Author: main-admin

ಮಂಗಳೂರು: ಮಂಗಳೂರಲ್ಲಿ ಗುಂಪಿನಿಂದ ಕೇರಳ ಮೂಲದ ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ ಕೊಲೆ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಬಗ್ಗೆ ಮಂಗಳೂರು ಕಮೀಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ಮಂಗಳೂರಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ತೋರಿದಂತ ಮೂವರು ಪೊಲೀಸರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ. ಕರ್ತವ್ಯ ಲೋಪದ ಆರೋಪದಡಿ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್ ಟೇಬಲ್ ಪಿ.ಚಂದ್ರ ಹಾಗೂ ಪೊಲೀಸ್ ಕಾನ್ಸ್ ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ. ಕೇರಳ ಮೂಲದ ವ್ಯಕ್ತಿ ಕೊಲೆ ಪ್ರಕರಣ ಸಂಬಂಧ 20 ಜನರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವಂತ ಇತರೆ ಆರೋಪಿಗಳಿಗಾಗಿ ಹುಡುಕಾಟ ಮಾಡಲಾಗುತ್ತಿದೆ. ಈಗಾಗಲೇ ಘಟನಾ ಸ್ಥಳದಲ್ಲಿದ್ದಂತ 15 ಜನರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಘಟನಾ ಸ್ಥಳದಲ್ಲಿ ಇರುವಂತ ಸಿಸಿಟಿವಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದರು.

Read More

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಕಾಸರಗೋಡಿನ ಉಪ್ಪಳ ಗೇಟ್ ಸಮೀಪ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ. ಆಟೋ ಚಾಲಕ ಕಾಞಾಂಗಾಡ್ ನ ಮೋಹನ್ ಮೃತಪಟ್ಟವರು. ಮೋಹನ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ನಡೆದಿದೆ. ಕಾರು ಮತ್ತು ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ. ಕಾರಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ನಜ್ಜುಗುಜ್ಜಾದ ಆಟೋ ರಿಕ್ಷಾದೊಳಗೆ ಸಿಲುಕಿದ್ದ ಚಾಲಕನನ್ನು ಪೊಲೀಸರು ಹಾಗೂ ನಾಗರಿಕರು ಹೊರತೆಗೆದು ಆಸ್ಪತ್ರೆಗೆ ತಲಪಿದರೂ ಜೀವ ಉಳಿಸಲಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಮಂಗಳೂರು: ಶೈಕ್ಷಣಿಕ ಸೇವಾಸಕ್ತ, ಸಮಾಜ ಸೇವಕ ಮತ್ತು ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಸುವರ್ಣ ಸಂಭ್ರಮದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ 2024 – 25 ನೇ ಸಾಲಿಗೆ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯ ಪ್ರಜೆಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡುತ್ತಿದೆ.ಬೊಂಡಾಲ ಸಚ್ಚಿದಾನಂದ ಶೆಟ್ಟಿ:ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ 1961 ಸಪ್ಟೆಂಬರ್ 25 ರಂದು ಜನಿಸಿದ ಸಚ್ಚಿದಾನಂದ ಶೆಟ್ಟರು ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆ ಮತ್ತು ಪಾಣೆಮಂಗಳೂರು ಶಾರದಾ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ, ಬಂಟ್ವಾಳದ ಎಸ್‌.ವಿ.ಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದರು. ಮುಂಬೈ ಮಹಾನಗರದಲ್ಲಿ ವೃತ್ತಿಜೀವನ ಆರಂಭಿಸಿದ ಅವರು ಭಾರತೀಯ ವಿಮಾನಯಾನ ಹಾಗೂ ವಿವಿಧ ಕಂಪನಿಗಳ ಲೆಕ್ಕಪತ್ರ ವಿಭಾಗದಲ್ಲಿ ಸುಮಾರು 14 ವರ್ಷ ಸೇವೆ ಸಲ್ಲಿಸಿದ್ದಾರೆ. ಬಳಿಕ ಊರಿಗೆ ಹಿಂತಿರುಗಿ ದುರ್ಗಾ ಫೆಸಿಲಿಟೀಸ್ ಮ್ಯಾನೇಜ್ಮೆಂಟ್ ಸರ್ವಿಸಸ್ ಪ್ರೈ. ಲಿ. ಎಂಬ ಸಂಸ್ಥೆಯನ್ನು…

Read More

ಮಂಗಳೂರು : ನಗರದ ಹೊರವಲಯ ಕುಡುಪು ಸಮೀಪ ಏ.27ರಂದು ದುಷ್ಕರ್ಮಿಗಳ ಗುಂಪೊಂದು ಥಳಿಸಿ ಹತ್ಯೆಗೈದ ವ್ಯಕ್ತಿಯ ಗುರುತುಪತ್ತೆಯಾಗಿದ್ದು, ಕೇರಳದ ವಯನಾಡಿನಿಂದ ಆಗಮಿಸಿದ ಆತನ ಮನೆಮಂದಿ ಮೃತದೇಹವನ್ನು ಇಂದು ಬೆಳಗ್ಗಿನ ಜಾವ ಕೊಂಡೊಯ್ದಿದ್ದಾರೆ.   ಕೇರಳದ ವಯನಾಡ್ ಜಿಲ್ಲೆಯ ಪುಲ್ಪಳ್ಳಿ ನಿವಾಸಿ ಕುಂಞಾಯಿ ಎಂಬವರ ಪುತ್ರ ಅಶ್ರಫ್ ಕೊಲೆಯಾದ ವ್ಯಕ್ತಿ. ಈ ಬಗ್ಗೆ ಮಾಹಿತಿ ಪಡೆದಿದ್ದ ಅಶ್ರಫ್ ಕುಟುಂಬಸ್ಥರು ಮಂಗಳವಾರ ತಡರಾತ್ರಿ 12:30ರ ಸುಮಾರಿಗೆ ಮಂಗಳೂರಿಗೆ ಆಗಮಿಸಿದ್ದರು. ಅಶ್ರಫ್ ಅವರ ಸಹೋದರ ಸೇರಿದಂತೆ ಆಗಮಿಸಿದ್ದ ಮೂವರು ವೆನ್ಲಾಕ್ ಶವಾಗಾರದಲ್ಲಿರಿಸಿದ್ದ ಮೃತದೇಹ ಅಶ್ರಫ್ ಅವರದ್ದೆಂದು ಗುರುತಿಸಿದರು. ಈ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆಯನ್ನು ಮುಗಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.ಬಳಿಕ ಮೃತದೇಹವನ್ನು ಬಂದರ್ ನ ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿಗೆ ಕೊಂಡೊಯ್ಯಲಾಯಿತು. ಅಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ ಮಯ್ಯಿತ್ ನಮಾಝ್ ನಿರ್ವಹಿಸಿದ ಬಳಿಕ ಮುಂಜಾನೆ 4:30ರ ಸುಮಾರಿಗೆ ಮೃತದೇಹವನ್ನು ಆಂಬುಲೆನ್ಸ್ ಮೂಲಕ ವಯನಾಡಿಗೆ ಕೊಂಡೊಯ್ಯಲಾಯಿತು.ಈ ಸಂದರ್ಭ ಮಾಜಿ ಮೇಯರ್ ಕೆ.ಅಶ್ರಫ್, ಸುಹೈಲ್ ಕಂದಕ್, ಕೆ.ಕೆ.ಶಾಹುಲ್ ಹಮೀದ್, ಬಿ.ಕೆ.ಇಮ್ತಿಯಾಝ್, ಸಂತೋಷ್ ಬಜಾಲ್,…

Read More

ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಇಂದು ಗೋವಾ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಬಂಧಿತ ಆರೋಪಿ ಕಂಡ್ಲೂರು ಕಾವ್ರಾಡಿ ನಿವಾಸಿ ಮುಸೀನ್ ಸಾಹೇಬ್(29) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತ 2017ರಲ್ಲಿ ಕುಂದಾಪುರ ನ್ಯಾಯಾಲಯ ದಿಂದ ಜಾಮೀನು ಪಡೆದುಕೊಂಡಿದ್ದನು. ಆ ಬಳಿಕ ಆತ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈ ಸಂಬಂಧ ಈತನ ವಿರುದ್ಧ ಒಟ್ಟು 13 ಬಾರಿ ದಸ್ತಗಿರಿ ವಾರೆಂಟನ್ನು ಹೊರಡಿಸಲಾಗಿತ್ತು. ಈತ ಹೊರದೇಶಕ್ಕೆ ಹೋಗಿರಬಹುದೆಂಬ ಸಂಶಯದಲ್ಲಿ ಆತನ ವಿರುದ್ದ ಎಲ್.ಓ.ಸಿ.ಯನ್ನು ತೆರೆಸಲಾಗಿತ್ತು. ಅದರಂತೆ ಮುಸೀನ್ ಗೋವಾ ರಾಜ್ಯದ ದಾಬೋಲಿಮ್ ಏರ್ ಪೋರ್ಟ್‌ಗೆ ಬಂದಿಳಿರುವ ಮಾಹಿತಿ ಬಂದಿದ್ದು, ಅದರಂತೆ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

Read More

ಉಡುಪಿ : ಭಟ್ಕಳ ತಾಲೂಕಿನ ಚಂದ್ರಕಾಂತ ಖಾರ್ವಿ ಶಿಕ್ಷೆಗೆ ಒಳಗಾದವ. ಈತ ಪ್ರಕಾಶ್‌ ಪೂಜಾರಿ ಅವರನ್ನು ಗಂಗೊಳ್ಳಿ ಮೀನುಗಾರಿಕಾ ಬಂದರಿನ ದಕ್ಕೆಯಲ್ಲಿ ಬೋಟು ಕಟ್ಟುವ ವಿಚಾರದಲ್ಲಿ ವೈಮನಸ್ಸಿನಿಂದ 2017ರಲ್ಲಿ ಕೊಲೆ ಮಾಡಿದ್ದ. ಸಣ್ಣ ವಿಚಾರದಲ್ಲಿ ಮಾತಿನ ಚಕಮಕಿ ನಡೆದು, ಪ್ರಕಾಶ್‌ ಪೂಜಾರಿಗೆ ಆರೋಪಿ. ಚಂದ್ರಕಾಂತನು ಮರದ ಹಲಗೆಯಿಂದ ತಲೆಗೆ ಹೊಡೆದಾಗ ಗಾಯಗೊಂಡ ಪ್ರಕಾಶ ಪೂಜಾರಿ ಪಂಚಗಂಗಾವಳಿ ಹೊಳೆಗೆ ಬಿದ್ದಿದ್ದ. ಆ ಬಳಿಕ ಮೃತದೇಹ. ಗಂಗೊಳ್ಳಿ ಗ್ರಾಮದ ಬೇಲಿಕೆರೆ ಅರಬಿ ಸಮುದ್ರದಲ್ಲಿ ಪತ್ತೆಯಾಗಿತ್ತು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ಹೆಚ್ಚುವರಿ ಜಲ್ಲಾ ಮತ್ತು ಸತ್ತ ನ್ಯಾಯಾಧೀಶ ಅಬ್ದುಲ್‌ ರಹೀಂ ಹುಸೇನ್‌ ಶೇಖ್‌ ತೀರ್ಪು ನೀಡಿ, ಆಪಾದಿತನಿಗೆ 12 ವರ್ಷಸಜೆ, 15,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸಾಕ್ಷಿ ವಿಚಾರಣೆಯನ್ನು ಸರಕಾರಿ ಅಭಿಯೋಜಕರಾದ ಬಿ. ಪ್ರಕಾಶ್ಚಂದ್ರ ಶೆಟ್ಟ, ಹರಿಶ್ಚಂದ್ರ ಊದಿಯಾವರ್‌ ನಡೆಸಿ, ಈಗಿನ ಸರಕಾರಿ ಅಭಿಯೋಜಕಿ ಇಂದಿರಾ. ನಾಯ್ಕ ವಿಚಾರಣೆ ಮುಂದುವರಿಸಿದ್ದರು. ಅಂದಿನ ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಆರ್‌. ಗುಐಗ ತನಿಖೆ ನಡೆಸಿ…

Read More

ಮಂಗಳೂರು : ನಗರ ಹೊರವಲಯದ ಕುಡುಪು ಸಮೀಪ ರವಿವಾರ ಸಂಜೆ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆಶಂಕೆ ವ್ಯಕ್ತವಾಗಿದೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಸುಮಾರು 35ರಿಂದ 40 ವರ್ಷ ಪ್ರಾಯದ ಹೊರ ರಾಜ್ಯದ ಈ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ. ನಗರದ ಕುಡುಪು ಕಟ್ಟೆ ಸಮೀಪದ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್ ಮ್ಯಾಚ್ ಆಯೋಜಿಸಿತ್ತು. ಸಂಜೆ ವೇಳೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಗದ್ದೆಗೆ ಅಪರಿಚಿತ ಯುವಕನೊಬ್ಬ ತೆರಳಿದ್ದು, ಯಾವುದೋ ಕಾರಣಕ್ಕೆ ಈ ಯುವಕ ಮತ್ತು ಕ್ರಿಕೆಟ್ ಆಟಗಾರರ ಮಧ್ಯೆ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ. ಆಕ್ರೋಶಗೊಂಡ ಯುವಕರ ತಂಡವು ಈ ಯುವಕನಿಗೆ ಹಲ್ಲೆಗೈದಿದ್ದು, ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ನಗರ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…

Read More

ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರ ಅಧಿಕಾರ ಅವಧಿಯನ್ನು ಮೇ.31ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರ ಅವಧಿಯನ್ನು ಮೇ.21ರವರೆಗೆ ವಿಸ್ತರಣೆ ಮಾಡಲಾಗಿದೆ ಎಂಬುದಾಗಿ ತಿಳಿಸಿದೆ. ಡಾ. ಅಲೋಕ್ ಮೋಹನ್ 1987 ರಲ್ಲಿ 22 ವರ್ಷ ವಯಸ್ಸಿನಲ್ಲೇ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಸೇರಿದರು. ಅವರ 38 ವರ್ಷಗಳ ಪೊಲೀಸ್ ಸೇವೆಯಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಸವಾಲಿನ ಮತ್ತು ನಿರ್ಣಾಯಕ ಕಾರ್ಯಯೋಜನೆಗಳಲ್ಲಿ ಸೇವೆ ಸಲ್ಲಿಸಿದ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ. ಮೇ, 2023 ರಿಂದ ಅವರು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕ ಸೇವೆ, ರಾಷ್ಟ್ರೀಯ ಭದ್ರತೆ ಮತ್ತು ಕಾನೂನು ಜಾರಿ ಕ್ಷೇತ್ರದಲ್ಲಿ ಅವರ ಪ್ರಾಯೋಗಿಕ, ವಿಶ್ಲೇಷಣಾತ್ಮಕ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳಿಗೆ ಅವರು ಹೆಸರುವಾಸಿಯಾಗಿದ್ದಾರೆ

Read More

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ.ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಅಲ್ಲೇ…

Read More

ಮಂಗಳೂರು : ನಗರ ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕವಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಕುಡುಪು ಮತ್ತು ಸುತ್ತಮುತ್ತಲಿನ ಸಚಿನ್ ಟಿ., ದೇವದಾಸ್, ಮಂಜುನಾಥ್, ಸಾಯಿದೀಪ್, ನಿತೀಶ್ ಕಮಾರ್ ಯಾನೆ ಸಂತೋಷ್, ದೀಕ್ಷಿತ್ ಕುಮಾರ್, ಸಂದೀಪ್, ವಿವಿಯನ್ ಅಲ್ವಾರಿಸ್, ಶ್ರೀದತ್ತ, ರಾಹುಲ್, ಪ್ರದೀಪ್ ಕುಮಾರ್, ಮನೀಶ್ ಶೆಟ್ಟಿ, ಧನುಷ್, ದೀಕ್ಷಿತ್, ಕಿಶೋರ್ ಕುಮಾರ್ ಎಂಬವರನ್ನು ಬಂಧಿಸಲಾಗಿದೆ ಎಂದು ಹೇಳಿದರು. ರವಿವಾರ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅನುಮಾನದ ಆಧಾರದಲ್ಲಿ ಸೋಮವಾರ ಶವಪರೀಕ್ಷೆ ನಡೆಸಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಪ್ರಾಥಮಿಕ ವರದಿ ಪ್ರಕಾರ ಮೃತರ ಬೆನ್ನು ಭಾಗದಲ್ಲಿ ಬಲವಾದ ಹೊಡೆತದ…

Read More