Author: main-admin

ಗುರುವಾರದಂದು ರಾತ್ರಿ ಮನೆಗೆ ಬಂದಾತ ತಾಯಿಯೊಂದಿಗೆ ಜಗಳವಾಡಿದ್ದರು. ಈ ಸಂದರ್ಭ ಸ್ವರಕ್ಷಣೆಗಾಗಿ ತಾಯಿ ನೆರೆಮನೆಗೆ ಹೋಗಿದ್ದರು.ಈ ವೇಳೆ ಮನೆಯ ಎದುರುಗಡೆಯ ಹಾಲ್‌ನಲ್ಲಿ ಅಡ್ಡಕ್ಕೆ ನೇಣು ಬಿಗಿದು ಈತ ಆತ್ಮಹತ್ಯೆ ಮಾಡಿದ್ದಾನೆ.ಆತನ ಪತ್ನಿ ತವರು ಮನೆಗೆ ಹೋಗಿರುವ ಬೇಸರದಿಂದ ಜೀವನದಲ್ಲಿ ಜಿಗುಪ್ಪೆ ಹೊಂದಿ ಈ ಕೃತ್ಯವೆಸಗಿರುವುದಾಗಿ ರಾಮಕ್ಕ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

Read More

ವಿಟ್ಲ: ವ್ಯಕ್ತಿಯೋರ್ವರ ಮೃತದೇಹವು ವಿಟ್ಲದ ಖಾಸಗಿ ಬಸ್ ನಿಲ್ದಾಣದ ಬಳಿಯ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ವ್ಯಕ್ತಿ ಯೋರ್ವರ ಜಮೀನಿನಲ್ಲಿರುವ ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಾ.21ರಂದು ನಡೆದಿದೆ. ಕೆರೆಯೊಳಗಿಂದ ದುರ್ನಾತ ಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ.ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.ಮೃತದೇಹವನ್ನು ಮುರಳೀಧರ ನೇತೃತ್ವದ ತಂಡ ಮೇಲಕ್ಕೆತ್ತಿದೆ. ಮೃತದೇಹ ಸಂಪೂರ್ಣ ಕೊಳೆತು ಹೋಗಿದ್ದು, ಗುರುತು ಪತ್ತೆಹಚ್ಚಲು ಅಸಾಧ್ಯವಾದ ಸ್ಥಿತಿ ತಲುಪಿದೆ. ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಮೃತದೇಹದ ಅವಶೇಷವನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನಿಸಲಾಗಿದೆ.

Read More

ಬೆಂಗಳೂರು : FIR ದಾಖಲಿಸುವ ಮುನ್ನವೇ ದಾಖಲೆಗಳನ್ನು ಸಂಗ್ರಹ ಮಾಡುವುದು ಕಾಯ್ದೆಯ ಉಲ್ಲಂಘನೆ ಆಗುತ್ತದೆ. ಎಫ್ಐಆರ್ ದಾಖಲಿಸದೆ ಮತ್ತು ಪೂರ್ವಾನುಮತಿ ಪಡೆಯದೆ ಲೋಕಾಯುಕ್ತ ಪೊಲೀಸರು ನಡೆಸಿರುವ ಎಲ್ಲಾ ಕಾರ್ಯಗಳೂ ಅನೂರ್ಜಿತ ಎಂದು ಹೈಕೋರ್ಟ್ ತಿಳಿಸಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ಪಂಚಾಯಿತಿ ಕಚೇರಿಯ 2015-16ನೇ ಸಾಲಿನಲ್ಲಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್.ಲಕ್ಷ್ಮೀ ಸೇರಿದಂತೆ ಇತರೆ ಇಬ್ಬರು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಪೊಲೀಸರು ದಾಖಲೆಗಳ ಸಂಗ್ರಹಣೆ ಮಾಡುವುದು ಹಾಗೂ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತನಿಖಾಧಿಕಾರಿ ವಿಚಾರಣೆ/ ತನಿಖೆ ನಡೆಸುವುದನ್ನು ಕಾಯ್ದೆ ಸೆಕ್ಷನ್ 17(ಎ) ನ ಸ್ಪಷ್ಟ ಉಲ್ಲಂಘನೆ ಎಂದು ಹೈಕೋರ್ಟ್ ತಿಳಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1983ರ ಸೆಕ್ಷನ್ 17ಎ ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಲೋಕಾಯುಕ್ತ ಪೊಲೀಸರು ಅನಾಮಧೇಯ ದೂರು ಆಧರಿಸಿ ಸರ್ಕಾರಿ ನೌಕರರ ವಿರುದ್ಧ ಎಫ್ಐಆರ್ ದಾಖಲಿಸುವ ಹಾಗೂ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಮುನ್ನ…

Read More

ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ.ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆ ಗೆ ಕಡಿವಾಣ ಹಾಕುವಂತೆ ಹಾಗು ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಮಾಧ್ಯಮ ಐಡಿ ಕಾರ್ಡ್ ದುರ್ಬಳಕೆ ಪ್ರಕರಣಗಳು ಕಂಡು ಬರುತ್ತಿವೆ. ಗುರುವಾರ ರಾತ್ರಿ ಕೊಡಿಯಾಲ್ ಬೈಲ್ ಬಳಿ ನಡೆದ ಸರಣಿ ಅಪಘಾತದಲ್ಲಿ ಕಾರು ಒಂದರಲ್ಲಿ ಮಾಧ್ಯಮ ಹೆಸರು ದುರ್ಬಳಕೆ ಮಾಡಿ ಸ್ಥಳದಲ್ಲಿ ನಕಲಿ ಐ ಡಿ ಕಾರ್ಡ್ ಪತ್ತೆ ಯಾಗಿದೆ. ಮಾಧ್ಯಮ ಕಾರ್ಡ್ ಗಳ ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಲವಾರು ವಾಹನಗಳಲ್ಲಿ ಮೀಡಿಯಾ ಹಾಗೂ ಪ್ರೆಸ್ ಸ್ಟಿಕರ್…

Read More

ಧರ್ಮಸ್ಥಳ: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿ ಸಮೀಪ ನಡೆದಿದೆ. ಗಂಭೀರ ಗಾಯಗೊಂಡ ಬೈಕ್‌ ಸವಾರನ್ನು ಮಂಜುನಾಥ್‌ ಎಂದು ಗುರುತಿಸಲಾಗಿದೆ. ಹಾಸನದಿಂದ ಉಜಿರೆಗೆ ಪ್ರಯಾಣ ಮಾಡುತ್ತಿದ್ದ ಪಲ್ಸರ್‌ ಬೈಕ್‌ ಸವಾರ ಮಂಜುನಾಥ್‌ ಹಾಗೂ ಉಜಿರೆ ಕಡೆಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ವಿಜಯಾನಂದ ಬಸ್‌ ನಡುವೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಬೈಕ್‌ ಸಂಪೂರ್ಣ ಹಾನಿಯಾಗಿದ್ದು, ಜೊತೆಗೆ ಬೈಕ್‌ ಸವಾರನಿಗೂ ಗಂಭೀರ ಗಾಯವಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಉಜಿರೆ ಧನ್ವಿ ಆಂಬುಲೆನ್ಸ್‌ ಸಹಾಯದ ಮೂಲಕ ಪ್ರಥಮ ಚಿಕಿತ್ಸೆಗೆಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಹಾಸನಕ್ಕೆ ಜನಪ್ರಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

Read More

ಬೆಳ್ತಂಗಡಿ: ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ಗೇರುಕಟ್ಟೆ ಜಾರಿಗೆ ಬೈಲು ಎಂಬಲ್ಲಿ ನಡೆದಿದೆ. ಬೆಳಾಲು ಗ್ರಾಮದ ನಿವಾಸಿ ಇಪ್ಪತ್ತೈದು ವರ್ಷದ ಪ್ರವೀಣ್ ಮೃತ ದುರ್ದೈವಿಯಾಗಿದ್ದಾನೆ. ಇವರು ಮಂಗಳೂರಿನ ಬ್ಯಾಂಕೊಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಚಾನಕ್ ಆಗಿ ಮರದ ಕೊಂಬೆ ಮುರಿದು ಅವರ ಬೈಕ್ ಮೇಲೆ ಬಿದ್ದಿದೆ. ಇದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದಾದರೂ ಯಾವುದೇ ಪ್ರಯೋಜನವಾಗದೆ ಮೃತಪಟ್ಟಿದ್ದಾರೆ.

Read More

ಬೆಂಗಳೂರು: ಮಂಗಳೂರಿನ ಕೇಂದ್ರ ಕಾರಗೃಹವು ಮಂಗಳೂರಿನ ಹೃದಯಭಾಗದಲ್ಲಿದೆ. ಇಲ್ಲಿನ ಕಾಂಪೌಂಡ್ ಕಟ್ಟಡದ ಎತ್ತರವೂ ತೀರಾ ಕಡಿಮೆ ಇದೆ. ಕಾರಾಗೃಹದಲ್ಲಿ ನಡೆಯುವ ಚಟುವಟಿಕೆಗಳು ಸಹ ಹೊರಗಡೆ ಕಾಣುವಂತಾಗಿದೆ. ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಅಗಿಂದಾಗ್ಗೆ ಅಕ್ರಮ ಚಟುವಟಿಕೆಗಳು ನಡೆಯುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ ಈ ಕಾರಾಗೃಹವನ್ನು ಸ್ಥಳಾಂತರ ಮಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಐವಾನ್ ಡಿ ಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಂಗಳೂರು ಜಿಲ್ಲಾ ಕಾರಾಗೃಹವನ್ನು ಬಂಟ್ವಾಳ ತಾಲ್ಲೂಕು ಚೇಳೂರು ಮತ್ತು ಕುರ್ನಾಡು ಗ್ರಾಮಕ್ಕೆ ವರ್ಗಾಯಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮಂಗಳೂರು ಕೇಂದ್ರ ಕಾರಾಗೃಹವನ್ನು ನಿರ್ಮಾಣ ಮಾಡುವ ಸಂಬಂಧ ಜಿಲ್ಲಾಡಳಿತದಿಂದ ಬಂಟ್ವಾಳ ತಾಲ್ಲೂಕು ಚೇಳೂರು ಮತ್ತು ಕುರ್ನಾಡು ಗ್ರಾಮದಲ್ಲಿ 63 ಎಕರೆ 89 ಸೆಂಟ್ಸ್ ಜಮೀನು ಮಂಜೂರು ಮಾಡಲಾಗಿರುತ್ತದೆ. ಸದರಿ ನೂತನ ಜಮೀನಿನ ಸುತ್ತಲೂ…

Read More

ಉಡುಪಿ: ಮೀನು ಕದ್ದ ಮಹಿಳೆಯ ಮೇಲೆ ಹಲ್ಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಈ ದಿನ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿದ ಸಂಬಂಧ ಇಬ್ಬರಾದ ಲೀಲಾ ಮತ್ತು ಪಾರ್ವತಿ ಎಂಬುವರನ್ನು ಬಂಧಿಸಿದ್ದಾರೆ. ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಪ್ರಕರಣದಲ್ಲಿ ಒಂದು ಮಹಿಳೆ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿರುತ್ತದೆ. ಸದರಿ ಪ್ರಕರಣಕ್ಕೆ ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಸಮಗ್ರ ವರದಿಯನ್ನು ಅತೀ ಶೀಘ್ರದಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಿರುತ್ತಾರೆ ಮಲ್ಪೆ ಹಲ್ಲೆ ಪ್ರಕರಣದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸದ ಕಾರಣ ಮಲ್ಪೆ ಪೊಲೀಸ್‌ ಠಾಣೆಯ ಬೀಟ್ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಮಹಿಳೆಯ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಹನಿ ಟ್ರ್ಯಾಪ್ ಕುರಿತು ಗಂಭೀರವಾದ ಚರ್ಚೆ ನಡೆಯಿತು.ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು.ಬಳಿಕ ಕೆ ಎನ್ ರಾಜಣ್ಣ ಅವರು ಉತ್ತರಿಸಿ, ಯತ್ನಾಳ್ ಅವರಿಗೆ ಕ್ಲಾರಿಫಿಕೇಶನ್ ಕೊಡಲು ಬಯಸುತ್ತೇನೆ ಎಂದು ಈ ಕುರಿತು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದರು. ಬಳಿಕ ಗೃಹ ಸಚಿವರು ಸಚಿವ ಕೆ ಎನ್ ರಾಜಣ್ಣ ದೂರು ನೀಡಿದರೆ ಉನ್ನತಮಟ್ಟದ ತನಿಖೆಗೆ ಆದೇಶಿಸುತ್ತೇನೆ ಎಂದು ಪರಮೇಶ್ವರ್ ತಿಳಿಸಿದರು. ವಿಧಾನಸಭೆಯಲ್ಲಿ ಚರ್ಚೆಯ ಸಂದರ್ಭದಲ್ಲಿ ಸಚಿವ ಕೆ ಎನ್ ರಾಜಣ್ಣ ದೂರು ಕೊಡಲಿ ಉನ್ನತಮಟ್ಟದ ತನಿಖೆ ಮಾಡುತ್ತೇವೆ. ಒಬ್ಬರಿಗಾಯಿತು ಇಬ್ಬರಿಗೆ ಆಯ್ತು ಅನ್ನೋದಕ್ಕಿಂತ ಹೆಚ್ಚಾಗಿ ಇದಕ್ಕೆ ಒಂದು ಫುಲ್ ಸ್ಟಾಪ್ ಹಾಕಬೇಕಾಗಿದೆ. ಕರ್ನಾಟಕ ವಿಧಾನ ಮಂಡಲ ಏನಿದೆ ಇಡಿ ದೇಶದಲ್ಲಿ ಬಹಳ ಗೌರವ ಸಂಪಾದನೆ ಮಾಡಿದೆ. ಈ ಸದನದ ಸದಸ್ಯರು ನಮ್ಮ ತಂದೆಯವರು.ಅವರು ಕೂಡ…

Read More

ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗುಲಿ ಅಪಾರ ಹಾನಿಯುಂಟಾದ ಘಟನೆ ಚೆಂಗಳದಲ್ಲಿ ನಡೆದಿದೆ. ಚೆಂಗಳದ ಶಾಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದೆ. ಅಡುಗೆ ಕೋಣೆ ಸಂಪೂರ್ಣ ಅಗ್ನಿಗಾಹುತಿಯಾಗಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಕೂಡಲೇ ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

Read More