Author: main-admin

ನವದೆಹಲಿ: ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ 15 ಕೋಟಿ ರೂ.ಗಳ ನೋಟಿನ ಕಂತೆಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಯಶವಂತ್‌ ವರ್ಮಾ ಅವರನ್ನು ತಕ್ಷಣದಿಂದಲೇ ಕರ್ತವ್ಯದಿಂದ ವಜಾಗೊಳಿಸಿ ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಗಾಗಿ ಪಂಜಾಬ್‌, ಹರಿಯಾಣ ಮತ್ತು ಕರ್ನಾಟಕ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿದೆ.ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರ ಮನೆಯಲ್ಲಿ ಬೆಂಕಿ ನಂದಿಸುವಾಗ ಹಣದ ರಾಶಿ ಪತ್ತೆಯಾಗಿತ್ತು. ಇದು ಇಡೀ ದೇಶವನ್ನೇ ನಲುಗಿಸಿತ್ತು. ಇದೀಗ ಭಾರೀ ಸಂಚಲನ ಮೂಡಿಸಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತ್‌ ವರ್ಮಾ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ.

Read More

ಕಾರ್ಕಳ : ಮೆಣಸಿನ ಹುಡಿ ಎರಚಿ ಹಣ ಸುಲಿಗೆ ಮಾಡಿರುವುದಾಗಿ ನಾಟಕವಾಡಿ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ ವ್ಯಕ್ತಿಯ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡಬಿದ್ರೆ ತಾಲೂಕಿನ ಕಡಂದಲೆ ನಿವಾಸಿ ವಿಶ್ವನಾಥ ಎಂಬಾತ ತಾನು ಮಾಡಿದ್ದ ಸಾಲವನ್ನು ಮರು ಪಾವತಿಸಲು ಸಾಧ್ಯವಾಗದೆ ತನ್ನ ಬಗ್ಗೆ ಅನುಕಂಪ ಉಂಟು ಮಾಡಿಕೊಳ್ಳಲು ಈ ನಾಟಕ ಆಡಿರುವುದಾಗಿ ದೂರಲಾಗಿದೆ. ಈತ ರಾತ್ರಿ ಬೈಕಿನಲ್ಲಿ ಮಂಜರಪಲ್ಕೆಯಿಂದ ತನ್ನ ಮನೆಗೆ ಹೋಗುತ್ತಿರುವಾಗ ಬೋಳ ಗ್ರಾಮದ ಅಂಬರಾಡಿ ಎಂಬಲ್ಲಿ ತನ್ನ ಬೈಕ್‌ನ್ನು ಅಡ್ಡ ಬೀಳಿಸಿಕೊಂಡು ತನ್ನ ಮುಖಕ್ಕೆ ಮೆಣಸಿನ ಪುಡಿ ಎರಚಿಕೊಂಡಿದ್ದನು. ಆ ವೇಳೆ ಸ್ಥಳಕ್ಕೆ ಬಂದ ಸಾರ್ವಜನಿಕರಲ್ಲಿ, ಬೈಕಿನಲ್ಲಿ ಬಂದ ಯಾರೋ ವ್ಯಕ್ತಿಗಳು ನನ್ನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಪ್ಯಾಂಟ್ ಕಿಸೆಯಲ್ಲಿದ್ದ 70,000 ರೂ. ಹಣವನ್ನು ಸುಲಿಗೆ ಮಾಡಿರುವುದಾಗಿ ಸುಳ್ಳು ಹೇಳಿದ್ದನು. ಈ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಹೋದ ಪೊಲೀಸ್ ಅಧಿಕಾರಿಯವರಲ್ಲಿ ಕೂಡ ಆತ ಸುಳ್ಳು ಮಾಹಿತಿ ನೀಡಿರುವುದು ತನಿಖೆಯಿಂದ ತಿಳಿದುಬಂದಿದೆ.

Read More

ಮಂಗಳೂರು : ಪ್ರವಾಸಿಯೊಬ್ಬರು ನಗರದ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು. ಪ್ರವಾಸಕ್ಕೆಂದು ಮಂಗಳೂರಿಗೆ ಸ್ನೇಹಿತನ ಜೊತೆ ಬಂದ ಸಂದರ್ಭ ದುರ್ಘಟನೆ ಸಂಭವಿಸಿದೆ. ನೀರಿಗೆ ಹಾರಿದ ನಂತರ ನಿಶಾಂತ್ ಕೈ ಕಾಲು ಆಡಿಸದ ಕಾರಣ ಸ್ನೇಹಿತ ಹಾಗೂ ಇತರರು ಮೇಲಕ್ಕೆತ್ತಿದ್ದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ಮೂವರು ಯುವತಿಯರು ಈಜುಕೊಳದಲ್ಲಿ ಮೃತಪಟ್ಟ ಘಟನೆ ಕಳೆದ ನವೆಂಬರ್​​ನಲ್ಲಿ ಸಂಭವಿಸಿತ್ತು.

Read More

ರಿಕವರಿ ಮಾಡಿದಂತ ಚಿನ್ನವನ್ನು ವಂಚನೆ ಮತ್ತು ದುರ್ಬಳಕೆ ಆರೋಪದಡಿ ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅನ್ನು ಅಮಾನುತುಗೊಳಿಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ದಯಾನಂದ್ ಅವರು ಆದೇಶಿಸಿದ್ದಾರೆ. 2020ರಲ್ಲಿ ಪಿಎಸ್ಐ ಸಂತೋಷ್ ಅವರು ಹಲಸೂರು ಗೇಟ್ ಠಾಣೆಯ ಪಿಎಸ್ಐ ಆಗಿದ್ದರು. ಈ ವೇಳೆ ಪ್ರಕರಣವೊಂದರ ರಿಕವರಿ ಚಿನ್ನವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಚಿನ್ನದ ಅಂಗಡಿ ಮಾಲೀಕನ ಬಳಿ ಹೋಗಿ ರಿಕವರಿ ಚಿನ್ನ ತೋರಿಸಬೇಕಿದೆ. ಹೀಗಾಗಿ 950 ಗ್ರಾಂ ಚಿನ್ನದ ಗಟ್ಟಿ ಕೊಡು, ಪೋಟೋ ತೆಗೆಸಿ ವಾಪಾಸ್ ಕೊಡುತ್ತೇನೆ ಎಂಬುದಾಗಿ ಹೇಳಿದ್ದರು. ಚಿನ್ನದ ಅಂಗಡಿ ಮಾಲೀಕ ಪಿಎಸ್ಐ ಸಂತೋಷ್ ಮಾತು ನಂಬಿ 950 ಗ್ರಾಂ ಚಿನ್ನದ ಗಟ್ಟಿ ನೀಡಿದ್ದರು. ಬಳಿಕ ಚಿನ್ನದ ಅಂಗಡಿ ಮಾಲೀಕ ಚಿನ್ನವನ್ನು ಪಿಎಸ್ಐ ಸಂತೋಷ್ ಕೇಳಿದಾಗ ಹಣ ನೀಡುವುದಾಗಿ ಭದ್ರತೆಗೆ ಸೈಟ್ ಕರಾರು ಮಾಡಿಕೊಟ್ಟಿದ್ದರು. ಆದರೇ ಆ ಸೈಟ್ ಅನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು. ಮಾಲೀಕ ಮತ್ತೆ ಪ್ರಶ್ನಿಸಿದಾಗ ಖಾಲಿ ಚೆಕ್…

Read More

ಕಾಸರಗೋಡು: ನರ್ಸಿಂಗ್ ಕಾಲೇಜಿನಲ್ಲಿ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಯತ್ನಿಸಿ ಮೂರು ತಿಂಗಳು ಕೋಮಾದಲ್ಲಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಮೃತ ವಿಧ್ಯಾರ್ಥಿನಿಯನ್ನು ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ ಕುಮಾರಿ (21). ಡಿಸೆಂಬರ್ 7 ರಂದು ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಕೋಜಿ ಕ್ಕೋ ಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆಸ್ಪತ್ರೆ ವಾರ್ಡನ್ ನ ಮಾನಸಿಕ ಕಿರುಕುಳ ದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಆರೋಪಿ ಸಹಪಾಠಿ ಗಳು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿದ್ದವು.

Read More

ಮಂಗಳೂರು : ಕರಾವಳಿ ಕರ್ನಾಟಕದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್ ರೋಹನ್ ಕಾರ್ಪೊರೇಷನ್, ತನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ ಇದರ ಭೂಮಿಪೂಜೆಯು ಮಾರ್ಚ್ 24, 2025, ಸಂಜೆ 4:00 ಗಂಟೆಗೆ ಮಂಗಳೂರಿನ ಅತ್ತಾವರ-ಬಾಬುಗುಡ್ಡ ಪ್ರದೇಶದಲ್ಲಿ ನಡೆಯಲಿದೆ. ರೋಹನ್ ನೆಸ್ಟ್:ರೋಹನ್ ನೆಸ್ಟ್ ಮಂಗಳೂರಿನ ನಗರ ಜೀವನವನ್ನು ಪುನರ್ವ್ಯಾಖ್ಯಾನಿಸುವ ಉದ್ದೇಶದಿಂದ ಯೋಜನಾಬದ್ಧವಾಗಿ ರೂಪಿಸಲಾದ ಒಂದು ವಾಸಯೋಗ್ಯ ನಿವೇಶನವಾಗಿದೆ. ಈ ಪ್ರಾಜೆಕ್ಟ್ 58 ಉತ್ತಮವಾಗಿ ವಿನ್ಯಾಸಗೊಳಿಸಲಾದ 2 ಬಿ.ಎಚ್.ಕೆ. ಅಪಾರ್ಟ್’ಮೆಂಟ್’ಗಳನ್ನು ಒಳಗೊಂಡಿದೆ, ಇದು ಮೂರು ಮಹಡಿಗಳಲ್ಲಿ ಹರಡಿಕೊಂಡಿದ್ದು, ಪ್ರತಿ ಘಟಕವು ಸ್ಥಳಾವಕಾಶ ಮತ್ತು ಸೊಗಸನ್ನು ಹೊಂದಿದೆ. 695 ರಿಂದ 715 ಚದರ ಅಡಿ ವಿಸ್ತೀರ್ಣದ ಈ ಅಪಾರ್ಟ್’ಮೆಂಟ್’ಗಳು ಆಧುನಿಕ ನಗರ ಕುಟುಂಬಗಳ ಅವಶ್ಯಕತೆಗಳನ್ನು ಪೂರೈಸಲು ವಿನ್ಯಾಸಗೊಳಿಸಲಾಗಿದೆ, ಇದು ಸೌಕರ್ಯ, ಶೈಲಿ ಮತ್ತು ಕಾರ್ಯಕ್ಷಮತೆಯ ಮಿಶ್ರಣವನ್ನು ಹೊಂದಿದೆ. ಸ್ವಯಂಚಾಲಿತ ಲಿಫ್ಟ್’ಗಳು, ಪವರ್ ಬ್ಯಾಕಪ್, ವಿಟ್ರಿಫೈಡ್ ಟೈಲ್ ಫ್ಲೋರಿಂಗ್, ಮತ್ತು ಸುರಕ್ಷತೆಗಾಗಿ ಸರ್ವಿಲೆನ್ಸ್ ಕ್ಯಾಮೆರಾಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ. ಹೆಚ್ಚುವರಿಯಾಗಿ, ಮಳೆನೀರಿನ ಸಂಗ್ರಹಣಾ ವ್ಯವಸ್ಥೆ…

Read More

ಮಲ್ಪೆ ಬಂದರಿನಲ್ಲಿ ಇಂದು ನಡೆದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ ಅಪರಾಧ ಮಾಡಿಸಲು ಪ್ರೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ ಭಾಷಣ ಮಾಡಿ ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, “ನಮ್ಮ ಮನೆಗೆ ಕಳ್ಳರು ಬಂದರೆ ನಾವು ಏನು ಮಾಡುತ್ತೇವೆ? ಪೊಲೀಸರು ಬರುವುದಕ್ಕೆ 5-6 ಗಂಟೆ ತಡವಾದರೆ ನಾವು ಏನು ಮಾಡುತ್ತೇವೆ? ಕಟ್ಟಿ ಹಾಕಲೇಬೇಕು. ಕಳ್ಳರನ್ನು ಕಟ್ಟಿ ಹಾಕಲೇ ಬೇಕು, ಮತ್ತೇನು ಮಾಡಲಿಕ್ಕೆ ಆಗುತ್ತೆ? ಏನು ಅವರಿಗೆ ಏಟು ಎಂದರೆ ಮಚ್ಚಿನಲ್ಲಿ ಖಡ್ಗದಲ್ಲಿ ತಲವಾರಿನಲ್ಲಿ ಹೊಡೆದದ್ದಾ? 2 ಕೆನ್ನೆಗೆ ಬಾರಿಸಿದ್ದು, ಯಾರಿಗೆ? ಕಳ್ಳ ಅಂತ ಆರೋಪಿತ ಒಂದು ವ್ಯಕ್ತಿಗೆ, ಆ ಮಹಿಳೆಯದ್ದು ಏನಾದರೂ ಆಕ್ಷೇಪ ಉಂಟಾ?” ಎಂದು ಮಹಿಳೆಗೆ ಸಾರ್ವಜನಿಕವಾಗಿ ಕಟ್ಟಿ ಹಾಕಿ ಹೊಡೆದುದ್ದನ್ನು ಸಮರ್ಥನೆ ಮಾಡಿಕೊಂಡಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 34/2025 0 0 57,…

Read More

ಬೆಂಗಳೂರು : ಬೆಂಗಳೂರಿನ ಬೇಗೂರು ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ ಗುಂಡಿ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಶ್ವಪ್ರಿಯ ಲೇಔಟ್ ನ ಪ್ರಾಥಮಿಕ ಶಾಲೆಯೊಂದರಲ್ಲಿ ಮಕ್ಕಳು ಶೌಚಾಲಯವನ್ನು ಕ್ಲೀನ್ ಮಾಡಿಸಿರುವ ಘಟನೆ ನಡೆದಿತ್ತು. ವಿಶ್ವಪ್ರಿಯ ಲೇಔಟ್, ಬೇಗೂರು ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳ ಕೈಯಿಂದ ಮಲ ಮೂತ್ರದ ಶೌಚಾಲಯವನ್ನು ಶಿಕ್ಷಕರು ಸ್ವಚ್ಚಗೊಳಿಸಿದ್ದು, ಸ್ವಚ್ಚಗೊಳಿಸುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಶಾಲೆ ಶಾಲೆಯ ಮುಖ್ಯ ಶಿಕ್ಷಕಿ ಸಾಕಮ್ಮ ಹಾಗೂ ದೈಹಿಕ ಶಿಕ್ಷಕಿ ಸಮಿತ್ರಾ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆಯ ಡಿಡಿ ಅವರು ಆದೇಶ ಹೊರಡಿಸಿದ್ದಾರೆ.

Read More

ಉಜಿರೆ: ಬೆಳಾಲುವಿನ ಕೊಡೋಳುಕೆರೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವೊಂದು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ಕೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ದ ದಾರಿಹೋಕ ಮಹಿಳೆಗೆ ಕೇಳಿದ್ದು, ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ. ಹಸುಕೂಸು ಆರೋಗ್ಯಕರವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಧಾವಿಸಿದ್ದು, ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ ಎಂದು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

Read More

ಮಂಗಳೂರು: ನಗರದ ಸುರತ್ಕಲ್ ಸಮೀಪ ರಸ್ತೆ ಮಧ್ಯೆ ನಿಲ್ಲಿಸಿದ್ದ ಟಿಪ್ಪರ್ ಲಾರಿಗಳನ್ನು ತೆರವು ಮಾಡುವಂತೆ ಹೇಳಿದ್ದಕ್ಕಾಗಿ ತಂಡವೊಂದು ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮುಂಚ್ಚೂರು ಎಂಬಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಬಂಧಿತ ಆರೋಪಿಗಳು ದಿವಾಕರ, ನವೀನ್, ಯಶೋಧರ, ರವಿ ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದವರು ಕಾಟಿಪಳ್ಳದ ಡೆಕ್ಕನ್ ವಿಲ್ಲಾ ನಿವಾಸಿ ಅಬೂಬಕರ್ ಎಂದು ತಿಳಿಯಲಾಗಿದೆ. ಅಬೂಬಕರ್ ಹಲ್ಲೆಯಿಂದ ಗಂಭೀರ ಗಾಯಗೊಂಡ ನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಗೆ ನಡೆಸುತ್ತಿದ್ದಾರೆ.

Read More