Author: main-admin

ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್‌ (92) ಅವರು ತಮ್ಮ ಉಪ್ಪಿನಂಗಡಿಯ ತಮ್ಮ ಸ್ವಗೃಹದಲ್ಲಿ ಇಂದು (ಜು.19) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಹಿರಿಯ ಪುತ್ರ, ಯಕ್ಷಗಾನ ಕಲಾವಿದ ಅಂಬಾಪ್ರಸಾದ್‌ ಪಾತಾಳ, ಕಿರಿಯ ಪುತ್ರ ಉಪ್ಪನಂಗಡಿ ಸಿ.ಎ.ಬ್ಯಾಂಕ್‌ ನಿರ್ದೇಶಕ ಶ್ರೀರಾಮ ಭಟ್‌ ಪಾತಾಳ ಸಹಿತ ನಾಲ್ವರು ಪುತ್ರಿಯರು ಹಾಗೂ ಮೊಮ್ಮಕ್ಕಳು, ಅಪಾರ ಬಂಧುಗಳನ್ನು, ಅಭಿಮಾನಿಗಳನ್ನು ಅಗಲಿದ್ದಾರೆ. 1951 ರಲ್ಲಿ ಜೀವನೋಪಾಯಕ್ಕೆಂದು ಕಾಂಚನ ನಾಟಕ ಕಂಪನಿಯಲ್ಲಿ ಅಡುಗೆಯವರಾಗಿ ಸೇರಿ ನಂತರ ಪ್ರಧಾನ ಸ್ತ್ರೀ ವೇಷಧಾರಿಯಾಗಿ ಅವಕಾಶ ಪಡೆದು ವೈವಿಧ್ಯಮಯ ವೇಷಗಳಲ್ಲಿ ಮೆರೆಯ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟರು

Read More

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿಯೂ ಅರ್ಹತೆ ಪಡೆದಿದ್ದರು. ಆನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು. ನ್ಯಾ.ವಿಭೂ ಭಕ್ರು ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್‌, ದೆಹಲಿ ಹೈಕೋರ್ಟ್‌, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ…

Read More

ಧರ್ಮಸ್ಥಳದಲ್ಲಿ ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಮತ್ತು ಹೆಗ್ಗಡೆಯವರ ಬಗ್ಗೆ ಮಾನಹಾನಿ ವರದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಜಯ್ ಕುಮಾರ್‌ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ ಶೀಕ್ಷೇತ್ರ ಧರ್ಮಸ್ಥಳ ದೇವಾಲಯ ಸುತ್ತಮುತ್ತ ಅಪರಿಚಿತ ಮೃತ ದೇಹಗಳನ್ನು ಹೂತುಹಾಕಲಾಗಿದೆ ಎನ್ನಲಾದ ವಿಚಾರ ಸಂಬಂಧ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವಿರೇಂದ್ರ ಹೆಗ್ಗಡೆ ಮತ್ತು ಅವರ ಸಹೋದರ ಕುಟುಂಬದವರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ನಿರ್ಬಂಧಕಾಜ್ಞೆ ಹೊರಡಿಸಿದೆ. ಪ್ರಕರಣದ ಕುರಿತು ತಮ್ಮ ಕುಟುಂಬದವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಮತ್ತು ಅವಹೇಳನಕಾರಿ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವ‌ರ್, ಯೂಟ್ಯೂಬರ್ ಎಂ.ಡಿ. ಸಮೀರ್ ಮತ್ತು ಮಾಧ್ಯಮದವರ ನಿರ್ದೇಶಿಸಿ ನಿರ್ಬಂಧಕಾಜ್ಞೆ ಹೊರಡಿಸಬೇಕು ಎಂದು ಕೋರಿ ಡಿ.ಹರ್ಷೇಂದ್ರ ಕುಮಾರ್ ಅಸಲು ದಾವೆ ದಾಖಲಿಸಿದ್ದಾರೆ.…

Read More

ಕುಂದಾಪುರ : ಇಲ್ಲಿನ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಕುಂದಾಪುರ ಪೊಲೀಸರು ಜುಲೈ 18ರಂದು ಬಂಧಿಸಿದ್ದಾರೆ. ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಬಂಧಿತ ಆರೋಪಿಗಳು. ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ ಸರಿಗೆ, 34 ಕೆಜಿ ತೂಕದ ತಾಮ್ರದ ಸರಿಗೆ, 64 ಕೆಜಿ ತೂಕದ ಹಿತ್ತಾಳೆಯ ವಸ್ತು, 20 ಕೆಜಿ ತೂಕದ ಅಲ್ಯೂಮಿನಿಯಂ ವಸ್ತು, ಫ್ರಿಡ್ಜ್ ಕಂಪ್ರಸರ್, 45 ಹಳೆಯ ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಕುಂದಾಪುರ ನಗರ ಠಾಣಾ ಎಸ್‌ಐಗಳಾದ ನಂಜಾ ನಾಯ್ಕ, ಪುಷ್ಪಾ, ಸಂಚಾರ ಎಸ್‌ಐ ನೂತನ್, ಸಿಬ್ಬಂದಿಗಳಾದ ಮೋಹನ್, ಸಂತೋಷ್, ಪ್ರಿನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್, ಸತೀಶ್ ಭಾಗವಹಿಸಿದ್ದರು.

Read More

ಚಿಕ್ಕಮಗಳೂರು : ನೇಣು ಬಿಗಿದುಕೊಂಡು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿ ನಡೆದಿದೆ. ಕಾಂತರಾಜ್ (45) ಮೃತ ದುರ್ದೈವಿ. ಕಾಂತರಾಜ್ ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕಾಂತರಾಜ್ ಅಪಘಾತದಲ್ಲಿ ಬಲಗಾಲು ಕಳೆದುಕೊಂಡಿದ್ದರು. ಕೃತಕ ಕಾಲು ಜೋಡಣೆ ಮೂಲಕ ಕಾಂತರಾಜ್ ಕೆಲಸ ಮಾಡುತ್ತಿದ್ದರು. ಅಪಘಾತದಲ್ಲಿ ಕಾಲು ಕಳೆದುಕೊಂಡಾಗಿನಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ. ಈ ಹಿಂದೆ ಎ.ಎನ್.ಎಫ್. ಹಾಗೂ ಕಳಸ ಠಾಣೆಯಲ್ಲಿ ಕಾಂತರಾಜ್ ಕರ್ತವ್ಯ ನಿರ್ವಹಿಸಿದ್ದರು. ಇಂದು ಮನೆಯಲ್ಲಿ ಯಾರು ಇಲ್ಲದೆ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಂತರಾಜ್ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯವರಾಗಿದ್ದಾರೆ.

Read More

ಮಂಗಳೂರು: ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಶ್ರೀಮಂತರು ಮತ್ತು ಬೇರೆ ಬೇರೆ ನಗರಗಳ ಉದ್ಯಮಿಗಳನ್ನೇ ಗುರಿಯಾಗಿಸಿ ದೇಶಾದ್ಯಂತ ನೆಟ್ವರ್ಕ್ ಇಟ್ಟುಕೊಂಡು ಭಾರೀ ವಂಚನಾ ಜಾಲ ಎಸಗುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಹೆಚ್ಚುವರಿಯಾಗಿ, ಚಿತ್ರದುರ್ಗ ಮತ್ತು ಮುಂಬೈನಲ್ಲಿಯೂ ಸಹ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಬಂಧಿತ ಆರೋಪಿಯನ್ನು ಬೊಲ್ಲಗುಡ್ಡ, ಬಜಾಲ್ ಕಂಕನಾಡಿ ಮಂಗಳೂರು ನಗರ ನಿವಾಸಿ ರೋಶನ್ ಸಲ್ಡಾನ(43) ಎಂದು ಗುರುತಿಸಲಾಗಿದೆ. ಆರೋಪಿ ರೋಶನ್ ಸಲ್ಡಾನ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 22/2025 ಕಲಂ: 316(2), 316(5) 318(2), 318(3) ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆ ಹಾಗೂ ಅಪರಾಧ ಕ್ರಮಾಂಕ:30/2025 ಕಲಂ:316(2), 316(5), 318(2), 318 (3), 61(2) ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆಯಂತೆ ವಂಚನೆ ಪ್ರಕರಣಗಳು ದಾಖಲಾಗಿರುತ್ತದೆ. ಚಿತ್ರದುರ್ಗ, ಮುಂಬೈ ಸೇರಿದಂತೆ ವಿವಿಧೆಡೆ ವಂಚನೆ ಪ್ರಕರಣಗಳು ದಾಖಲಾಗಿರುತ್ತವೆ. ಪ್ರಕರಣದಲ್ಲಿ ಆರೋಪಿಯು ದಿನಾಂಕ: 17-07-2025 ರಂದು ಆತನ ಮನೆಯಲ್ಲಿ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿಕೊಂಡು ಆರೋಪಿಯ…

Read More

ಜನಸ್ನೇಹಿ ಪೊಲೀಸ್ ವ್ಯವಸ್ಥೆ ಭಾಗವಾಗಿ ‘ಮನೆ ಮನೆಗೆ ಪೊಲೀಸ್’ ಎಂಬ ವಿನೂತನ ಕಾರ್ಯ ಕ್ರಮವನ್ನು ರಾಜ್ಯ ಗೃಹ ಇಲಾಖೆ ಹಮ್ಮಿಕೊಂಡಿದೆ. ಬೆಳಗ್ಗೆ 10.30ಕ್ಕೆ ಗೋವಿಂದರಾಜನಗರ ವಾರ್ಡ್ನಲ್ಲಿರುವ ಎಂ.ಸಿ. ಲೇಔಟ್ನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಜಿ-ಸೀಮಂತ್ಕುಮಾರ್ ಸಿಂಗ್ ವಿಧ್ಯುಕ್ತ ವಾಗಿ ಚಾಲನೆ ನೀಡಿದ್ದಾರೆ. ‘ಮನೆ ಮನೆಗೆ ಪೊಲೀಸ್’ ಕಾರ್ಯ ಕ್ರಮದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಮುಕ್ತವಾಗಿ ಮಹಿಳೆಯರ ಸಮಸ್ಯೆಯನ್ನು ಬೀಟ್ಗಳಲ್ಲಿಯೇ ಆಲಿಸಲಿದ್ದಾರೆ. ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಖಾತ್ರಿಪಡಿಸಿ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದು, ಕೌಟುಂಬಿಕ ದೌರ್ಜನ್ಯ ವಿರುದ್ಧ ಜಾಗೃತಿ ಮತ್ತು ಕಾನೂನಿನ ಅರಿವು ಮೂಡಿಸಲಿದ್ದಾರೆ. ಈಗಾಗಲೇಪ್ರತಿಯೊಂದು ಠಾಣಾ ವ್ಯಾಪ್ತಿಗಳಲ್ಲಿ ಸಬ್-ಬೀಟ್ಗಳನ್ನಾಗಿ ವಿಂಗಡಿಸಿ ಸಿಬ್ಬಂದಿ ನೇಮಿಸಲಾಗಿದೆ. ಇನ್ನು ಮುಂದೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆ ಮನೆಗೂ ಭೇಟಿ ನೀಡಿ ಸಾರ್ವಜನಿಕರ ದೂರುಗಳನ್ನು ಆಲಿಸಿ, ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನಿಸಲಿದ್ದಾರೆ.

Read More

ಮಂಗಳೂರು: ಹೆಬ್ಬಾವು ಮಾರಾಟ ಜಾಲವನ್ನು ಭೇದಿಸಿದ ಪೊಲೀಸರು ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಡಗ ಉಳಿಚ್ಚಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ (18), ಸ್ಟೇಟ್‌ ಬ್ಯಾಂಕ್ ಬಳಿಯ ನಾಕುಪ್ರಾಣಿ ಅಂಗಡಿ ಮಾಲೀಕ ಉಳ್ಳಾಲ ಮುನ್ನೂರು ಗ್ರಾಮದ ಇಬ್ರಾಹೀಂ ಶಕೀಲ್ ಇಸ್ಮಾಯಿಲ್ (35), ಅಂಗಡಿ ಸಿಬಂದಿ ಉಳ್ಳಾಲ ಹರೇಕಳ ಗ್ರಾಸುವ ಶುಹಮ್ಮದ್ ಮುಸ್ತಥಾ (22), ಮಂಗಳೂರಿನ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ ಬಂಧಿತರು. ಹೆಬ್ಬಾವು ಮಾರಾಟ ಜಾಲದ ಮಾಹಿತಿ ತಿಳಿದ ಮಂಗಳೂರು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾಯಾಚರಣೆ ನಡೆಸಿದ್ದಾರೆ. ಮೊದಲಿಗೆ ಇಬ್ಬರು ಹೆಬ್ಬಾವು ಖರೀದಿಸುವ ನೆಪದಲ್ಲಿ ವಿಹಾಲ್‌ನನ್ನು ಸಂಪರ್ಕಿಸಿದ್ದಾರೆ. ನಗರದ ಕದ್ರಿಯ ಅಪ್ಪಚ್ಚ ಕಟ್ಟೆಯ ಬಳಿ ಈ ಬಗ್ಗೆ ಆತನೊಂದಿಗೆ ಮಾತುಕತೆ ನಡೆಸಿದ್ದಾರೆ.ಆತ ಹಾವು ತೋರಿಸಿ 45 ಸಾವಿರಕ್ಕೆ ರೇಟ್ ಫಿಕ್ಸ್ ಮಾಡಿದ್ದಾನೆ.ಈ ವೇಳೆ ಆತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರಿಂದ ಭೀತನಾದ ಆತ ಹಾವು ನನ್ನದಲ್ಲ…

Read More

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿರುವುದು ವರದಿಯಾಗಿದೆ. ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ(45) ಬಂಧಿತ ಆರೋಪಿ. ಈತನನ್ನು ಗುರುವಾರ ರಾತ್ರಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ ಎಂದು ತಿಳಿದುಬಂದಿದೆ. ರೋಹನ್ ಸಲ್ಡಾನ ಉದ್ಯಮಿಯೆಂದು ಹೇಳಿಕೊಂಡು ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿ ಜಾಗದ ವ್ಯವಹಾರದ ಜೊತೆಗೆ ಸಾಲ ನೀಡುವುದಾಗಿ ಹೇಳಿ ನಂಬಿಸುತ್ತಿದ್ದ. ಈ ರೀತಿಯಾಗಿ ಆರೋಪಿ ಕೇವಲ 3 ತಿಂಗಳಲ್ಲೇ 45 ಕೋಟಿ ರೂ. ವ್ಯವಹಾರ ಮಾಡಿರುವುದು ಪತ್ತೆಯಾಗಿದೆ. ಕಳೆದ ಅನೇಕ ವರ್ಷಗಳಿಂದ 200 ಕೋಟಿ ರೂ.ಗೂ ಅಧಿಕ ವಂಚನೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉದ್ಯಮಿ ಹಾಗೂ ಶ್ರೀಮಂತ ವ್ಯಕ್ತಿಗಳನ್ನು ತನ್ನ ಮೋಸದ ಬಲೆಗೆ ಬೀಳಿಸುತ್ತಿದ್ದ ಆರೋಪಿ ತನ್ನ ಜಪ್ಪಿನಮೊಗರುವಿನ ಐಷಾರಾಮಿ ಬಂಗಲೆಗೆ…

Read More

ಮಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದ ನೂತನ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಎನ್ ಎನ್ ಎಫ್ ಕಾರ್ಕಳ ಎಸ್ಪಿ ಜಿತೇಂದ್ರ ಕುಮಾರ್ ದಯಾಮಯ ಅವರ ನೇಮಕವನ್ನು ರಾಜ್ಯ ಸರಕಾರ ಗುರುವಾರ ರದ್ದುಗೊಳಿಸಿದೆ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದ ನೂತನ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಉಡುಪಿ ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಮಿಥುನ್ ಎಚ್ ಎನ್ ಅವರನ್ನು ಹೊಸದಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.

Read More