Author: main-admin

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತು ಹಾಕಿದ ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳ ಬಗ್ಗೆ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಸ್ಪಷ್ಟನೆ ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ಸಾರ್ವಜನಿಕರು ಮತ್ತು ಮಾಧ್ಯಮದ ಜೊತೆ ಹಂಚಿಕೊಳ್ಳುವ ಖಚಿತ ಮಾಹಿತಿಗಳಿದ್ದಲ್ಲಿ ಅಧಿಕೃತವಾಗಿ ತಿಳಿಸಲಾಗುವುದು. ‘ಮೀಡಿಯಾ ಟ್ರಯಲ್’ ಬಗ್ಗೆ ಸುಪ್ರೀಂಕೋರ್ಟ್‌ ಮತ್ತು ಪ್ರೆಸ್‌ ಕೌನ್ಸಿಲ್ ಆಫ್ ಇಂಡಿಯಾದ ಮಾರ್ಗಸೂಚಿಗಳನ್ನು ಮಾಧ್ಯಮದವರು ಪಾಲಿಸಬೇಕು. ದೂರುದಾರರು ಅಥವಾ ಅವರ ಪರ ಯಾರಾದರೂ ಪೊಲೀಸರ ಬಳಿ ಲಭ್ಯವಿರದ ಮಾಹಿತಿ ಹಂಚಿಕೊಂಡಿದ್ದಲ್ಲಿ ಪೊಲೀಸರಿಂದ ಪ್ರತಿಕ್ರಿಯೆ ನಿರೀಕ್ಷಿಸಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ.

Read More

ಉಡುಪಿ ಜಿಲ್ಲೆಯ ಪೊಲೀಸರ ಹೊಟ್ಟೆ ಬೊಜ್ಜಿನ ಸಮಸ್ಯೆ ಪರಿಹಾರಕ್ಕಾಗಿ ಉಡುಪಿ ಎಸ್ಪಿ ಹರಿರಾಮ್ ಶಂಕರ್ 30ದಿನದ ನವಚೇತನ ಶಿಬಿರ ಆಯೋಜಿಸಿದ್ದಾರೆ. ಧಡೂತಿ ದೇಹ, ಹೊಟ್ಟೆಯ ಬೊಜ್ಜು ಸಮಸ್ಯೆ ಹೊಂದಿರುವ ಜಿಲ್ಲೆಯ 62 ಪುರುಷರು ಮತ್ತು 9 ಮಹಿಳಾ ಪೊಲೀಸರು ಸೇರಿ ಒಟ್ಟು 71 ಮಂದಿ ಪೊಲೀಸರಿಗೆ ಮಣಿಪಾಲದ ಪರೀಕದಲ್ಲಿ ವಿಶೇಷ ಶಿಬಿರ ನಡೆಸಲಾಗುತ್ತಿದ್ದು, ಪೊಲೀಸರು ಮಳೆಗಾಲದಲ್ಲೂ ಬೆವರು ಹರಿಸುತ್ತಿದ್ದಾರೆ. ಯಾವುದೇ ಮನುಷ್ಯನಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ತುಂಬಾ ಮುಖ್ಯ. ಅದರಲ್ಲೂ ಮುಖ್ಯವಾಗಿ ಪೊಲೀಸರು ದೈಹಿಕವಾಗಿ ಮತ್ತು ಮಾನಸಿಕವಾಗಿ ಫೈಟ್ ಮತ್ತು ಫೈನ್ ಆಗಿರಬೇಕು. ಅದರಲ್ಲೂ ದೈಹಿಕ ಫಿಟ್ನೆಸ್ ತುಂಬಾ ಮುಖ್ಯ. ಕೆಲಸದ ಒತ್ತಡ, ಸಮಯಕ್ಕೆ ಸರಿಯಾಗಿ ಊಟ ಮಾಡದೆ ಇರುವುದು , ದೇಹಕ್ಕೆ ವ್ಯಾಯಾಮದ ಕೊರತೆ ಇನ್ನಿತರ ಕಾರಣಗಳಿಗಾಗಿ ಹೊಟ್ಟೆಯ ಬೊಜ್ಜು ಸರ್ವೇ ಸಾಮಾನ್ಯವಾಗಿದೆ. ಅದರಲ್ಲೂ ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಮಂದಿ ಇಂತಹ ಹೊಟ್ಟೆ ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಶಿಬಿರದಲ್ಲಿ ವ್ಯಾಯಾಮ, ನಿದ್ರೆ ಆಹಾರಕ್ರಮ ಇನ್ನಿತರ ಆರೋಗ್ಯಕರ ಜೀವನ ಶೈಲಿಯ…

Read More

ಉಡುಪಿ: ಹಲವಾರು ಕ್ರಿಮಿನಲ್‌ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇಲೆ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಯಾನೆ ಕಬೀರ್ ಹುಸೇನ್(46) ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರು ಆದೇಶ ಹೊರಡಿಸಿದ್ದು, ಅದರಂತೆ ಆತನನ್ನು ಬಂಧಿಸಿ ಮೈಸೂರು ಸೆಂಟ್ರಲ್‌ ಜೈಲಿಗೆ ಕಳುಹಿಸಲಾಗಿದೆ. ಈತನ ಮೇಲೆ ಉಡುಪಿ ಜಿಲ್ಲೆಯ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಠಾಣೆಗಳ ವ್ಯಾಪ್ತಿಯಲ್ಲಿ 2005 ರಿಂದೀಚೆಗೆ ನಡೆದ ಹಲವಾರು ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು, ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮತ್ತಿತರ 17 ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಪ್ರಕರಣಗಳಿವೆ. ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು, ಮಂಗಳೂರು ನಗರ ವ್ಯಾಪ್ತಿಯ ಸುರತ್ಕಲ್ ಠಾಣೆಯ ಪ್ರಕರಣಗಳಲ್ಲೂ ಭಾಗಿಯಾಗಿರುತ್ತಾನೆ. ಈತನು ಗರುಡ ಗ್ಯಾಂಗನ ಸಕ್ರಿಯ ಸದಸ್ಯನಾಗಿರುತ್ತಾನೆ. ಈತನ ಮೇಲಿರುವ ಕೇಸುಗಳ ಪೈಕಿ ಈಗಾಗಲೇ ಎರಡು…

Read More

ಮಾಜಿ ಉಪಸಭಾಪತಿ, ಹಿರಿಯ ನ್ಯಾಯವಾದಿ 98ನೇ ವಯಸ್ಸಿನ ಡಾ.ಎನ್.ತಿಪ್ಪಣ್ಣ ವಯೋಸಹಜ ಕಾಯಿಲೆಯಿಂದ ಇಂದು (ಜು.11) ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷರಾಗಿದ್ದ ಇವರು ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಜೊತೆಗೆ ಅನುಭವಿ ಹಿರಿಯ ನ್ಯಾಯವಾದಿ, ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದರು. ಇದನ್ನೂ ಓದಿ: ಎಂ.ಆರ್.ಪಿ.ಎಲ್. ಸಂಸ್ಥೆ ವತಿಯಿಂದ ಸ್ವಚ್ಛತಾ ಪಖ್ವಾಡ 2025; 5 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಶಾ ಕಾರ್ಯಕರ್ತರಿಗೆ ನೆರವು ಇಂದು ಬಳ್ಳಾರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು. ಶನಿವಾರ ತಿಪ್ಪಣ್ಣ ಅವರ ಸ್ವಗ್ರಾಮ ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

Read More

ಮಂಗಳೂರು: ವಾಹನ ಪರವಾನಗಿ ಮರಳಿ ನೀಡಲು 50ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾ‌ರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ ಮೂವರನ್ನೂ ಕೂಡಾ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Read More

ಮಂಗಳೂರು : ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 211 ರ ಅಡಿಯಲ್ಲಿ ದಾಖಲಾಗಿರುವ ಧರ್ಮಸ್ಥಳ ಪ್ರಕರಣದ ತನಿಖೆಯ ಸುತ್ತ ವ್ಯಾಪಕ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ಚರ್ಚೆಗಳ ಮಧ್ಯೆ, ಸಂಯಮ ಮತ್ತು ಜವಾಬ್ದಾರಿಯುತ ವರದಿ ಮಾಡುವಂತೆ  ಪೊಲೀಸರು ಹೇಳಿಕೆ ನೀಡಿದ್ದಾರೆ. ಸಾರ್ವಜನಿಕರೊಂದಿಗೆ ಹಂಚಿಕೊಳ್ಳಲು ಅಗತ್ಯವೆಂದು ಪರಿಗಣಿಸಲಾದ ಯಾವುದೇ ನಿರ್ದಿಷ್ಟ ಬೆಳವಣಿಗೆಗಳು ಅಥವಾ ಮಾಹಿತಿಯನ್ನು ಅಧಿಕೃತ ಮಾರ್ಗಸೂಚಿಗಳ ಮೂಲಕ ತಿಳಿಸಲಾಗುವುದು ಎಂದು ಪೊಲೀಸರು ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.ನಡೆಯುತ್ತಿರುವ ತನಿಖೆಗಳ ಸಮಯದಲ್ಲಿ ಮಾಧ್ಯಮ ವಿಚಾರಣೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮತ್ತು ಭಾರತೀಯ ಪತ್ರಿಕಾ ಮಂಡಳಿ (ಪಿಸಿಐ) ಹೊರಡಿಸಿದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮುಖ್ಯವಾಹಿನಿಯ ಮಾಧ್ಯಮಗಳಿಗೆ ಸೂಚಿಸಲಾಗಿದೆ. ತನಿಖೆಯ ವಿಧಾನ ಅಥವಾ ನಿರ್ದೇಶನದ ಬಗ್ಗೆ ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ, ಅಥವಾ ಊಹೆಗಳು, ಹಲವಾರು ಊಹಾತ್ಮಕ ಕೋನಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿಕೆಯು ಒತ್ತಿ ಹೇಳಿದೆ. ಪೊಲೀಸರು ಯಾವ ರೀತಿ ತನಿಖೆ ನಡೆಸುತ್ತಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕೆಂದು ಹಾಗೂ ಪ್ರಕರಣದ ಬಗ್ಗೆ ಹರಿದಾಡುವ ಊಹಾಪೋಹಗಳಿಗೆ ಪೊಲೀಸರು…

Read More

ಉಳ್ಳಾಲ : ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32) ಎಂದು ಗುರುತಿಸಲಾಗಿದೆ. ನಗರದಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಎಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು, ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಭರತ್ ಅವರಿಗೆ ತಾಯಿ ಹಾಗೂ ಮೂವರು ಸೋದರಿಯರು ಇದ್ದಾರೆ.

Read More

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಯನ್ನು ತಡೆಯುವ ಕ್ರಮವಾಗಿ, ಮಂಗಳೂರು ನಗರ ಪೊಲೀಸರು ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಕೇರಳ ನೋಂದಾಯಿತ ವಾಹನಗಳನ್ನು, ವಿಶೇಷವಾಗಿ ಅತಿವೇಗ ಮತ್ತು ಅತಿ ವೇಗದ ಚಾಲನೆಯಲ್ಲಿ ತೊಡಗಿರುವ ವಾಹನಗಳನ್ನು ವಶಪಡಿಸಿಕೊಳ್ಳಲು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಕೇರಳ ನೋಂದಾಯಿತ ವಾಹನಗಳ ಪ್ರಕರಣಗಳು ಹೆಚ್ಚಾಗಿದ್ದು, ಸುಮಾರು ಶೇ. 90 ರಷ್ಟು ವಾಹನಗಳು ದ್ವಿಚಕ್ರ ವಾಹನಗಳನ್ನು ಬಳಸುವ ವಿದ್ಯಾರ್ಥಿಗಳದ್ದಾಗಿವೆ ಎಂದು ವರದಿಯಾಗಿದೆ. ನಗರ ಮತ್ತು ಹೊರವಲಯದ ವಿವಿಧ ಕಾಲೇಜುಗಳಲ್ಲಿ ಓದುತ್ತಿರುವ ಈ ವಿದ್ಯಾರ್ಥಿಗಳು ಅಜಾಗರೂಕ ಚಾಲನೆ ಮಾಡಿ ಸಾರ್ವಜನಿಕರಿಗೆ ಸುರಕ್ಷತಾ ಅಪಾಯಗಳನ್ನುಂಟುಮಾಡುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ನೋಟಿಸ್ ನೀಡಿದ್ದರೂ, ನಿಯಮಗಳ ಅನುಸರಣೆ ಕಡಿಮೆಯಾಗಿದೆ. ಪರಿಣಾಮವಾಗಿ, ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದರೆ ಅಂತಹ ವಾಹನಗಳನ್ನು ತಕ್ಷಣವೇ ವಶಪಡಿಸಿಕೊಳ್ಳುವಂತೆ ಮತ್ತು ದಂಡ ಪಾವತಿಸಿದ ನಂತರವೇ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದಾರೆ. ಕಾನೂನು ಅಂತಹ ಕ್ರಮಕ್ಕೆ…

Read More

ಸುಳ್ಯ: ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ಬಳಿಕ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ. ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತಪಟ್ಟವರು ಎಂದು ತಿಳಿದುಬಂದಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಅನ್ನು ತುಳಿದು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಹಸು ಮೇಯಿಸುವಾಗ ಜಮೀನಿನಲ್ಲಿ ಹೃದಯಾಘಾತವಾಗಿ ಯುವಕ ಸಾವು ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

Read More

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ 402 ಪಿಎಸ್ ಐ (PSI) ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಮಾತನಾಡಿದ ಸಚಿವರು, ಪೊಲೀಸ್ ಇಲಾಖೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಶೀಘ್ರವೇ 10-15 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಶೀಘ್ರವೇ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ. ಮಂಗಳೂರಿನ ಎಸ್ ಪಿ ಕಚೇರಿ ಪುತ್ತೂರಿಗೆ ವರ್ಗಾಯಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

Read More