Author: main-admin

ಕುಂದಾಪುರ: ವ್ಯಕ್ತಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಕುಂದಾಪುರದ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಗುಂಡೇಟಿಗೆ ಬಲಿಯಾದವರು. ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಅವರು ತಮ್ಮ ಮೊದಲ ಪತ್ನಿ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ಪಿಸ್ತೂಲ್‌ನಿಂದ ಐವನ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಐವನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಜೊತೆಯಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಐವನ್ ಅವರ ಕೊಲೆಗೆ ಹಣಕಾಸಿನ ವ್ಯವಹಾರ ಅಥವಾ ಇತರ ವ್ಯವಹಾರಿಕ ವಿಚಾರ…

Read More

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್‌ನ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ 2026ರಲ್ಲಿ ಐಟಿ, ಐಟಿಐ‌ಎಸ್, ಉತ್ಪಾದನಾ ವಲಯ, ಆರೋಗ್ಯ ಮತ್ತು ಔಷಧ, ಬ್ಯಾಂಕಿಂಗ್ ಮತ್ತು ಹಣಕಾಸು, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆತಿಥ್ಯ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ ಹಾಗೂ ನಿರ್ಮಾಣ ಕ್ಷೇತ್ರಗಳ 320 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು. 2026ರ ಶೈಕ್ಷಣಿಕ ವರ್ಷದಲ್ಲಿ ಅಥವಾ ಅದಕ್ಕೂ ಮೊದಲು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು, ಎಸ್ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ನರ್ಸಿಂಗ್, ವೈದ್ಯಕೀಯ, ಪ್ಯಾರಾ ಮೆಡಿಕಲ್, ಬಿಬಿಎ, ಎಂಬಿಎ ಸೇರಿದಂತೆ ಎಲ್ಲ ವಿಭಾಗದವರು ಭಾಗವಹಿಸಬಹುದು. ಹೊರ ಜಿಲ್ಲೆಗಳಿಂದ ಬರುವ ಅಭ್ಯರ್ಥಿಗಳಿಗೆ ಆ.6ರಂದು…

Read More

ಉಡುಪಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ಧ್ವೇಷ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದರು. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ನಗರದ ಜೋಡುಕಟ್ಟೆಯಿಂದ ಶಾಸಕರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯೋಜಿಸಲಾಗಿತ್ತು. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜೋಡುಕಟ್ಟೆ ಹಾಗೂ ಶಾಸಕರ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನಾಕಾರರು ಜೋಡುಕಟ್ಟೆಯಲ್ಲಿ ಸೇರಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶಾಸಕರ ಕಚೇರಿಯತ್ತ ಸಾಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು. ಇದೇ ವೇಳೆ ಶಾಸಕರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಕೂಡ ಜಮಾಯಿಸಿ ಘೋಷಣೆಗಳನ್ನು ಕೂಗಿದರು. ಎರಡೂ ಪಕ್ಷಗಳ ಕಾರ್ಯಕರ್ತರ ಉಪಸ್ಥಿತಿಯಿಂದ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ,…

Read More

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ (SIT) ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ವ್ಯಕ್ತಿಗಳ ಗುರುತನ್ನು ಎಫ್‌ಎಸ್‌ಎಲ್ (FSL) ಪ್ರಯೋಗಾಲಯವು ಡಿಎನ್‌ಎ ಪರೀಕ್ಷೆಯ ಮೂಲಕ ಅಧಿಕೃತವಾಗಿ ದೃಢಪಡಿಸಿದೆ. ಸೌಜನ್ಯಳ ಮಾವ ವಿಠಲ ಗೌಡ ಅವರು ತೋರಿಸಿದ ಜಾಗದಲ್ಲಿ 2025ರ ಸೆಪ್ಟೆಂಬರ್ 17 ಮತ್ತು 18ರಂದು ಎಸ್‌ಐಟಿ ಕಾರ್ಯಾಚರಣೆ ನಡೆಸಿ ಒಟ್ಟು ಏಳು ಅಸ್ಥಿಪಂಜರಗಳನ್ನು ವಶಕ್ಕೆ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿತ್ತು. ಕಾರ್ಯಾಚರಣೆ ವೇಳೆ ಅಸ್ಥಿಪಂಜರಗಳು ದೊರೆತ ಸ್ಥಳದಲ್ಲೇ ಕೆಲವೊಂದು ಐಡಿ ಕಾರ್ಡ್‌ಗಳು ಕೂಡ ಲಭ್ಯವಾಗಿದ್ದವು. ಈ ಗುರುತಿನ ಚೀಟಿಗಳ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ನಾಪತ್ತೆಯಾದವರ ಕುಟುಂಬಸ್ಥರನ್ನು ಪತ್ತೆ ಹಚ್ಚಿದ್ದರು. ಬಳಿಕ ಬೆಳ್ತಂಗಡಿ ನ್ಯಾಯಾಲಯದ ನಿರ್ದೇಶನದಂತೆ ಸಂಬಂಧಿಕರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ರವಾನಿಸಲಾಗಿತ್ತು. ಇದೀಗ ಬಂದಿರುವ ವರದಿಯಲ್ಲಿ ಮೂರು ಕುಟುಂಬಗಳ ಡಿಎನ್‌ಎ ಮಾದರಿಯು ಪತ್ತೆಯಾದ ಅಸ್ಥಿಪಂಜರಗಳಿಗೆ ನಿಖರವಾಗಿ ತಾಳೆಯಾಗಿದೆ. ಡಿಎನ್‌ಎ ವರದಿಯ ಪ್ರಕಾರ ಪತ್ತೆಯಾದ ಮೂವರ ಗುರುತು ಹೀಗಿದೆ: ಕೊಡಗು ಜಿಲ್ಲೆಯ…

Read More

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಪ್ರಸ್ತುತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಸುಕುಮಾ‌ರ್ ಅವರು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ಹಂಚಿಕೊಂಡಿದ್ದಾರೆ.ಪ್ರತಿಯೊಬ್ಬ ಮತದಾರರ ಮನೆ ಬಾಗಿಲಿಗೆ ತೆರಳಿ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸುವುದರ ಜೊತೆಗೆ ಸಂಬಂಧಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ. ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು ಪಟ್ಟಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಕರಡು ಪಟ್ಟಿಯಿಂದ ಕೈಬಿಡಲಾಗುತ್ತಿರುವ 84.31 ಲಕ್ಷ ಜನರ ವರ್ಗೀಕರಣ ಚುನಾವಣಾ ಆಯೋಗವು ಮೊದಲ ಕರಡು ಪಟ್ಟಿಯಿಂದ ಹೊರಗಿಡಲು ಗುರುತಿಸಿರುವ ಒಟ್ಟು 84,31,612 ಮತದಾರರಲ್ಲಿ ಶಾಶ್ವತವಾಗಿ ಸ್ಥಳಾಂತರಗೊಂಡವರ ಸಂಖ್ಯೆ ಅತ್ಯಂತ ಹೆಚ್ಚಿದ್ದು, ಬರೋಬ್ಬರಿ 51,74,968 ಈ ವ್ಯಾಪ್ತಿಗೆ ಬರುತ್ತಾರೆ. ಇನ್ನು 14,99,799 ಮೃತಪಟ್ಟ ಮತದಾರರನ್ನು ಗುರುತಿಸಲಾಗಿದ್ದು, 11,61,231 ಜನರು ಯಾವುದೇ ಸುಳಿವು ಸಿಗದೆ ನಾಪತ್ತೆಯಾಗಿರುವುದು ಕಂಡುಬಂದಿದೆ. ಇದರ…

Read More

ಪುತ್ತೂರು: ನರಿಮೊಗರು ಗ್ರಾಮದ ಪುರುಷರಕಟ್ಟೆ-ಶಾಂತಿಗೋಡು ಆನಡ್ಕ ಸಂಪರ್ಕ ರಸ್ತೆಯ ಮಾಯಂಗಳ ಎಂಬಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಸಾರ್ವಜನಿಕ ರಸ್ತೆ ತಡೆ ನಡೆಸಿದ ಆರೋಪದಡಿ ಹಲವರ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜುಲೈ 27ರಂದು ಬೆಳಿಗ್ಗೆ ಕೆಲವರು ಗುಂಪು ಸೇರಿ ರಸ್ತೆ ತಡೆ ನಡೆಸಿ ವಾಹನ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಸುರೇಶ್‌ ಸಿ.ಟಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಅರುಣ್ ಕುಮಾರ್ ಪುತ್ತಿಲ, ಮನೀಶ್ ಕುಲಾಲ್, ಅವಿನಾಶ್ ಜೋಗಿ, ಪ್ರೇಮರಾಜ್, ಪ್ರತೀಕ್ ಪುತ್ತಿಲ, ಶ್ರೀರಾಂ ಪಾತಾಳ, ಉಮೇಶ್ ಕೊಡಿಬೈಲು, ಅನಿಲ್ ತೆಂಕಿಲ, ರವಿಕುಮಾ‌ರ್ ರೈ, ಜಗದೀಶ್ ರೈ, ಪ್ರಶಾಂತ್ ನೆಕ್ಕಿಲಾಡಿ ಸೇರಿದಂತೆ ಸುಮಾರು 25 ರಿಂದ 30 ಮಂದಿ ಯಾವುದೇ ಪೂರ್ವಾನುಮತಿ ಪಡೆಯದೇ ರಸ್ತೆ ತಡೆ ನಡೆಸಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ…

Read More

ಬಂಟ್ವಾಳ: ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿ ಬೆನಡಿಕ್ಟ್ ಕಾರ್ಲೋ (73) ಅವರ ಆರೈಕೆ ನೋಡಿಕೊಳ್ಳುತ್ತಿದ್ದ ಅಮ್ಟಾಡಿ ನಿವಾಸಿ ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23), ವೃದ್ಧೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚುವ ಉದ್ದೇಶದಿಂದ ತನ್ನ ಸ್ನೇಹಿತ ನರಿಕೊಂಬು ನಿವಾಸಿ ಸತೀಶ ನಾಯಕ್ (28)ನ ಸಹಾಯದಿಂದ ವೃದ್ಧೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ್ದಳು. ಆದರೆ, ಆ ಯತ್ನ ವಿಫಲವಾದ ಬಳಿಕ ಮತ್ತೋರ್ವ ಆರೋಪಿ ನರಿಕೊಂಬು ನಿವಾಸಿ ಚರಣ್ ಕುಮಾರ್ (31)ನ ಸಹಾಯದಿಂದ 2021ರ ಜನವರಿ 25ರಂದು ರಾತ್ರಿ ಬೆನಡಿಕ್ಟ್ ಕಾರ್ಲೋ ಅವರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದರು. ಬಳಿಕ ಮೃತೆಯ ಬಳಿ ಇದ್ದ ಸುಮಾರು 61.070 ಗ್ರಾಂ ತೂಕದ ಚಿನ್ನಾಭರಣಗಳನ್ನು (ಅಂದಿನ ಅಂದಾಜು ಮೌಲ್ಯ ರೂ.3 ಲಕ್ಷ) ದೋಚಿ, ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಿದ್ದರು. ಈ ಸಂಬಂಧ…

Read More

ಮಂಗಳೂರು: ಮಾದಕ ವಸ್ತುಗಳ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಮಂಗಳೂರು ನಗರ ಪೊಲೀಸರು, ವಿವಿಧ ಎನ್‌ಡಿಪಿಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಬುಧವಾರ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ನಾಶಪಡಿಸಿದರು. ಮಂಗಳೂರು ನಗರದ ಮುಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ Ramky Energy and Environment Ltd. (Re Sustainability Healthcare Solutions Ltd.) ಸಂಸ್ಥೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ, ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 59 ಎನ್‌ಡಿಪಿಎಸ್ ಪ್ರಕರಣಗಳಿಗೆ ಸಂಬಂಧಿಸಿದ ಮಾದಕ ವಸ್ತುಗಳನ್ನು ಡ್ರಗ್ ಡಿಸ್ಪೋಸಲ್ ಕಮಿಟಿ ಸಮಕ್ಷಮ ಸುಟ್ಟು ನಾಶಪಡಿಸಲಾಯಿತು. ನಾಶಪಡಿಸಲಾದ ಮಾದಕ ವಸ್ತುಗಳಲ್ಲಿ 450 ಕೆ.ಜಿ. ಗಾಂಜಾ, 43 ಕೆ.ಜಿ. 260 ಗ್ರಾಂ ಎಂ.ಡಿ.ಎಂ.ಎ., 80 ಗ್ರಾಂ ಚರಸ್, 880 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ 1 ಕೆ.ಜಿ. 200 ಗ್ರಾಂ ಭಾಂಗ್ ಸೇರಿದ್ದು, ಇವುಗಳ ಒಟ್ಟು ಅಂದಾಜು…

Read More

ಮಂಗಳೂರು: ಯುವಜನರಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಿಢೀರ್ ಡ್ರಗ್ ಪರೀಕ್ಷೆ ನಡೆಸಿದರು. ನಗರದ ಕೊಟೆಕಾರ್ ಬೀರಿ ಹಾಗೂ ಕೊಣಾಜೆ ಬಂಟ್ಸ್ ಭವನ ಸಮೀಪ ಈ ವಿಶೇಷ ಕಾರ್ಯಾಚರಣೆ ನಡೆಯಿತು. ದಕ್ಷಿಣ ಹಾಗೂ ಕೇಂದ್ರ ಉಪವಿಭಾಗಗಳ ಸಹಾಯಕ ಪೊಲೀಸ್ ಆಯುಕ್ತರ (ACP) ನೇತೃತ್ವದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಂಜೆ 4.30ರಿಂದ 6.00 ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಖಾಸಗಿ ಹಾಗೂ ಕಾಲೇಜು ಬಸ್‌ಗಳನ್ನು ತಡೆದು, ವಿದ್ಯಾರ್ಥಿಗಳಿಗೆ ಮಲ್ಟಿ-ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ಪರೀಕ್ಷೆ ನಡೆಸಲಾಯಿತು.ಕೊಟೆಕಾರ್ ಬೀರಿ ಪ್ರದೇಶದಲ್ಲಿ ಎಸ್‌ಡಿಎಂ ಕಾಲೇಜು, ನಿಟ್ಟೆ ಕೆ.ಎಸ್. ಹೆಗ್ಡೆ, ಸೇಂಟ್ ಅಲೋಶಿಯಸ್, ಪಿ.ಎ. ಕಾಲೇಜು, ಬಿಯರೀಸ್ ಇನ್‌ಸ್ಟಿಟ್ಯೂಟ್, ಟಿಪ್ಪು ಸುಲ್ತಾನ್ ಕಾಲೇಜು ಹಾಗೂ ಕೆನರಾ ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ 72 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಯಿತು. ಇವರಲ್ಲಿ 71 ವಿದ್ಯಾರ್ಥಿಗಳ ವರದಿ ನೆಗೆಟಿವ್ ಬಂದಿದ್ದು, ಒಬ್ಬ ವಿದ್ಯಾರ್ಥಿ ಡ್ರಗ್ ಸೇವನೆ…

Read More

ಮೂಡುಬಿದಿರೆ: ಒಮಾನ್ ನಲ್ಲಿ ಜು.27ರ ಸೋಮವಾರ ಸಂಭವಿಸಿದ ವಾಹನ ಅಪಘಾತದಲ್ಲಿ ಸಾಣೂರು ಮೂಲಗುತ್ತು ಮನೆಯ ರಾಜವರ್ಮ ಜೈನ್ (33) ಮೃತಪಟ್ಟಿದ್ದಾರೆ. ರಾಜವರ್ಮ ಅವರು ಅಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದು ಕಂಪೆನಿಯ ವಾಹನವನ್ನು ಇನ್ನೊಬ್ಬ ಸಿಬಂದಿ ರಿವರ್ಸ್ ತೆಗೆಯುವಾಗ ವಾಹನದಡಿಗೆ ಬಿದ್ದು ಸಾವನ್ನಪ್ಪಿರುವುದಾಗಿ ಹೇಳಲಾಗಿದೆ. ರಾಜವರ್ಮ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

Read More