Author: main-admin

ಬೆಂಗಳೂರು: ಮುಡಾ ಹಗರಣ ಸಂಬಂಧ ಇಡಿ ಕೂಡ ಎಂಟ್ರಿಯಾಗಿತ್ತು. ಇದೀಗ ಇಡಿಯಿಂದ ಮುಡಾ ಪ್ರಕರಣದ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಮುಡಾ ಹಗರಣದ ಇತರೆ ಆರೋಪಿಗಳಿಗೂ ನಡುಕ ಶುರುವಾದಂತೆ ಆಗಿದೆ. ಈ ಸಂಬಂಧ ಹೈಕೋರ್ಟ್ ನ್ಯಾಯಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಸಲಾಯಿತು. ಡಿ.ಬಿ ನಟೇಶ್ ಅವರ ಹೇಳಿಕೆಯನ್ನು ಆಧರಿಸಿ ಹೈಕೋರ್ಟ್ ನ್ಯಾಯಪೀಠವು ಮುಡಾ ಹಗರಣ ಸಂಬಂಧ ಇಡಿ ತನಿಖೆಗೆ ಅನುಮತಿ ನೀಡಿದೆ. ಮುಡಾ ಪ್ರಕರಣದಲ್ಲಿ ಇಡಿ ತನಿಖೆಗೆ ಹೈಕೋರ್ಟ್ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ವಿಭಾಗೀಯ ಪೀಠವು ಅನುಮತಿ ನೀಡಿದೆ. ಹೀಗಾಗಿ ಮುಡಾ ಪ್ರಕರಣ ಈಗ ಮತ್ತೊಂದು ತಿರುವು ಪಡೆದಂತೆ ಆಗಿದೆ. ಇನ್ನೂ ಡಾ.ಡಿಬಿ ನಟೇಶ್ ವಿರುದ್ಧದ ಸಮನ್ಸ್ ರದ್ದು ಆದೇಶಕ್ಕೆ ತಡೆ ನೀಡಿಲ್ಲ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಕಾರ ವ್ಯಕ್ತಪಡಿಸಿದೆ. ಆದರೇ ಡಿ.ಬಿ ನಟೇಶ್ ಹೇಳಿಕೆ ಆಧರಿಸಿ ಇಡಿ ತನಿಖೆ ಮುದುವರೆಸಬಹುದು ಎಂಬುದಾಗಿ ಸಿಜೆ ಅಂಜಾರಿಯಾ, ನ್ಯಾಯಮೂರ್ತಿ ಅರವಿಂದ್ ಅವರಿದ್ದಂತ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಪೊಲೀಸ್‌ ಇಲಾಖೆ ಮಹತ್ತರವಾದ ಪಾತ್ರ ವಹಿಸುತ್ತದೆ. ಪೊಲೀಸ್‌ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಿದರೆ ಅಪರಾಧಗಳು ಕಡಿಮೆಯಾಗುತ್ತದೆ. ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು…

Read More

ಕಾರ್ಕಳ: ಕಾರ್ಕಳದ ಅಜೆಕಾರಿನಲ್ಲಿ ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಾಲಕೃಷ್ಣ ಎಂಬವರನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಅವರಿಬ್ಬರನ್ನು ಪೊಲೀಸರು ಬಂಧಿಸಿದ್ದರು. ಇಲ್ಲಿಯವರೆಗೆ ಅವರು ಹಾಕುತ್ತಿದ್ದ ಜಾಮೀನು ಅರ್ಜಿಯನ್ನು ಕೂಡಾ ನ್ಯಾಯಾಲಯ ರಿಜೆಕ್ಟ್ ಮಾಡುತ್ತಿತ್ತು. ಆದರೆ ಇದೀಗ ಆರೋಪಿ ದಿಲೀಪ್ ಹೆಗ್ಡೆಗೆ ರಾಜ್ಯ ಹೈಕೋರ್ಟ್ ನಿನ್ನೆ ಜಾಮೀನು ನೀಡಿ ಆದೇಶಿಸಿದೆ. ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆ ಆತ ಹೈಕೋರ್ಟ್ ಗೆ ಅರ್ಜಿ ಹಾಕಿದ್ದನು. ಆರೋಪಿ ಪರವಾಗಿ ವಕೀಲರು ನಿಶ್ಚಿತ್ ಕುಮಾರ್ ಶೆಟ್ಟಿ ವಾದ ಮಂಡಿಸಿದ್ದು ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರ ಏಕಸದಸ್ಯ ಪೀಠ ಜಾಮೀನು ನೀಡಿ ಆದೇಶಿಸಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಲೋಕಾಯುಕ್ತ ಬಂಧನದ ಭೀತಿಯಲ್ಲಿ ಪಿಐ ಪರಾರಿ ಆಗಿದ್ದು, ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾನೆ. ಲೋಕಾಯುಕ್ತ ಕಾರ್ಯಾಚರಣೆ ವೇಳೆ ಕುಮಾರ್ ಆಗಿದ್ದಾನೆ. ಸುಳ್ಳು ಕೇಸ್ ದಾಖಲಿಸಿ 4 ಕೋಟಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದಾನೆ ಎಂದು ಆರೋಪ ಕೇಳಿಬಂದಿದೆ. ನಾಗರಬಾವಿಯ ಖಾಸಗಿ ಹೋಟೆಲ್ ನಲ್ಲಿ ಡೀಲ್ ವೇಳೆ ಲೋಕಾಯುಕ್ತ ದಾಳಿ ನಡೆಸಿದೆ. ವಿಚಾರ ತಿಳಿದು ಮನೆಯಲ್ಲಿ ಪೊಲೀಸ್ ಜೀಪ್ ಬಿತ್ತು ಪಿಐ ಕುಮಾರ್ ಎಸ್ಕೆಪ್ ಆಗಿದ್ದಾನೆ. ಡೀಲ್ ಮಾಡುವ ವೇಳೆ ಇಬ್ಬರೂ ಪೊಲೀಸ್ ಕಾನ್ಸ್ಟೇಬಲ್ತಿದ್ದಾರೆ ಅಧಿಕಾರ ದುರ್ಬಳಕೆ ಆರೋಪದಡಿ ಇಬ್ಬರು ಪಿಸಿಗಳು ಸೇರಿ ಐವರನ್ನು ಅರೆಸ್ಟ್ ಮಾಡಲಾಗಿದೆ ಭ್ರಷ್ಟಾಚಾರ ತಡೆ ಕಾಯಿದೆಯ ಅಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಬಂಧಿಸಲಾಗಿದೆ. ಪಿಐ ವಿರುದ್ಧ ಆರೋಪವೇನು? ಸಿವಿಲ್ ಕಾಂಟ್ರಾಕ್ಟರ್ ಚನ್ನೇಗೌಡ ಪತ್ನಿ ಅನುಷಾಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪಿಐ ಕುಮಾರ್ ಇಂದ ಕಿರುಕುಳ ಆರೋಪ ಕೇಳಿ ಬಂದಿದ್ದು ಸುಳ್ಳು ಕೇಸ್ ದಾಖಲಿಸಿ 4 ಕೋಟಿ…

Read More

ಮಂಗಳೂರು: ಮನೆಯ ಲಾಕರ್‌ನಲ್ಲಿಟ್ಟ ಸುಮಾರು 1 ಕೆಜಿ ಚಿನ್ನವನ್ನು ಕಳ್ಳರು ಕದ್ದೊಯ್ದ ಘಟನೆ ಮಂಗಳೂರು ಬಜಪೆ ಸಮೀಪದ ಪೆರ್ಮುದೆಯಲ್ಲಿ ಸಂಭವಿಸಿದೆ.ಪೆರ್ಮುದೆಯ ಜಾನ್ವಿನ್‌ ಪಿಂಟೊ ಎಂಬವರ ಮನೆಯಲ್ಲಿ ಕಳ್ಳತನವಾಗಿರುವ ವಿಚಾರ ಮಂಗಳವಾರ ಬೆಳಕಿಗೆ ಬಂದಿದೆ. ಜಾನ್ವಿನ್‌ ಪಿಂಟೊ ಮತ್ತು ಅವರ ಪುತ್ರ ಪ್ರವೀಣ್‌ ಪಿಂಟೊ ಕುವೈಟ್‌ನಲ್ಲಿದ್ದಾರೆ. ಮನೆಗೆ ಬೀಗ ಹಾಕಿದ್ದು, ಮನೆಯ ಸುತ್ತ 16 ಸಿಸಿ ಕ್ಯಾಮರಾ ಅಳವಡಿಸಿದ್ದಾರೆ. ಆದರೆ ಕಳ್ಳರು ಸಿಸಿ ಕ್ಯಾಮರಾ ಇಲ್ಲದ ಕಡೆಯಿಂದ ಮನೆಗೆ ನುಗ್ಗಿ ಲಾಕರ್‌ನಲ್ಲಿದ್ದ ಅಪಾರ ಚಿನ್ನ ಕಳ್ಳತನ ಮಾಡಿದ್ದಾರೆ.ಕಿಟಿಕಿಯ ಕಬ್ಬಿಣದ ಗ್ರಿಲ್ಸ್‌ ಮುರಿದು ಕಳ್ಳರು ಒಳನುಗ್ಗಿದ್ದಾರೆ. ಮನೆಯಲ್ಲಿ ಮುಧೋಳ, ಜರ್ಮನ್‌ ಶೆಫರ್ಡ್‌ ಸೇರಿ 8 ನಾಯಿಗಳಿವೆ. ಚಾಣಾಕ್ಷ ಕಳ್ಳರು ಇವುಗಳ ಕಣ್ಣುತಪ್ಪಿಸಿ ಕಳ್ಳತನ ಮಾಡಿರುವುದು ಆಶ್ಚರ್ಯ ಉಂಟುಮಾಡಿದೆ. ಈ ನಾಯಿಗಳಿಗೆ ಆಹಾರ ಹಾಕಲು ಇಬ್ಬರು ಕೆಲದಾಳುಗಳು ಬರುತ್ತಿದ್ದು, ಮಂಗಳವಾರ ಬೆಳಗ್ಗೆ ಅವರು ಬಂದಾಗ ಕಳ್ಳತನವಾಗಿರುವುದು ತಿಳಿದುಬಂದಿದೆ. ಲಾಕರನ್ನು ಕೀ ಬಳಸಿ ತೆರೆದು ಅದರೊಳಗಿದ್ದ 1 ಕೆಜಿಯಷ್ಟು ಚಿನ್ನಾಭರಣಗಳು ಮತ್ತು ದುಬಾರಿ ಬೆಲೆಯ ಹಲವು ಕೈಗಡಿಯಾರಗಳನ್ನು…

Read More

ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ. ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಶಿಶುವನ್ನು ಪುತ್ತೂರಿನ ನೆಲ್ಲಿಕಟ್ಟೆಯ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರಕ್ಕೆ ಆರೈಕೆಗಾಗಿ ದಾಖಲಿಸಲಾಗಿದೆ. ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1 ನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಆಯುಕ್ತರಿಗೆ ಇಬ್ಬರು ಬ್ರೋಕರ್‌ಗಳು ಮಾನಹಾನಿಕರ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ. ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ಮೂಡಾ ಆಯುಕ್ತೆ ಉರ್ವ ಠಾಣೆಗೆ ದೂರು ನೀಡಿದ್ದಾರೆ. ಜನವರಿ 7 ರಂದು ಸಿಬ್ಬಂದಿ ಊಟಕ್ಕೆ ಹೋದ ಸಮಯದಲ್ಲಿ ಮುಡಾ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ ಮೇಜಿನ ಮೇಲಿದ್ದ ಕಡತಗಳನ್ನು ವಿರೂಪಗೊಳಿಸಿದ ಆರೋಪ, ಅಲ್ಲದೆ ಮೂಡಾದಲ್ಲಿ ನಡೆದಿರುವ ಕೆಲವು ವಿದ್ಯಾಮಾನ, ಮುಡಾ ಕಚೇರಿಯಲ್ಲಿನ ಏಕ-ಸ್ಥಳ ಅನುಮೋದನೆಗಳು ಮತ್ತು ಇತರ ಕೆಲಸಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಮಧ್ಯವರ್ತಿಗಳು ಹಸ್ತಕ್ಷೇಪ ಮಾಡುವುದನ್ನು ತಡೆಯಲು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಆಯುಕ್ತರು ಉರ್ವ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜನವರಿ 7 ಮತ್ತು ಮಾರ್ಚ್ 27ರ ನಡುವೆ, ಆರೋಪಿಗಳು ವಾಟ್ಸಾಪ್ ಗ್ರೂಪ್ ರಚಿಸಿ, ಇತರ ಮಧ್ಯವರ್ತಿಗಳನ್ನು ಒಟ್ಟುಗೂಡಿಸಿ, ಮೂಡಾ ಆಯುಕ್ತರ ಬಗ್ಗೆ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಫೋನ್ ಮೂಲಕ ಕೊಲೆ ಬೆದರಿಕೆ ಹಾಕಿದ್ದಾರೆ. ಕಚೇರಿಯಲ್ಲಿ ಅಧಿಕೃತ ಕರ್ತವ್ಯಗಳಿಗೆ ಆಗಾಗ್ಗೆ ಅಡ್ಡಿಪಡಿಸಲು…

Read More

ಬ್ರಹ್ಮಾವರ : ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ವಂಶಿ ಜಿ ಶೆಟ್ಟಿ ಎಂದು ಗುರುತಿಸಲಾಗಿದೆ. ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆಯ ಬಳಿಕ ಆಸ್ಪತ್ರೆಯ ಬಳಿ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದ್ದು, ಇಲ್ಲಿ ಈ ಹಿಂದೆ ಹಲವು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಜಂಕ್ಷನ್‌ನಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಶಾಶ್ವತ ಪರಿಹಾರವನ್ನು ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Read More

ಮಂಗಳೂರು: ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರ ಸಂಜೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹವು ಕೊಳೆತು ಅಹಿತಕರ ವಾಸನೆ ಹೊರಸೂಸುತ್ತಿತ್ತು. ಮೃತದೇಹ ಪತ್ತೆಯಾದ ಸ್ಥಳ ರಮೇಶ್‌ ಎಂಬುವರಿಗೆ ಸೇರಿದ್ದು. ಅವರು ದೂರು ದಾಖಲಿಸಿದ್ದಾರೆ. ಇದರ ಆಧಾರದ ಮೇಲೆ ಪೂರ್ವ ಪೊಲೀಸ್‌ ಠಾಣೆಯಲ್ಲಿ ಯುಡಿಆರ್‌ ನಂ.6/25 ರಲ್ಲಿ ಯು.ಡಿ.ಆರ್‌ (ಅಸ್ವಾಭಾವಿಕ ಮರಣ ಪ್ರಕರಣ). ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತಪಾಸಣೆ ವೇಳೆ ಮೃತದೇಹದ ಬಳಿಯಿದ್ದ ಬ್ಯಾಗನಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಒಪಿಡಿ ಚೀಟಿ ಪತ್ತೆಯಾಗಿದೆ. ಚೀಟಿಯಲ್ಲಿನ ಮಾಹಿತಿಯಂತೆ ಮೃತರನ್ನು ಫೆ.4ರಂದು. 108 ಆಂಬುಲೆನ್ಸ್‌ ಮೂಲಕ ವೆನ್ಸಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಡಿದ ಅಮಲಿನಲ್ಲಿ ಕೆಳಗೆ ಬಿದ್ದು ಗಾಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರಗೆ. ದಾಖಲಿಸಲಾಗಿದೆ ಎಂದು ಆಸ್ಪತ್ರೆ ದಾಖಲೆಗಳು ಸೂಚಿಸುತ್ತದೆ. ಮೃತರ ಗುರುತು ಪತ್ತೆಗೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Read More

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್‌ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು. ಕಾರಿನ ಚಾಲಕ ಹಾಗೂ ಮತ್ತೊಬ್ಬನಲ್ಲಿ ಈ ಬಗ್ಗೆ ವಿಚಾರಿಸಿದಾಗ ತಡವರಿಸಿಕೊಂಡು ಉತ್ತರಿಸಿದ್ದು ಪ್ರಶ್ನಿಸಿದಾಗ, ತಮ್ಮ ಬಳಿ ಎಂಡಿಎಂಎ ವಸ್ತು ಇರುವುದಾಗಿಯೂ, ಇದನ್ನು ಮಾರಾಟ ಮಾಡಲು ತೆರಳುತ್ತಿರುವುದಾಗಿ ಒಪ್ಪಿಕೊಂಡಿದ್ದರು ಆರೋಪಿಗಳಾದ ಇಸುಬು ಫೈಝಲ್ (30ವ.) ಮತ್ತು ತಸ್ಲಿಪ್ (26ವ) ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More