ಮಂಗಳೂರು: ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್)ನಿಂದ ನೆಲ್ಲಿದಡಿ ಗುತ್ತಿನ ಪ್ರಸಿದ್ಧ ಕಾಂತೇರಿ ಜುಮಾದಿ ದೈವದ ಆರಾಧನೆಗೆ ತೊಡಕುಂಟಾಗಿರುವ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸಲು ಜಿಲ್ಲಾಡಳಿತ ಮುಂದಾಗಿದ್ದು, ಸದ್ಯಕ್ಕೆ ಅಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ನೆಲ್ಲಿದಡಿಯಲ್ಲಿ ಈವರೆಗೂ ದೈವಾರಾಧನೆ ನಿಂತಿಲ್ಲ. ಲಿಖಿತವಾಗಿ ಅನುಮತಿ ಪಡೆಯದಿದ್ದರೆ ಅವಕಾಶ ಇಲ್ಲ ಎಂದಿದ್ದರಿಂದ ಗೊಂದಲಕ್ಕೆ ಕಾರಣವಾಗಿದೆ. ಶಾಶ್ವತ ಪರಿಹಾರ ಸಿಗುವವರೆಗೂ ಯಥಾಸ್ಥಿತಿ ಕಾಪಾಡಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.ನಿನ್ನೆ ಎಂಎಸ್‌ಇಝಡ್ ಅಧಿಕಾರಿಗಳು ಹಾಗೂ ಕುಟುಂಬಸ್ಥರ ಸಭೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಧ್ಯಸ್ಥಿಕೆಯಲ್ಲಿ ಸಭೆ ನಡೆದು ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗಿದೆ. ಎಂಎಸ್‌ಇಝಡ್ ಅಧಿಕಾರಿಗಳು ಅನುಮತಿ ಇಲ್ಲ ಎಂದು ಬರೆದಿದ್ದಾರೆಯೇ ಹೊರತು ದೈವಾರಾಧನೆ ನಿಲ್ಲಿಸಬೇಕೆಂದು ಹೇಳಿಲ್ಲ. ಕಳೆದ ವರ್ಷವೂ ದೊಡ್ಡಮಟ್ಟದ ಬಂಡಿ ಉತ್ಸವ ಇಲ್ಲಿ ನಡೆದಿದೆ. ಪ್ರತ್ಯೇಕ ರಸ್ತೆ ನಿರ್ಮಾಣಕ್ಕೆ ಕಾನೂನಾತ್ಮವಾಗಿ ಸಾಧ್ಯತೆ ಬಗ್ಗೆ ಪರಿಶೀಲನೆ ಮಾಡಲು ಸೂಚಿಸಲಾಗಿದೆ ಎಂದು ಮುಲ್ಲೈ ಮುಗಿಲನ್ ಹೇಳಿದ್ದಾರೆ. ಎಂಎಸ್‌ಇಝಡ್…
Author: main-admin
ಕಾರ್ಕಳ: ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಟೋರಿಯಸ್ ದನಕಳ್ಳನನ್ನು ಬಂಧಿಸುವಲ್ಲಿ ಕಾರ್ಕಳ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್ ಯೂನಸ್ (30) ಎಂದು ಗುರುತಿಸಲಾಗಿದೆ. ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ ಮಾತ್ರವಲ್ಲದೇ ಚಿಕ್ಕಮಗಳೂರು, ಮೂಡುಗೆರೆ, ಆಲ್ದೂರು ಠಾಣೆಗಳಲ್ಲೂ ಪ್ರಕರಣ ದಾಖಲಾಗಿದ್ದವು. ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ಈತ ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.
ಮಂಗಳೂರು: ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳೂರಿನ ಕುದ್ರೋಳಿ ಅಳಕೆಯಲ್ಲಿ ಸಂಭವಿಸಿದೆ.ಕಟ್ಟಡದ ಎರಡನೇ ಮಹಡಿಯಲ್ಲಿರುವ ಹೆಲ್ತ್ ಕೇರ್ ಸರ್ಜಿಕಲ್ ಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಸಂಸ್ಥೆಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪರಿಣಾಮ ಕಟ್ಟಡದ ಹೊರ ಭಾಗದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳ ದೌಡಾಯಿಸಿದ್ದು ಮುಂಜಾಗ್ರತಾ ಕ್ರಮವಾಗಿ ಕಟ್ಟಡದಲ್ಲಿರುವ ಇತರ ಅಂಗಡಿಗಳಲ್ಲಿದ್ದ ಜನರನ್ನು ತೆರವು ಮಾಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಮಂಗಳೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇದೀಗ ಮತ್ತೆ ಗುಡುವನ್ನು ವಿಸ್ತರಣೆ ಮಾಡಲಾಗಿದೆ. ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ. ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ…
CISF ಮಹಿಳಾ ಹೆಡ್ ಕಾನ್‌ಸ್ಟೆಬಲ್ ಓರ್ವರು ಶೌಚಾಲಯದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಮೃತರನ್ನು ಕಿರಣ್ ಎಂದು ವರದಿಯಿಂದ ತಿಳಿದು ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಬೆಳಿಗ್ಗೆ 8:44 ರ ಸುಮಾರಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ತಮ್ಮ ಸೇವಾ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದರು. ವಿಧಿವಿಜ್ಞಾನ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು ಎಂದು ವರದಿಯಾಗಿದೆ.ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲಿಸರು ಆತನನ್ನು ಕರೆತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂ ಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾ ಡ್, ಡ್ರೋ ನ್ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು. ಈತ ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ ಸ್ಥಳದ ಸುತ್ತಲಿನ ಸ್ಥಳಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಕೂಂಬಿಂಗ್ ಕಾರ್ಯ ಆರಂಭವಾಗಿದೆ. ಫೆ. 25 ರಂದು ಸಂಜೆ ಫರಂಗಿಪೇಟೆ ರೈಲ್ವೆ ಹಳಿಯಲ್ಲಿ ರಕ್ತದ ಕಲೆಯ ಚಪ್ಪಲಿ ಹಾಗೂ ಮೊಬೈಲ್ ಫೋನ್ ಸ್ಥಳದಲ್ಲಿ ಪತ್ತೆಯಾಗಿದ್ದು, ಅಪ್ರಾಪ್ತ ಬಾಲಕ ದಿಗಂತ್ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ. ಅ ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಕಳೆದ 12 ದಿನಗಳಿಂದ ದಿಗಂತ್ ನ ಪತ್ತೆಗಾಗಿ ಪೊಲೀಸರ ತಂಡ ವಿವಿಧ ರೀತಿಯ ಕಾರ್ಯಚರಣೆಗಳನ್ನು ನಡೆಸಿತ್ತು. ಆದರೆ ಹರಸಾಹಸ ಪಟ್ಟರೂ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದ ಈ ಪ್ರಕರಣ ಇನ್ನೂ ಕೂಡ ಪತ್ತೆ ಮಾಡುವಲ್ಲಿ ಯಶಸ್ವಿಯಾಗಲಿಲ್ಲ. ಹಾಗಾಗಿ ವಿವಿಧ ಆಯಾಮಗಳಲ್ಲಿ 40ಕ್ಕೂ ಅಧಿಕ ಪೊಲೀಸರ ತಂಡ ಕೆಲಸ ಮಾಡಿದೆಯಾದರೂ ದಿಗಂತ್ ಪತ್ತೆಯಾಗದ…
ಉಡುಪಿ: ಪಾರ್ಸೆಲ್ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ಮಣಿಪಾಲದ ಕೆಎಂಸಿಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡಿಕೊಂಡಿರುವ ಮಧುಕಿರಣ್ ಅವರ ಇನ್‌ಸ್ಟಾಗ್ರಾಂ ಖಾತೆಗೆ ಡಿಸೆಂಬರ್‌ನಲ್ಲಿ eta_wat ಎಂಬ ಇನ್‌ಸ್ಟಾಗ್ರಾಂ ಖಾತೆಯನ್ನು ಹೊಂದಿರುವ ಅಪರಿಚಿತ ವ್ಯಕ್ತಿಯಿಂದ ಸಂದೇಶ ಬಂದಿತ್ತು. ಅನಂತರ ಚಾಟ್ ಮುಖಾಂತರ ಇಬ್ಬರೂ ಪರಸ್ಪರ ಪರಿಚಯವಾಗಿತ್ತು. ಮಧುಕಿರಣ್ ಅವರು ತನ್ನ ಮನೆಯ ವಿಳಾಸವನ್ನು ಆ ವ್ಯಕ್ತಿಗೆ ನೀಡಿದ್ದು, ಸ್ವಲ್ಪ ದಿನದ ಅನಂತರ ಮಾಫು ಅಮೂಂಗ್ ಎಂಬ ವ್ಯಕ್ತಿಯು ಮೊಬೈಲ್‌ನಿಂದ ಕರೆಮಾಡಿ ನಿಮ್ಮ ಹೆಸರಿನಲ್ಲಿ ಪಾರ್ಸೆಲ್ ಬಂದಿದೆ. ಅದನ್ನು ಪಡೆಯಲು ನೀವು ಕಸ್ಟಮ್ ಕ್ಲಿಯರೆನ್ಸ್ ಮತ್ತು ಸೆಕ್ಯೂರಿಟಿ ಚಾರ್ಜಸ್‌ಗಾಗಿ Ilota P Jakha ಅವರಿಗೆ 1,30,000 ರೂ.ಹಣವನ್ನು ನೀಡಬೇಕೆಂದು ಹೇಳಿದ್ದರು. ಅದರಂತೆ ಮಧುಕಿರಣ್ ಅವರು ಜ.22ರಿಂದ 27ರವರೆಗೆ ಹಂತ-ಹಂತವಾಗಿ ಅವರ ಕೆನರಾ ಬ್ಯಾಂಕ್ ಅಕೌಂಟ್ ಹಾಗು ಎಸ್‌ಬಿಐ ಬ್ಯಾಂಕ್ ಅಕೌಂಟ್‌ನಿಂದ ಕ್ರಮವಾಗಿ 90,000 ರೂ. ಹಾಗೂ 40,000ರೂ.ಗಳನ್ನು Ilota Jakha ಅವರಿಗೆ ಗೂಗಲ್ ಪೇ ಹಾಗೂ ಫೋನ್ ಪೇ…
ಬಂಟ್ವಾಳ : ಲೈಸನ್ಸ್ ಹೊಂದಿರದ, ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ಸ್ಕೂಟರ್ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಪರಿಣಾಮ, ಆತನ ತಂದೆ 26,000 ರೂಪಾಯಿ ದಂಡ ಕಟ್ಟಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಬಂಟ್ವಾಳ ಸಂಚಾರ ಠಾಣಾ ಪೊಲೀಸರು ಎಸ್. ಐ. ಸುತೇಶ್ ನೇತೃತ್ವದಲ್ಲಿ ಅಲ್ಲಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಬಾಲಕನೋರ್ವ ಪರ್ಲಿಯಾ ಸಮೀಪ ಸ್ಕೂಟರ್ ಚಲಾಯಿಸಿಕೊಂಡು ಬರುತ್ತಿರುವುದು ಕಂಡುಬಂದಿದೆ. ಆಗ ಆತನನ್ನು ನಿಲ್ಲಿಸಿ ವಿಚಾರಿಸಿದಾಗ ಅಪ್ರಾಪ್ತ ವಯಸ್ಕನಾಗಿದ್ದು, ಲೈಸನ್ಸ್ ಇಲ್ಲದಿರುವುದು ಗೊತ್ತಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಬಳಿಕ ಬಾಲಕನ ತಂದೆ, ಸಮೀರ್ ಎಂಬವರಿಗೆ ಬಂಟ್ವಾಳ ಜೆಎಂಎಫ್ ಸಿ ಕೋರ್ಟಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ನಿಯಮ ಉಲ್ಲಂಘಿಸಿದ್ದಕ್ಕಾಗಿ 26 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಮಕ್ಕಳ ಕೈಗೆ ಸ್ಕೂಟರ್ ಕೊಟ್ಟರೆ ಫೈನ್ ಬೀಳುವುದು ಖಚಿತ ಎಂದು ರಸ್ತೆ ಸುರಕ್ಷತಾ ಸಪ್ತಾಹ ಸಹಿತ ಹಲವು ಬಾರಿ ಪೊಲೀಸರು ಎಚ್ಚರಿಕೆ ನೀಡುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ, ಶಾಲೆ, ಕಾಲೇಜುಗಳಿಗೂ ಹೋಗಿ…
ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 85 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ಹಾಗೂ 27 ಮಂದಿ ಡಿವೈಎಸ್ ಪಿ (ಸಿವಿಲ್) ವರ್ಗಾವಣೆ ಆದೇಶ ಹೊರಡಿಸಿದೆ. ಉಲ್ಲೇಖಿತ (4) ರ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್) ರವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶಿಸಲಾಗಿದೆ.










