ವೇಗವಾಗಿ ಬದಲಾಗುತ್ತಿರುವ ಶಿಕ್ಷಣ ಮತ್ತು ಉದ್ಯೋಗ ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು, ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯವು 2025 ರ ಜುಲೈನಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ (OBE) ಕುರಿತು ಕಾರ್ಯಾಗಾರ ಸರಣಿಯನ್ನು ಆಯೋಜಿಸಿತು. ಈ ಕಾರ್ಯಾಗಾರಗಳು ಸ್ಪಷ್ಟ ಕಲಿಕಾ ಫಲಿತಾಂಶಗಳನ್ನು ವ್ಯಾಖ್ಯಾನಿಸಲು ಮತ್ತು ಅವುಗಳನ್ನು ಪಠ್ಯಕ್ರಮ, ಬೋಧನೆ ಮತ್ತು ಮೌಲ್ಯಮಾಪನದೊಂದಿಗೆ ಜೋಡಿಸಲು ಬೋಧಕರಿಗೆ ಸಹಾಯ ಮಾಡಲು ಉದ್ದೇಶಿಸಲಾಗಿತ್ತು. ಪ್ರೊ. ಡಾ. ರೊನಾಲ್ಡ್ ಜೆ. ಮಸ್ಕರೇನ್ಹಸ್ ಅವರ ನಾಯಕತ್ವದಲ್ಲಿ ಮತ್ತು ಡಾ. ಡಬ್ಲ್ಯೂ. ಜ್ಯೋತಿ ಅವರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಡಾ. ಎನ್. ಜಯಶಂಕರನ್, ಡಾ. ಸುರೇಶ್ ಮೋನಿ ಮತ್ತು ಡಾ. ಮೀನಾ ಚಿಂತಾಮಣಿ ಅವರು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ ಕೊಡುಗೆ ನೀಡಿದರು. ಜುಲೈ 11-12 ರಂದು ಭಾಷಾ ಮತ್ತು ಸಮಾಜ ವಿಜ್ಞಾನ ವಿಭಾಗಗಳಿಗೆ, ಜುಲೈ 18-19 ರಂದು ವಿಜ್ಞಾನ ವಿಭಾಗಗಳಿಗೆ, ಮತ್ತು ಜುಲೈ 25-26 ರಂದು ವಾಣಿಜ್ಯ, ಸಂವಹನ ಮತ್ತು ಐಟಿ ವಿಭಾಗಗಳಿಗೆ ಹೀಗೆ ಕಾರ್ಯಾಗಾರಗಳನ್ನು ವಿವಿಧ ವಿಭಾಗಗಳ ಬೋಧಕರಿಗಾಗಿ ಮೂರು ಹಂತಗಳಲ್ಲಿ…
Author: main-admin
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಗರ್ಭವತಿಯನ್ನಾಗಿಸಿದ ಆರೋಪಿಯನ್ನು ‘ದೋಷಿ’ ಎಂದು ಘೋಷಿಸಿ, 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದ ದೋಷಿಯು ಮೂರು ಮಕ್ಕಳ ತಂದೆಯಾಗಿದ್ದು, ಬಾಲಕಿಯ ಸಂಬಂಧಿಯೂ ಆಗಿದ್ದಾನೆ. ಬಾಲಕಿಯ ಮೇಲೆ ಬಲವಂತದ ಲೈಂಗಿಕ ದೌರ್ಜನ್ಯ ಎಸಗಿದ ಈತ ಈ ವಿಷಯವನ್ನು ಪೋಷಕರಿಗೆ ತಿಳಿಸಿದರೆ ಜೀವಕ್ಕೆ ತೊಂದರೆ ಮಾಡುವುದಾಗಿ ಬೆದರಿಸಿದ್ದ. ಹಲವು ಬಾರಿ ಸಂತ್ರಸ್ತೆ ಮೇಲೆ ದೌರ್ಜನ್ಯ ಎಸಗಿರುವುದು ತನಿಖೆಯಿಂದ ತಿಳಿದು ಬಂದಿದೆ. 2024ರ ಆಗಸ್ಟ್‌ನಲ್ಲಿ ನೊಂದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ತಪಾಸಣೆ ಒಳಪಡಿಸಿದಾಗ ಗರ್ಭವತಿಯಾಗಿರುವುದು ತಿಳಿದು ಬಂದಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಬೈಂದೂರು ಸಿಪಿಐ ಸವೀತ್ರಾ ತೇಜಾ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಒಟ್ಟು 27 ಸಾಕ್ಷಿಗಳ ಪೈಕಿ 12 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ನೊಂದ ಬಾಲಕಿಯ ಸಾಕ್ಷಿ ಮತ್ತು ಡಿಎನ್‌ಎ ವರದಿ ಆಧರಿಸಿ ಆರೋಪಿಯನ್ನು ‘ದೋಷಿ’ ಎಂದು ನ್ಯಾಯಾಧೀಶರು…
ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯು ಪ್ರಸ್ತುತ ಆಡಳಿತ ಮಂಡಳಿ ವಹಿಸಿಕೊಂಡ ನಂತರ ಇಡೀ ಕರ್ನಾಟಕ ರಾಜ್ಯದ್ಯಂತ ವಿಸ್ತರಿಸಿದೆ. ಎಮ್.ಸಿ.ಸಿ. ಬ್ಯಾಂಕ್ ಸಂಪೂರ್ಣವಾಗಿ ಕೋರ್ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇತರ ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಲಭ್ಯವಿರುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ಎಮ್.ಸಿ.ಸಿ. ಬ್ಯಾಂಕಿನಲ್ಲಿ ದೊರೆಯುತ್ತಿವೆ. ಬ್ಯಾಂಕ್ ಕರ್ನಾಟಕ ರಾಜ್ಯದಾದ್ಯಂತ ತನ್ನ ಶಾಖೆಗಳನ್ನು ವಿಸ್ತರಿಸುವ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದೆ. ಕರ್ನಾಟಕ ರಾಜ್ಯದ್ಯಾಂತ ಕಾರ್ಯವ್ಯಾಪ್ತಿ ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್, ಮಂಗಳೂರಿನಲ್ಲಿ ನವೀಕೃತಗೊಂಡ ಸುಸಜ್ಜಿತ ಆಡಳಿತ ಕಛೇರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 19 ಶಾಖೆಗಳನ್ನು ಹೊಂದಿದೆ. ಸಹಕಾರ ರತ್ನ ಶ್ರೀ ಅನಿಲ್…
ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮರೋಡಿಯ ವಿವಾಹಿತ ಮಹಿಳೆ ವಾಣಿಶ್ರೀ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಈ ಸಾವಿನಲ್ಲಿ ಆಕೆಯ ಪತಿಯ ಬಗ್ಗೆ ತಮಗೆ ಸಂಶಯವಿದ್ದು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಹೆತ್ತವರು ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೊಸ್ಮಾರು ಈದುವಿನ ವಾಣಿಶ್ರೀಯನ್ನು ಕಳೆದ 1.3 ವರ್ಷದ ಹಿಂದೆ ಬೆಳ್ತಂಗಡಿ ತಾಲೂಕು ಮರೋಡಿ ಗ್ರಾಮದ ಪಚ್ಚಾಡಿ ಪ್ರಶಾಂತ್ ಕೋಟ್ಯಾನ್ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಇತ್ತೀಚೆಗೆ ಆಕೆಯ ಪತಿ ಪ್ರಶಾಂತ್ ಕೋಟ್ಯಾನ್ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಸಂಶಯದಲ್ಲಿ ಗಂಡ ಹೆಂಡತಿ ಮಧ್ಯೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರದಲ್ಲಿ ವಾಣಿಶ್ರೀ ಮಾನಸಿಕವಾಗಿ ಕುಗ್ಗಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಈ ಸಂದರ್ಭ ಆಕೆಯನ್ನು ಯಾರೂ ಚಿಕಿತ್ಸೆಗೆ ಒಳಪಡಿಸಿಲ್ಲ ಅನ್ನುವ ಆರೋಪವೂ ಕೇಳಿ ಬಂದಿದೆ. ಸೋಮವಾರ ಆಕೆಯ ಹೆತ್ತವರು ಮೊಬೈಲ್ ಕರೆ ಮಾಡಿದಾಗ ವಿಷಯ ಗೊತ್ತಾಗಿದ್ದು ,ತಕ್ಷಣ ಆಕೆಯನ್ನು ಹೊಸ್ಮಾರುವಿನಲ್ಲಿರುವ ಪ್ರಸಾದ್ ಕ್ಲಿನಿಕ್ ಗೆ ಕರೆದುಕೊಂಡು ಹೋಗಿದ್ದು, ಬಳಿಕ ಅಲ್ಲಿಂದ…
ಬೆಂಗಳೂರು: ರಸ್ತೆ ಅಪಘಾತಕ್ಕೊಳಗಾದ ಸವಾರ ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲವೆಂದ ಮಾತ್ರಕ್ಕೆ ಘಟನೆಗೆ ಆತನ ನಿರ್ಲಕ್ಷ್ಯವೇ ಸಂಪೂರ್ಣ ಕಾರಣವೆನ್ನಲಾಗದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಶಿವೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ. ಚಿಲಕೂರು ಸುಮಲತಾ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಪಘಾತಕ್ಕೆ ಇನ್ನೊಂದು ವಾಹನ ಸವಾರ ನೇರ ಕಾರಣ ಎಂಬುದನ್ನು ಒಪ್ಪಿಕೊಳ್ಳಲು ಅರ್ಜಿದಾರರು ಸಾಕಷ್ಟು ಪುರಾವೆಗಳನ್ನೂ ನ್ಯಾಯಪೀಠದ ಮುಂದೆ ಪ್ರಸ್ತುತಪಡಿಸಿದರು. ಹೀಗಿರುವಾಗ, ಅವರು ಚಾಲನಾ ಪರವಾನಗಿ ಹೊಂದಿಲ್ಲವೆಂಬ ಕಾರಣಕ್ಕೆ ಅವರ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ ಎನ್ನುವುದು ಸರಿಯಲ್ಲ,’ ಎಂದು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಅರ್ಜಿದಾರರಿಗಾದ ನಷ್ಟದ ಅನುಸಾರ 5,67,000 ರೂ. ಪಾವತಿಸು ವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ಅರ್ಜಿ ಇತ್ಯರ್ಥಗೊಳಿಸಿ ಆದೇಶಿಸಿದೆ. 2015ರ ಜನವರಿ 4ರಂದು ಶಿವೇಗೌಡ ಸಂಬಂಧಿಕರೊಬ್ಬರೊಂದಿಗೆ ಬೈಕ್ನಲ್ಲಿ ಚನ್ನರಾಯಪಟ್ಟಣದ ಹಿರೇಹಳ್ಳಿ ಗ್ರಾಮದ ಸಮೀಪ ಜೋಡಿಗಟ್ಟೆಯ ಹಾಲಿನ ಡೇರಿ ಬಳಿ ತೆರಳುತ್ತಿದ್ದಾಗ ಬೇರೊಂದು ದ್ವಿಚಕ್ರ ವಾಹನ ಅವರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು.…
ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಆತನ ಜೊತೆಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವ ಅರೋಪದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜು.5ರಂದು ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಈ ವೀಡಿಯೊವನ್ನು ವೈರಲ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಅಪ್ರಾಪ್ತ ವಯಸ್ಸಿನವರ ವೀಡಿಯೋವನ್ನು ಮಾದ್ಯಮಗಳಲ್ಲಿ ವೈರಲ್ ಮಾಡುವುದಕ್ಕೆ ನಿರ್ಬಂಧವಿದ್ದರೂ ಕೆಲವು ಅಪರಿಚಿತ ವ್ಯಕ್ತಿಗಳು, ಅಪರಿಚಿತ ಮೀಡಿಯಾ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಹರಿಯಬಿಟ್ಟಿರುವುದಾಗಿ ಈ ಪ್ರಕರಣದಲ್ಲಿನ ಬಾಲಕನ ತಂದೆ ದೂರು ನೀಡಿದ್ದಾರೆ. ಅದರಂತೆ ಜು.28ರಂದು ದ.ಕ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅ.ಕ್ರ: 57/2025 ಕಲಂ: 74ಜೆ.ಜೆ ಬಿಎನ್ಎಸ್ರಂತೆ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು: ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿಪಾಷಣ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಬಾಕ್ರಬೈಲ್ ಮಂಜುನಾಥ್ ಹೆಗ್ಡೆ (44) ಚಿಕಿತ್ಸೆ ಫಲಕಾರಿಯಾಗದೆ ರವಿವಾರ ರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲ ವರ್ಷಗಳ ಹಿಂದೆ ಕರ್ತವ್ಯನಿರತ ಮಂಜುನಾಥ್ ಹೆಗ್ಡೆ ಅಪಘಾತಕ್ಕೀಡಾಗಿದ್ದರು. ಬಳಿಕ ನಿರಂತರ ವಾಗಿ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಯುರ್ವೇದ ಔಷಧಿಯನ್ನು ಪಡೆಯುತ್ತಿದ್ದ ಅವರು ಸುರತ್ಕಲ್ ಚೇಳಾಯರು ಬಳಿ ಇದ್ದ ಮನೆಯಲ್ಲಿ ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿ ಪಾಷಣ ಸೇವಿಸಿ ಅಸೌಖ್ಯಕ್ಕೀಡಾಗಿದ್ದರು. ತಕ್ಷಣವ ಅವರನ್ನು ಸುರತ್ಕಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಎ.27 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೂಲತಃ ಹರೇಕಳ ದೆಬ್ಬೇಲಿ ನಿವಾಸಿಯಾಗಿರುವ ಇವರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಶವಗಳನ್ನು ಹೂತು ಹಾಕಿರುವುದಾಗಿ ಹೇಳಲಾದ ಸ್ಥಳಗಳಲ್ಲಿ ಮಹಜರು ನಡೆಸಲಾಗಿದ್ದು, ಒಟ್ಟು 13 ಜಾಗಗಳನ್ನು ದೂರುದಾರ ತೋರಿಸಿದ್ದಾರೆ. ವಿಶೇಷ ತನಿಖಾ ತಂಡ ಸೋಮವಾರ ಸಂಜೆ 6 ಗಂಟೆ ತನಕ ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮಹತ್ವದ ಮಹಜರು ಕಾರ್ಯ ನಡೆಸಿತು. ದೂರುದಾರ ಅನಾಮಿಕ ವ್ಯಕ್ತಿಯನ್ನು ಮುಸುಕುಧಾರಿಯಾಗಿ ಕರೆತಂದ ಎಸ್ಐಟಿ ತಂಡ ಬೆಳಗ್ಗಿನಿಂದ ಸಂಜೆಯವರೆಗೂ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಅರಣ್ಯ ಪ್ರದೇಶದ ನಿಗೂಢ ಸ್ಥಳಗಳಿಗೆ ಕರೆದೊಯ್ದು ಮಹಜರು ಕಾರ್ಯ ನಡೆಸಿತು. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ 13 ಜಾಗಗಳನ್ನು ಎಸ್ಐಟಿ ಅಧಿಕಾರಿಗಳಿಗೆ ದೂರುದಾರ ತೋರಿಸಿದ್ದಾರೆ. ಈ ಜಾಗಗಳಲ್ಲಿ ರಾತ್ರಿಯಿಡಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಇಂದೂ ಕೂಡ ಮಹಜರು ಕಾರ್ಯ ಮುಂದುವರಿಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರು : ಚಿನ್ನಸ್ವಾಮಿ ಕಾಲ್ತುಳಿತ ದುರಂತ ಸಂಬಂಧ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ಸರ್ಕಾರ 52 ದಿನಗಳ ನಂತರ ಹಿಂಪಡೆದುಕೊಂಡಿದೆ. ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಡಿಸಿಪಿ ಶೇಖರ್, ಎಸಿಪಿ ಎಚ್.ಟಿ.ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆಯ ಇನ್‌ಸ್ಪೆಕ್ಟರ್ ಗಿರೀಶ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಮೈಕಲ್ ಡಿ ಕುನ್ಹಾ, ಜಿಲ್ಲಾಧಿಕಾರಿಗಳ ಮ್ಯಾಜಿಸ್ಟ್ರೇಟ್ ತನಿಖೆ ಪೂರ್ಣಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಸರ್ಕಾರ ತನ್ನ ಅಮಾನತು ನಿರ್ಧಾರವನ್ನು ಹಿಂದಕ್ಕೆ ಪಡೆದಿದೆ. ನಿಯಾಮವಳಿ ಪ್ರಕಾರ ಅಮಾನತು ಆದೇಶ ರದ್ದುಗೊಳಿಸಿ ನಾಲ್ವರ ವಿರುದ್ಧ ಇಲಾಖಾ ತನಿಖೆಗೆ ಆದೇಶ ಹೊರಡಿಸಿದೆ. ಕರ್ತವ್ಯಲೋಪದ ಅಡಿಯಲ್ಲಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರದ್ದುಗೊಳಿಸಿತ್ತು. ಅರ್ಜಿದಾರರನ್ನು ತಕ್ಷಣದಿಂದ ಜಾರಿಗೆ…
ಉಡುಪಿ: ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ “ಆಳ್ವಾಸ್ ಪ್ರಗತಿ-2025” ಬೃಹತ್ ಉದ್ಯೋಗ ಮೇಳವನ್ನು ಆ.1 ಮತ್ತು 2ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಳ್ವಾಸ್ ಪ್ರಗತಿ-2025ರಲ್ಲಿ ವಿವಿಧ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ ಎಂದರು. ಯಾವುದೇ ಕೋರ್ಸಗಳನ್ನು 2025ರ ಶೈಕ್ಷಣಿಕ ವರ್ಷದ ಮುಂಚೆ ಅಥವಾ ಒಳಗೆ ಪೂರ್ಣಗೊಳಿಸುವ ವರು ಹಾಗೂ ಅನುಭವವಿರುವ ಅಭ್ಯರ್ಥಿಗಳು ಈ ಮೇಳದಲ್ಲಿ ಮುಕ್ತವಾಗಿ ಭಾಗವಹಿಸಬಹುದು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ-3012, ಐಟಿಐ ಹಾಗೂ ಡಿಪ್ಲೋಮಾ- 4350, ಯಾವುದೇ ಪದವಿ- 3847, ಬಿಇ/ಬಿಟೆಕ್- 805, ಕೋರ್ ಐಟಿ- 119, ಮೆಡಿಕಲ್ ಹಾಗೂ ಪ್ಯಾರಾ ಮೆಡಿಕಲ್-…










