Author: main-admin

ಕಾರ್ಕಳ: ಬೈಲೂರು ಗ್ರಾಮದ ಉಮಿಕಲ್‌ ಬೆಟ್ಟದ ಮೇಲೆ 10 ಕೋಟಿ ರೂ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗಿರುವ 35 ಅಡಿ ಎತ್ತರದ ಪರಶುರಾಮ ದೇವರ ವಿಗ್ರಹ ಕೊನೆಗೂ ನಕಲಿ ಎಂದು ಸಾಬೀತಾಗಿದ್ದು, ಈ ಕುರಿತು ಶಿಲ್ಪಿ ಮತ್ತು ಉಡುಪಿ ನಿರ್ಮಿತಿ ಕೇಂದ್ರದ ಇಬ್ಬರು ಅಧಿಕಾರಿಗಳ ಮೇಲೆ ಕಾರ್ಕಳ ತಾಲೂಕು ನ್ಯಾಯಾಲಯದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲಾಗಿದೆ. 2024 ರಲ್ಲಿ ಕೃಷ್ಣ ಶೆಟ್ಟಿ ಎಂಬುವವರು ನೀಡಿದ ದೂರಿನಂತೆ ಪ್ರಕರಣದ ತನಿಖೆ ಆಗುತ್ತಿದೆ. ಉಡುಪಿ ನಿರ್ಮಿತಿ ಕೇಂದ್ರಕ್ಕೆ ಬೆಂಗಳೂರಿನ ಕ್ರಿಶ್‌ ಆರ್ಟ್‌ ವರ್ಲ್ಡ್‌ನ ಶಿಲ್ಪಿ ಕೃಷ್ಣ ನಾಯ್ಕ್‌ ಅವರು ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪನೆ ಮಾಡಲು ಹಣ ನೀಡಿತ್ತು. ಆದರೆ ಪ್ರತಿಮೆ ಫೈಬರ್ ಅಲ್ಲ ಹಿತ್ತಾಳೆಯಿಂದ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ನಿರ್ಮಿತಿ ಯೋಜನಾ ನಿರ್ದೇಶಕ ಅರುಣ್‌ ಕುಮಾರ್‌ ಮತ್ತು ಎಂಜಿನಿಯರ್‌ ಸಚಿನ್‌ ವೈ ಕುಮಾರ್‌ ಅವರು ವಿಗ್ರಹ ನಿರ್ಮಾಣದ ವರ್ಕ್‌ ಅರ್ಡರ್‌ನಲ್ಲಿದ್ದ ಷರತ್ತುಗಳನ್ನು ಪಾಲಿಸಿರಲಿಲ್ಲ. ಕಾರ್ಕಳ ಪೊಲೀಸರು ಶಿಲ್ಪಿ ಕೃಷ್ಣ ನಾಯ್ಕ್‌, ನಿರ್ಮಿತಿ…

Read More

ಪುತ್ತೂರು: ತಲವಾರು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಒಡ್ಡಿದ ಪ್ರಕರಣವೊಂದು ಪುತ್ತೂರು ನಗರ ಬೊಳುವಾರು ಮಸೀದಿ ಬಳಿಯಲ್ಲಿ ಸೋಮವಾರ ನಡೆದಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ನಗರ ಪೊಲೀಸರು ತಲವಾರು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಕಲೇಶಪುರ ಮೂಲದ ಪ್ರಸ್ತುತ ಬಂಟ್ವಾಳದಲ್ಲಿ ವಾಸ್ತವ್ಯವಿರುವ ರಾಜು ಯಾನೆ ರಾಜೇಶ್ (45) ಎಂದು ಗುರುತಿಸಲಾಗಿದೆ. ಆರೋಪಿ ರಾಜೇಶ್ ತಲವಾರು ಹಿಡಿದುಕೊಂಡು ಮಸೀದಿ ಬಳಿಯ ಗೇಟಿನ ಹೊರ ಭಾಗದಲ್ಲಿ ನಿಂತಿದ್ದ ಎನ್ನಲಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪುತ್ತೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ, ಆತನನ್ನು ಸಾರ್ವಜನಿಕರ ಸಹಾಯದಿಂದ ಹಿಡಿದು ವಿಚಾರಣೆ ನಡೆಸಿದ್ದಾರೆ. ಆತನ ವಿರುದ್ದ ಅ.ಕ್ರ: 59/2025, ಕಲಂ: 25(1B)(b) Indian Arms Act ಹಾಗೂ 110 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಕೇರಳ ನಾಲ್ಕು ಮಂದಿಯನ್ನು ವ್ಯವಹಾರ ಉದ್ದೇಶಕ್ಕೆ ಕರೆಸಿಕೊಂಡು ಬಳಿಕ ಮಲ್ಲೂರಿಗೆ ಕರೆದೊಯ್ದ ತಂಡವೊಂದು ಹಲ್ಲೆಗೈದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಮತ್ತವರ ಸ್ನೇಹಿತರಾದ ಅರ್ಶಕ್ ಅಹ್ಮದ್, ಯಾಸರ್ ಅರಫತ್ ವಿ.ಪಿ., ಮುಹಮ್ಮದ್ ಸಾಹಿರ್ ಎಂಬವರು ದುಬೈಯಲ್ಲಿ ವ್ಯವಹಾರ ಮತ್ತು ಲ್ಯಾಂಡ್ ಪ್ರೋಕರಿಂಗ್ ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿನಿಂದ ತನ್ನೂರಾದ ಕೋಝಿಕೋಡ್‌ನಲ್ಲಿ ಪ್ರೋಕರಿಂಗ್ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನಾಫ್‌ರ ಪರಿಚಯದ ಮಂಗಳೂರಿನಲ್ಲಿರುವ ಸರ್ಫರಾಝ್ ಎಂಬಾತ ವ್ಯವಹಾರಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಮಂಗಳೂರಿಗೆ ಕರೆದಿದ್ದು ಅದರಂತೆ ಜು.11ರಂದು ಸಂಜೆ ಮನಾಥ್ ಮತ್ತಿತರರು ಪಂಪ್‌ವೆಲ್‌ಗೆ ಬಂದಿದ್ದರು. ಬಳಿಕ ಅಲ್ಲಿಂದ ಮಲ್ಲೂರಿಗೆ ಕರೆದೊಯ್ದು ನಾಲ್ಕು ಮಂದಿಯನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಸುಮಾರು 10 ಮಂದಿ ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.ಆರೋಪಿಗಳು ಯಾಸರ್ ಅರಾಫತ್‌ನ ಕಿಸೆಯಲ್ಲಿದ್ದ 90,000 ರೂ. ಕಿತ್ತರಲ್ಲದೆ, ಮುಹಮ್ಮದ್ ಸಾಹಿರ್‌ನ ಗೂಗಲ್ ಪೇಯಿಂದ 10 ಸಾವಿರ ರೂ. ವರ್ಗಾಯಿಸಿದ್ದಾರೆ. ಅಲ್ಲದೆ ಮೊಬೈಲ್‌ನ ಲಾಕ್ ತೆಗೆಸಿ ಶೇರ್‌ನ ವ್ಯವಹಾರಕ್ಕೆ…

Read More

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಮತ್ತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿಯಾಗಿ ಅಕ್ಷಯ್ ಮಚೀಂದ್ರ ಸೇರಿದಂತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಚಾರ ಅನೂಪ್ ಶೆಟ್ಟಿ ಬೆಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಶಿವಪ್ರಕಾಶ್ ದೇವರಾಜು ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿಯಾಗಿ ಜಯಪ್ರಕಾಶ್ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿಯಾಗಿ ಎಂ. ನಾರಾಯಣ್ ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿಯಾಗಿ ಅನಿತಾ ಬಿ. ಹದ್ದಣ್ಣನವರ್ ಧಾರವಾಡ ಎಸ್ಪಿಯಾಗಿ ಗುಂಜನ್ ಆರ್ಯ ಬಾಗಲಕೋಟೆ ಎಸ್ಪಿಯಾಗಿ ಸಿದ್ದಾರ್ಥ ಗೋಯಲ್ ಗದಗ ಎಸ್ಪಿಯಾಗಿ ರೋಹನ್ ಜಗದೀಶ್ ಕೆಜಿಎಫ್ ಎಸ್‌ಪಿಯಾಗಿ ಶಿವಾಂಶು ರಜಪೂತ್ ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಜಿತೇಂದ್ರ ಕುಮಾರ್. ಉತ್ತರ ಕನ್ನಡ ಎಸ್ಪಿಯಾಗಿ ಎಂ.ಎನ್. ದೀಪನ್…

Read More

ಮಣಿಪಾಲ: ಸೇನಾಧಿಕಾರಿಯೆಂದು ಕಾಲ್ ನಲ್ಲಿ ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಪದ್ಮನಾಭ ಎಂಬವರು ಮೋಸ ಹೋದ ವ್ಯಕ್ತಿಯಾಗಿದ್ದಾರೆ. ಇವರಿಗೆ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ತಾನು ಸೇನಾ ಅಧಿಕಾರಿ ಎಂದು ಪರಿಚಯಿಸಿಕೊಂಡು ತನಗೆ ಮನೆಯೊಂದು ಬಾಡಿಗೆಗೆ ಬೇಕು ಎಂದು ಕೇಳಿದ್ದಾನೆ‌. ಆಗ ಪದ್ಮನಾಭ ಎಂಬವರು ಆತನಿಗೆ 25000 ಮುಂಗಡ ಮತ್ತು 13000 ತಿಂಗಲ ಬಾಡಿಗೆ ಎಂದು ತಿಳಿಸಿದ್ದಾರೆ. ಆಗ ಆತ ಹಣ ಹಾಕಲು ಇವರಲ್ಲಿ ಗೂಗಲ್ ಪೇಯಲ್ಲಿ ಒಂದು ರೂ. ಹಾಕುವಂತೆ ಹೇಳಿದ್ದಾನೆ. ಪದ್ಮನಾಭ ಅವರು ನಂಬಿ 1ರೂ ಹಾಕಿದ್ದು ಅವನಲ್ಲಿ ಕರೆಯಲ್ಲಿ ಮಾತನಾಡುತ್ತಿದ್ದಂತೆ ಇವರ ಖಾತೆಯಿಂದ 38000 ರೂ. ಆತನ ಖಾತೆಗೆ ವರ್ಗಾವಣೆಯಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸುರತ್ಕಲ್‌: ಎಂಆರ್‌ಪಿಎಲ್‌ ಸ್ಥಾವರದಲ್ಲಿ ಶನಿವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿರುವ ಕಾರ್ಮಿಕ ದೀಪ್‌ಚಂದ್ರ ಬಾರ್ತಿಯ ಅವರ ಪತ್ನಿ ನೀಡಿದ ದೂರಿನ ಮೇರೆಗೆ ಎಂಆರ್‌ಪಿಎಲ್‌ನ 6 ಮಂದಿ ಆಧಿಕಾರಿಗಳ ವಿರುದ್ಧ ಸುರತ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನಿಲ ಸೋರಿಕೆ ಕುರಿತಂತೆ ಪರಿಶೀಲಿಸಲು ತೆರಳಿದ್ದಾಗ ದೀಪ್‌ಚಂದ್ರ ಬಾರ್ತಿಯ ಹಾಗೂ ಇಜಿಲ್‌ ಪ್ರಸಾದ್‌ ಗ್ಯಾಸ್‌ನ ಘಾಟು ವಾಸನೆಗೆ ಉಸಿರುಗಟ್ಟಿ ಮೃತಪಟ್ಟಿದ್ದರು. ಸುರತ್ಕಲ್‌ ಉಪತಹಶೀಲ್ದಾರರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದು ಜಿಲ್ಲಾಧಿಕಾರಿಗಳಿಗೆ ಪ್ರಥಮ ಮಾಹಿತಿ ನೀಡಿದ್ದಾರೆ. ಮೃತ ಕಾರ್ಮಿಕ ದೀಪ್‌ಚಂದ್ರ ಬಾರ್ತಿಯ ಅವರ ಮೃತದೇಹವನ್ನು ಅವರ ಊರಾದ ಉತ್ತರಪ್ರದೇಶದ ಪ್ರಯಾಗ್‌ ರಾಜ್‌ ಗೆ ತೆಗೆದುಕೊಂಡು ಹೋದ ಸಹೋದ್ಯೋಗಿಗಳಿಗೆ ಮೃತನ ಸಂಬಂಧಿಕರು ದಿಗ್ಬಂಧನ ವಿಧಿಸಿದ್ದಾರೆ. ಸಾವಿಗೆ ಸಂಬಂಧಪಟ್ಟಂತೆ ಎಂಆರ್‌ಪಿಎಲ್‌ ಹಿರಿಯ ಅಧಿಕಾರಿಗಳು ಮಾಹಿತಿ ನೀಡಬೇಕು. ಪರಿಹಾರದ ಬೇಡಿಕೆಯನ್ನು ಈಡೇರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ

Read More

ವಿಟ್ಲ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಬಂಧಿತ ಆರೋಪಿ. 2015ನೇ ನವೆಂಬರ್ 4ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅತ್ಯಾಚಾರ ಪ್ರಕರಣ ನಡೆದಿತ್ತು. ಪ್ರಕರಣದಲ್ಲಿ ಆರೋಪಿಯಾಗಿದ್ದ ಬಿಹಾರ ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂಬಾತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ವಿಟ್ಲ ಠಾಣಾ ಪೊಲೀಸರು ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿಂದ ಅಲ್ಲಿನ ಪೊಲೀಸರ ಸಹಕಾರದಲ್ಲಿ ವಶಕ್ಕೆ ಪಡೆದು ಜು.13 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

Read More

ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡೆದಿದೆ. ಈ ವೇಳೆ ಗಾಯಗೊಂಡ ಉಡುಪಿ ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ರಿತೇಶ್ ಹಾಗೂ ಪೊಲೀಸರ ಲಾಠಿ ಏಟಿನಿಂದ ಗಾಯಗೊಂಡಿರುವ ಉತ್ತರ ಪ್ರದೇಶ ಮೂಲದ ಮಣಿಪಾಲ ವಿ.ಪಿ.ನಗರದ ನಿವಾಸಿ ಮುಹಮ್ಮದ್ ದಾನೀಶ್(29) ಎಂಬವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಯಡಿ ದಾಖಲಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.12ರಂದು ಆರೋಪಿ ಮುಹಮ್ಮದ್ ದಾನೀಶ್ನನ್ನು ದಸ್ತಗಿರಿ ಮಾಡಿದ್ದು, ಈತನನ್ನು ತನಿಖೆಗೆ ಒಳಪಡಿಸಿ ಜು.13ರಂದು ತನಿಖೆಯ ಬಗ್ಗೆ ಮಣಿಪಾಲ ತಾಂಗೋಡು 2ನೇ ಕ್ರಾಸ್ ಹಾಡಿ ಬಳಿ ಕೃತ್ಯವೆಸಗಿದ ಸ್ಥಳವನ್ನು ಪಂಚನಾಮೆಯನ್ನು ಮಾಡುವ ಕರೆದುಕೊಂಡು ಹೋಗಲಾಗಿತ್ತು. ಈ ಸಮಯದಲ್ಲಿ ಆರೋಪಿ ಆತನಿಗೆ ಕೈಕೊಳ ಹಿಡಿದುಕೊಂಡಿದ್ದ ಸಿಬ್ಬಂದಿ ರಿತೇಶ್ರವರ ಎದೆಗೆ ಎರಡೂ ಕೈಗಳಿಂದ ಗುದ್ದಿ ದೂಡಿ ನೆಲಕ್ಕೆ ಬೀಳಿಸಿ ಅಲ್ಲಿಯೇ ಇದ್ದ ಕಲ್ಲನ್ನು ಎತ್ತಿಹಾಕಲು ಬಂದಿದ್ದನು.…

Read More

ಬೆಳ್ತಂಗಡಿ: ಸೌಜನ್ಯ ಹೋರಾಟಗಾರರು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಮೊದಲೇ ಪ್ರಕರಣದಲ್ಲಿ ಕಡಬ ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ (46) ಎಂಬವರು ನೀಡಿದ ದೂರಿನಂತೆ ದಿನಾಂಕ:11-07-2025 ರಂದು ಪ್ರವೀಣ್‌ ಲೊಬೋ ಎಂಬ ಪೇಸ್ ಬುಕ್‌ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 58/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇನ್ನೊಂದು ಪ್ರಕರಣದಲ್ಲಿ ಧರ್ಮಸ್ಥಳ ಗ್ರಾಮದ ನಿವಾಸಿ ಚೇತನ್‌ ಎನ್‌ (28) ಎಂಬವರ ದೂರಿನಂತೆ ದಿನಾಂಕ: 11-07-2025 ರಂದು ಮೊಬೈಲ್ ನಲ್ಲಿ ತನ್ನ ಫೇಸ್ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಡಾಕ್ಟರ್ ವರ್ಮಾ ಎಂಬ ಪೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದ ಧಾರ್ಮಿಕ ಶ್ರಧ್ದಾಕೆಂದ್ರಕ್ಕೆ ಸಂಬಂಧಿಸಿದ…

Read More

ಬೆಳ್ತಂಗಡಿ: ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಯ್ಯೂರಿನ ದರ್ಖಾಸ್‌ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32) ಮೃತಪಟ್ಟವರು. ಜುಲೈ 13 ರಂದು ಮಧ್ಯಾಹ್ನ ಮನೆಯ ಒಂದು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.ರಮ್ಯಾ ಎರಡು ವರ್ಷಗಳ ಹಿಂದೆ ಕೊಯ್ಯೂರಿನ ಪದಡ್ಕ ನಿವಾಸಿ ಲತೀಶ್ ಅವರನ್ನು ವಿವಾಹವಾಗಿದ್ದರು. ಅವರು ಬೆಳ್ತಂಗಡಿಯ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.ರಮ್ಯಾ ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ತಮ್ಮ ತಾಯಿಯ ಮನೆಗೆ ಬಂದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ. . ಅವರ ಆರೋಗ್ಯ ಸ್ಥಿತಿಯ ಬಗ್ಗೆ ಚಿಂತೆಗೀಡಾಗಿ ಅವರು ಈ ಕ್ರಮ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.ಕಂದಾಯ ನಿರೀಕ್ಷಕ ಪ್ರತೀಶ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದರು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Read More