ಉಡುಪಿ: ವಶಪಡಿಸಿಕೊಂಡ ಅಕ್ರಮ ಮರಳು ಸಾಗಾಟದ ಲಾರಿಯ ಬಿಡುಗಡೆಯ ಆಕ್ಷೇಪಣೆ ಸಲ್ಲಿಕೆ ಸಂಬಂಧ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಉಡುಪಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಸಂತ ನಾಯ್ಕ್ ಎಂಬವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮರಳು ಸಾಗಾಟದ ಲಾರಿ ಬಿಡುಗಡೆಗೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸಲು ಗಣಪತಿ ವಸಂತ ನಾಯ್ಕ್ 3 ಸಾವಿರ ರೂ. ಲಂಚದ ಬೇಡಿಕೆಯನ್ನು ಇಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಒಪ್ಪದ ದೂರುದಾರ ಈ ಕುರಿತು ಉಡುಪಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಉಡುಪಿ ನ್ಯಾಯಾಲಯದಲ್ಲಿರುವ ಕಚೇರಿಯಲ್ಲಿ 2ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗಣಪತಿ ನಾಯ್ಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಪ್ರಭಾರ ಡಿವೈಎಸ್ಪಿ ಮಂಜುನಾಥ್, ಪೊಲೀಸ್ ನಿರೀಕ್ಷಕ ರಾಜೇಂದ್ರ ನಾಯಕ್ ಎಂ.ಎನ್., ಎಎಸ್ಸೈ ನಾಗೇಶ್, ಸಿಬ್ಬಂದಿ ನಾಗರಾಜ್, ಸತೀಶ್ ಹಂದಾಡಿ, ರೋಹಿತ್, ಮಲ್ಲಿಕಾ, ಪುಷ್ಪಾವತಿ, ರವೀಂದ್ರ, ರಮೇಶ್, ಅಬ್ದುಲ್ ಜಲಾಲ್,…
Author: main-admin
ಕಡಬ :ಎರಡುವರೆ ವರ್ಷದ ಗಂಡು ಮಗುವೊಂದು ಆಕಸ್ಮಿಕವಾಗಿ ಮಲಗಿದಲ್ಲಿಯೇ ಮೃತಪಟ್ಟ ಘಟನೆಯೊಂದು ಕಡಬದ ಕೊಣಾಜೆ ಗ್ರಾಮದಿಂದ ವರದಿಯಾಗಿದೆ. ಉತ್ತರ ಪ್ರದೇಶ ಮೂಲದ ಕೊಣಾಜೆಯ ಮಾಲದಲ್ಲಿ ಕೆಲಸಕ್ಕೆಂದು ಬಂದು ವಾಸವಾಗಿದ್ದ ರಾಜಾ ಸಿಂಗ್ ಮತ್ತು ಶ್ರೀ ಮತಿ ದಿವ್ಯಾಂಶಿ ದಂಪತಿಗಳ ಪುತ್ರ ರುದ್ರ ಪ್ರತಾಪ್ ಸಿಂಗ್ ( 2 ½ ವರ್ಷ) ಮೃತಪಟ್ಟ ಮಗು ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಲಿಂಡೋರಾಜ್‌ರವರ ಜಾಗದಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದ ಈ ದಂಪತಿಗೆ 2 ½ ವರ್ಷ ಪ್ರಾಯದ ಗಂಡುಮಗುವಿತ್ತು.ಮಾ.25 ರಂದು ಮಧ್ಯಾಹ್ನದ ವೇಳೆ ಮಗುವಿಗೆ ಊಟ ಕೊಟ್ಟು ಬಳಿಕ ನಿದ್ದೆ ಬಂದ ಕಾರಣ ಮಲಗಿಸಿದ್ದರು.ಬಳಿಕ ಎಬ್ಬಿಸಿದಾಗ ಮಗು ಏಳದೇ ಇದ್ದ ಕಾರಣ ಕೆಲಸ ಮಾಡಿಕೊಂಡಿದ್ದ ಲಿಂಡೋರಾಜ್ ಅವರ ಕಾರಿನಲ್ಲಿ ಮಗುವನ್ನು ಕಡಬ ಖಾಸಗಿ ಆಸ್ಪತ್ರೆಗೆ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕೂಡಲೇ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ವೈದ್ಯರು ಮಗುವನ್ನು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮಗು ಆಹಾರ ಸಿಕ್ಕಿಕೊಂಡು ಅಥವಾ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು : ಧರ್ಮಸ್ಥಳ ಕ್ಷೇತ್ರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನ-ಅಪಪ್ರಚಾರ ಮಾಡುವವರ ವಿರುದ್ಧ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು ಜಾನ್ ಡೋ (ಅಶೋಕ ಕುಮಾರ್) ಆದೇಶ ನೀಡಿದೆ. ಒಎಸ್ 2145/2025 ಪ್ರಕರಣದಲ್ಲಿ ನ್ಯಾಯಾಲಯ ಆದೇಶ ನೀಡಿದೆ. ಈ ಆದೇಶದನ್ವಯ ಯಾರೇ ಆಗಲಿ ಧರ್ಮಸ್ಥಳ ಕ್ಷೇತ್ರ, ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಾಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ ಹರಡಲು ಆವಕಾಶವಿರುವುದಿಲ್ಲ. ಏನಿದು ಜಾನ್ ಡೋ (ಅಶೋಕ ಕುಮಾರ್) ಆದೇಶ? ‘ಜಾನ್ ಡೋ’ ಆದೇಶ ಅಂದರೆ ಯಾವುದೇ ಅಪರಿಚಿತನ ವಿರುದ್ಧ ಹೊರಡಿಸುವ ನಿರ್ಬಂಧ ಆದೇಶ. ಒಬ್ಬ ವ್ಯಕ್ತಿ ಅಥವಾ ಸಂಸ್ಥೆಗೆ ಅಪರಿಚಿತ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡುವ ಆದೇಶವಿದು. ಯಾರ ವಿರುದ್ಧ ಕ್ರಮಕ್ಕೆ ಮನವಿ ಮಾಡಲಾಗಿದೆಯೋ ಆ ವ್ಯಕ್ತಿ ಅಥವಾ ಸಂಸ್ಥೆಯ ಗುರುತು ಗೊತ್ತಿಲ್ಲದಿದ್ದಾಗ ಈ…
ಶಿವಮೊಗ್ಗ: ಕೆಲ ದಿನಗಳ ಹಿಂದಷ್ಟೇ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನಗರದಲ್ಲಿ ದೂರು ಸ್ವೀಕಾರ ಕಾರ್ಯಕ್ರಮ ನಡೆಸಲಾಗಿತ್ತು. ಈ ಬೆನ್ನಲ್ಲೇ ಇಂದು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರಿಗೆ, ಡಿವೈಎಸ್ಪಿ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಕೃಷ್ಣಮೂರ್ತಿ ಎಂಬುವರೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕಿಬಿದ್ದಿರುವಂತ ಅಧಿಕಾರಿಯಾಗಿದ್ದಾರೆ. ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ. ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ವಿರುದ್ಧ ಲೋಕಾಯುಕ್ತಕ್ಕೆ ಲಂಚದ ಹಣ ಕೇಳು ಸಂಬಂಧ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇಂದು ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ನೇತೃತ್ವದ ಅಧಿಕಾರಿಗಳು, ಸಿಬ್ಬಂದಿಗಳ ತಂಡ ದಾಳಿ ನಡೆಸಿ ಹಿಡಿದಿದೆ. ಇದೀಗ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ಕೃಷ್ಣಮೂರ್ತಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು, ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ನಕಲಿ ಅಂಕಪಟ್ಟಿ ಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರು ಧಾರವಾಡ ಬೆಳಗಾವಿ ಸೇರಿದಂತೆ ಬಂಧಿತ ಆರೋಪಿಗಳು ಸ್ಟಡಿ ಸೆಂಟರ್ ಗಳನ್ನು ತೆರೆದು 5 10 ಸಾವಿರ ರೂಗಳಿಗೆ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ನಕಲಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟೆಡಿ ಸೆಂಟರ್ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ, ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆ ಹುಟ್ಟುಹಾಕಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು. ಸ್ಟೆಡಿ ಸೆಂಟರ್ನಲ್ಲಿ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವರನ್ನು ದಾಖಲಿಸಿಕೊಳ್ಳುತ್ತಿದ್ದರು. ನಂತರ ಕಲವೇ ದಿನಗಳದಲ್ಲಿ ಇವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ…
ಉಡುಪಿಯ ಕೆಳಾರ್ಕಳಬೆಟ್ಟು- ಸಂತೆಕಟ್ಟೆ ರಸ್ತೆಯಲ್ಲಿ ನಾಲ್ಕು ದಿನಗಳ ಹಿಂದೆ ಪಾದಚಾರಿ ಮಹಿಳೆಯ ಮೊಬೈಲ್ ಫೋನ್ ಮತ್ತು ಪರ್ಸ್ ಎಗರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಲ್ಪೆಯ ತೊಟ್ಟಂ ನಿವಾಸಿ ದರ್ಶನ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಬಾಗಲ್ಕೋಟೆ ಮೂಲದ ಮಹಿಳೆ ಸರಸ್ವತಿ (21) ಎಂಬವರು ಮಾರ್ಚ್ 21 ರಂದು ಬೆಳಿಗ್ಗೆ 11:45 ಗಂಟೆಗೆ ಸಂತೆಕಟ್ಟೆಯಲ್ಲಿನ ವೈದ್ಯರ ಬಳಿ ಹೋಗಲು ತನ್ನ ಮಗನನ್ನು ಎತ್ತಿಕೊಂಡು ಕೆಳಾರ್ಕಳಬೆಟ್ಟುವಿನ ತನ್ನ ತಾಯಿಯ ಮನೆಯಿಂದ ಹೊರಟು ಕೆಳಾರ್ಕಳಬೆಟ್ಟು- ಸಂತೆಕಟ್ಟೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಸುಲಿಗೆ ನಡೆದಿತ್ತು. ಅಪರಿಚಿತ ಮೋಟಾರ್ ಸೈಕಲ್ ಸವಾರನೊಬ್ಬ ಹಿಂಬದಿಯಿಂದ ಬಂದು ಸರಸ್ವತಿ ಅವರ ಕೈಯಲ್ಲಿದ್ದ ಚೀಲವನ್ನು ಬಲತ್ಕಾರವಾಗಿ ಕಸಿದುಕೊಂಡು ಕೆಮ್ಮಣ್ಣು ಕಡೆಗೆ ಪರಾರಿಯಾಗಿದ್ದನು. ಅಪರಿಚಿತ ವ್ಯಕ್ತಿ ಎಗರಿಸಿದ್ದ ಚೀಲದಲ್ಲಿ ಮೊಬೈಲ್ ಪೋನ್ ಮತ್ತು 2500 ರೂಪಾಯಿ ಹಣವಿದ್ದ ಸಣ್ಣ ಪರ್ಸ್ ಇತ್ತು. ಈ ಬಗ್ಗೆ ಸರಸ್ವತಿ ಅವರು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಮಾರ್ಚ್ 24 ರಂದು…
ಮಂಗಳೂರು: ಷೇರು ಟ್ರೇಡಿಂಗ್ ಬಗ್ಗೆ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿದ ವ್ಯಕ್ತಿ 38,53,961 ರೂ. ಕಳೆದುಕೊಂಡಿರುವ ಬಗ್ಗೆ ವರದಿಯಾಗಿದ್ದು, ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಫೇಸ್‌ಬುಕ್‌ನಲ್ಲಿ ಬಂದ ಲಿಂಕನ್ನು ತೆರೆದು ತನ್ನ ವೈಯಕ್ತಿಕ ವಿವರಗಳನ್ನು ನಮೂದಿಸಿದ್ದೆ. ಬಳಿಕ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಷೇರು ಟ್ರೇಡಿಂಗ್‌ನಲ್ಲಿ ನೋಂದಣಿ ಮಾಡಲು 21 ಸಾವಿರ ರೂ. ಹಣ ವರ್ಗಾವಣೆ ಮಾಡುವಂತೆ ತಿಳಿಸಿದ್ದ. ಆತ ಕಳುಹಿಸಿದ ಯುಪಿಐ ಐಡಿಗಳಿಗೆ ಹಣವನ್ನು ಪಾವತಿಸಿದ್ದೆ. ಬಳಿಕ ಟ್ರೇಡಿಂಗ್ ಕಂಪೆನಿಯವರು ಕರೆ ಮಾಡಿ ಮಾಹಿತಿ ಹಾಗೂ ತರಬೇತಿ ನೀಡಿದ್ದಾರೆ. ಹೆಚ್ಚು ಹಣ ತೊಡಗಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎನ್ನುವ ಆಮಿಷದಂತೆ ಹಂತ ಹಂತದವಾಗಿ ವಿವಿಧ ಖಾತೆಗಳಿಂದ 38,53,961 ರೂ. ಪಾವತಿಸಿದ್ದೆ. ಹಣವನ್ನು ಹಿಂಪಡೆಯಲು ಯತ್ನಿಸಿದಾಗ ಅದು ಸಾಧ್ಯವಾಗಿಲ್ಲ. ಈ ಬಗ್ಗೆ ಸ್ನೇಹಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ ಎಂದು ಹಣ ಕಳೆದುಕೊಂಡ ವ್ಯಕ್ತಿ ಕಾವೂರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಬೆಂಗಳೂರಿನ ನೆಲಮಂಗಲದ ಪೊಲೀಸರಿಂದ ಮಣಿಪಾಲದಲ್ಲಿ ತಪ್ಪಿಸಿ ಕೊಳ್ಳುವ ವೇಳೆ ಸಾರ್ವಜನಿಕರ ಕಾರು, ಬೈಕಿಗೆ ಗುದ್ದಿ ಪರಾರಿಯಾಗಿದ್ದ ಇಸಾಕ್‌ನನ್ನು ಮಣಿಪಾಲ ಪೊಲೀಸರು ಮಾ.12ರಂದು ಹಾಸನದಲ್ಲಿ ಬಂಧಿಸಿದ್ದರು. ಅಲ್ಲಿಂದ ಆತನನ್ನು ಕರೆ ತರುವಾಗ ದಾರಿ ಮಧ್ಯೆ ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಗೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದರು. ಬಳಿಕ ಆತನನ್ನು ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಆತನನ್ನು ಶಸ್ತ್ರಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಇದೀಗ ಚೇತರಿಕೆ ಕಂಡಿರುವ ಇಸಾಕ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದರು. ಅದರಂತೆ ನ್ಯಾಯಾಲಯವು ಆರೋಪಿಯನ್ನು ಎ.1ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.…
ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಘಟನೆಯ ಮೇಲೆ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂತ್ರಸ್ತೆ ಲಕ್ಕವ್ವ ಬಾಯಿ ನೇತೃತ್ವದಲ್ಲಿ ಸಮುದಾಯದವರು ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಅವರಿಗೆ ಸೋಮವಾರ (ಮಾ.24) ಮನವಿ ಸಲ್ಲಿಸಿದರು. ಹಲವು ವರ್ಷಗಳಿಂದ ವಿವಿಧ ಜಿಲ್ಲೆಗಳಿಂದ ಉದ್ಯೋಗ ಅರಸಿಕೊಂಡು ಉಡುಪಿಗೆ ಬಂದು ಮಲ್ಪೆ ಮೀನುಗಾರರ ಸಂಘದ ಸಹಕಾರದಿಂದ ಮಲ್ಪೆ ಬಂದರಿನಲ್ಲಿ ಕೆಲಸ ಮಾಡಿಕೊಂಡಿದ್ದೇವೆ. ಇತ್ತೀಚೆಗೆ ಆಕಸ್ಮಿಕವಾಗಿ ನಡೆದ ಘಟನೆಯ ಅನಂತರ ನಮ್ಮ ಸಮುದಾಯದ ಪ್ರಮುಖರು ಹಾಗೂ ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಈ ಸಮಸ್ಯೆಯನ್ನು ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೌಹಾರ್ದಯುತವಾಗಿ ಇತ್ಯರ್ಥ ಮಾಡಿಕೊಳ್ಳಲಾಗಿದೆ. ಆದರೂ ಮುಗ್ದ ಮೀನುಗಾರರ ಮೇಲೆ ಕೇಸುಗಳನ್ನು ಹಾಕಿ ಬಂಧಿಸಿರುವುದು ಸರಿಯಲ್ಲ. ಮೀನುಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆದು ಸಾವಿರಾರು ಮಂದಿ ಉದ್ಯೋಗ ಅರಸಿ ಬಂದ ನಮ್ಮಂತಹ ಬಡ ಕಾರ್ಮಿಕರಿಗೆ ಸೌಹಾರ್ದಯುತ ರೀತಿಯಲ್ಲಿ ಕೆಲಸ ಮಾಡಿ ಉತ್ತಮ ಜೀವನ ನಡೆಸಲು ಅವಕಾಶ ನೀಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ. ಮನವಿಯ ಪ್ರತಿಯನ್ನು ಶಾಸಕ ಯಶ್‌ಪಾಲ್ ಸುವರ್ಣ ಅವರಿಗೆ ಈ…








