ಮಂಗಳೂರು: ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಬೆಳ್ಳಿಪರದೆಗೆ ತರಲಾಗಿದೆ. ಏ.18ರಂದು ಇದನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಕರವಾಳಿಯಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬೇರೆ ಕಡೆಗಳಲ್ಲೂ ಹಂತಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಖ್ಯಾತ ಸಂಗೀತ, ಚಲನಚಿತ್ರ ನಿರ್ದೇಶಕ ರವಿ ಬಸ್ರೂರು ಹೇಳಿದರು. ಅವರು ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನನ್ನ ಅಜ್ಜ ಯಕ್ಷಗಾನ ಕಲಾವಿದರಾಗಿದ್ದು, ಒಮ್ಮೆಲೆ ಐದು ವಾದ್ಯಗಳನ್ನು ನುಡಿಸಬಲ್ಲ ಸಾಮೃಥ್ಯದವರಾಗಿದ್ದರು. ನನ್ನ ತಂದೆ ಸೇರಿ ಇಡೀ ಕುಟುಂಬದಲ್ಲಿ ಎಲ್ಲರೂ ಯಕ್ಷಗಾನ ಕಲಾವಿದರಾಗಿದ್ದಾರೆ. ಯಕ್ಷಗಾನವನ್ನು ಎಲ್ಲೋ ಮಿಸ್ ಮಾಡುತ್ತಿದ್ದೇನೆ ಎಂದೆನಿಸಿತು. ಸುಮಾರು ಹನ್ನೆರಡು ವರ್ಷಗಳ ಮುಂಚೆ ಪ್ರಯತ್ನಿಸಿದ್ದೆ. ಆದರೆ ಆಗ ನನ್ನ ಕಿಸೆಯಲ್ಲಿ ದುಡ್ಡಿರಲಿಲ್ಲ, ಅನುಭವವೂ ಇರಲಿಲ್ಲ. ಆದರೆ ಈ ವರ್ಷ ಅದಕ್ಕೆ ಕಾಲ ಕೂಡಿ ಬಂದಿತು ಎಂದರು.ಎಲ್ಲರೂ ಇದನ್ನು ಸಿನಿಮಾ ಆಂಗಲ್‌ನಲ್ಲಿ ನೋಡುತ್ತಿದ್ದರು, ಆದರೆ ಇದು ಬರೇ…
Author: main-admin
ಚಾಮರಾಜನಗರ : ಈ ಸರಿಯಾದ ಹತ ಎನ್ನುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾದ ಕಾಯಿಲೆ ಆಗಿಬಿಟ್ಟಿದೆ. ವಯಸ್ಸಿನ ಮಿತಿಯಿಲ್ಲದೆ ಎಲ್ಲರಲ್ಲೂ ಹೃದಯಘಾತ ಕಾಣಿಸಿಕೊಳ್ಳುತ್ತಿದೆ. ಇದೀಗ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಹೃದಯಘಾತದಿಂದ ಕೊನೆಯುಸಿರೆಳೆದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಜರುಗಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಆಲಬಾವಿ ಗ್ರಾಮದ ಪರಶುರಾಮ್ (31) ಮೃತಪಟ್ಟ ಕಾನ್ಸ್‌ಟೇಬಲ್. ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣೆಯಲ್ಲಿ ಪರಶುರಾಮ್ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಎಸ್.ಬಿ ಕರ್ತವ್ಯ ಮಾಡುತ್ತಿದ್ದರು. ಬೆಳಗ್ಗೆ ಕರ್ತವ್ಯದಲ್ಲಿದ್ದಾಗಲೇ ಹೃದಯಘಾತ ಸಂಭವಿಸಿದೆ. ತಕ್ಷಣ ಸಹೋದ್ಯೋಗಿಗಳು ರಾಮಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವೈದ್ಯರು ಜಿಲ್ಲಾಸ್ಪತ್ರೆಗೆ ಕರೆದ್ಯೂಯುವಂತೆ ಸಲಹೆ ನೀಡಿದ್ದಾರೆ. ಕಾರಿನಲ್ಲಿ ಚಿಕಿತ್ಸೆಗೆ ಕರೆ ತರುತ್ತಿದ್ದಾಗಲೇ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ
ಬೆಂಗಳೂರು: ಚಿನ್ನಾಭರಣ ವಂಚನೆ ಆರೋಪ, ಡಿಕೆ ಸಹೋದರಿ ಎಂಬುದಾಗಿ ಹಲವು ವರ್ತಕರಿಗೆ ವಂಚನೆ ಮಾಡಿದ್ದಂತ ಐಶ್ವರ್ಯ ಗೌಡ ನಿವಾಸದಲ್ಲಿ ಬರೋಬ್ಬರಿ 2.25 ಕೋಟಿ ನಗದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು 14 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಮ್ಮ ವಶಕ್ಕೆ ಪೆಡದಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿ, ಮನಿ ಲಾಂಡರಿಂಗ್ ಅಪರಾಧದಲ್ಲಿ ಭಾಗಿಯಾಗಿದ್ದಕ್ಕಾಗಿ ಬೆಂಗಳೂರಿನ ಇಡಿ 24.04.2025 ರಂದು ಪಿಎಂಎಲ್ಎ, 2002 ರ ಅಡಿಯಲ್ಲಿ ಐಶ್ವರ್ಯಾ ಗೌಡ ಅವರನ್ನು ಬಂಧಿಸಿದೆ. ಬಂಧನದ ನಂತರ, ಅವರನ್ನು ವಿಶೇಷ ನ್ಯಾಯಾಲಯಕ್ಕೆ (ಪಿಎಂಎಲ್ಎ) ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಗಳನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ ಎಂದು ತಿಳಿಸಿದೆ. ದಿನಾಂಕ 24.04.2025 ಮತ್ತು 25.04.2025 ರಂದು ಐಶ್ವರ್ಯಾ ಗೌಡ ಮತ್ತು ಅವರ ಸಹಚರರಿಗೆ ಸಂಬಂಧಿಸಿದ 14 ಸ್ಥಳಗಳಲ್ಲಿ ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ ಇಡಿ ಶೋಧ ಕಾರ್ಯಾಚರಣೆ ನಡೆಸಿತು. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ವಿವಿಧ ದಾಖಲೆಗಳು, ಡಿಜಿಟಲ್…
ಸೇಂಟ್ ಅಲೋಶಿಯಸ್ (ಸ್ವಾಯತ್ತ ವಿಶ್ವವಿದ್ಯಾಲಯ), ಏಮಿಟ್(AIMIT) ಬೀರಿ ಕ್ಯಾಂಪಸಿನ ಎಂಬಿಎ ವಿಭಾಗ, ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್’ಮೆಂಟ್ ನಡೆಸಿದ 8ನೇ ಅಂತರರಾಷ್ಟ್ರೀಯ ಸಮ್ಮೇಳನ ‘ನೋವೇಶನ್ 2025’: ಇಂಡಸ್ಟ್ರಿ 5.0, 6.0 ಮತ್ತು ಅದರ ಮುಂಬರುವ ತಂತ್ರಜ್ಞಾನಗಳಲ್ಲಿ ನಾವೀನ್ಯತೆಗಳು – ಭವಿಷ್ಯದ ವ್ಯವಸ್ಥಾ ಮಾದರಿಗಳ ಅಭಿವೃದ್ಧಿ ಎಂಬ ವಿಷಯದ ಮೇಲೆ ಎಪ್ರಿಲ್ 25, 2025ರಂದು ಏರ್ಪಡಿಸಲಾಯಿತು. ಉದ್ಘಾಟನೆಯ ಮುಖ್ಯ ಅತಿಥಿ ಎಂ.ಆರ್.ಪಿ.ಎಲ್.ನ ಮುಖ್ಯ ಜನರಲ್ ಮ್ಯಾನೇಜರ್(ಎಚ್.ಆರ್), ಶ್ರೀ ಸಂದೇಶ್ ಜೆ. ಕುಟೀನ್ಹೋ ಪ್ರಭು, ಮುಂದಿನ ದಶಕದಲ್ಲಿ (5.0) ಮತ್ತು ಅದರ ನಂತರದ ದಶಕದಲ್ಲಿ (6.0) ಸಂಭವಿಸಬಹುದಾದ ಬದಲಾವಣೆಗಳು ಮತ್ತು ಈ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮಾನವ ಶಕ್ತಿಯನ್ನು ಸಜ್ಜುಗೊಳಿಸುವ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. ಉದ್ಯಮದ ಬದಲಾವಣೆಗಳ ಅಗತ್ಯತೆಗಳನ್ನು ಪೂರೈಸಲು ಅವರು ಚುರುಕುತನ (Agility), ಹೊಂದಾಣಿಕೆ (Adaptability), ಮತ್ತು ಸಾಮರಸ್ಯ (Alignment) ಎಂಬ ಮೂರು ಎ (AAA) ಸೂತ್ರಗಳನ್ನು ನೀಡಿದರು. ನ್ಯೂಯಾರ್ಕಿನ ಸ್ಟೇಟ್ ಯೂನಿವರ್ಸಿಟಿ ಆಫ್ ಆಲ್ಬನಿಯ ಪ್ರೊಫೆಸರ್ (ಡಾ.) ಡೇವಿಡ್ ಎಂ.…
ಮಂಗಳೂರು: ಇತ್ತೀಚಿಗೆ ಕರಾವಳಿಯಲ್ಲಿ ಗೋಹತ್ಯೆ, ಅಕ್ರಮ ಗೋಸಾಗಾಟ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೀಗ ಮತ್ತೊಂದು ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೂಳೂರು ಸೇತುವೆಯ ಬಳಿಯಿಂದ ತಣ್ಣೀರು ಬಾವಿಗೆ ಹೋಗುವ ಮಾರ್ಗದಲ್ಲಿ ಯುವಕರು ರಾಜಾರೋಷವಾಗಿ ಅಕ್ರಮ ಗೋಸಾಗಾಟಕ್ಕೆ ಯತ್ನಿಸುತ್ತಿದ್ದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯುವಕರು ಸಂಶಯ ಬಾರದ ರೀತಿಯಲ್ಲಿ ದನಗಳಿಗೆ ಆಹಾರ ನೀಡುತ್ತಾ ಹಿಡಿದು ವಾಹನದಲ್ಲಿ ತುಂಬಿಸಲು ಯತ್ನಿಸುತ್ತಿದ್ದಾಗ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಅವರನ್ನು ಒಪ್ಪಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರು ವಾಸ್ತವ್ಯವಿರುವುದು ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಆದರೆ ಇವರು 12-13 ವರ್ಷಗಳ ಹಿಂದೆಯೇ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿ ಭಾರತೀಯ ಪ್ರಜೆಗಳನ್ನು ಮದುವೆಯಾಗಿದ್ದಾರೆ. ಈ ಪೈಕಿ ಒಬ್ಬರು ನಗರದ ಫಳ್ನೀರ್, ಇನ್ನೊಬ್ಬರು ವಾಮಂಜೂರಿನಲ್ಲಿ ನೆಲೆಸಿದ್ದಾರೆ. ಇನ್ನೊಬ್ಬ ಮಹಿಳೆಯ ವಾಸಸ್ಥಳದ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯ ಸರಕಾರಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ಸರಕಾರದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸದ್ಯ ಯಾವುದೇ ಪಾಕಿಸ್ಥಾನಿ ನಾಗರಿಕರು ಪತ್ತೆಯಾಗಿಲ್ಲ ಎಂದು ಎಸ್ಪಿ ತಿಳಿಸಿದ್ದಾರೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಯಾವುದೇ ಪಾಕಿಸ್ತಾನಿ ಪ್ರಜೆಗಳು ಪತ್ತೆಯಾಗಿಲ್ಲ ಎಂದು ಉಡುಪಿ ಎಸ್ಪಿ ಮಾಹಿತಿ ನೀಡಿದ್ದಾರೆ. ಎಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಮಂದಿ ಸಾವಿಗೆ ಕಾರಣರಾಗಿದ್ದರು. ಈ ಹಿನ್ನಲೆ ಕೇಂದ್ರ ಸರಕಾರ ಪಾಕಿಸ್ತಾನದ…
ಎಂ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಛೇರಿಯಲ್ಲಿ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ದಿನಾಂಕ 24.04.2025ರಂದು ಬ್ಯಾಂಕಿನ ಆಡಳಿತ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ಕ್ಯಾರೆನ್ ಕ್ರಾಸ್ತಾ ತಂಡದಿAದ ಪ್ರಾರ್ಥನಾ ಗೀತೆಯೊಂದಿಗೆ ಸಭೆ ಪ್ರಾರಂಭವಾಯಿತು.ಈ ಸಂದರ್ಭದಲ್ಲಿ ಫಾ| ಮುಲ್ಲರ್ಸ್ ಸಂಸ್ಥೆಯ ನಿಯೋಜಿತ ನೀರ್ದೇಶಕರಾದ ವಂದನೀಯ ಪೌಸ್ತಿನ್ ಲೋಬೊ ಹಾಜರಿದ್ದರು. ವಂ. ಪೌಸ್ತಿನ್ ಲೋಬೊ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಗೌರವ ಸಲ್ಲಿಸಿ ಅವರು ಹಲವಾರು ಸಂದರ್ಭಗಳಲ್ಲಿ ಪೋಪ್ ಆವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡರು. ಪರಮಪೂಜ್ಯ ಪೋಪ್ ಪ್ರಾನ್ಸಿಸ್ ದ್ವನಿಯಿಲ್ಲದವರ ದ್ವನಿ ಎಂದು ಅವರು ಹೇಳಿದರು. ಅವರು ತಮ್ಮ ಗುರು ಯೇಸುಕಿಸ್ತನನ್ನು÷್ನ ಭವ್ಯತೆಯಲ್ಲಿ ಅಲ್ಲ, ಬಡವರು ಮತ್ತು ದೀನದಲಿತರಲ್ಲಿ ಕಂಡರು. ತಮ್ಮ ಜೀವನದುದ್ದಕ್ಕೂ ಸರಳ ಮತ್ತು ವಿನಮ್ರ ಜೀವನಶೈಲಿಯನ್ನು ನಡೆಸುವ ಮೂಲಕ ಸಂತ ಫ್ರಾನ್ಸಿಸ್ ಅಸ್ಸಿಸಿಯ ಹೆಜ್ಜೆಗಳನ್ನು ಅಕ್ಷರಶ: ಅನುಸರಿಸಿದರು. ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಪ್ರಗತಿಪರರಾಗಿದ್ದರು ಮತ್ತು ಅನಗತ್ಯ ಮತ್ತು ಅಪ್ರಸ್ತುತ ಅಭ್ಯಾಸಗಳನ್ನು ತೆಗೆದುಹಾಕುವಲ್ಲಿ ನಂಬಿಕೆ ಇಟ್ಟಿದರು. ಪ್ರಪಂಚದಾದ್ಯAತ ಯುದ್ದಗಳು…
ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 30ಕ್ಕೂ ಅಧಿಕ ಪ್ರವಾಸಿಗರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೆ ಕರ್ನಾಟಕದಲ್ಲಿ ರಾಜ್ಯದಾದ್ಯಂತ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಕಾಶ್ಮೀರದಲ್ಲಿ ಸಂಭವಿಸಿದ ದಾಳಿಯಲ್ಲಿ ಬೃಹತ್ ಗುಪ್ತಚರ ವೈಫಲ್ಯ ನಡೆದಿರುವುದು ಸ್ಪಷ್ಟವಾಗಿದೆ. ಉಗ್ರರು ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಮುನ್ನಡೆದು ಬಂದಿರುವುದು ಈ ವೈಫಲ್ಯವನ್ನು ತೋರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜಾಗೃತತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಪ್ರಮುಖ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು, ದೇವಸ್ಥಾನಗಳು, ಮಾರುಕಟ್ಟೆಗಳು ಮತ್ತು ಜನಸಂದಣಿಯಿರುವ ಸ್ಥಳಗಳಲ್ಲಿ ಭದ್ರತೆ ಕಠಿಣಗೊಳಿಸಲಾಗಿದೆ. ರಾಜ್ಯದಲ್ಲಿ ಎಚ್ಚರಿಕೆಯ ವಾತಾವರಣ ನಿರ್ಮಾಣವಾಗಿದೆ. ಯಾವುದೇ ತುರ್ತು ಪರಿಸ್ಥಿತಿಗೆ ತಯಾರಾಗಿರಬೇಕು ಎಂದು ಡಿಜಿಪಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಫೇಸ್‌ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 192 ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್ ಪೇಜ್ನ ಡಿಪಿಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಿಚ್ಚು ಮಂಗಳೂರು ಎಂಬ ಫೇಸ್‌ಬುಕ್ ಪೇಜ್ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಪೋಸ್ಟ್ ಹಾಕಲಾಗಿದೆ. ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್‌ಬುಕ್ ಪೇಜ್ನ ಡಿಪಿಯಲ್ಲಿರುವ ಯುವಕ ಕೊಣಾಜೆ
ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ ಸಮರ್ಥನೆ ಇಲ್ಲ. ಭಯೋತ್ಪಾದಕರನ್ನು ನಿರ್ಮೂಲನೆ ಗೊಳಿಸುವ ಮೂಲಕ, ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಸಂದರ್ಭದಲ್ಲಿ ಮ್ರತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಭಗವಂತನು ಕೊಡಲಿ. ಅವರ ಅಕಾಲಿಕ ಮರಣ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ. ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಹಾಗೂ ಅಖಿಲ ಭಾರತ ಕ್ರೈಸ್ತ ಒಕ್ಕೂಟ ಇದನ್ನು ಖಂಡಿಸುತ್ತದೆ. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ…










