ವಿದ್ಯಾರ್ಥಿಗಳ ಭವಿಷ್ಯ ರೂಪಿಸಲಿದೆ ಎಐ ಕಾರ್ಡ್ ; ನೋಂದಾಯಿಸಿದ ವಿದ್ಯಾರ್ಥಿಗೆ AI ತರಬೇತಿ, ಸ್ಕಾಲರ್ ಶಿಪ್, AI ಶಿಕ್ಷಕ್ , AI COMPETENCY ಸರ್ಟಿಫಿಕೇಟ್, ನೋಂದಾಯಿಸಲು ಇದೇ ಅ.31 ಕೊನೆ ದಿನ. ತಂತ್ರಜ್ಞಾನ ಜಗತ್ತು ಎಷ್ಟರಮಟ್ಟಿಗೆ ಬದಲಾಗುತ್ತಿದೆ ಎಂದರೆ, ಎಐ ಟೆಕ್ನಾಲಜಿ ತಿಳಿದುಕೊಳ್ಳದಿದ್ದರೆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೊಡ್ಡ ಮಟ್ಟದ ಪರಿಣಾಮ ಎದುರಿಸಬೇಕಾಗುತ್ತದೆ. ಹೀಗಾಗಿ ಎಐ ತಂತ್ರಜ್ಞಾನವನ್ನು ಪ್ರಾಥಮಿಕ, ಹೈಸ್ಕೂಲ್, ಪಿಯು, ಪದವಿ, ಇಂಜಿನಿಯರಿಂಗ್, ಮೆಡಿಕಲ್ ಹೀಗೆ ಎಲ್ಲಾ ಕ್ಷೇತ್ರದ ವಿದ್ಯಾರ್ಥಿಗಳು ತಮ್ಮ ಕಲಿಕಾ ಹಂತದಲ್ಲೇ ಬಳಸಿಕೊಂಡು ನೈಪುಣ್ಯತೆಯನ್ನು ಪಡೆಯುವುದು ಅನಿವಾರ್ಯ ವಾಗಿದೆ. ಏನಿದು AI ಕಾರ್ಡ್?ಈ AI ಕಾರ್ಡ್ ಪ್ರತಿ ವಿದ್ಯಾರ್ಥಿಯ ಕಲಿಕೆಯ ವೇಗ ಮತ್ತು ಶೈಲಿಗೆ ಅನುಗುಣವಾಗಿ ಕಲಿಕೆಗೆ ಹೆಚ್ಚಿನ ಸಮಯವನ್ನು ಮೀಸಲಿಡಲು ಸಹಾಯ ಮಾಡುತ್ತದೆ, ಇದರಿಂದಾಗಿ ಕಲಿಕೆಯನ್ನು ಎಲ್ಲರಿಗೂ ಕೈಗೆಟುಕುವಂತೆ ಮಾಡುತ್ತದೆ ಜೊತೆಗೆ ಶಿಕ್ಷಣದ ಗುಣಮಟ್ಟ ವನ್ನು ಹೆಚ್ಚಿಸುತ್ತದೆ. ಯಾವುದೇ ವಿಷಯವನ್ನು ಪರಿಣಾಮಕಾರಿಯಾಗಿ ಅರ್ಥಮಾಡಿಕೊಳ್ಳಲು ಮತ್ತು ದಿನನಿತ್ಯದ ಬದುಕಿನಲ್ಲಿ ಸೃಜನಶೀಲ ಚಿಂತನೆಗೆ ಈ AI ಕಾರ್ಡ್ ಸಹಾಯಕವಾಗಿದೆ. ಕನ್ನಡ…
Author: main-admin
ರಾಷ್ಟ್ರವ್ಯಾಪಿ “ಡಿಜಿಟಲ್ ಬಂಧನ” ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ತೈವಾನ್ ಮೂಲದ ನಾಲ್ವರು ಸೇರಿದಂತೆ ಹದಿನೇಳು ಜನರನ್ನು ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ ಬಂಧಿಸಿದೆ ಎಂದು ಗುಜರಾತ್ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಡಿಜಿಟಲ್ ಅರೆಸ್ಟ್ ಎಂದರೇನು? ಡಿಜಿಟಲ್ ಬಂಧನವು ಒಂದು ರೀತಿಯ ಸೈಬರ್ ಕ್ರೈಮ್ ಆಗಿದ್ದು, ಇದರಲ್ಲಿ ಬಲಿಪಶು ಹಣ ವರ್ಗಾವಣೆ, ಮಾದಕವಸ್ತು ಕಳ್ಳಸಾಗಣೆ ಇತ್ಯಾದಿಗಳಿಗಾಗಿ ಅಧಿಕಾರಿಗಳಿಂದ ತನಿಖೆಯಲ್ಲಿದ್ದಾರೆ ಎಂದು ನಂಬುವಂತೆ ಮಾಡಲಾಗುತ್ತದೆ. ಬಲಿಪಶುವನ್ನು ವೀಡಿಯೊ ಕರೆ ಮತ್ತು ಇತರ ಮೂಲಕ ವಂಚಕರಿಗೆ ಪ್ರವೇಶಿಸುವಾಗ ಬಂಧನದಲ್ಲಿರಲು ಕೇಳಲಾಗುತ್ತದೆ. ಆನ್‌ಲೈನ್ ಪರಿಕರಗಳು, ಆದ್ದರಿಂದ ಡಿಜಿಟಲ್ ಬಂಧನ ಎಂಬ ಪದ. ನಂತರ ಬಲಿಪಶುವನ್ನು ಬಿಟ್ಟುಬಿಡಲು ಆರೋಪಿಗಳಿಂದ ದೊಡ್ಡ ಮೊತ್ತದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಒತ್ತಾಯಿಸಲಾಗುತ್ತದೆ. ಗ್ಯಾಂಗ್ 10 ದಿನಗಳ ಕಾಲ ಹಿರಿಯ ನಾಗರಿಕರನ್ನು “ಡಿಜಿಟಲ್‌ನಲ್ಲಿ ಬಂಧಿಸಿದೆ”, ವೀಡಿಯೊ ಕರೆಗಳ ಮೂಲಕ ಅವನ ಮೇಲೆ ನಿಗಾ ಇರಿಸಿದೆ ಮತ್ತು “ಆರ್‌ಬಿಐ ಸಮಸ್ಯೆಯನ್ನು” ಪರಿಹರಿಸಲು “ಮರುಪಾವತಿಸಬಹುದಾದ” ಸಂಸ್ಕರಣಾ ಶುಲ್ಕವಾಗಿ 79.34 ಲಕ್ಷ ರೂಪಾಯಿಗಳನ್ನು…
ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ನವರಾತ್ರಿ ಉತ್ಸವಕ್ಕೆ ತೆರಳಿದ್ದ ಮೂವರು ಮಹಿಳೆಯರ ಚಿನ್ನದ ಸರ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೀಲಾ ಎಂಬವರು ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುವ ದೇವರ ದರ್ಶಕ್ಕೆ ಅ.11ರಂದು ಹೋದ ವೇಳೆ ಅವರ 6 ಪವನ್ ತೂಕದ ಸರವನ್ನು ಕಳವುಗೈಯಲಾಗಿದೆ. ಅದೇ ವೇಳೆ ಕಮಲಾಕ್ಷಿ ಎಂಬವರ 3 ಪವನ್ ಮತ್ತು ಮೀನಾಕ್ಷಿ ಎಂಬವರ 4 ಪವನ್ ತೂಕದ ಚಿನ್ನದ ಸರ ಕೂಡಾ ಕಳವಾ ಗಿದೆ. ಇವುಗಳ ಒಟ್ಟು ಮೌಲ್ಯ 4 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸ್ಮಿತಾ ಎಂಬವರು ನೀಡಿದ ದೂರಿನಂತೆ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ: ವಿವಿಧ ಪ್ರಕರಣಗಳಲ್ಲಿ ವಾರಂಟ್ ಆರೋಪಿಯನ್ನು ತಲೆಮರೆಸಿಕೊಂಡಿದ್ದ ಅಕ್ಟೋಬರ್ 13ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹಮೀದ್ ಯಾನೆ ಜಫಾರ್ ಹಮೀದ್ ಹಾನೆ ಕುಂಹಿಮೋನು ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಪಡಂಗಡಿಯಿಂದ ದಸ್ತಗಿರಿ ಮಾಡಿದ್ದಾರೆ. ಆರೋಪಿ ಮೇಲೆ ದ.ಕ. ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರು, ಧರ್ಮಸ್ಥಳ, ಪುಂಜಾಲಕಟ್ಟೆ, ಮಂಗಳೂರು ನಗರ, ಬಂದರು ಠಾಣೆ, ಹೊರ ಜಿಲ್ಲೆಗಳಾದ ಹಾಸನದ ಬೇಲೂರು ಚಿಕ್ಕಮಂಗಳೂರು ಜಿಲ್ಲೆ ಕೊಪ್ಪ ಹರಿಹರಪುರ, ಚಿಕ್ಕಮಗಳೂರು, ಮೂಡಿಗೆರೆ, ಉಡುಪಿ ಜಿಲ್ಲೆ ಪಡುಬಿದ್ರಿ, ಮಡಿಕೇರಿ ಹಾಗೂ ಕೇರಳದಲ್ಲಿ ಸುಮಾರು 34 ಕಳ್ಳತನಾದ ಪ್ರಕರಣಗಳು ದಾಖಲಾಗಿದ್ದವು.
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಇಂದು(ಅ.14) ನಡೆದಿದೆ. ಜಾಮೀನು ಮಂಜೂರಾಗದ ಹಿನ್ನೆಲೆಯಲ್ಲಿ ದರ್ಶನ್ ಗೆ ಮತ್ತೆ ನಿರಾಸೆ ಆಗಿದೆ. A13 ದೀಪಕ್ ಗೆ ಮಾತ್ರ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ. ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಅವರಿಗೂ ಜಾಮೀನು ನಿರಾಕರಿಸಲಾಗಿದೆ. ದರ್ಶನ್ ಅವರ ಜಾರ್ಮಿನು ಅರ್ಜಿ ಸಂಬಂಧ ಬೆಂಗಳೂರಿನ 57 ನೇ ಸಿಸಿಎಚ್ ನ್ಯಾಯಾಲಯದಲ್ಲಿ ಸುದೀರ್ಘ ವಾದ – ಪ್ರತಿವಾದ ನಡೆದಿದ್ದು, ನ್ಯಾಯಾಧೀಶರು ಸೋಮವಾರಕ್ಕೆ ಅಂತಿಮ ಆದೇಶ ಕಾಯ್ದಿರಿಸಿದ್ದರು. ಆದರೆ, ಜಾಮೀನು ಮಂಜೂರಾಗಿಲ್ಲ. ಅಭಿಮಾನಿಗಳು ದೌಡು : ಇನ್ನು ನಟ ದರ್ಶನ್ ನೋಡಲು ಬಳ್ಳಾರಿ ಸೆಂಟ್ರಲ್ ಜೈಲ್ ಮುಂಭಾಗ ಅಭಿಮಾನಿಗಳ ದಂಡು ಹರಿದು ಬಂದಿದೆ. ಡಿ ಬಾಸ್ ಫೋಟೋ ಹಿಡಿದು, ಅಭಿಮಾನಿಗಳು ಘೋಷಣೆ ಕೂಗುತ್ತಿದ್ದಾರೆ. ಪೊಲೀಸರು ಬ್ಯಾರಿಕೇ ಡ್ ಅಳವಡಿಸಿ ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಬಂಟ್ವಾಳ : ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ (ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬಡಕಬೈಲಿನ ಆಂಗ್ಲ ಮಾಧ್ಯಮ ಶಾಲೆಯೊಂದರ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂಬವರಿಗೆ ಮೂರ್ಚೆ ರೋಗ ಉಂಟಾಗಿದೆ. ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ತೆರಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಚಾಲಕ ಸಹಿತ ವಿದ್ಯಾರ್ಥಿಗಳು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಹಾಗೂ ಚಾಲಕ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲ ಸಹೋದರಿ ಭಾಗೀರಥಿ ಅವರು ಮೃತಪಟ್ಟಿದ್ದಾರೆ. ಭಾಗೀರಥಿ ಅವರ…
ಸುಳ್ಯ: ಮಹಿಳೆಯೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ಅವರು ಮನೆಯಲ್ಲಿ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆತನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ವಿಚಾರ ಬೆಳಕಿಗೆ ಬಂದಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಅವರು ಈಗ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಸ್ತುತ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ನಡೆಸಿಕೊಡುತ್ತಿದ್ದಾರೆ. ಆದರೆ ಮುಂದಿನ ಸೀಸನ್ಗೆ ತಾವು ನಿರೂಪಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಅಧಿಕೃತವಾಗಿಯೇ ಈ ನಿರ್ಧಾರ ತಿಳಿಸಿದ್ದಾರೆ. ಅವರ ಈ ಪೋಸ್ಟ್ ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ. ನೀವೆಲ್ಲರೂ BBK11 ರಲ್ಲಿ ತೋರಿಸಿರುವ ಪ್ರತಿಕ್ರಿಯೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ತೋರಿಸಿದ ಪ್ರೀತಿಯ ಬಗ್ಗೆ ಹಲವರು ಹೇಳುತ್ತಾರೆ. ಇದು ನಮ್ಮೊಂದಿಗೆ ಪ್ರಯಾಣಿಸಿದ 10+1 ವರ್ಷದ ಶ್ರೇಷ್ಠ ಅನುಭವವಾಗಿತ್ತು…, ಮತ್ತು ಈಗ ನಾನು ನನ್ನ ಮುಂದಿನ ಹೆಜ್ಜೆಗೆ ಸಾಗುವ ಸಮಯವಾಗಿದೆ…. ಇದು BBK ಯಲ್ಲಿನ ನನ್ನ ಕೊನೆಯ ಆವೃತ್ತಿಯಾಗಲಿದೆ… ನನ್ನ ನಿರ್ಧಾರವನ್ನು ನನ್ನ ಅಭಿಮಾನಿಗಳು ಮತ್ತು ಈ ವರ್ಷಗಳಲ್ಲಿ BB ಅನ್ನು ಅನುಸರಿಸಿದ…
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಭಾನುವಾರ ರಾತ್ರಿ ನಡೆದ ಮಂಗಳೂರು ದಸರಾ ಶೋಭಾಯಾತ್ರೆ ಸೋಮವಾರ ಬೆಳಗ್ಗೆ ಸಂಪನ್ನಗೊಂಡಿತು. ಭಾನುವಾರ ಸಂಜೆ ಕುದ್ರೋಳಿಯಿಂದ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಸೋಮವಾರ ಮುಂಜಾನೆ ಸುಮಾರು 3 ಗಂಟೆ ಸುಮಾರಿಗೆ ಕುದ್ರೋಳಿಗೆ ಆಗಮಿಸಿತ್ತು. ಬೆಳಗ್ಗೆ 7 ಗಂಟೆ ಸುಮಾರಿಗೆ ಜಲಸ್ತಂಭನವಾಯಿತು. ಈ ಮೂಲಕ ಮಂಗಳೂರು ದಸರಾ ಮೆರವಣಿಗೆ ಸಮಾಪನಗೊಂಡಿತು. ಶೋಭಾಯಾತ್ರೆಯುದ್ದಕ್ಕೂ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ನಾರಾಯಣ ಗುರು ಸರ್ಕಲ್, ಲಾಲ್ ಬಾಗ್, ಬಲ್ಲಾಳ್‌ಬಾಗ್, ಪಿವಿಎಸ್ ವೃತ್ತ, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್, ಅಳಕೆಯ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ನಗರದ 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿತು. ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ…