ಮಂಗಳೂರು: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕವಸ್ತು ಸರಬರಾಜು ಆಗುತ್ತಿರುವ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂದಿಸಲಾಗಿದೆ. ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶ ರಾಜ್ಯ ಬರ್ವಾನಿ ಜಿಲ್ಲೆ ಮೋಹನ್ ಪಡವಾ ಗ್ರಾಮ ಮಾಯಾರಾಮ್ (32), ಮಹಾರಾಷ್ಟ್ರ ರಾಜ್ಯ ಚೋಪ್ಡಾ, ಜಲಗಾಂವ್ ಜಿಲ್ಲೆ ಪ್ರೇಮಸಿಂಗ್ ರಾಮ ಪವಾರ (48), ಚೋಪ್ಡಾ, ಜಲಗಾಂವ್ ಮಹಾರಾಷ್ಟ್ರ ರಾಜ್ಯ ಅನಿಲ್ ಪ್ರಕಾಶ್ ಕೋಲಿ (35) ಎಂದು ಗುರುಸಲಾಗಿದೆ. ದಿನಾಂಕ: 2-07-2025 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 31/2025 ಕಲಂ. 8(c), 20(b)(ii)(B) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ಮಾದಕವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತಗಳನ್ನು ಮಂಗಳೂರು ನಗರಕ್ಕೆ ಪೂರೈಕೆ ಮಾಡುವ 6 ಜನರನ್ನು ಪತ್ತೆ ಮಾಡಿ ಈಗಾಗಲೇ ದಸ್ತಗಿರಿ ಕ್ರಮ ಕೈಗೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ. ಪ್ರಕರಣ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕವಸ್ತು…
Author: main-admin
ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ಮಾತಾಡಿ, “ಇದು ನನ್ನ ಎರಡನೇ ಚಿತ್ರ, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಹೊಸ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಸಾಕಷ್ಟು ಜನರು ಇದು ಧರ್ಮ ದೈವದ ಮುಂದುವರೆದ ಭಾಗ ಎಂದು ಭಾವಿಸಿದ್ದರು, ಆದರೆ ಟೀಸರ್ ಬೇರೆಯೇ ರೀತಿಯಲ್ಲಿದ್ದು ಬಹಳಷ್ಟು ಕುತೂಹಲವನ್ನು ಹುಟ್ಟಿಹಾಕಿದೆ. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ“ ಎಂದರು. ಬಳಿಕ ಮಾತಾಡಿದ ನಟಿ ಧನ್ಯ ಪೂಜಾರಿ ”ಧರ್ಮ ಚಾವಡಿ ನನ್ನ ಮೊದಲ ಚಿತ್ರ. ಈಗಾಗಲೇ ಪ್ರೀಮಿಯರ್…
ವಿಟ್ಲ: ಇಲ್ಲಿಯ ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಾಲಕ ತನ್ನ ಶಾಲಾ ಸಹಪಾಠಿಯೊಂದಿಗೆ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದು, ಈ ಸಂದರ್ಭ ಪದ್ಮರಾಜ್ ಅಲ್ಲಿಗೆ ಬಂದು ಬಾಲಕನಿಗೆ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 83/2025, ಕಲಂ: 126(2), 352, 351(3),196(1)(a) BNS 2023 ರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಎನ್ ಐಎ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಮೂವರನ್ನು ಬಂಧಿಸಿದೆ. ರಾಜ್ಯದ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್, ಉತ್ತರ ವಿಭಾಗದ ನಗರ ಶಶಸ್ತ್ರ ಮೀಸಲು ಪಡೆ ಎಎಸ್ಐ ಚಾಂದ್ ಪಾಷಾ ಮತ್ತು ತಲೆ ಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಅಹಮದ್ ತಾಯಿ ಅನೀಸ್ ಫಾತಿಮಾ ಅವರನ್ನು ಬಂಧಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಜೈಲಿನಲ್ಲಿರುವ ಉಗ್ರರಿಗೆ ನೆರವು ನೀಡಿದ ಆರೋಪ ಹಿನ್ನೆಲೆ ಎನ್ಐಎ ಅಧಿಕಾರಿಗಳ ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ವೈದ್ಯ ನಾಗರಾಜ್ ಕರ್ಮಕಾಂಡ ಬಯಲಾಗಿದೆ. ಸಹಾಯಕಿ ಪವಿತ್ರಗಳನ್ನು ಬಳಸಿಕೊಂಡು ಜೈಲಿಗೆ ಮೊಬೈಲ್ ಗಳನ್ನು ಪೂರೈಕೆ ಮಾಡುತ್ತಿದ್ದ ಜೈಲಿನಲ್ಲಿರುವ ಕೈದಿಗಳಿಗೆ ವೈದ್ಯ ನಾಗರಾಜ್ ಮೊಬೈಲ್ ಮಾರಾಟ ಮಾಡುತ್ತಿದ್ದ. ಕೇವಲ 10 ಸಾವಿರ…
ಒಂದೇ ಒಂದು ದಿನವೂ ಕರ್ತವ್ಯ ನಿರ್ವಹಿಸದ ಕಾನ್ಸ್ಟೆಬಲ್ ಒಬ್ಬರಿಗೆ 12 ವರ್ಷಗಳ ಕಾಲ ನಿರಂತರವಾಗಿ ಸಂಬಳ ಸಿಗುತ್ತಿತ್ತು. ಅಭಿಷೇಕ್ ಉಪಾಧ್ಯಾಯ ಎಂಬ ಈ ವ್ಯಕ್ತಿಗೆ ಯಾವುದೇ ಕೆಲಸ ಮಾಡದೆ 28 ಲಕ್ಷಕ್ಕೂ ಹೆಚ್ಚು ಸಂಬಳ ನೀಡಲಾಯಿತು. ಮಧ್ಯಪ್ರದೇಶದ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಇದು ಜನರನ್ನು ದಿಗ್ಭ್ರಮೆಗೊಳಿಸಿದೆ. ಈ ಪ್ರಕರಣವು ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸ್ ಇಲಾಖೆ 2011 ರ ಬ್ಯಾಚ್ನ ವೇತನ ಪರಿಶೀಲನೆಯನ್ನು 2023 ರಲ್ಲಿ ಪ್ರಾರಂಭಿಸಿದಾಗ ಈ ಸಂಪೂರ್ಣ ಅವ್ಯವಸ್ಥೆ ಬಹಿರಂಗವಾಯಿತು. ವಾಸ್ತವವಾಗಿ, 2011 ರಲ್ಲಿ, ಅಭಿಷೇಕ್ ಉಪಾಧ್ಯಾಯ ಅವರನ್ನು ಮಧ್ಯಪ್ರದೇಶ ಪೊಲೀಸ್ನಲ್ಲಿ ಕಾನ್ಸ್ಟೆಬಲ್ ಆಗಿ ನೇಮಕ ಮಾಡಿಕೊಳ್ಳಲಾಯಿತು. ಅವರನ್ನು ಭೋಪಾಲ್ ಪೊಲೀಸ್ ಲೈನ್ಸ್ನಲ್ಲಿ ನೇಮಕ ಮಾಡಲಾಯಿತು ಮತ್ತು ನಂತರ ಸಾಗರ್ ಪೊಲೀಸ್ ತರಬೇತಿ ಕೇಂದ್ರದಲ್ಲಿ ತರಬೇತಿಗಾಗಿ ಕಳುಹಿಸಲಾಯಿತು. ನೇಮಕಾತಿಯ ನಂತರ, ಅಭಿಷೇಕ್ ತರಬೇತಿಯನ್ನು ಪೂರ್ಣಗೊಳಿಸಲಿಲ್ಲ ಅಥವಾ ಕರ್ತವ್ಯಕ್ಕೆ ಸೇರಲಿಲ್ಲ. ಇಷ್ಟೆಲ್ಲಾ ಇದ್ದರೂ, ಅವರ ಹೆಸರು ಇಲಾಖೆಯ ದಾಖಲೆಗಳಲ್ಲಿ ಉಳಿಯಿತು ಮತ್ತು ಅವರ ಸಂಬಳವು ಪ್ರತಿ…
ಉಡುಪಿ : ಮಣಿಪಾಲ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಸಂಭವಿಸಿದೆ. ನಾಪತ್ತೆಯಾದ ವಿದ್ಯಾರ್ಥಿ ಸಿದ್ದಾರ್ಥ್ ಕಾರ್ವಾಲ್ ಎಂದು ತಿಳಿಯಲಾಗಿದೆ. ರಾಜಸ್ಥಾನದ ನಿವಾಸಿ ಜೀತ್ರೇಂದ್ರ ಕುಮಾರ್ ಅವರ ಮಗ ಸಿದ್ದಾರ್ಥ್ ಕಾಲೇಜಿನ ಹಾಸ್ಟೇಲಿನಿಂದ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ವಿವರ : ಪಿರ್ಯಾದಿದಾರರಾದ ಜೀತೇಂದ್ರ ಕುಮಾರ್ (50),ರಾಜಸ್ಥಾನ ಇವರು ದಿನಾಂಕ 07/07/2025 ರಂದು ಬೆಳಿಗ್ಗೆ 08:00 ಗಂಟೆಗೆ ಮಣಿಪಾಲ MSAP ಹಾಸ್ಟೇಲಿನಲ್ಲಿರುವ ಮಗನನ್ನು ನೋಡಲು ಬಂದಾಗ ಪಿರ್ಯಾದಿದಾರರ ಮಗ ಸಿದ್ದಾರ್ಥ ಕಾರ್ವಾಲ್ (23) ಈತನು ಹಾಸ್ಟೇಲಿನ ರೂಮಿನಲ್ಲಿ ಇಲ್ಲದೇ ರೂಮಿನಲ್ಲಿ ಬಟ್ಟೆ ಹಾಗೂ ಮೊಬೈಲ್ ಇದ್ದು ನಂತರ Care Taker Block 10 ಕೌಂಟರಿಗೆ ಹೋಗಿ ವಿಚಾರಿಸಲಾಗಿ ಪಿರ್ಯಾದಿದಾರರ ಮಗ ದಿನಾಂಕ 06/07/2025 ರಂದು ರಾತ್ರಿ 10:30 ಗಂಟೆಗೆ ಹೋಗಿರುವುದಾಗಿ ತಿಳಿಸಿರುತ್ತಾರೆ ಪಿರ್ಯಾದಿದಾರರ ಮಗ ಹಾಸ್ಟೇಲಿಗೆ ಬರದೇ ಮನೆಗೂ ಹೋಗದೇ ಕಾಣೆಯಾಗಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ…
ತುಮಕೂರಿನಲ್ಲಿ ದಾವಣಗೆರೆ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಗನ ವಿಚಾರವಾಗಿ ಮನನೊಂದು ನಾಗರಾಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತುಮಕೂರು ನಗರ ಪೊಲೀಸರ ತನಿಖೆಯ ವೇಳೆ ಈ ಒಂದು ವಿಚಾರ ಬೆಳಕಿಗೆ ಬಂದಿದೆ. ಪಿಎಸ್ಐ ನಾಗರಾಜಪ್ಪ ಬರೆದಿದ್ದ ಡೆತ್ ನೋಟನ್ನು ಪೊಲೀಸರು ಪಡೆದಿದ್ದರು. ನಾಗರಾಜಯ್ಯ ಸಾವಿನ ಕಾರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದರು. ತುಮಕೂರಿಗೆ ಬರುವ ಮುನ್ನ ಮನೆಯಲ್ಲಿ ಪಿಎಸ್ಐ ನಾಗರಾಜಪ್ಪ ಜಗಳವಾಡಿದ್ದರು. ಇಂಜಿನಿಯರ್ ಮುಗಿಸಿದ್ದ ಮಗ ಮನೆಯಲ್ಲಿ ಇದ್ದಿದ್ದಕ್ಕೆ ನಾಗರಾಜಪ್ಪ ತೀವ್ರ ಬೇಸರಗೊಂಡಿದ್ದರು. ಇದೇ ವಿಚಾರವಾಗಿ ನಾಗರಾಜಪ್ಪ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ದಾವಣಗೆರೆಯಿಂದ ತುಮಕೂರಿಗೆ ಬಂದು ಲಾಡ್ಜ್ ನಲ್ಲಿ ನಾಗರಾಜಪ್ಪ ನೇಣಿಗೆ ಶರಣಾಗಿದ್ದಾರೆ. ಮಗನ ವಿಚಾರವಾಗಿ ಬೇಸರಗೊಂಡು ನಾನು ಆತ್ಮಹತ್ಯೆ ಮಾಡಿ ಕೊಳ್ಳುತ್ತಿದ್ದೇನೆ. ನನ್ನ ಮಗನಿಗೆ ಕೆಲಸ ಸಿಗಲಿ ಎಂಬ ಉದ್ದೇಶಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಪಿಎಸ್ಐ ನಾಗರಾಜಪ್ಪ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಪಿಎಸ್ಐ ಆತ್ಮಹತ್ಯೆ ಕೇಸ್ ಶೀಘ್ರದಲ್ಲೇ ದಾವಣಗೆರೆಗೆ ವರ್ಗಾಯಿಸಲಾಗುತ್ತದೆ ದಾವಣಗೆರೆಯ ಕೆಟಿಜೆ ನಾಗರ ಠಾಣೆಗೆ…
ಮಂಗಳೂರು: ಕುಡುಪುವಿನಲ್ಲಿ ನಡೆದ ಮುಹಮ್ಮದ್ ಅಶ್ರಫ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತವಾಗಿದೆ. ಏ. 27ರಂದು ನಡೆದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣದ 2ನೇ ಆರೋಪಿ ದೇವದಾಸ್ ಮತ್ತು 5ನೇ ಆರೋಪಿ ದೀಕ್ಷಿತ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳೂರಿನ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ. ಪ್ರಕರಣದ 1ನೇ ಆರೋಪಿ ಸಚಿನ್ ಟಿ, 3ನೇ ಆರೋಪಿ ಮಂಜುನಾಥ್ ಮತ್ತು 4ನೇ ಆರೋಪಿ ನಟೇಶ್ ಎಂಬವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜೂ.30ರಂದು ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು.
ಮಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಗಳೂರಿನಲ್ಲಿ ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ಸುರತ್ಕಲ್ ಕೃಷ್ಣಾಪುರದಲ್ಲಿ ಮನೆಯಲ್ಲಿ ಕುಸಿದುಬಿದ್ದು ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಕೃಷ್ಣಾಪುರದ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಮನೆಯಲ್ಲೇ ಕುಸಿದು ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿ ಅಫ್ತಾಬ್ (18) ಸಾವನ್ನಪ್ಪಿದ್ದಾನೆ.
ಮಂಗಳೂರು: ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಂಪತಿ ಸೇರಿ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಬಾಲಕಿಯನ್ನು ಅಪಹರಿಸಿದ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಶಹಬಾಝ್ (27) ಹಾಗೂ ಆತನಿಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್ ಆತನ ಪತ್ನಿ ನಿಶಾ ಬಂಧಿತರು. ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಾಡಿಗೆಯ ಮನೆಯಲ್ಲಿ ವಾಸವಿರುವ 16 ವರ್ಷದ ಬಾಲಕಿಯೊಬ್ಬಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನು ಅಪಹರಿಸಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳನ್ನು ಬಂಧಿಸಿ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.









