ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ಕೊಡುವ ಪೋಷಕರ ವಿರುದ್ಧ ಟ್ರಾಫಿಕ್ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾಗಳಾಗುವ ಸಾಧ್ಯತೆಯನ್ನು ತಡೆಯುವುದಕ್ಕಾಗಿ ಸಾರಿಗೆ ಇಲಾಖೆಯೂ ಕಠಿಣ ನಿಯಮಗಳನ್ನು ರೂಪಿಸಿದೆ. ಆದಾಗ್ಯೂ, ಅಂಥ ಪ್ರಕರಣಗಳು ವರದಿಯಾಗುತ್ತಿರುತ್ತವೆ. ಇದೀಗ ದಾವಣಗೆರೆಯಲ್ಲಿ, ಮಗಳಿಗೆ ಆಕ್ಟಿವ್ ಹೋಂಡಾ ಚಾಲನೆಗೆ ಅವಕಾಶ ಮಾಡಿಕೊಟ್ಟ ತಾಯಿಗೆ ಸಂಚಾರ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ಅಪ್ರಾಪ್ತ ಬಾಲಕಿಯೊಬ್ಬಳು ಆಕ್ಟಿವ್ ಹೊಂಡಾ ಚಲಾಯಿಸುತ್ತಿದ್ದಳು. ಅದನ್ನು ತಡೆದ ಟ್ರಾಫಿಕ್ ಪೊಲೀಸರು ದಾಖಲೆ ಪರಿಶೀಲನೆ ಮಾಡಿದ್ದಾರೆ. ಇದೇ ವೇಳೆ, ಅದನ್ನು ಚಲಾಯಿಸುತ್ತಿರುವುದು ಅಪ್ರಾಪ್ತ ಬಾಲಕಿ ಎಂಬುದು ದೃಢವಾಗೊದೆ. ನಂತರ ಪೊಲೀಸರು ಆಕೆಯ ತಾಯಿಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂಚಾರ ನಿಯಮಗಳಲ್ಲಿ ಏನಿದೆ? ಕರ್ನಾಟಕದಲ್ಲಿ, ಸಣ್ಣ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ನೀಡುವುದು ಅಪರಾಧವಾಗಿದೆ. ಅಂಥ ಪೋಷಕರು ಅಥವಾ…
Author: main-admin
ಕಾರ್ಕಳ: ಅಜೆಕಾರು -ಕೈಕಂಬ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರರಿಬ್ಬರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ 6.30ರ ವೇಳೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟು ಇಬ್ಬರ ಕೈ ಹಾಗೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿ ಕೋಮಾಸ್ಥಿತಿಯಲ್ಲಿ ಇದ್ದರು. ಬಿಹಾರ ಮೂಲದವರಾಗಿದ್ದು, ಅವರಲ್ಲಿ ಓರ್ವನ ಹೆಸರು ಆರಿಫ್ (20) ಎಂದು ತಿಳಿಬಂದಿದೆ. ಈತನನ್ನು 108 ಅಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 108 ಸಿಬ್ಬಂದಿ ನಾಗರಾಜ್ ಅಂಗಡಿ ಪೈಲೆಟ್ ಆಗಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು. ಮತ್ತೊಬ್ಬ ಗಾಯಾಳುವನ್ನು ಖಾಸಗಿ ಆಸ್ಪತ್ರೆಯಲ್ಲಿ ಕರೆದೊಯ್ಯಲಾಗಿದ್ದು, ಆತನ ಹೆಸರು ತಿಳಿದುಬಂದಿಲ್ಲ. ಈ ಘಟನೆ ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮಂಗಳೂರು: ಬಜ್ಪೆ ವಲಯದ ಮೂಡುಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ ನಿತಿನ್ ಬೆಲ್ಚಡ ಕಾಣೆಯಾಗಿದ್ದಾರೆ. ನಾಪತ್ತೆಯಾದವರ ಈ ಕುರಿತು ಘಟನೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾಗಿರುವ ಯುವಕ ವಿದ್ಯಾರ್ಥಿ ಮಂಗಳ ಕಾಲೇಜು ಪ್ಯಾರಾಮೆಡಿಕಲ್ ಸೈನ್ಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದು, ಫೆಬ್ರವರಿ 13ರಂದು ಕಾಲೇಜ್‍ನಿಂದ ಮನೆಗೆ ಬಂದು ಯಾರಿಗೂ ಹೇಳದೆ ಹೊರಗೆ ಹೋದವ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ. ನಿತಿನ್ ಬೆಲ್ಚಡ 5 ಅಡಿ 5 ಇಂಚು ಉದ್ದ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಕಾಣೆಯಾದ ದಿನ ಕೆಂಪು ಬಣ್ಣದ ಟೀ ಶರ್ಟ್, ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದ ನಿತಿನ್‌ಗೆ ಕನ್ನಡ, ತುಳು, ಇಂಗ್ಲಿಷ್ ಭಾಷೆ ಬಲ್ಲನು. ಈತ ಕಂಡು ಬಂದಲ್ಲಿ ಬಜ್ಪೆ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಠಾಣಾಧಿಕಾರಿಗಳು ಕೋರಿದ್ದಾರೆ.
ಮಂಗಳೂರು: ಮೀನು ಸಾಗಾಟದ ಟಾಟಾ 407 ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಮಾರುತಿ ಆಲ್ಟೋ ಕಾರಿನಲ್ಲಿ ಬರೋಬ್ಬರಿ 120 ಕೆಜಿ ನಿಷೇಧಿತ ಮಾದಕದ್ರವ್ಯ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿ ಮಂಗಳೂರು ಸಿಸಿಬಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ, ಉಪ್ಪಳ ನಿವಾಸಿ ಮೊಯ್ದಿನ್ ಶಬ್ಬಿರ್(38), ಮಹಾರಾಷ್ಟ್ರ, ಥಾಣೆ, ಕಲ್ಯಾಣ, ಡೊಂಬಿವಲಿ(ವೆಸ್ಟ್), ನಿವಾಸಿ ಮಹೇಶ್ ದ್ವಾರಿಕಾನಾಥ ಪಾಂಡೆ(30), ಕೇರಳ ರಾಜ್ಯದ ಅಲಪ್ಪುಯ ಜಿಲ್ಲೆಯ ಚೆರ್ತಲಾ ಚಾರುಮಂಗಳಂ ನಿವಾಸಿ ಅಜಯ್ ಕೃಷ್ಣ(33), ಹರಿಯಾಣ ರಾಜ್ಯದ ಜಿಂದ್ ಜಿಲ್ಲೆಯ ನರವಾನ ತಾಲೂಕು, ಅಮರಗಡ್ ನಿವಾಸಿ ಜೀವನ್ ಸಿಂಗ್(35) ಬಂಧಿತ ಆರೋಪಿ. ಫೆ.17ರಂದು ಆಂಧ್ರಪ್ರದೇಶದಿಂದ ಮಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಟಾಟಾ 407 ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಮಾರುತಿ ಅಲ್ಟೋ ಕಾರಿನಲ್ಲಿ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ 2…
ಬೆಳ್ತಂಗಡಿ: ಹೆಜ್ಜೇನು ದಾಳಿ ನಡೆಸಿದ ಪರಿಣಾಮ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ್ದು, ಈ ವೇಳೆ ಕೆಲವು ಮಕ್ಕಳಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಕೂಗು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ. ಹಜ್ಜೇನು ಕಚ್ಚಿದ್ದರಿಂದ ಅಸ್ವಸ್ಥಗೊಂಡಿದ್ದ 10 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಶಾಲೆಯ ಸುತ್ತ ಹೆಜ್ಜೇನುಗಳು ಇನ್ನೂ ಸುತ್ತಾಡುತ್ತಿದ್ದು, ಸ್ಥಳೀಯರು ಬೆಂಕಿ ಹೊಗೆ ಹಾಕಿ ಅವುಗಳನ್ನು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹೆಜ್ಜೇನು ದಾಳಿ ಹಿನ್ನಲೆ ಶಾಲೆಗೆ ರಜೆ ನೀಡಲಾಗಿದೆ.
ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟವರು ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ಎಂದು ತಿಳಿದು ಬಂದಿದೆ. ಇಂದು(ಫೆ.17) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ: ಶಕ್ತಿನಗರದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರಿಗೆ ದನದ ಮಾಂಸ ಕತ್ತರಿಸುತ್ತಿದ್ದ ಇಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ. ದಾಳಿ ವೇಳೆ ದನದ ಮಾಂಸ ಮತ್ತು ಪುಟ್ಟ ಕರು ಪತ್ತೆಯಾಗಿದ್ದು, ಪೊಲೀಸರ ಕಣ್ಣು ತಪ್ಪಿಸಲು ರಾತ್ರಿಯ ಬದಲು ಹಗಲಿನಲ್ಲಿ ಕಾರ್ಯಾಚರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ ಅನ್ವರ್ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದು, ವಿಷಯ ತಿಳಿದು ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು
ಸುರತ್ಕಲ್ : ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ಮತ್ತು ಬೆಂಗಳೂರಿನ ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್ಸ್ಟಿಟ್ಯೂಟ್ (ಸಿಎಂಟಿಐ) ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಹೆಚ್ಚಿಸುವ ಉದ್ದೇಶದಿಂದ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿವೆ. ಈ ಪಾಲುದಾರಿಕೆಯನ್ನು 2025ರ ಜನವರಿ 21ರಂದು ತಿಳಿವಳಿಕೆ ಒಪ್ಪಂದಕ್ಕೆ ಅಂಕಿತ ಹಾಕುವ ಮೂಲಕ ಔಪಚಾರಿಕಗೊಳಿಸಲಾಯಿತು. ಈ ಒಪ್ಪಂದದ ಅಡಿಯಲ್ಲಿ, ಬೋಧಕವರ್ಗದ ಸದಸ್ಯರು, ವಿದ್ಯಾರ್ಥಿಗಳು, ಎನ್ಐಟಿಕೆಯ ಸಂಶೋಧನಾ ವಿದ್ಯಾರ್ಥಿಗಳು ಮತ್ತು ಸಿಎಂಟಿಐನ ವಿಜ್ಞಾನಿಗಳು ಸೇರಿದಂತೆ ಎರಡೂ ಸಂಸ್ಥೆಗಳ ಮಾನವ ಸಂಪನ್ಮೂಲಗಳನ್ನು ಸಂಯೋಜಿತ ಸಂಶೋಧನಾ ಯೋಜನೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಲಾಗುತ್ತದೆ. ಜಂಟಿ ಪ್ರಕಟಣೆಗಳು, ಪೇಟೆಂಟ್ ಫೈಲಿಂಗ್ಗಳು, ಪರಿಕಲ್ಪನೆಯ ಮೌಲ್ಯಮಾಪನಗಳ ಪುರಾವೆಗಳು ಮತ್ತು ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ತಂತ್ರಜ್ಞಾನ ವರ್ಗಾವಣೆಗಳಂತಹ ಸ್ಪಷ್ಟ ಫಲಿತಾಂಶಗಳಿಗೆ ಕಾರಣವಾಗುವ ಚಟುವಟಿಕೆಗಳಲ್ಲಿ ಎನ್ಐಟಿಕೆಯ ಬೋಧಕ ಸದಸ್ಯರು ಸಿಎಂಟಿಐ ವಿಜ್ಞಾನಿಗಳೊಂದಿಗೆ ಸಹಕರಿಸಲಿದ್ದಾರೆ. ವಿದ್ಯಾರ್ಥಿಗಳು (ಪದವಿಪೂರ್ವ ಮತ್ತು ಸ್ನಾತಕೋತ್ತರ ಎರಡೂ) ಮತ್ತು ಪಿಎಚ್ಡಿ ವಿದ್ವಾಂಸರು ಇಂಟರ್ನ್ಶಿಪ್, ಪ್ರಾಜೆಕ್ಟ್ ವರ್ಕ್ ಅಥವಾ ಪ್ರಬಂಧ ಸಂಶೋಧನೆಗಾಗಿ ಸಿಎಂಟಿಐನ…
ಕಾಸರಗೋಡು: ಗೆಳೆಯರೊಂದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಉದುಮ ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಉದುಮ ಹಯರ್ ಸೆಕಂಡರಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಎಸ್.ವಿ ಅಬ್ದುಲ್ಲ (14) ಎಂದು ಗುರುತಿಸಲಾಗಿದೆ. ಕೋಟೆಕುನ್ನು ಎಂಬಲ್ಲಿ ನಡೆದ ಕುಟುಂಬ ಸಂಗಮದಲ್ಲಿ ಪಾಲ್ಗೊಂಡಿದ್ದ ಈತ ಸಂಜೆ ಗೆಳೆಯರ ಜೊತೆ ನದಿಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ಉಳಿದವರ ಬೊಬ್ಬೆ ಕೇಳಿ ಸಕಾಲಕ್ಕೆ ಧಾವಿಸಿದ ಸ್ಥಳೀಯರು ವಿದ್ಯಾರ್ಥಿಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಮಾವನ ಆಸ್ತಿಗಳಿಗೆ ಅಳಿಯ ಉತ್ತರಾಧಿಕಾರಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕಾನೂನುಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಗೆ ಪ್ರತಿನಿಧಿ ಎಂದು ತಿಳಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಬಸವರಾಜು ಸಲ್ಲಿಸಿಸದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನಗಂಟಿ ಅವರ ಪೀಠ ಈ ಆದೇಶ ನೀಡಿದೆ. ಮೃತ ಮಾವನಿಗೆ ನಾಲ್ಕು ಹೆಣ್ಣು ಮಕ್ಕಳಿರುವುದರಿಂದ ತನ್ನನ್ನೇ ಮೃತನ ಆಸ್ತಿಯನ್ನು ಪ್ರತಿನಿಧಿಸಲು ಮತ್ತು ಹಿತಾಸಕ್ತಿ ರಕ್ಷಣೆ ಮಾಡಲು ಕಾನೂನುಬದ್ಧ ಉತ್ತರಾಧಿಕಾರಿ ಎಂಬುದಾಗಿ ಘೋಷಣೆ ಮಾಡುವಂತೆ ಕೋರಿ ವ್ಯಕ್ತಿಯೋರ್ವ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕಾನೂನು ಬದ್ದ ಉತ್ತರಾಧಿಕಾರಿ ಮಾತ್ರ ಮೃತಪಟ್ಟ ವ್ಯಕ್ತಿಯ ಆಸ್ತಿ ಪ್ರತಿನಿಧಿಸುವ ಮತ್ತು ಹಿತಾಸಕ್ತಿ ರಕ್ಷಣೆ ಮಾಡುವ ಜವಾಬ್ದಾರಿ ಹೊಂದಿರುತ್ತಾನೆ. ಆದರೆ ಈ ಪ್ರಕರಣದಲ್ಲಿ ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಮೃತರ ಆಸ್ತಿಯಲ್ಲಿ ಭಾಗಕ್ಕೆ ಅರ್ಹರಾಗಿದ್ದಾರೆಯೇ ಹೊರತು ಉತ್ತರಾಧಿಕಾರಿಯಾಗುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕೋರ್ಟ್ ತಿಳಿಸಿದೆ. ತನ್ನದೇ ಗ್ರಾಮದ ಮಹಿಳೆಯನ್ನು ವಿವಾಹವಾಗಿ ವ್ಯಕ್ತಿಯೊಬ್ಬರು ಮಾವನ ಆಸ್ತಿಯಲ್ಲಿ ಪತ್ನಿಗೆ…










