ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ ಸಮರ್ಥನೆ ಇಲ್ಲ. ಭಯೋತ್ಪಾದಕರನ್ನು ನಿರ್ಮೂಲನೆ ಗೊಳಿಸುವ ಮೂಲಕ, ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಸಂದರ್ಭದಲ್ಲಿ ಮ್ರತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಭಗವಂತನು ಕೊಡಲಿ. ಅವರ ಅಕಾಲಿಕ ಮರಣ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ. ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಹಾಗೂ ಅಖಿಲ ಭಾರತ ಕ್ರೈಸ್ತ ಒಕ್ಕೂಟ ಇದನ್ನು ಖಂಡಿಸುತ್ತದೆ. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ…
Author: main-admin
ಉಡುಪಿ: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೋಡಗಿರುವ ಮೂವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ. ಅವರಿಂದ ನಗದು, ಕಾರು ಮತ್ತು ಮೊಬೈಲ್ ಸೇರಿ ಒಟ್ಟು 12,16,700 ರೂ. ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಕುಂದಾಪುರ ಕೊರ್ಗಿಯ ಸಂದೀಪ್ (34), ಕುಂದಾಪುರ ಬೇಳೂರಿನ ಶ್ರೀರಾಜ್ (33) ಹಾಗೂ ಮೊಳಹಳ್ಳಿಯ ಮಧುಕರ್ (44) ಎಂದು ಗುರುತಿಸಲಾಗಿದೆ. ಇವರು ಐಪಿಎಲ್ ಪಂದ್ಯಗಳ ಅಕ್ರಮವಾಗಿ ಬೆಟ್ಟಿಂಗ್ ದಂಧೆ ನಡೆಸುತ್ತಾ, ಇತರೇ ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಅವರವರ ತಂಡ ತಿಳಿಸಿ ಅವರಿಂದ ಹಣವನ್ನು ಸಂಗ್ರಹ ಮಾಡುತ್ತಾ ಅವರಿಗೆ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ನ್ನು ಡೌನ್‌ಲೋಡ್ ಮಾಡಿಕೊಟ್ಟು ಅವರಿಂದ ಹಣವನ್ನು ಸಂಗ್ರಹಿಸುತಿದ್ದರು ಎಂದು ಮಾಹಿತಿ ತಿಳಿದು ಬಂದಿದೆ. ಈ ಮೂವರು ಸಂಜೆ ಅಜ್ಜರಕಾಡಿನ ಭುಜಂಗ ಪಾರ್ಕ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಪಾರ್ಕರ್ ಎಂಬ ಬೆಟ್ಟಿಂಗ್ ಮೊಬೈಲ್ ಆ್ಯಪ್ ಸಹಾಯದಿಂದ ತಮ್ಮ ಸ್ಮಾರ್ಟ್ ಫೋನ್ ಮೂಲಕ ಐಪಿಎಲ್‌ನಲ್ಲಿ ಹೈದರಾಬಾದ್‌ನ ಸನ್‌ರೈಸರ್ ಹಾಗೂ ಮುಂಬಯಿ ಇಂಡಿಯನ್ಸ್ ತಂಡಗಳ ನಡುವೆ ನಡೆದ…
ಬೆಂಗಳೂರು : ಅಧಿಕಾರದಲ್ಲಿ ಇಲ್ಲದೆ ಇದ್ದರೂ ಕೂಡ ಮಾಜಿ ಶಾಸಕರು ಸಂಸದರು ರಾಷ್ಟ್ರೀಯ ಲಾಂಛನ, ರಾಷ್ಟ್ರೀಯ ಧ್ವಜ ಹಾಗೂ ಸರ್ಕಾರದ ಲೆಟರ್ ಹೆಡ್ ಗಳನ್ನು ಬಳಸುತ್ತಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಆಕ್ರೋಶ ಹೊರ ಹಾಕಿದ್ದು, ಇದೀಗ ರಾಷ್ಟ್ರೀಯ ಲಾಂಛನಗಳ ಬಳಕೆಗೆ ಸಂಬಂಧಿಸಿದಂತೆ ಹಲವು ಮಾರ್ಗಸೂಚಿಗಳನ್ನು ರಚಿಸಿ ಆದೇಶ ಹೊರಡಿಸಿದೆ. ಮಾಜಿ ಶಾಸಕರು, ಸಂಸದರು ರಾಷ್ಟ್ರೀಯ ಲಾಂಛನಗಳು ಮತ್ತು ಧ್ವಜಗಳನ್ನು ತಮ್ಮ ಲೆಟರ್‌ಹೆಡ್ ಹಾಗೂ ವಾಹನಗಳಿಗೆ ಬಳಕೆ ಮಾಡುತ್ತಿರುವುದು ನಿಜಕ್ಕೂ ದುರುದೃಷ್ಠಕರ ಎಂದಿರುವ ಹೈಕೋರ್ಟ್, ರಾಷ್ಟ್ರೀಯ ಲಾಂಚನಗಳು ಮತ್ತು ಧ್ವಜದ ಹೆಸರುಗಳನ್ನು ಬಳಕೆ ತಡೆಯಲು ಕೋರಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಸಾರ್ವಜನಿಕ ಸ್ಥಳಗಳು ಮತ್ತು ವಾಹನಗಳಲ್ಲಿ ರಾಷ್ಟ್ರೀಯ ಚಿಹ್ನೆಗಳು ಮತ್ತು ಲಾಂಛನಗಳನ್ನು ಅನಧಿಕೃತ ಬಳಕೆ ಮತ್ತು ದುರುಪಯೋಗ ತಡೆಗಟ್ಟಲು 1950ರ ಲಾಂಛನಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆಗಟ್ಟುವಿಕೆ)…
ಕಡಬ : ಮನೆಯೊಂದರಲ್ಲಿ ಅಕ್ರಮವಾಗಿ ಕಾಡು ಪ್ರಾಣಿಯ ಮಾಂಸವನ್ನು ಸಂಗ್ರಹಿಸಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಪಂಜ ವಲಯ ತಂಡ ಅರಣ್ಯ ಅಧಿಕಾರಿಗಳ ದಾಳಿ ನಡೆಸಿದ್ದು ಮನೆಯ ಫ್ರಿಡ್ಜ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಕಾಡು ಪ್ರಾಣಿಯ ಮಾಂಸ ಪತ್ತೆ ಹಚ್ಚಿದ್ದಾರೆ. ಕಡಬದ ನೂಜಿಬಾಳ್ತಿಲ ಎಂಬಲ್ಲಿ ಘಟನೆ ನಡೆದಿದ್ದು ನೂಜಿಬಾಳ್ತಿಲ ಗ್ರಾಮದ ಪಟ್ಟಣ ತೇಗಿಲ್ ಕಳಜಾಲು ನಿವಾಸಿ ವರ್ಗಿಸ್ ತೋಮಸ್ ಎಂಬವರಿಗೆ ಸೇರಿದ ಮನೆಯಲ್ಲಿ ಸುಮಾರು 10 ಕೆಜಿ ಕಾಡುಪ್ರಾಣಿ ಮಾಂಸ ಪತ್ತೆ ಹಚ್ಚಿದ್ದಾರೆ. ಆರೋಪಿ ಪರಾರಿಯಾಗಿದ್ದು ಕಾಡುಪ್ರಾಣಿ ಮಾಂಸ ಹಾಗೂ ಬಂದೂಕು ವಶಕ್ಕೆ ಪಡೆದಿದ್ದಾರೆ. ಕಾರ್ಯಚರಣೆಯಲ್ಲಿ ಪಂಜ ಉಪ ವಲಯ ಅರಣ್ಯಾಧಿಕಾರಿ ಸಂದ್ಯಾ ಅಜಿತ್, ಸುನಿಲ್, ಯಶೋಧರ ಮೊದಲಾದವರು ಭಾಗಿಯಾಗಿದ್ದರು.
ಮಂಗಳೂರು: ರಸ್ತೆ ಅಪಘಾತದಲ್ಲಿ ಮಹಿಳೆಯ ಸಾವಿಗೆ ಕಾರಣನಾದ ಗೂಡ್ಸ್ ಟೆಂಪೋ ಚಾಲಕ ಸಿದ್ದಲಿಂಗನ ಗೌಡ ವಿ. ಪೊಲಿಸ್ ಪಾಟೀಲ್ (35) ಎಂಬಾತನಿಗೆ 9 ತಿಂಗಳು ಜೈಲು ಹಾಗೂ 9 ಸಾವಿರ ರೂ. ದಂಡ ವಿಧಿಸಿ ಜೆಎಂಎಫ್‌ಸಿ 3ನೇ ನ್ಯಾಯಾಲಯ ಆದೇಶ ನೀಡಿದೆ. 2019ರ ಡಿ. 1ರಂದು ನಗರದ ಕದ್ರಿ ಕಂಬಳದಲ್ಲಿ ಈ ಘಟನೆ ಸಂಭವಿಸಿತ್ತು. ವಿನೋದ್ ಕುಮಾರ್ ಚಲಾಯಿಸುತ್ತಿದ್ದ ಆಟೋದಲ್ಲಿ ಮಹಿಳೆ ಶೈಲಜಾ ರಾವ್ (55) ಪ್ರಯಾಣಿಸುತ್ತಿದ್ದರು. ಆಗ ಸಿದ್ದಲಿಂಗನ ಗೌಡ ಗೂಡ್ಸ್ ಟೆಂಪೋವನ್ನು ನಿರ್ಲಕ್ಷéದಿಂದ ಚಲಾಯಿಸಿಕೊಂಡು ಬಂದು ಆಟೋಗೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಶೈಲಜಾ ತೀವ್ರ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಆಗ ಪೊಲೀಸ್ ನಿರೀಕ್ಷರಾಗಿದ್ದ ಗೋಪಾಲಕೃಷ್ಣ ಭಟ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜೆಎಂಎಫ್‌ಸಿ 3ನೇ ನ್ಯಾಯಾಲಯ ನ್ಯಾಯಾಧೀಶರಾದ ಸುರೇಶ್ ಇ.ಎಸ್. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಟೆಂಪೋ ಚಾಲಕನಿಗೆ ಎ. 22ರಂದು 9 ತಿಂಗಳ ಜೈಲು ಹಾಗೂ 9…
ಬಂಟ್ವಾಳ : ಬಸ್ ತಿರುಗಿಸುವ ವಿಚಾರದಲ್ಲಿ ಖಾಸಗಿ ಬಸ್‌ನ್ನು ತಡೆದ ತಂಡವೊಂದು ಡ್ರೈವರ್ ಹಾಗೂ ಕಂಡಕ್ಟರ್‌ನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿ ಪರಾರಿಯಾಗಿರುವ ಘಟನೆ ಕರಿಯಂಗಳ ಗ್ರಾಮದ ಪಲ್ಲಿಪಾಡಿಯಲ್ಲಿ ನಡೆದಿತ್ತು. ಎ.21 ರಂದು ರಾತ್ರಿ 7.40 ರ ಸುಮಾರಿಗೆ ಬಸ್ ಪೊಳಲಿ-ಕೊಳತ್ತಮಜಲು ಮಾರ್ಗವಾಗಿ ಸಂಚರಿಸುವ ಸಂದರ್ಭದಲ್ಲಿ ಬಸ್ ತಿರುಗಿಸುವ ವಿಚಾರದಲ್ಲಿ ಆರೋಪಿಗಳಾದ ಉಮೇಶ ಶೆಟ್ಟಿ, ವಿಜಯ, ಕಿಶೋರ, ಪ್ರಶಾಂತ್ ಹಾಗೂ ಇತರರು ತಕರಾರು ತೆಗೆದಿದ್ದಾರೆ. ಗಲಾಟೆ ಮಾಡಿ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ಬಸ್ ಕಂಡಕ್ಟರ್ ಅಭಿಜಿತ್ ಶೆಟ್ಟಿ ದೂರು ನೀಡಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ನವ ಮಂಗಳೂರು ಬಂದರು ವ್ಯಾಪ್ತಿ (NMPRCL)ಗೆ ಸೇರಿದ ಸುರತ್ಕಲ್-ಬಿ.ಸಿ. ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ ಆರಂಭಕ್ಕೆ ಇಂದು ಸಂಜೆ 3.30ಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಚಾಲನೆ ದೊರೆಯಲಿದೆ. ಸುರತ್ಕಲ್ ನ ಗೋವಿಂದದಾಸ್ ಕಾಲೇಜಿನ ಸಮೀಪದ ಹೆದ್ದಾರಿ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಬಹುಬೇಡಿಕೆ ಹಾಗೂ ನಿರೀಕ್ಷೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ. ಈ ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಜತೆಗೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ. ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್ ಹಾಗೂ ನವ ಮಂಗಳೂರು ಬಂದರು ರಸ್ತೆ ಕಂಪೆನಿ ಲಿಮಿಟೆಡ್(ಎನ್‌ಎಂಪಿಆರ್‌ಸಿಎಲ್)ನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅದರಲ್ಲೂ ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾದು ಹೋಗುವ ಸುರತ್ಕಲ್-ನಂತೂರು, ಬಿಸಿ.ರೋಡ್-ಪಡೀಲ್ ಹಾಗೂ ನಂತೂರು ಜಂಕ್ಷನ್‌ನಿಂದ ಪಡೀಲ್‌ವರೆಗಿನ ಬೈಪಾಸ್ ರಸ್ತೆ ಸೇರಿದಂತೆ ಒಟ್ಟು 37.42 ಕಿಮೀ. ದೂರದ ಹೆದ್ದಾರಿಗಳ ರಿಪೇರಿ, ಮರುಡಾಂಬರೀಕರಣ ಹಾಗೂ…
ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎಪ್ರಿಲ್ 22ರಂದು ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ಸಂಸ್ಥೆಯಿಂದ ಸಿಪಿಆರ್ (ಕಾರ್ಡಿಯೊ ಪಲ್ಮನರಿ ರಿಸಸಿಟೇಶನ್) ಮತ್ತು ಪ್ರಥಮ ಚಿಕಿತ್ಸೆಯ ತರಬೇತಿಯನ್ನು ನೀಡಲಾಯಿತು. ಕೌಶಲ್ಯ ಸಬಲೀಕರಣದ ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ| ಪಿ. ಎಲ್ ಧರ್ಮ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಜಯರಾಜ್ ಅಮೀನ್ ಉಪಸ್ಥಿತರಿದ್ದರು. ಕಣಚೂರು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ| ರೋಹನ್ ಮೋನಿಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು, ಮೆಡಿಸಿನ್ ವಿಭಾಗದ ಡಾ| ಶ್ರೀನಿವಾಸ್ ಮತ್ತು ಡಾ| ಉಬೈದುಲ್ಲಾ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದು, ಘಟನೆಯಲ್ಲಿ ಭಾಗಿಯಾದ ಇಬ್ಬರು ಭಯೋತ್ಪಾದಕರ ರೇಖಾಚಿತ್ರಗಳನ್ನು ಭದ್ರತಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಸರ್ವ ಪ್ರಯತ್ನಗಳನ್ನು ಮಾಡುತ್ತಿವೆ. ಭಯೋತ್ಪಾದಕ ದಾಳಿಯ ಕೆಲವೇ ಗಂಟೆಗಳಲ್ಲಿ, ಶಂಕಿತ ಭಯೋತ್ಪಾದಕನ ಮೊದಲ ಫೋಟೋ ಬಹಿರಂಗಗೊಂಡಿದೆ ಎಂದು ವರದಿಯಾಗಿದೆ. ವೀಡಿಯೊವೊಂದರಲ್ಲಿ ತೆಗೆದ ಸ್ಕ್ರೀನ್‌ಶಾಟ್‌ನಲ್ಲಿ, ಭಯೋತ್ಪಾದಕನೆಂದು ಶಂಕಿಸಲಾದ ವ್ಯಕ್ತಿಯೊಬ್ಬ ಕುರ್ತಾದಲ್ಲಿ ಎಕೆ ಸರಣಿಯ ಅಸಾಲ್ಟ್ ರೈಫಲ್‌ನೊಂದಿಗೆ ಕಾಣಿಸಿಕೊಂಡಿದ್ದಾನೆ. ಭದ್ರತಾ ಸಂಸ್ಥೆಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರಲ್ಲಿ ಇವನೂ ಒಬ್ಬ ಎಂಬುವುದಾಗಿ ಹೇಳಿದ್ದಾರೆ. ಶಸ್ತ್ರಾಸ್ತ್ರಗಳನ್ನು ಹಿಡಿದು ಪಠಾಣ್ ಸೂಟ್ ಧರಿಸಿರುವ ವ್ಯಕ್ತಿಯೊಬ್ಬ ವಿಡಿಯೋದಲ್ಲಿ ಸೆರೆಯಾಗಿದ್ದಾನೆ. ಈ ಫೋಟೋವನ್ನು ನಿನ್ನೆ ತಡರಾತ್ರಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸಿಆರ್‌ಪಿಎಫ್ ಮತ್ತು ಸೇನೆಯೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರಕ್ಕೆ ಧಾವಿಸಿ…
ಪುತ್ತೂರು: ಬಾಡಿಗೆಗೆಂದು ಹೋದ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬವರು ರಿಕ್ಷಾ ಸಮೇತ ನಾಪತ್ತೆಯಾಗಿರುವ ಕುರಿತು ಎ.21ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ 5.30ಕ್ಕೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಡಿಗೆ ಇದೆ ಎಂದು ಮನೆಯಿಂದ ಹೋದವರು ಮತ್ತೆ ಮನೆಗೆ ವಾಪಸಾಗಿಲ್ಲವೆಂದು ತಿಳಿದು ಬಂದಿದೆ. ಈ ಘಟನಾ ಕುರಿತು ಇತರ ಅಟೋ ರಿಕ್ಷಾದವರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಲೋಕೇಶ ಅವರ ಪತ್ನಿ ಸುವರ್ಣ ಬಿ.ಎಸ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.










