ಉಡುಪಿ : ಮಣಿಪಾಲದ ಪಬ್ ಹಾಗೂ ಬಾರ್ ಗಳ ಮೇಲೆ ಮಧ್ಯರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಮಣಿಪಾಲದ ಈಶ್ವರನಗರ, ಟೈಗರ್ ಸರ್ಕಲ್ ಸಮೀಪದ ಬಾರ್ ಗಳಿಗೆ ದಾಳಿ ನಡೆಸಿ, ನಿಯಮ ಉಲ್ಲಂಘನೆ ಮಾಡಿರುವ ಪಬ್ ಹಾಗೂ ಬಾರ್ ಮಾಲಕರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವೇಳೆ ಪಬ್ ಹಾಗೂ ಬಾರ್ ಗಳಲ್ಲಿ ಅಪ್ರಾಪ್ತರಿಗೆ ಅನುಮತಿ ನೀಡಿರುವುದು ಕಂಡು ಬಂದಿದ್ದು, ಅಪ್ರಾಪ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬಾರ್ ನಲ್ಲಿ ಇದ್ದರು.ಏಳೆಂಟು ಪಬ್, ಬಾರ್ ಗಳಿಗೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಉಡುಪಿ ಜಿಲ್ಲಾ ಎಸ್ ಪಿ ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ ಮಣಿಪಾಲ ಠಾಣ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Author: main-admin
ಬೆಳ್ತಂಗಡಿ: ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು, ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಹಿಂದಿರುಗುವ ವೇಳೆ ಕಾಡಾನೆ ದಾಳಿಗೆ ಒಳಗಾಗಿರಬಹುದು ಎಂದು ಶಂಕಿಸಲಾಗಿದೆ. ಸಂಜೆ ಕಳೆದರೂ ಅವರು ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ಆರಂಭಿಸಿದರು. ಹುಡುಕಾಟದ ವೇಳೆ ಅವರು ಧರಿಸಿದ್ದ ಪ್ಲಾಸ್ಟಿಕ್ ರೈನ್‌ಕೋಟ್ ದಾರಿಯ ಮಧ್ಯೆ ಬಿದ್ದಿರುವುದು ಪತ್ತೆಯಾಯಿತು. ಅದರ ಸಮೀಪದಲ್ಲೇ ಕಾಡಾನೆಯ ಹೆಜ್ಜೆ ಗುರುತುಗಳು ಕಂಡುಬಂದಿದ್ದರಿಂದ ಕಾಡಾನೆ ದಾಳಿ ನಡೆಸಿರುವ ಶಂಕೆ ಮತ್ತಷ್ಟು ಬಲವಾಯಿತು.ಬಳಿಕ ಸ್ಥಳೀಯರು ಸುತ್ತಮುತ್ತ ಶೋಧ ನಡೆಸಿದಾಗ ಸಮೀಪದ ಕಣಿಯೊಂದರಲ್ಲಿ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಯಿತು. ಕಾಡಾನೆ ದಾಳಿಯಿಂದಲೇ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ…
ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯಲ್ಲಿ ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ ಪ್ರಸ್ತುತ ಕುಂದಾಪುರದ ಫ್ಲ್ಯಾಟ್‌ವೊಂದರಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಬಂಧಿತ ಆರೋಪಿ. ಹೆಬ್ರಿ ಮೂಲದ ಪ್ರಸ್ತುತ ಬಾರ್ಕೂರು ಕಚ್ಚೂರು ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಐವನ್ ರಿಚರ್ಡ್ ಮಸ್ಕರೇನಸ್ ಯಾನೆ ಮುನ್ನಾ (45) ಎನ್ನುವರನ್ನು ಗುಂಡಿಕ್ಕಿ ಹತ್ಯೆ ನಡೆಸಿದ ಆರೋಪಿ ಡೆರಿಕ್ ತಲೆಮರೆಸಿಕೊಂಡಿದ್ದ. ಭಟ್ಕಳದ ಬೆಳಕೆ ಹೇರಬುಡಿಕೆ ಎಂಬಲ್ಲಿ ಶನಿವಾರ ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ತನಿಖೆ ಮುಂದುವರಿದಿದೆ ಎಂದು ಎಸ್ಪಿ ತಿಳಿಸಿದ್ದಾರೆ
ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆರೋಗ್ಯ ಸಚಿವ ಯು.ಟಿ. ಖಾದರ್ ಆದೇಶ ಹೊರಡಿಸಿದ್ದಾರೆ. ಹೆಚ್ಚು ಕೊಬ್ಬಿನಂಶ ಇರುವ ಆಹಾರಗಳ ಕುರಿತು ಆರೋಗ್ಯ ಇಲಾಖೆ ಸಮೀಕ್ಷೆ ನಡೆಸಿದಾಗ ರಾಜ್ಯದ 134 ಶಾಲಾ-ಕಾಲೇಜುಗಳು ತಮ್ಮದೇ ಸ್ವಂತ ಕ್ಯಾಂಟಿನ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಅನಾರೋಗ್ಯಕರ ಜಂಕ್‌ಫುಡ್‌ಗಳನ್ನು ಮಾರಾಟ ಮಾಡುತ್ತಿರುವುದು ತಿಳಿದುಬಂದಿತ್ತು. ಶಾಲಾ-ಕಾಲೇಜುಗಳ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಸರ್ಕಾರದ ಆದೇಶ ಮೀರಿಯೂ ಜಂಕ್‌ಫುಡ್ ಮಾರಾಟ ಮುಂದುವರಿಸಿದರೆ ಭಾರೀ ದಂಡ ವಿಧಿಸಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ. ಮುಂದಿನ ದಿನಗಳಲ್ಲಿ ಹೊಸದಾಗಿ ವ್ಯಾಪಾರಿಗಳಿಗೆ ಮತ್ತು ಕ್ಯಾಂಟಿನ್‌ಗಳಿಗೆ ಲೈಸೆನ್ಸ್ ನೀಡುವಾಗಲೇ ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ಮಾರಾಟ ಮಾಡಬಾರದು ಎಂಬ ನಿಯಮವನ್ನು ಕಡ್ಡಾಯಗೊಳಿಸಲಾಗುವುದಾಗಿ ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯಿಂದಲೇ ಈ ಸಂಬಂಧ ನೋಟಿಸ್ ನೀಡಲಾಗುವುದು. ಶಾಲೆಯ 50 ಮೀಟರ್ ಅಂತರದಲ್ಲಿ…
ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ನಾಣಿಲ್ ಎಂಬಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಮುಂಜಾನೆ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ ಸಯ್ಯದ್ ಅನ್ವರ್ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಅನ್ವರ್ ಕಳೆದ ಕೆಲವು ಸಮಯದಿಂದ ಇಸ್ಮಾಯಿಲ್ ಅವರ ಬಾಡಿಗೆ ಮನೆಯಲ್ಲಿ ಪತ್ನಿ ಮಗುವಿನೊಂದಿಗೆ ವಾಸವಾಗಿದ್ದು ಪತಿ,ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತೆನ್ನಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮೀನಿನ ಟೆಂಪೊದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅನ್ವರ್ ಕಳೆದ ಕೆಲವು ಸಮಯದಿಂದ ಕೆಲಸವಿಲ್ಲದೆ ಮನೆಯಲ್ಲಿದ್ದು ಒಂದೆರಡು ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಬಂದಿದ್ದರು. ಗುರುವಾರ ಮತ್ತೆ ಪತಿ- ಪತ್ನಿ ನಡುವೆ ಜಗಳವಾಗಿದ್ದು ಪತ್ನಿ ತನ್ನ ಎರಡು ವರ್ಷದ ಪುತ್ರನೊಂದಿಗೆ ತವರು ಮನೆಗೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ತನ್ನಕ್ಕನಿಗೆ ವಿಡಿಯೊ ಕರೆ ಮಾಡಿ ಮಾಡಿಕೊಳ್ಳುವುದಾಗಿ ಪತ್ನಿ ಮನೆಯವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಆತಂಕಕ್ಕೊಳಗಾದ ಮನೆಯವರು…
ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ. 2013ರ ನವೆಂಬರ್ 18ರಂದು ಆರೋಪಿಗಳಾದ ಪ್ರಜ್ವಲ್, ಅರುಣ್ ಅಮೀನ್, ಆದಿತ್ಯ ಸಾಲ್ಯಾನ್ ಮತ್ತು ಅಬ್ದುಲ್ ರಿಯಾಝ್ ಎಂಬವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ್ದ ಬಗ್ಗೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅದರಂತೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಶುಕ್ರವಾರ ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಸಂತ್ರಸ್ತೆಯ ಪರವಾಗಿ ಜ್ಯೋತಿ ಪ್ರಮೋದ್ ವಾದಿಸಿದ್ದರು.
ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಸೆಂಟೆನಿಯಲ್‌ನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಗರದ ಕದ್ರಿ ಪಾರ್ಕ್ ಸಮೀಪದ ಲಯನ್ಸ್ ಅಶೋಕ ಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಲಯನ್ ಅಮಲ್ ಮರಿಯಾ ಇಸಬೆಲ್ಲಾ ಕ್ವಾಡ್ರೋಸ್ (PMJF) ಅವರು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಲಯನ್ ಸ್ವರೂಪ್ ಎನ್. ಶೆಟ್ಟಿ (PMJF) ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರದ ಪ್ರಮಾಣವಚನ ಬೋಧಿಸಿ, ಐವರು ನೂತನ ಸದಸ್ಯರನ್ನು ಲಯನ್ಸ್ ಕುಟುಂಬಕ್ಕೆ ಸೇರ್ಪಡೆಗೊಳಿಸಿದರು. ಕ್ಲಬ್ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಮುಂದೆಯೂ ಇನ್ನಷ್ಟು ಅರ್ಥಪೂರ್ಣ ಸೇವಾ ಕಾರ್ಯಗಳನ್ನು ಕೈಗೊಳ್ಳುವಂತೆ ಶುಭ ಹಾರೈಸಿದರು. ನೂತನ ಕಾರ್ಯಕಾರಿ ಸಮಿತಿಯಲ್ಲಿ ರಿಚರ್ಡ್ ಪಿಂಟೋ ಕಾರ್ಯದರ್ಶಿಯಾಗಿ, ಸುರೇಶ್ ಮೊಂತೇರೊ ಖಜಾಂಚಿಯಾಗಿ, ಹೆರಾಲ್ಡ್ ಡಿ’ಕುನ್ಹಾ ಹಾಗೂ ಲಾರೆನ್ಸ್ ಲೋಬೊ ಉಪಾಧ್ಯಕ್ಷರಾಗಿ, ಡಯಾನಾ ಶಾನ್‌ಭೋಗ್, ವಿನ್ಸೆಂಟ್ ಪಿರೇರಾ (ಜನಸಂಪರ್ಕಾಧಿಕಾರಿ), ತೇಜಾಕ್ಷಿ ಸುವರ್ಣ, ಹಿಲ್ಡಾ ಉರ್ವಾ, ಜಸಿಂತಾ ಲೋಬೊ, ಶ್ರೀರಾಮ್ ರೈ, ಆಂಡ್ರಿಯಾ ಫೆರ್ನಾಂಡಿಸ್ ಹಾಗೂ ಉಜ್ವಲ್ ಡಿ’ಕುನ್ಹಾ ವಿವಿಧ ಹುದ್ದೆಗಳಿಗೆ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ…
ಮಂಗಳೂರು: ಕೊಲೆ ಯತ್ನ ಪ್ರಕರಣ ಸಂಬಂಧ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೇಳ್ಳಿ ವಿಲೇಜ್ ವಾಸ್ತವ್ಯವಿದ್ದ ಚುಂಕಿ ಆಕಾಶಭವನ ಯಾನೆ ಸಂತೋಷ್ ಎಸ್. (34) ಎಂದು ತಿಳಿದು ಬಂದಿದೆ. 2015ರಲ್ಲಿ ಮಂಗಳೂರು ನಗರದ ಆಕಾಶಭವನದಲ್ಲಿ ನಡೆದ ಮದುವೆಯ ಮದುರಂಗಿ ಶಾಸ್ತ್ರದ ಸಂದರ್ಭದಲ್ಲಿ ಅಶೋಕ ಕುಮಾರ್ ಕೊಟ್ಟಾರಿ ಹಾಗೂ ಆರೋಪಿ ಜಗ್ಗು ಎಂಬವರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭ ಚುಂಕಿ ಆಕಾಶಭವನ ಇತರ ಆರೋಪಿಗಳಾದ ರಂಜಿತ್, ಧನು, ಧೂಮ, ಸ್ವೀಟಿ ಯಾನೆ ನರೇಶ್ ಮತ್ತು ಜಗ್ಗು ಜೊತೆ ಸೇರಿಕೊಂಡು ಅಶೋಕ ಕುಮಾರ್ ಕೊಟ್ಟಾರಿ ಮೇಲೆ ತಲವಾರಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 135/2015 ರಂತೆ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಚುಂಕಿ ಆಕಾಶಭವನ ಪ್ರಕರಣ ದಾಖಲಾದ ದಿನದಿಂದ ತಲೆಮರೆಸಿಕೊಂಡಿದ್ದನು.…
ಬೆಳ್ತಂಗಡಿ: ಅಂಬ್ಯುಲೆನ್ಸ್‌ನಲ್ಲೇ ಡ್ರಗ್ಸ್ ಪೂರೈಕೆ ಮಾಡಿದ ಪ್ರಕರಣದಲ್ಲಿ ಸಿಲುಕಿಕೊಂಡು ಎಸ್ಕೇಪ್ ಆಗಿರುವ ಜಲೀಲ್ ಬಾಬಾನಿಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಈತ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ಕೂಡಾ ವ್ಯಕ್ತವಾಗಿದೆ. ಜೂನ್ 25ರಂದು ಮಂಗಳೂರಿನಲ್ಲಿ ಅಣ್ಣಪ್ಪ ಸ್ವಾಮಿ ಆಲಿಯಾಸ್ ಮನು ಎಂಬಾತನನ್ನು ಎಂಡಿಎಂಎ ಸಹಿತ ಬಂಧಿಸಲಾಗಿತ್ತು. ಈ ವೇಳೆ ಪೊಲೀಸರಿಗೆ ಬಾಗಲಕೋಟೆಯ ಡ್ರಗ್ ಲಿಂಕ್ ಬಗ್ಗೆ ಮಾಹಿತಿ ದೊರೆತಿತ್ತು. ಹೀಗಾಗಿ ಜುಲೈ 15ರಂದು ಬಾಗಲಕೋಟೆಯ ಲಾಡ್ಜ್ ಮೇಲೆ ದಾಳಿ ನಡೆಸಿದ್ದ ಮಂಗಳೂರು ಸಿಸಿಬಿ ಪೊಲೀಸರು, ಅಲ್ಲಿ ಮೂವರನ್ನು ಬಂಧಿಸಿ ಐದು ಕೋಟಿ ಮೌಲ್ಯದ ಐದು ಕೆಜಿ ಡ್ರಗ್ಸ್ ವಶ ಪಡಿಸಿಕೊಂಡಿದ್ದರು. ಈ ವೇಳೆ ಬೆಳ್ತಂಗಡಿಯ ಮಹಮ್ಮದ್ ಅಲ್ಫಾಜ್, ಮಹಮ್ಮದ್ ಮುಸ್ತಾಫಾ ಅರೆಸ್ಟ್ ಆಗಿದ್ದರು. ಬಂಧಿತ ಮೂವರು ಲೋಕಲ್ ಪೆಡ್ಲರ್ ಜಲೀಲ್ ಬಾಬಾಗೆ ಡ್ರಗ್ಸ್ ಒದಗಿಸುತ್ತಿದ್ದ ಬಗ್ಗೆ ಸ್ಪೋಟಕ ಮಾಹಿತಿ ತಖೆ ವೇಳೆ ಲಭ್ಯವಾಗಿದೆ. ಈತನ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.
ಬೆಳ್ತಂಗಡಿ: ಬುಧವಾರ ಸಂಜೆ ಉದ್ಯೋಗಕ್ಕಾಗಿ ದುಬೈಗೆ ಹೋಗಲು ಸಿದ್ಧನಾಗಿದ್ದ 21 ವರ್ಷದ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಆತನನ್ನು ಬಂಧಿಸಿ 15.41 ಲಕ್ಷ ರೂ. ಮೌಲ್ಯದ ಎಂಡಿಎಂಎ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕುವೆಟ್ಟು ಕುವೆಟ್ಟು ಗ್ರಾಮದ ಸುಣ್ಣತ್ ಕೆರೆ ನಿವಾಸಿ ತ್ವಲಹ್ @ ಅನ್ಸಾರ್ (21) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸಬ್ ಇನ್ಸ್‌ಪೆಕ್ಟರ್ ಆನಂದ್ ಎಂ ಮತ್ತು ಅವರ ತಂಡ ಜುಲೈ 29 ರಂದು ರಾತ್ರಿ 8 ಗಂಟೆ ಸುಮಾರಿಗೆ ದಿನನಿತ್ಯದ ಗಸ್ತು ತಿರುಗುತ್ತಿದ್ದಾಗ, ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಖಾಸಗಿ ಕಟ್ಟಡದ ಮುಂದೆ ನಿಲ್ಲಿಸಿದ್ದ ಆಟೋರಿಕ್ಷಾ (ಕೆಎ -18-ಎ -7203) ಬಳಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಗಮನಿಸಿದ್ದಾರೆ. ಪೊಲೀಸ್ ವಾಹನವನ್ನು ಗಮನಿಸಿದ ಶಂಕಿತ ವ್ಯಕ್ತಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಆದರೆ ಪೊಲೀಸರು ಆತನನ್ನು ತಡೆದು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ಸಮಯದಲ್ಲಿ, ಕುವೆಟ್ಟು ಗ್ರಾಮದ ಆಲಾದಿಕೊಟ್ಟಿಗೆ ನಿವಾಸಿ ಹಮ್ಜತ್ ಕರಾರ್(31) ಎಂಬಾತನಿಗೆ 20 ಸಾವಿರ ಮುಂಗಡ…










