ಮಂಗಳೂರು : ಸರಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಗೆ ನಮ್ರತಾ ಎಂಬಾಕೆಯ ಪರಿಚಯವಾಗಿದ್ದು, ಆಕೆ ಟೆಂಡರ್‌ದಾರ ಅವಿನಾಶ್ ಶೆಟ್ಟಿಗೆ 2.50 ಲಕ್ಷ ರೂ. ನೀಡಿದರೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿದ್ದಳು. ಅದರಂತೆ ತಾನು ಅವಿನಾಶ್ ಶೆಟ್ಟಿಗೆ ಕರೆ ಮಾಡಿ ಆತನ ಸೂಚನೆಯಂತೆ ತನ್ನ ಮಗಳಿಗೆ ಉದ್ಯೋಗ ದೊರಕಿಸಿಕೊಡಲು ವಿನಂತಿಸಿದೆ. ಹಾಗೇ ಚೆಕ್ ಕೂಡ ನೀಡಿದೆ.ಬಳಿಕ ಆತನನ್ನು ವಿಚಾರಿಸಿದಾಗ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದಿದ್ದ. ಬಳಿಕ ಇದೊಂದು ವಂಚನೆಯ ಜಾಲ ಎಂದು ಮನವರಿಕೆಯಾಯಿತು. ಈತ ಹಲವು ಮಂದಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿ ಬಳಿಕ ವಂಚಿಸಿದ್ದ ಆರೋಪದಡಿ ಜ.5ರಂದು ಉರ್ವ ಠಾಣೆ ಪೊಲೀಸರು ಬಂಧಿಸಿರುವ ವಿಚಾರ ತಿಳಿದು ಬಂತು. ಈ ಮಧ್ಯೆ ತಾನು ನೀಡಿದ ಚೆಕ್ ಅಕ್ಷತಾ ಎಂಬಾಕೆಯ ಖಾತೆ ಯಲ್ಲಿ ಕ್ಲಿಯರ್ ಆಗಿದೆ. ಅದಲ್ಲದೆ ಇನ್ನಷ್ಟು ಮೊತ್ತವನ್ನು ಗೂಗಲ್ ಪೇ ಮೂಲಕ ಗೌತಮ್ ಶೆಟ್ಟಿಗೆ ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ಅವಿನಾಶ್…
Author: main-admin
ಬೆಳ್ತಂಗಡಿ : ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ ಹಿನ್ನಲೆ ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಿನಲಸ್ಲಿ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅಷ್ಟರಲ್ಲೇ ಅವರು ಸಾವನಪ್ಪಿದ್ದರು. ಹಿದಾಯತ್ ಮೊದಲು ಉದ್ಯೋಗ ನಿಮಿತ್ತ ಬಹರೈನ್ ಗೆ ತೆರಳಿದ್ದವರು ಬಳಿಕ ಸೌದಿ ಅರೇಬಿಯಾಕ್ಕೆ ತೆರಳಿ ಕಾರ್ಗೊ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಕುಂದಾಪುರ: ವೆಂಕಟರಮಣ ಆರ್ಕೇಡ್‌ನಲ್ಲಿರುವ ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸಂಸ್ಥೆಯಲ್ಲಿ ಇರಿಸಿದ್ದ 7.25 ಕೋ.ರೂ. ಠೇವಣಿಯನ್ನು ಗ್ರಾಹಕರಿಗೆ ಮರಳಿಸದೆ ವಂಚಿಸಲಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ ಕಸಬಾದ ಶ್ರೀಧರ್ ದೂರು ನೀಡಿದ್ದು, ಅವರು 2022ರಲ್ಲಿ ಮಗಳಾದ ಶ್ರೀರûಾ ಹೆಸರಿನಲ್ಲಿ ಇಟ್ಟ 2 ಲಕ್ಷ ರೂ., ಶ್ರೀ ವರ್ಷಾ ಹೆಸರಿನಲ್ಲಿ ಇಟ್ಟ 5 ಲಕ್ಷ ರೂ. ಠೇವಣಿ ವಾಯಿದೆ ಮುಗಿದರೂ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಮತ್ತು ನಿರ್ದೇಶಕರು ಆ ಹಣವನ್ನು ಮರಳಿಸಿಲ್ಲ. ಇದೇ ರೀತಿ ಸುಮಾರು 44 ಜನರ ಒಟ್ಟು 7,18,24,831 ರೂ. ಠೇವಣಿ ವಾಯಿದೆ ಮುಗಿದರೂ ಮರಳಿ ನೀಡದೇ ಇರುವುದು ಗಮನಕ್ಕೆ ಬಂದಿದೆ. ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶಿವಾನಂದ, ನಿರ್ದೇಶಕರಾದ ಪ್ರಕಾಶ ಲೋಬೋ, ಮಹೇಶ ಲಕ್ಷ್ಮಣ ಕೊತ್ವಾಲ, ವಿಟuಲ, ಅವಿನಾಶ ಪಿಂಟೋ, ಕೆ. ರಾಜೇಶ ದೈವಜ್ಞ, ಎಚ್. ಮಹಾಬಲ, ರತ್ನಾಕರ, ದಯಾನಂದ, ಮರ್ವಿನ್ ಫೆರ್ನಾಂಡಿಸ್, ಸರೋಜಾ, ಸುಧಾಕರ, ಗೋಪಾಲ, ಡಾ| ದಿನಕರ ಇವರೆಲ್ಲ ಸೇರಿ ಒಟ್ಟು…
ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ದಾಟಿ ಹೋಟೆಲ್ ಗೆ ನುಗ್ಗಿ ಕಾರು, ಬೈಕ್ ಗಳನ್ನು ಜಖಂಗೊಳಿಸಿದ ಘಟನೆ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ನಿಲ್ಲಿಸಿ ಅದರ ಚಾಲಕ ಹೊಟೇಲ್‌ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಾಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿಕೊಂಡು ಹೊಟೇಲ್‌ಗೆ ಢಿಕ್ಕಿ ಹೊಡೆದಿದೆ. ಅಲ್ಲದೆ, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಎರಡು ಆಟೋ ರಿಕ್ಷಾಗಳು, ಎರಡು ಕಾರು ಹಾಗೂ ಒಂದು ದ್ವಿಚಕ್ರ ವಾಹನ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಕಾಡಾನೆ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು, ತಕ್ಷಣ ಸಿಬ್ಬಂದಿ ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡಿದ್ದಾರೆ. ಆನೆ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಯಾವ ಕಾರಣದಿಂದ ಆನೆಗೆ ಗಾಯವಾಗಿದೆ ಎನ್ನುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ರಾಜ್ಯಾದ್ಯಂತ ಹೊಸ ಸಂಚಲನ ಮೂಡಿಸಿದ್ದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಇದೀಗ ಆಸ್ಪತ್ರೆಯಿಂದ ನೇರವಾಗಿ ಜೈಲಿಗೆ ಶಿಫ್ಟ್ ಆಗಿದ್ದಾನೆ. ಆರೋಪಿ ಮುರುಗನ್ ಡಿ ಜೈಲಿಗೆ ಸೇರಿರುವ ವ್ಯಕ್ತಿ. ಪೊಲೀಸರ ವಶದಲ್ಲಿದ್ದ ವೇಳೆ ಸ್ಥಳ ಮಹಜರು ಮಾಡುತ್ತಿದ್ದಾಗ ಅಧಿಕಪ್ರಸಂಗ ಮಾಡಲು ಹೋಗಿ ಪೊಲೀಸರಿಂದ ಗುಂಡೇಟು ತಿಂದಿದ್ದ. ಕರ್ನಾಟಕ-ಕೇರಳ ಗಡಿ ಭಾಗದ ಅಜ್ಜಿನಡ್ಕ ಎಂಬಲ್ಲಿ ಈತ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ಸಂದರ್ಭ ಉಳ್ಳಾಲ ಠಾಣಾಧಿಕಾರಿ ಆತನ ಕಾಲಿಗೆ ಗುಂಡು ಹಾರಿಸಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಆತ ಇದೀಗ ಚೇತರಿಸಿಕೊಂಡಿದ್ದಾನೆ. ಆದ್ದರಿಂದ ಆತನನ್ನು ಡಿಸ್ಟಾರ್ಜ್ ಮಾಡಿ ಜಿಲ್ಲಾ ಕಾರಾಗ್ರಹಕ್ಕೆ ಕಳುಹಿಸಲಾಯಿತು.
ಪುತ್ತೂರು: ದ್ವಿಚಕ್ರ ವಾಹನದ ಸವಾರನೋರ್ವನು ಕರ್ತವ್ಯ ನಿರತ ಮಹಿಳಾ ಎಸ್‌ಐಗೆ ಆವಾಝ್ ಹಾಕಿ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾನೆಂದು ಆರೋಪಿಸಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿನ ಆಟೋಸ್ಟ್ಯಾಂಡ್‌ನಲ್ಲಿ ರಿಕ್ಷಾ ಚಾಲಕನಾಗಿ ವೃತ್ತಿ ನಡೆಸುತ್ತಿರುವ ಕಡಬ ತಾಲೂಕಿನ ಗೊಳಿತೊಟ್ಟು ಗ್ರಾಮದ ನಿವಾಸಿ ಪ್ರತಾಪ್ ಗೌಡ (35) ಪ್ರಕರಣದ ಆರೋಪಿ. ಸಂಪ್ಯ ಗ್ರಾಮಾಂತರ ಠಾಣೆಯ ಉಪ ನಿರೀಕ್ಷಕಿ ಸುಷ್ಮಾ ಜಿ.ಭಂಡಾರಿಯವರು ಸಿಬ್ಬಂದಿಯೊಂದಿಗೆ ಸಂಪ್ಯ ಠಾಣೆಯ ಮುಂಭಾಗದ ಮಾಣಿ – ಮೈಸೂರು ಹೆದ್ದಾರಿಯಲ್ಲಿ ವಾಹನ ತಪಾಸಣೆಯಲ್ಲಿ ತೊಡಗಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದು ಬಂದಿದೆ. ಆದರೆ ವಾಹನದ ಹಿಂಬದಿ ಸವಾರ ಹೆಲ್ಮೆಟ್ ಧರಿಸಿರಲಿಲ್ಲ. ಆದ್ದರಿಂದ ಪೊಲೀಸರು ವಾಹನ ನಿಲ್ಲಿಸಿ ದಂಡ ಪಾವತಿಸುವಂತೆ ಸವಾರನಲ್ಲಿ ತಿಳಿಸಿದ್ದರು. ಇದರಿಂದ ಸಿಟ್ಟುಗೊಂಡ ಹಿಂಬದಿ ಸವಾರ ಪ್ರತಾಪ್ ಗೌಡ ಪೊಲೀಸರಿಗೇ ಆವಾಝ್ ಹಾಕಿ ಹಲ್ಲೆಗೆ ಮುಂದಾಗಿದ್ದಾನೆ. ಈತನ ವಿರುದ್ಧ ಈಗಾಗಲೇ ಮಂಗಳೂರಿನ ಕಾವೂರು ಠಾಣೆಯಲ್ಲಿ ಎರಡು ಪ್ರಕರಣ ಹಾಗೂ ಸಂಪ್ಯ ಗ್ರಾಮಾಂತರ…
ಕಾರವಾರ : ಹಾಲಕ್ಕಿ ಬುಡಕಟ್ಟು ಸಮುದಾಯದ ಹೋರಾಟಗಾರ್ತಿ, ಹಿರಿಯ ಜಾನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ (88) ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಅಂತಲೂ ಕರೆಯಲಾಗುತ್ತಿತ್ತು. ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಪದ್ಮಶ್ರೀ ಮಾತ್ರವಲ್ಲದೇ, ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.
ಉಡುಪಿ : ಪಡಿಬಿದ್ರಿ ಪೇಟೆಯಲ್ಲಿ 20 ದಿನಗಳ ಹಿಂದೆ ಬುಲೆಟ್ ಬೈಕ್ ಕಳ್ಳತನವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೂಳೆಬೈಲು ನಿವಾಸಿ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ.ಕೆ ಯಾನೆ ತಾಜು ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಏನಿದು ಪ್ರಕರಣ ? ಜನವರಿ 21ರಂದು ರಾತ್ರಿ ಮುಂಡ್ಕೂರು ನಿವಾಸಿ ಪರೀಕ್ಷಿತ್ ಶೆಟ್ಟಿ ಎಂಬವರು ಪಡುಬಿದ್ರಿ ಪೇಟೆಯಲ್ಲಿ ಬುಲೆಟ್ ಬೈಕ್‍ನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿದ್ದರು. ಬೆಳಗ್ಗೆ ಕೆಲಸ ಮುಗಿಸಿ ವಾಪಸ್ ಬಂದು ನೋಡಿದಾಗ ಅಲ್ಲಿ ಬೈಕ್ ಇರಲಿಲ್ಲ. ಬೈಕನ್ನು ಕಳವು ಮಾಡಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಶಿವಮೊಗ್ಗದಲ್ಲಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು. ಇದನ್ನೂ ಓದಿ : ರಿಕ್ಷಾ ಹಾಗೂ ಹೊಂಡಾ ಆಕ್ಟಿವಾ ನಡೆವೆ ಅಪಘಾತ; ಸವಾರರಿಗೆ ಗಾಯ ಸದ್ಯ ಪೊಲೀಸರ ಬಲೆಗೆ ಬಿದ್ದ ಕಳ್ಳರಿಂದ ಪಡುಬಿದ್ರಿಯಲ್ಲಿ ಕಳವು…
ಮಂಗಳೂರು: ನಕಲಿ ನೋಟುಗಳನ್ನು ಚಲಾಯಿಸಿರುವ ಆರೋಪಿ ಸಾಬೀತಾದ ಹಿನ್ನೆಲೆಯಲ್ಲಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ 5ವರ್ಷಗಳ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಅಬ್ಬಾಸ್ (57) ಶಿಕ್ಷೆಗೊಳಗಾದ ಅಪರಾಧಿ. ಅಬ್ಬಾಸ್ ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯ ಹ್ಯಾಮಿಲ್ಟನ್ ಕಟ್ಟಡದ 1ನೇ ಮಹಡಿಯಲ್ಲಿನ ಶ್ರೀಕಟೀಲ್ ಎಂಟರ್ ಪ್ರೈಸಸ್‌ನಲ್ಲಿ ಮಕ್ಕಳ ಪ್ರಾಜೆಕ್ಟ್ ವರ್ಕ್‌ಗೆಂದು ಸುಳ್ಳು ಹೇಳಿ 100ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಕಲರ್ ಪ್ರಿಂಟ್ ಮಾಡಿಸಿ ನಕಲಿ ಮಾಡಿದ್ದನು. 2020ರ ಅ.31ರಂದು 12.30ಕ್ಕೆ ಮಾರ್ಗನ್ಸ್ ಗೇಟ್ ಜಂಕ್ಷನ್ ಬಳಿ ಇರುವ ಅಂಗಡಿಗಳಲ್ಲಿ ವಸ್ತುಗಳನ್ನು ಖರೀಸುವ ನೆಪದಲ್ಲಿ ನಕಲಿ ನೋಟುಗಳನ್ನು ಚಲಾವಣೆಗೆ ಪ್ರಯತ್ನಿಸುತ್ತಿದ್ದಾನೆ. ಈ ಸಂದರ್ಭ ಸಿ.ಸಿ.ಬಿ ಪೊಲೀಸ್ ಉಪ ನಿರೀಕ್ಷಕ ಪ್ರದೀಪ್ ಟಿ.ಆರ್. ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯಲ್ಲಿದ್ದ 11 ನಕಲಿ ನೋಟುಗಳನ್ನು ಹಾಗೂ 2 ಅಸಲಿ ನೋಟುಗಳನ್ನು ವಶಪಡಿಸಿಕೊಂಡಿದ್ದರು.…










