ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಇರುವೈಲ್ ಗ್ರಾಮದಲ್ಲಿ ಕಾರ್ಯಚರಿಸುತ್ತಿದ್ದ ಇಸ್ಪೀಟ್ ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಜು. 12 ರಂದು ರಾತ್ರಿ 23.15 ಗಂಟೆಗೆ ಈ ಕಾರ್ಯಚರಣೆ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ರವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮೂಡಬಿದ್ರೆ ತಾಲೂಕು ಇರುವೈಲ್ ಗ್ರಾಮದ ಕೋರಿಬೆಟ್ಟು ಬಳಿ ಗುಡ್ಡೆಯಲ್ಲಿ ಕೆಲವು ವ್ಯಕ್ತಿಗಳು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜುಗಾರಿ ನಡೆಸುತ್ತಿದ್ದಾರೆ ಎಂಬುದಾಗಿ ಖಚಿತ ಮಾಹಿತಿ ದೊರೆತ್ತಿತ್ತು.ಅಕ್ಟರ್, ಸಂತೋಷ್, ಪ್ರಶಾಂತ್, ಮಹಾಬಲ ಪೂಜಾರಿ, ಪ್ರಜ್ವಲ್, ಗಿರೀಶ್, ರಾಜೇಶ ಎಂಬವರುಗಳನ್ನು ವಶಕ್ಕೆ ಪಡೆದುಕೊಂಡುಕೊಂಡಿದ್ದಾರೆ. ಗಣೇಶ, ಶ್ರೀನಾಥ್, ದಿನೇಶ್ ಕೆಂಪುಗುಡ್ಡೆ, ಕೇಶವ ಯಾನೆ ಅಪ್ಪು, ಹಾಗೂ ಇನ್ನಿತರರು ಅದೇ ಸಂದರ್ಭದಲ್ಲಿ ಘಟನಾ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾರೆ.ಆಪಾಧಿತರ ವಶದಲ್ಲಿದ್ದ ನಗದು ಹಣ 10,100-, 52 ಇಸ್ಪೀಟ್ ಎಲೆಗಳು, 2 ಮೇಣದ ಬತ್ತಿ ಹಾಗೂ KA-09-EP-8948 ಮತ್ತು KA-19-EZ-1077 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಆಪಾಧಿತರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲಾಯಿತು.ಪೊಲೀಸ್…
Author: main-admin
ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಪಿಕ್‌ಅಪ್ ಚಾಲಕ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹ*ತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹ*ಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ಪುದು ಗ್ರಾಮದ ನಿವಾಸಿ ಪ್ರದೀಪ್ (34) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ 9 ಮಂದಿಯನ್ನು ಬಂಧಿಸಲಾಗಿದೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೋಯ್ದು ಈ ಕೃತ್ಯ ಎಸಗಲಾಗಿದೆ. ಸದ್ಯ ಸಂತ್ರಸ್ತೆಯ ತಾಯಿಯ ದೂರು ಆಧರಿಸಿ ಇದೀಗ ಆರೋಪಿ ವಿಡಿಯೋ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಎರಡು ತಿಂಗಳಿಂದ ಬಾಲಕಿಯನ್ನು ಶಾಲೆಗೆ ಉದ್ಯಮಿ ತನ್ನ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ಬಾಲಕಿಯನ್ನು ಉದ್ಯಮಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ.ಈ ವೇಳೆ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿರುವ ಮುಲ್ಕಿ ಪೊಲೀಸರು ತನಿಖೆ ನಡೆಸಿ 68 ವರ್ಷದ ಉದ್ಯಮಿಯನ್ನು ಇದೀಗ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಅಧಿಕ ರಕ್ತದ ತೊಡಕ್ಕೆ ಒಳಗಾಗಿ ಆರೋಪಿಯನ್ನು ಮುಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು:ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12 ರಂದು ಘೋಷಣೆ ಮಾಡಿತು. ಈ ಬಹು ನಿರೀಕ್ಷಿತ ಕಾರ್ಯಕ್ರಮವು, ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಮತ್ತು ಸಿನಿಮಾ ಜಗತ್ತಿನ ತಾರೆಗಳು ಭಾಗವಹಿಸಿದ್ದರು. ಈ ಘೋಷಣೆ ವಿಶೇಷ ಏಕೆಂದರೆ – ಇದು ಕರ್ನಾಟಕದಲ್ಲಿ ಮೊದಲ ಬಾರಿಗೆ ಶಾರೂಖ್ ಖಾನ್ ಅವರು ಯಾವುದೇ ಬ್ರಾಂಡ್‌ಗೆ ಅಂಬಾಸಿಡರ್ ಆಗಿರುವುದು. ಈ ಮೂಲಕ ರೋಹನ್ ಕಾರ್ಪೊರೇಷನ್ ಮಂಗಳೂರು ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಸಮಾರಂಭದ ಪ್ರಮುಖ ಆಕರ್ಷಣೆ ಎಂದರೆ, ಬೃಹತ್ ಪರದೆಯ ಮೇಲೆ ಪ್ರದರ್ಶಿಸಲಾದ ಅಧಿಕೃತ ಬ್ರಾಂಡ್ ಅಂಬಾಸಿಡರ್ ವಿಡಿಯೋ (AV).ಈ ವಿಡಿಯೋದಲ್ಲಿ ರೋಹನ್ ಕಾರ್ಪೊರೇಷನ್‌ನ ಸ್ಫೂರ್ತಿದಾಯಕ ಪಯಣ ಮತ್ತು ಶಾರೂಖ್ ಖಾನ್ ಅವರ ಶ್ರಮ ಮತ್ತು ವ್ಯಕ್ತಿತ್ವ…
ಶಿವಮೊಗ್ಗ : ಜಿಲ್ಲೆಯ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯ ಹೊಟ್ಟೆಯೊಳಗೆ ಮೊಬೈಲ್ ಪತ್ತೆಯಾಗಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಈ ಒಂದು ಘಟನೆ ನಡೆದಿದ್ದು, ಕೈದಿ ದೌಲತ್ ಅಲಿಯಾಸ್ ಗುಂಡನ ಹೊಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿದೆ. ಹೊಟ್ಟೆ ನೋವು ಎಂದಾಗ ಕೈದಿಯನ್ನು ಮೆಗನ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೋಯ್ಯಲಾಯಿತು. ಈ ವೇಳೆ ಒಂದು ಇಂಚು ಅಗಲದ 3 ಇಂಚು ಉದ್ದದ ಮೊಬೈಲ್ ಹೊಟ್ಟೆಯಲ್ಲಿ ಪತ್ತೆಯಾಗಿದೆ. ಶಸ್ತ್ರ ಚಿಕಿತ್ಸೆಗು ಮುನ್ನ ಕೈದಿಯನ್ನು ಕೇಳಿದಾಗ ಕಲ್ಲು ನುಂಗಿದ್ದೇನೆ ಎಂದು ಹೇಳಿದ್ದಾನೆ. ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಮೊಬೈಲ್ ಪತ್ತೆ ಆಗಿರುವುದು ಬೆಳಕಿಗೆ ಬಂದಿದೆ. ಬಳಿಕ ಆಸ್ಪತ್ರೆ ವೈದ್ಯರು ಸರ್ಜರಿ ಮೂಲಕ ಮೊಬೈಲ್ ಅನ್ನು ಹೊರಗಡೆ ತೆಗೆದಿದ್ದಾರೆ.
ಮಂಗಳೂರು: ಸುರತ್ಕಲ್‌ನ ಎಂಆರ್‌ಪಿಎಲ್‌ನಲ್ಲಿ ಟ್ಯಾಂಕ್ ಪ್ಲಾಟ್‌ಫಾರ್ಮ್ ನಲ್ಲಿ ಅನಿಲ ಸೋರಿಕೆ ಹಿನ್ನಲೆ ಹಿರಿಯ ನಿರ್ವಾಹಕರು ಇಬ್ಬರು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತರು ಎಂಆರ್‌ಪಿಎಲ್‌ನ ಅನುಭವಿ ನಿರ್ವಾಹಕರು, ಪ್ರಯಾಗ್‌ರಾಜ್‌ನ ದೀಪ್ ಚಂದ್ರ (33) ಮತ್ತು ಕೇರಳದ ಬಿಜಿಲ್ ಪ್ರಸಾದ್ (33) ಎಂದು ಗುರುತಿಸಲಾಗಿದೆ. ಇನ್ನು ರಕ್ಷಣೆಗೆ ಹೋದ ಗದಗದ ವಿನಾಯಕ್ ಎಂಬುವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ.ಎಂಆರ್‌ಪಿಎಲ್‌ನಲ್ಲಿ ಟ್ಯಾಂಕ್ ಪ್ಲಾಟ್‌ಫಾರ್ಮ್ ಮೇಲೆ ಹಿರಿಯ ನಿರ್ವಾಹಕರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದರು. ಅವರನ್ನು ರಕ್ಷಿಸಿ ಶ್ರೀನಿವಾಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆಯ ಸಮಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.ಸಣ್ಣ ಪ್ರಮಾಣದ ಎಚ್2ಎಸ್ ಅನಿಲ ಸೋರಿಕೆ ಕಂಡುಬಂದಿದೆ ಮತ್ತು ಕಾರ್ಮಿಕರು ಮಾಸ್ಕ್ ಧರಿಸಿ ತಮ್ಮ ನಿಯಮಿತ ಕರ್ತವ್ಯದ ಭಾಗವಾಗಿ ಅದನ್ನು ಪರಿಶೀಲಿಸುವಾಗ ಆ ಅನಿಲವನ್ನು ಉಸಿರಾಡಿದ್ದಾರೆ. ಈ ವೇಳೆ ಘಟನೆ ಸಂಭವಿಸಿದೆ.ಎಂಆರ್‌ಪಿಎಲ್ ಅಗ್ನಿಶಾಮಕ ಮತ್ತು ಸುರಕ್ಷತಾ ತಂಡ ಸೋರಿಕೆಯನ್ನು ಸರಿಪಡಿಸಿದೆ ಮತ್ತು ಈಗ ಅದು ಸರಿಯಾಗಿದೆ ಎಂದು ಅವರು ಹೇಳಿದರು. ಇನ್ನು ಘಟನೆಯಲ್ಲಿ ಸಾವನ್ನಪ್ಪಿದ್ದ ಕುಟುಂಬ ಸಂಬಂಧಿಕರ ಹೇಳಿಕೆಯ ಆಧಾರದ ಮೇಲೆ ಪ್ರಕರಣ…
ಮಂಗಳೂರು: ಡ್ರಗ್ ಮಾಫಿಯಾದ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು ಇದೀಗ ಮಹಾರಾಷ್ಟ್ರ ಮತ್ತು ಮದ್ಯಪ್ರದೇಶದಿಂದ ಮಾದಕವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮೂಲತಃ ಬೀದರ್‌ನ ಪ್ರಸಕ್ತ ಕೋಡಿಪಾಳ್ಯ ನಿವಾಸಿ ಪ್ರಜ್ವಲ್ ಪೀಣ್ಯಾಸ್ ಎಂದು ಗುರುತಿಸಲಾಗಿದೆ. ಜುಲೈ 2 ರಂದು ಮಂಗಳೂರಿನಲ್ಲಿ ದಾಖಲಾಗಿದ್ದ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದುವರಿದ ತನಿಖೆಯ ಭಾಗವಾಗಿ ಈ ಆರೋಪಿ ಅರೆಸ್ಟ್ ಆಗಿದ್ದಾನೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿಗೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ 9 ಜನರನ್ನು ಅರೆಸ್ಟ್ ಮಾಡಲಾಗಿದ್ದು, ಆರೋಪಿ ಪ್ರಜ್ವಲ್ ನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅರೆಸ್ಟ್ ಆದ ಆರೋಪಿ ಈ ಹಿಂದೆ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದು, ಆತನ ಮೇಲೆ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ 03 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿದೆ.
ಬೆಳ್ತಂಗಡಿ: ಧರ್ಮಸ್ಥಳ ಅಪರಾಧ ಸಂಖ್ಯೆ 39/2025 ರ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ, ದೂರುದಾರ ಸಾಕ್ಷಿಗೆ ಸಾಕ್ಷಿ ರಕ್ಷಣೆ ನೀಡಲು ಜಿಲ್ಲಾ ಅಧಿಕಾರಿಗಳು ಅನುಮೋದನೆ ನೀಡಿದ್ದು, ಶುಕ್ರವಾರ ಸಂಜೆಯಿಂದ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದಾಗ್ಯೂ, ದೂರುದಾರ ಸಾಕ್ಷಿಯ ಗುರುತಿನ ಉಲ್ಲಂಘನೆಯ ಬಗ್ಗೆ ಕಳವಳಗಳು ಹುಟ್ಟಿಕೊಂಡಿವೆ. ವ್ಯಕ್ತಿಯ ಅನಾಮಧೇಯತೆಯನ್ನು ಕಾಪಾಡುವ ಪ್ರಯತ್ನಗಳ ಹೊರತಾಗಿಯೂ, ದೂರುದಾರ ಸಾಕ್ಷಿಯ ಪ್ರತಿನಿಧಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಂಚಿಕೊಂಡ ಪ್ರತಿಕಾ ಪ್ರಕಟಣೆ ಮತ್ತುಎಫ್.ಐ.ಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ, ಸಾಕ್ಷಿ ದೂರುದಾರರ ವಯಸ್ಸು, ವೃತ್ತಿಯ ಸ್ಥಳ, ಚಹರೆ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತು ಇತರೆ ಮಾಹಿತಿಗಳ ವಿವರಗಳು ಸೇರಿವೆ. ಈ ವಿವರಗಳು ಅನೇಕ ಸ್ಥಳೀಯರಿಗೆ ದೂರುದಾರ ಸಾಕ್ಷಿಯ ಗುರುತನ್ನು ಊಹಿಸಲು ಅನುವು ಮಾಡಿಕೊಟ್ಟಿವೆ ಎಂದು ಆರೋಪಿಸಲಾಗಿದೆ.ಇದಕ್ಕೆ ಪ್ರತಿಕ್ರಿಯೆಯಾಗಿ, ಅಧಿಕಾರಿಗಳು ಎಲ್ಲಾ ಅಧಿಕೃತ ಉದ್ದೇಶಗಳಿಗಾಗಿ ಸಾಕ್ಷಿಯ ಗುರುತನ್ನು ಬಹಿರಂಗಪಡಿಸದಿರಲು ನಿರ್ಧರಿಸಿದ್ದಾರೆ. ಏತನ್ಮಧ್ಯೆ, ಬಂಟ್ವಾಳ ಡಿವೈಎಸ್ಪಿ ಅವರ ಮೇಲ್ವಿಚಾರಣೆಯಲ್ಲಿ ಗುರುತಿನ ಉಲ್ಲಂಘನೆಯ ಬಗ್ಗೆ ಪ್ರತ್ಯೇಕ…
ಕಂಪ್ಯೂಟರ್ ಸೈನ್ಸ್ ವಿಭಾಗ, ಸೈಂಟ್ ಜೋಸೆಫ್ ವಿಶ್ವವಿದ್ಯಾಲಯವು, ತನ್ನ ಪ್ರತಿಷ್ಠಿತ ವಿದ್ಯಾರ್ಥಿ ಸಂಘಗಳಾದ ಸೈಬರ್ನೆಟಿಕ್ಸ್ ಅಸೋಸಿಯೇಷನ್ (ಯುಜಿ) ಮತ್ತು ಟೆಕ್ನೋಫೈಟ್ ಅಸೋಸಿಯೇಷನ್ (ಪಿಜಿ)ಗಳ ಉದ್ಘಾಟನೆ ಮತ್ತು ಅಧಿಕಾರ ಸ್ವೀಕಾರ ಸಮಾರಂಭವನ್ನು 9ನೇ ಜುಲೈ 2025ರಂದು, ಪಿಜಿ ಬ್ಲಾಕ್‌ನ ಕ್ಷೇವಿಯರ್ ಸಭಾಂಗಣದಲ್ಲಿ ನಡೆಸಿತು. ಬೆಳಗ್ಗೆ 9:00 ರಿಂದ 10:00 ಗಂಟೆಯವರೆಗೆ ನಡೆಯಿತು. ಸಮಾರಂಭದಲ್ಲಿ ವಂ। ಡೆನ್ಜಿಲ್ ಲೋಬೋ ಎಸ್.ಜೆ., ಶಾಲಾ ನಿರ್ದೇಶಕ, ಸ್ಕೂಲ್ ಆಫ್ ಐಟಿ; ಡಾ. ಎ.ಎಂ. ಬೋಜಮ್ಮ, ಡೀನ್, ಸ್ಕೂಲ್ ಆಫ್ ಐಟಿ; ಡಾ. ಬಿ.ಜಿ. ಪ್ರಶಾಂತಿ, ಮುಖ್ಯಸ್ಥರು, ಕಂಪ್ಯೂಟರ್ ಸೈನ್ಸ್ ವಿಭಾಗ; ಡಾ. ಬಿ. ನಿತ್ಯ, ಪಿಜಿ ಸಂಯೋಜಕರು; ಸರಣ್ಯ ಎಂ – ಟೆಕ್ನೋಫೈಟ್ ಸಂಯೋಜಕರು, ಡಾ. ಅನ್ನಿ ಸಿರಿಯನ್, ಸೈಬರ್ನೆಟಿಕ್ಸ್ ಸಂಯೋಜಕರು ಮತ್ತು ಮುಖ್ಯ ಅತಿಥಿ ಶ್ರೀ ರೋಜರ್ ಡಾಸ್ (ಸೀನಿಯರ್ ಮ್ಯಾನೇಜರ್, ಡಯಾಜಿಯೋ) ಮುಂತಾದ ಗಣ್ಯರು ಭಾಗವಹಿಸಿದರು. ಸುಮಯ ಮತ್ತು ಪ್ರೀತಿ ಅವರು ಸಮಾರಂಭವನ್ನು ಮುನ್ನಡೆಸಿದರು. ಸಮಾರಂಭವು ಜೂಡ್ ಅವರ ನೇತೃತ್ವದ ಪ್ರಾರ್ಥನೆಯೊಂದಿಗೆ ಹಾಗೂ ಮೋನಿಷಾ…
ಮಂಗಳೂರು : ಅಪಘಾತದ ಬಳಿಕ ಲೈಸೆನ್ಸ್ ಮರಳಿ ನೀಡಲು 50 ಸಾವಿರ ಲಂಚ ಬೇಡಿಕೆ ಇಟ್ಟು ಬಳಿಕ 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲೀಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ. ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ ಮೂವರನ್ನೂ ಕೂಡಾ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.










