ನಿಮ್ಮ ರಿಸಲ್ಟ್ ಈ ಲಿಂಕ್…
ಮಂಗಳೂರು: ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂದ್‌ಗೆ ಕರೆ ನೀಡಿದ್ದು ನಗರದಲ್ಲಿ ಅಂಗಡಿಗಳು ಮುಚ್ಚಿವೆ. ಬಸ್ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನಿಂದ ಬಂದ ನಾಲ್ಕು ಬಸ್‌ಗಳಿಗೆ ಕಿಡಿಗೇಡಿಗಳು ನಸುಕಿನಲ್ಲಿ ಕಲ್ಲೆಸೆದಿದ್ದಾರೆ. ಇದರ ಬೆನ್ನಲ್ಲೆ ಕೆಎಸ್ಆರ್‌ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ಪಂಪ್‌ವೆಲ್ ಬಳಿ ನಾಲ್ಕು ಬಸ್‌ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರಯಾಣಿಕರಿಗೆ ತೊಂದರೆಯಾಗಿಲ್ಲ, ಬಸ್‌ಗಳ ಗಾಜು ಒಡೆದಿವೆ. ಹಾಗಾಗಿ ಬಸ್ ಸಂಚಾರ ಸ್ಥಗಿತಗೊಳಿಸಿದ್ದೇವೆ ಎಂದು ಕೆಎಸ್ಆರ್‌ಟಿಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ತಿಳಿಸಿದರು. ಪಿ.ಯು. ಗಣಿತ ಪರೀಕ್ಷೆ- 2 ಶುಕ್ರವಾರ ನಿಗದಿಯಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸಾಧ್ಯವಾಗದೇ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು. ಬಹುತೇಕ ಅಂಗಡಿಗಳು ಮುಚ್ಚಿದ್ದು ನಗರದಲ್ಲಿ ಜನಸಂಚಾರ ವಿರಳವಾಗಿದೆ. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ.










