ಉಪ್ಪಿನಂಗಡಿ: ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬನ ಮೃತದೇಹ ತನ್ನ ಮನೆಯ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ. ಮೃತರನ್ನು ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ವರ್ಷ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Author: main-admin
ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಳೆದ ತಿಂಗಳು ಶರಣಾಗಿ ಮುಖ್ಯವಾಹಿನಿಗೆ ಸೇರಿದ ಆರು ನಕ್ಸಲರ ಪೈಕಿ ನಾಲ್ವರನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಾಕಿ ಉಳಿದಿರುವ ಪ್ರಕರಣಗಳ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾರೆಪ್ಪ (ಜಯಣ್ಣ), ಲತಾ (ಮುಂಡಗಾರು ಲತಾ), ವನಜಾಕ್ಷಿ (ಜ್ಯೋತಿ), ಸುಂದರಿ (ಗೀತಾ, ಜೆನ್ನಿ) ಅವರನ್ನು ಪೊಲೀಸರು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದರು.ತನಿಖೆಯ ಭಾಗವಾಗಿ ಶರಣಾದ ಆರು ನಕ್ಸಲರ ಪೈಕಿ ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅವರನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಕೋರಿದ್ದಾರೆ. ಕಾರ್ಕಳ-ಹೆಬ್ರಿ ವಲಯದಲ್ಲಿ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದ 15 ಪ್ರಕರಣಗಳ ಕುರಿತು ಅಧಿಕಾರಿಗಳು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯು ಅನೇಕ ಹಿಂಸಾಚಾರದ ಘಟನೆಗಳು ಮತ್ತು ಶರಣಾದ ವ್ಯಕ್ತಿಗಳಿಗೆ ಕಾರಣವಾದ ಕಾನೂನುಬಾಹಿರ ಚಟುವಟಿಕೆಗಳನ್ನು ಒಳಗೊಂಡಿದೆ.ಈ ಪ್ರಕ್ರಿಯೆಯ ಭಾಗವಾಗಿ, ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಜಯಣ್ಣ…
ಮಂಗಳೂರು: ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿದ್ದಾರೆ. ಮಂಗಳೂರು ಮೂಲದ ಪ್ಲೆಯಿಂಗ್ ಆಫೀಸರ್ ತನುಷ್ಕಾ ಸಿಂಗ್ ಅವರಿಗೆ ಈ ಸದಾವಕಾಸ ದೊರಕಿದ್ದು, ಆಕೆ ಯುದ್ಧ ವಿಮಾನ ಸ್ಕ್ಯಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.ಜಾಗ್ವಾರ್ ಯುದ್ಧ ವಿಮಾನವನ್ನು ಇದುವರೆಗೆ ಮಹಿಳಾ ಪೈಲಟ್‌ಗಳು ಶಾಶ್ವತ ನೆಲೆಯಲ್ಲಿ ಮುನ್ನಡೆಸಿಲ್ಲ. ತನುಷ್ಕಾ ಮಿಲಿಟರಿ ಹಿನ್ನೆಲೆಯ ಕುಟುಂಬದವರು. ಅವರ ತಂದೆ, ಅಜ್ಜ ಎಲ್ಲರೂ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉತ್ತರ ಪ್ರದೇಶದವರಾದರೂ 2007ರಿಂದ ತನುಷ್ಕಾ ಮಂಗಳೂರಿನಲ್ಲಿಯೇ ನೆಲೆಸಿದ್ದಾರೆ. ಹಾಗಾಗಿ “ನಾನು ಕುಡ್ಲದವಳು” ಎಂದು ಹೆಮ್ಮೆಯಿಂದ ಹೇಳುತ್ತಾಳೆ. ತಂದೆ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಅಜಯ್ ಪ್ರತಾಪ್ ಸಿಂಗ್ ಅವರು ಪ್ರಸ್ತುತ ಎಂಆರ್‌ಪಿಎಲ್ ಸಂಸ್ಥೆಯ ಎಚ್‌ಎಸ್‌ಇ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಆಗಿದ್ದಾರೆ.ತನುಷ್ಕಾ ಸುರತ್ಕಲ್ ಡಿಪಿಎಸ್ ಎಂಆರ್‌ಪಿಎಲ್ ಶಾಲೆ ಯಲ್ಲಿ ಎಸೆಸೆಲ್ಸಿ, ಮಂಗಳೂರಿನ ಶಾರದಾ ಪಿಯು ಕಾಲೇಜಿನಲ್ಲಿ ಪದವಿ ಪೂರ್ವ ವಿಜ್ಞಾನ ಶಿಕ್ಷಣದ ಬಳಿಕ ಮಣಿಪಾಲ ಎಂಐಟಿಯಲ್ಲಿ…
ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಸಿನಿಮಾ ಸ್ಟೈಲ್‌ನಲ್ಲಿ ಗ್ಯಾಂಗ್ ಸಮೇತ ಯುವತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದ ರೌಡಿ ಶೀಟರ್ ಆ್ಯಂಗ್ ಗ್ಯಾಂಗ್ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಶನಿವಾರ 1ಗಂಟೆ ಸುಮಾರಿಗೆ ಸುಬ್ರಮಣ್ಯಪುರ ಲಿಮಿಟ್ಸ್ ರೆಸಿಡೆನ್ಸಿಯಲ್ ಏರಿಯಾದಲ್ಲಿ ಬೈಕ್‌ನಲ್ಲಿ ಮಾಸ್ಕ್ ಹಾಕ್ಕೊಂಡು ಕೈಲಿ ಲಾಂಗು, ಮಚ್ಚು, ಪೆಟ್ರೋಲ್ ಹಿಡ್ಕೊಂಡ್ ಬಂದಿದ್ದ ನಾಲ್ವರು ರೌಡಿ ಶೀಟರ್ ರಾಹುಲ್ @ ಸ್ಟಾರ್ ಆ್ಯಂಡ್ ಟೀಮ್ ಏಕಾಏಕಿ ಅಪಾರ್ಟ್‌ಮೆಂಟ್‌ಗೆ ನುಗ್ಗಿದ್ರು. ತಡೆಯೋಕೆ ಬಂದಿದ್ದ ಸೆಕ್ಯೂರಿಟಿಗೆ ಲಾಂಗ್ ತೋರಿಸಿ ಬೆದರಿಸಿದ್ರು. ಈ ವೇಳೆ ರಾಹುಲ್ ಪ್ರೀತಿ ಅಂತ ಹಿಂದೆ ಬಿದ್ದಿದ್ದ, ಯುವತಿ ತಂದೆ ತಡೆಯೋಕೆ ಬಂದಾಗ ಆತನಿಗೆ ಚಾಕು ಇರಿದು ಪಾರ್ಕಿಂಗ್‌ನಲ್ಲಿ ನಿಂತಿದ್ದ ಕಾರುಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಗ್ಯಾಂಗ್ ಸಮೇತ ಎಸ್ಕೇಪ್ ಆಗಿದ್ರು. ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅಧಿಕಾರಿಗಳಿಗಳು ಶೀಘ್ರವಾಗಿ ಆರೋಪಿಗಳನ್ನ ಬಂಧಿಸುವಂತೆ ತಾಖೀತು ಮಾಡಿದ್ರು. ಇದರ ಬೆನ್ನಲ್ಲೆ ಕಾರ್ಯಪ್ರವೃತ್ತರಾದ ಸುಬ್ರಮಣ್ಯಪುರ ಪೊಲೀಸರು ಸ್ಟಾರ್ ರಾಹುಲ್…
ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಯನ್ನುಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ಗುಲ್ಬರ್ಗಾ ಜಿಲ್ಲೆ , ಉಮ್ಮರ್ ಕಾಲೊನಿ ಆಜಾದ್ ಪುರ ರೋಡ್ ಶೇಕ್ ಸಿಕಂದರ್(22), ಮಂಗಳೂರು ಕಾವೂರು ನಿವಾಸಿ ಮೊಹಮ್ಮದ್ ತೌಫೀಕ್(29), ಎಂದು ಗುರುತಿಸಲಾಗಿದೆ.ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಮುಂಬೈಯಲ್ಲಿ ಖರೀದಿಸಿಕೊಂಡು ಗುಲ್ಬರ್ಗ ಮೂಲಕ ಮಂಗಳೂರಿಗೆ ಸಾಗಾಟ ಮಾಡಿಕೊಂಡು ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ ಕೂಳೂರು ಪರಿಸರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಆರೋಪಿಗಳು ಮಾರಾಟ ಮಾಡುತ್ತಿದ್ದರು. 1,15,000 ಮೌಲ್ಯದ 23 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 2 ಮೊಬೈಲ್ ಫೋನ್ ಗಳು, ಸುಝುಕಿ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,10,000 ಅಂದಾಜಿಸಲಾಗಿದೆ. . ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶೇಕ್ ಸಿಕಂದರ್ ಎಂಬಾತನು…
ಉಡುಪಿ: ಉಡುಪಿಯಲ್ಲಿ ಕೆಲ ತಿಂಗಳ ಹಿಂದೆಯಷ್ಟೇ ಕಳ್ಳರು ಪೊಲೀಸ್ ಕ್ವಾಟ್ರಸ್‌ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಆ ಚಾಣಾಕ್ಷ ಕಳ್ಳರು ಯಾರು ಅನ್ನೋದನ್ನು ಪತ್ತೆ ಹಚ್ಚಲು ಉಡುಪಿ ಪೊಲೀಸರಿಂದ ಇದುವರೆಗೂ ಸಾಧ್ಯವಾಗಿಲ್ಲ. ಇದೀಗ ಪೊಲೀಸರ ವೀಕ್ ನೆಸ್ ಅರಿತ ಕಳ್ಳರು ಮತ್ತೆ ಪೊಲೀಸ್ ಕ್ವಾಟ್ರಸ್‌ಗೆ ಕನ್ನ ಹಾಕಿ ಮಾಲು ಸಮೇತ ಎಸ್ಕೇಪ್ ಆಗಿದ್ದಾರೆ. ಉಡುಪಿ ನಗರದ ಮಿಷನ್ ಕಂಪೌಂಡ್ ಬಳಿಯ ಡಿ.ಎ.ಆರ್ ಕಛೇರಿ ಸಮೀಪದಲ್ಲೇ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯ ಕ್ವಾಟ್ರಸ್‌ಗೆ ನಿನ್ನೆ ರಾತ್ರಿ ಸರಿ ಸುಮಾರು ಎರಡರಿಂದ ಮೂರು ಗಂಟೆಯ ವೇಳೆಗೆ ಕಳ್ಳರು ನುಗ್ಗಿದ ಅನುಮಾನ ಇದೆ. ಇಂದು ಮುಂಜಾನೆ ಡ್ಯೂಟಿ ಮುಗಿಸಿ ಬಂದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.ಸದ್ಯ ಪೊಲೀಸರು ಸ್ಥಳಕ್ಕೆ ಬೆರಳಚ್ಚು ತಜ್ಞರನ್ನು ಕರೆಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಪೊಲೀಸ್ ಕ್ವಾಟ್ರಸ್‌ನಲ್ಲಿ ನಡೆದ ಪ್ರಕರಣವನ್ನು ಬೇಧಿಸಲು ಇನ್ನೂ ಸಾಧ್ಯವಾಗದ ಪೊಲೀಸರು ಇದನ್ನು ಬೇದಿಸ್ತಾರಾ ಅಂತ ಜನ ಪ್ರಶ್ನೆ…
ಮಂಜೇಶ್ವರ: ದಂಪತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೈಯಲು ಪ್ರಯತ್ನ ಪಟ್ಟ ಘಟನೆ ಮಂಜೇಶ್ವರ ಕುಂಡುಕೊಳಕೆ ಸಮುದ್ರ ತೀರದಲ್ಲಿ ನಡೆದಿದೆ. ಪತ್ನಿಯನ್ನು ಸ್ಥಳೀಯರು ಉಳಿಸಿದರೆ, ಪತಿ ಸಾವಿಗೀಡಾಗಿದ್ದಾರೆ.ಮೀಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂಬಾರು ನೀರೋಲ್ಪೆ ನಿವಾಸಿ, ಹೊಸಂಗಡಿ ಎಸ್ ಎ ಟೈಲರ್ ಮಾಲಕ ಭಾಸ್ಕರ್ ನೀರೋಲ್ಪೆ (60) ಸಾವಿಗೀಡಾದ ವ್ಯಕ್ತಿ. ಶನಿವಾರ ಸಂಜೆ ಸಮಯದಲ್ಲಿ ಈ ಘಟನೆ ನಡೆದಿರುವ ಕುರಿತು ವರದಿಯಾಗಿದೆ. ಪೊಲೀಸರು ಭಾನುವಾರ ಬೆಳಗ್ಗಿನ ಸಮಯದಿಂದಲೇ ಹುಡುಕಾಟ ಮಾಡಲು ಪ್ರಾರಂಭ ಮಾಡಿದ್ದು, ಭಾಸ್ಕರ್ ಅವರ ಶವ ಅಪರಾಹ್ನ 3 ಗಂಟೆ ಸಮಯದಲ್ಲಿ ಉಪ್ಪಳ ಮುಸೋಡಿ ಅಧಿಕದ ಸಮುದ್ರದಲ್ಲಿ ಪತ್ತೆಯಾಗಿದೆ.ನಂತರ ಮೃತದೇಹವನ್ನು ಬೋಟ್ ಮೂಲಕ ದಡಕ್ಕೆ ತರಲಾಗಿದ್ದು, ಮರಣೋತ್ತರ ಪರೀಕ್ಷೆಗೆಂದು ಮಂಗಲ್ಪಾಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪತ್ನಿ ಮಾಲತಿ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನವದೆಹಲಿ : ನ್ಯೂಯಾರ್ಕ್‌ನ ಜಾನ್ ಎಫ್ ಕೆ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟ್ಟಿದ್ದ ವಿಮಾನ ರೋಮ್‌ನಲ್ಲಿ ಭಾನುವಾರ(ಫೆ.23) ಸಂಜೆ ತುರ್ತು ಭೂ ಸ್ಪರ್ಶ ಮಾಡಿದೆ. ಬಾಂಬ್ ಬೆದರಿಕೆ ಹಿನ್ನೆಲೆ ಈ ನಿರ್ಧಾರ ತಳೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೋಯಿಂಗ್ 787-9 ಡ್ರೀಮ್‌ಲೈನರ್ ವಿಮಾನ ಕ್ಯಾಸ್ಪಿಯನ್ ಸಮುದ್ರದ ಮೇಲೆ ಪಶ್ಚಿಮಕ್ಕೆ ಹೋಗುವ ಮೊದಲು ಇಟಲಿಯತ್ತ ತನ್ನ ಮಾರ್ಗ ಬದಲಿಸಿದೆ. ಇದರಲ್ಲಿ 280 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.ನ್ಯೂಯಾರ್ಕ್ ನಿಂದ ಶನಿವಾರ(ಫೆ.22) ರಾತ್ರಿ 8-30ರ ಸಮಯದಲ್ಲಿ ಟೇಕ್ ಆಫ್ ಆದ ವಿಮಾನ ದೆಹಲಿಯತ್ತ ಹೊರಟಿಸಿದೆ. ಸುಮಾರು 10 ಗಂಟೆಗಳ ಹಾರಾಟದ ನಂತರ ವಿಮಾನವು ಕಪ್ಪು ಸಮುದ್ರದ ಬಳಿ ಹಠಾತ್ ಮಾರ್ಗವನ್ನು ಬದಲಾಯಿಸಿದೆ. ದಿಕ್ಕು ಬದಲಿಸಿದ ಅದು ರೋಮ್‌ನ ಫಿಮಿಸಿನೊ ವಿಮಾನ ನಿಲ್ದಾಣದ ಕಡೆಗೆ ಹೊರಟಿದೆ. ಟಾಲಿಯನ್ ವಾಯುಪ್ರದೇಶ ಸಮೀಪಿಸಿದ ನಂತರ, ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಇಟಾಲಿಯನ್ ಯುದ್ದ ವಿಮಾನಗಳು ಬೆಂಗಾವಲು ಮಾಡಿದ್ದಾಗಿ ವರದಿಯಾಗಿದೆ. ವಿಮಾನವು ಭಾನುವಾರ 5:30ರ ವೇಳೆಗೆ ರೋಮ್‌ನಲ್ಲಿ ಸುರಕ್ಷಿತವಾಗಿ…
ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ದುರ್ದೈವಿ. ಪವನ್ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅಜ್ಜಿ ಮನೆಗೆಂದು ಬಂದವ ಆಕಸ್ಮಿಕವಾಗಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕನೋರ್ವ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ. ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28 ವ.) ಮೃತಪಟ್ಟವರು.ಇಲ್ಲಿನ ವೈನ್ ಶಾಪ್ ವೊಂದರಲ್ಲಿ ಉದ್ಯೋಗಿಯಾಗಿದ್ದ ಇವರಿಗೆ ಎರಡು ದಿನಗಳಿಂದ ಜ್ವರವಿದ್ದು, ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯೊಂದರಿಂದ ಔಷಧಿ ಪಡೆದುಕೊಂಡಿದ್ದರು. ಶನಿವಾರ ನಸುಕಿನ ಜಾವ ಸುಮಾರು 3 ಗಂಟೆಗೆ ಪತ್ನಿ ಎಚ್ಚರಗೊಂಡು ಇವರನ್ನು ನೋಡಿದಾಗ ಮಲಗಿದ್ದ ಹಾಸಿಗೆಯಲ್ಲಿಯೇ ಎದ್ದು ಕುಳಿತು ಗೋಡೆಗೊರಗಿ ಎದೆಯ ಬಳಿ ತನ್ನ ಕೈಯನ್ನಿಟ್ಟುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದರು. ಪತ್ನಿ ಮಾತನಾಡಲೆತ್ನಿಸಿದಾಗ ಇವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಕೂಡಲೇ ನೆರೆಹೊರೆಯವರ ಸಹಕಾರದೊಂದಿಗೆ ಇವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತರಾಗಿದ್ದಾರೆ.ಕೇಶವರವರು ಪ್ರಾಮಾಣಿಕ ದುಡಿಮೆಯಿಂದ ತನ್ನ ಬದುಕನ್ನು ಕಟ್ಟಿಕೊಂಡಿದ್ದರು.’ ಸುಮಾರು ಒಂದೂವರೆ ವರ್ಷದ ಹಿಂದೆಯಷ್ಟೇ ಇವರಿಗೆ ಮದುವೆಯಾಗಿದ್ದು, ಮೂರು ತಿಂಗಳ ಹಸುಗೂಸು ಇದೆ. ಎಲ್ಲರೊಂದಿಗೂ ನಗು ಮುಖದಿಂದಲೇ ಮಾತನಾಡುತ್ತಿದ್ದ ಇವರು ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದರು. ಮೃತರು…










