ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಭರಮನಿ ಅವರಿಗೆ ಗದರಿ ಕೈ ಎತ್ತಿ ಹೊಡೆಯಲು ಮುಂದಾಗಿದ್ದರು. ಅದಾದ ಬಳಿಕ ಸಿಎಂ ನನ್ನು ಅವಮಾನಿಸಿದ್ದಾರೆ ಎಂದು ಬರಮನಿ ರಾಜೀನಾಮೆಗೆ ಮುಂದಾಗಿದ್ದರು ಆದರೆ ಅವರು ಮತ್ತೆ ತಮ್ಮ ನಿರ್ಧಾರ ಬದಲಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದೀಗ ರಾಜ್ಯ ಸರ್ಕಾರ ಎಎಸ್‌ಪಿ ನಾರಾಯಣ ಭರಮನಿಗೆ ಮುಂಬಡ್ತಿ ನೀಡಿದ್ದು ಧಾರವಾಡ ಎಎಸ್ಪಿಯಾಗಿದ್ದ ನಾರಾಯಣ ಬರಮನಿ ಅವರಿಗೆ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿ ಹುದ್ದೆ ನೀಡಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಸಿಎಂ ಸಿದ್ದರಾಮಯ್ಯ ನಾರಾಯಣ ಭರಮನಿ ಮೇಲೆ ಕೈ ಎತ್ತಲು ಮುಂದಾಗಿದ್ದರು. ಇದರಿಂದ ಮನನೊಂದು ಭರಮನಿ ರಾಜೀನಾಮೆಗೆ ಮುಂದಾಗಿದ್ದರು. ಬಳಿಕ ಹಿರಿಯ ಅಧಿಕಾರಿಗಳ ಮನವೊಲಿಕೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮನವೊಲಿಕೆಯಿಂದ ಮತ್ತೆ ಕರ್ತವಕ್ಕೆ ಹಾಜರಾಗಿದ್ದರು.ಇದರ ಬೆನ್ನಲ್ಲೇ ಇದೀಗ ನಾರಾಯಣ ಬರಮನಿ ಅವರಿಗೆ ಮುಂಬಡ್ತಿ ನೀಡಿರುವು…
Author: main-admin
ಮಣಿಪಾಲ : ಈಶ್ವರನಗರದ ಅಪಾರ್ಟ್‌ಮೆಂಟ್ ಒಂದರ ರೂಮ್ ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಒರ್ವ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.ಬಂಧಿತ ಆರೋಪಿ ಹೊನ್ನಾವರದ ಗಣೇಶ್ ಗಣಪ ನಾಯ್ಕ್ ಎಂದು ಗುರುತಿಸಲಾಗಿದೆ.ಮತ್ತೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.ಮಣಿಪಾಲ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಪ್ರಕರಣ ಸಾರಾಂಶ : ದಿನಾಂಕ: 16/07/2025 ರಂದು 17:00 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರವರಿಗೆ ಹೆರ್ಗ ಗ್ರಾಮದ ಈಶ್ವರನಗರ 20 ನೇ ಕ್ರಾಸ್ ನ ಬಳಿ ಇರುವ ಮಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟ್ ನ ಮೊದಲನೇ ಮಹಡಿಯಲ್ಲಿನ ರೂಮ್ ನಂಬ್ರ: 103 ಮನೆಯಲ್ಲಿ ಮಹಿಳೆಯನ್ನು ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಬಂದಿದ್ದು, ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ, ನೊಂದ ಮಹಿಳೆಯನ್ನು ರಕ್ಷಿಸಿ ಆರೋಪಿ ಗಣೇಶ್ ಗಣಪ ನಾಯ್ಕ್ ಪ್ರಾಯ 38 ವರ್ಷ ತಂದೆ ದಿ ಗಣಪ ನಾಯ್ಕ್ ವಾಸ…
ಬೆಳ್ತಂಗಡಿ: ಪತಿ-ಪತ್ನಿಯರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಪತ್ನಿಯನ್ನು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ಪತಿ ಪತ್ನಿ ನಡುವೆ ನಡೆದ ಜಗಳದಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕರು ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಪತ್ನಿ ಜತೀನ್ ಳನ್ನು ಚಾಕುವಿನಿಂದ ಇರಿದು ಪತಿ ರಫೀಕ್ ಭೀಕರವಾಗಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಧಾರಾಕಾರವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕ್ಯೂಟ್ ಹೌಸ್ – ಬಿಜೈ ಬಳಿ ತಡರಾತ್ರಿ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆಗೆ ತೊಂದರೆ ಆಗಿದೆ. ದ.ಕ.ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಬುಧವಾರ ರಾತ್ರಿ ಬಿರುಸು ಪಡೆದ ಮಳೆ ಈಗಲೂ ಮುಂದುವರಿದಿದೆ. ಕೆಲವಡೆ ಮನೆಗಳಿಗೂ ಹಾನಿಯಾಗಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಬುಧವಾರ ರಾತ್ರಿ ಬಿಜೈ ಬಟ್ಟಗುಡ್ಡ, ಆರ್ಯಸಮಾಜ ರಸ್ತೆ, ಪಂಪ್‌ವೆಲ್ , ಮಾಲೆಮಾರ್, ಕಾವೂರು ಉಲ್ಲಾಸ ನಗರ, ಕೊಟ್ಟಾರ ಚೌಕಿ ಮತ್ತಿತರ ಕಡೆಗಳಲ್ಲಾದ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬೆಂಗಳೂರು : ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ. ಸಮಾಜದ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ, ಮಾನ, ಪ್ರಾಣಗಳನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಯಾವುದೇ ಪ್ರದೇಶ ಸುರಕ್ಷಿತವಾಗಿದ್ದಲ್ಲಿ, ಅಲ್ಲಿನ ಪೊಲೀಸರ ಶ್ರಮವಿರುತ್ತದೆ. ರಾಜ್ಯದಲ್ಲಿ ಏಳು ಕೋಟಿ ಜನರ ರಕ್ಷಣೆಗೆ ಪೊಲೀಸರು ಬದ್ಧತೆ ತೋರುತ್ತಾರೆ. ರಾಜ್ಯದಲ್ಲಿ 2023ಕ್ಕೆ ಹೋಲಿಸದರೆ 2024 ರಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಹತ್ತಿರ ನಿರ್ಮಿಸಿರುವ ಕೆಎಸ್‌ಆರ್‌ಪಿ ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಅಭಿವೃದ್ಧಿಯು , ಪೊಲೀಸರ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿರುತ್ತದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ನೇರ ಸಂಬಂಧವಿದೆ. ಈ ದಿಸೆಯಲ್ಲಿ ಪೊಲೀಸರು ಶ್ರಮಿಸುತ್ತಿರುವುದು ಅಭಿನಂದನೀಯ.ರಾಜ್ಯದಲ್ಲಿ ಅಪರಾಧಗಳ ಸಂಖ್ಯೆಯನ್ನು ಮತ್ತಷ್ಟು ಕಡಿಮೆಗೊಳಿಸುವತ್ತ ಪೊಲೀಸರು ಹೆಚ್ಚಿನ ಗಮನ ನೀಡಬೇಕು. ಸಮಾಜದಲ್ಲಿ ಅಶಾಂತಿ, ಹಿಂಸೆ, ಕ್ರೌರ್ಯ, ದ್ವೇಷಪೂರಿತ ಭಾಷಣದಿಂದ ಪ್ರಚೋದನೆಗಳು ಹೆಚ್ಚುತ್ತಿರುವುದನ್ನು ಕಾಣಲಾಗುತ್ತಿದೆ. ಸಮಾಜದಲ್ಲಿ…
ಉಳ್ಳಾಲ: ಮೊಂಟೆಪದವು ಸಮೀಪ ಒಂಟಿಯಾಗಿ ವಾಸವಿದ್ದ ಮಹಿಳೆಯನ್ನು ಹತ್ಯೆಗೈದು ಮೃತದೇಹವನ್ನು ಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಕೃತ್ಯ ನಡೆದ ಎರಡು ತಿಂಗಳ ಬಳಿಕ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಬಿಹಾರ ಮೂಲದ ವ್ಯಕ್ತಿಯಾಗಿದ್ದು, ಸ್ಥಳೀಯವಾಗಿ ಗಾರೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೊಂಟೆಪದವು ಸಮೀಪ ಮೇ 29ರಂದು ಬಾವಿಯೊಂದರಲ್ಲಿ ಸೊಂಟಕ್ಕೆ ಕಲ್ಲುಗಳನ್ನು ಕಟ್ಟಿದ ಸ್ಥಿತಿಯಲ್ಲಿ ಸಕಲೇಶಪುರ ಮೂಲದ ಸುಂದರಿ(36) ಎಂಬವರ ಮೃತದೇಹ ಪತ್ತೆಯಾಗಿತ್ತು. ಅತ್ಯಾಚಾರ ಎಸಗಿ ಹತ್ಯೆ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಮೊಂಟೆಪದವು ಸಮೀಪ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ ಸುಂದರಿ ಸುಮಾರು ಒಂದೂವರೆ ವರ್ಷಗಳಿಂದ ಮನೆಮನೆಗಳಿಗೆ ತೆರಳಿ ಕೆಲಸ ನಿರ್ವಹಿಸುತ್ತಿದ್ದರು. ಅವರ ಹತ್ಯೆ ಪ್ರಕರಣ ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿತ್ತು. ತನಿಖೆ ತೀವ್ರಗೊಳಿಸಿದ್ದ ಕೊಣಾಜೆ ಪೊಲೀಸರು ಕೃತ್ಯ ನಡೆದ ಎರಡು ತಿಂಗಳ ಬಳಿಕ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು: ತನ್ನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬರು ಅತ್ಯಾಚಾರ ಎಸಗಿದ್ದಾಗಿ ಮಹಿಳೆಯೊಬ್ಬರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಕಾವೂರು ಪೊಲೀಸು ಠಾಣೆಯಲ್ಲಿ ಕಾನ್ಸ್‌ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರ ನಾಯಕ್ ಎಂದು ಗುರುತಿಸಲಾಗಿದೆ. ಕಂಕನಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚಂದ್ರ ನಾಯಕ್ ಅವರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾಗಿ ಮಹಿಳೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ದೂರು ಸಲ್ಲಿಸಿದ್ದರು. ಆ ದೂರಿನನ್ವಯ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.
ಮಂಗಳೂರು : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣಕ್ಕೆ ಮರು ಜೀವ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಕೆಯ ತಾಯಿ ಇಂದು ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿಯಾದರು. ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು. ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದವರು ನಿಗೂಢವಾಗಿ ನಾಪತ್ತೆಯಾಗಿದ್ದರು. ಧರ್ಮಸ್ಥಳದಲ್ಲಿ ಒತ್ತಡದಿಂದ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದ. ಪತ್ರ ಬರೆದ ಕೆಲವೇ ದಿನಗಳ ಬಳಿಕ ಅದೇ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನೂ ನೀಡಿದ್ದ. ಬರುವಾಗ ತನ್ನ ಜೊತೆ ಅಸ್ತಿಪಂಜರವೊಂದನ್ನು ತಂದಿದ್ದು, ಅದನ್ನು ಪೊಲೀಸರು ವಿಧಿ ವಿಜ್ಞಾನ ತನಿಖೆಗೆ ಒಳಪಡಿಸಿದ್ದಾರೆ. ಧರ್ಮಸ್ಥಳದ…
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯನ್ನು ಸುರತ್ಕಲ್ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ. ಬಂಧಿತ ಆರೋಪಿಯನ್ನು ಉಡುಪಿ ಮಂಚಿ ನಿವಾಸಿ ರಾಜೇಶ್ ನಾಯ್ಕ್ @ ರಾಜ್ @ ರಾಜು ಪಮಾಡಿ (48) ಎಂದು ಗುರುತಿಸಲಾಗಿದೆ ಮಂಗಳೂರು ನಗರ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಧಾರವಾಡ ಹಾಗೂ ವಿವಿಧ ಕಡೆಗಳಲ್ಲಿ ಕೊಲೆ ಯತ್ನ, ಕಳವು, ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ರಾಜೇಶ್ ನಾಯ್ಕ್ @ ರಾಜ್ @ ರಾಜು ಪಮಾಡಿ ಎಂಬಾತನನ್ನು ಜುಲೈ 14 ರಂದು ಧಾರವಾಡ ಜಿಲ್ಲೆಯ ವಿದ್ಯಾಗಿರಿ ಎಂಬಲ್ಲಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ. ಈತನ ವಿರುದ್ದ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 4 ಕಳವು ಪ್ರಕರಣ, ಮುಲ್ಕಿ ಪೊಲೀಸ್ ಠಾಣೆಯಲ್ಲಿ 4 ಕಳವು ಪ್ರಕರಣ, ಜೈಲ್ ನಲ್ಲಿ…
ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ. ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ. ಬಳಿಕ ವಾಟ್ಸಾಪ್ ನಲ್ಲಿ ಚಾಟ್ ಮಾಡುತ್ತಿದ್ದ, ವಿದ್ಯಾರ್ಥಿನಿ ನಂಬಿ ಆಗಾಗ ಉಪನ್ಯಾಸಕನಿಂದ ನೋಟ್ಸ್ ಪಡೆಯುತ್ತಿದ್ದ. ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ. ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಮಯದಲ್ಲಿ ಆಕೆ ಪ್ರತಿರೋಧ…










