1998ರಲ್ಲಿ ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿದ ರಚನಾ ಸಂಸ್ಥೆಯು ತನ್ನ ಮೂಲ ಆಶಯವಾದ ಕಥೊಲಿಕ್ ಯುವಜನರಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ತರಬೇತಿ, ಬಂಡವಾಳ ಜೋಡಿಸುವಿಕೆ, ತಾಂತ್ರಿಕ ಸಹಕಾರ ನೀಡುವುದರ ಜೊತೆಗೆ ಸಂಸ್ಥೆಯ ಸದಸ್ಯರಲ್ಲಿ ಸಹಕಾರ ಹಾಗೂ ಸಂಬಂಧವನ್ನು ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುತ್ತಾ ಬಂದಿದೆ.ಇದಕ್ಕೆ ಪೂರಕವಾಗಿ ರಚನಾ ಉದ್ಯಮ ತರಬೇತಿ ವಿಭಾಗವನ್ನು ಆರಂಭಿಸಿ ಕಳೆದ ಕೆಲವು ವರ್ಷಗಳಿಂದ ಹಲವು ಯುವ ಜನರಿಗೆ ತರಬೇತಿಯನ್ನು ನೀಡಲಾಗಿದೆ. ಕ್ರೈಸ್ತ ಕಥೊಲಿಕ್ ಸಮಾಜದ ಯಶಸ್ವಿ ಉದ್ಯಮಿಗಳು, ವೃತ್ತಿಪರರು, ಕೃಷಿಕರು, ಅನಿವಾಸಿ ಭಾರತೀಯರು ಹಾಗೂ ಸಾಧಕ ಮಹಿಳೆಯರನ್ನು ಗುರುತಿಸಿ ಪ್ರತಿಷ್ಠಿತ ರಚನಾ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.ಕಳೆದ ಬಾರಿಯಂತೆ ಈ ಬಾರಿಯೂ ಸುಮಾರು 25 ಜ್ಯೂರಿ ಸದಸ್ಯರನ್ನೊಳಗೊಂಡ ಸಮಿತಿಯು ಪರಿಶೀಲನೆ ನಡೆಸಿ ಈ ಕೆಳಗಿನ ವ್ಯಕ್ತಿಗಳನ್ನು 2025ನೇ ಸಾಲಿನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ:ರಚನಾ ಉದ್ಯಮಿ – ಶ್ರೀ ಆಸ್ಟಿನ್ ರೋಚ್, ಬೆಂಗಳೂರುರಚನಾ ವೃತ್ತಿಪರ – ಶ್ರೀ ಜಾನ್ ರಿಚರ್ಡ್ ಲೋಬೊ ಕೆ.ಎ.ಎಸ್, ಮಂಗಳೂರುರಚನಾ ಕೃಷಿಕ -…
Author: main-admin
ಉಡುಪಿ : ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಲಾಭದ ಆಮಿಷವೊಡ್ಡಿ ಸುಮಾರು 44 ಲಕ್ಷ ರೂಪಾಯಿ ವಂಚಿಸಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಭಂದಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಮೈಸೂರಿನ ಶೋಯಬ್ ಅಹಮದ್ (28) ಹಾಗೂ ಮುದ್ದಾಸಿರ್ ಅಹಮದ್ (40) ಎಂದು ಗುರುತಿಸಲಾಗಿದೆ. ಉಡುಪಿಯ ಶಿವಳ್ಳಿ ಗ್ರಾಮದ ತೀರ್ಥರಾಜ ಶೆಣೈ(51) ಎಂಬುವವರು ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತೀರ್ಥರಾಜ ಶೆಣೈ ನೀಡಿದ ದೂರಿನನ್ವಯ “Capital Gains Crew ಎಂಬ ಟೆಲಿಗ್ರಾಂ ಗ್ರೂಪ್ ಗೆ Adi Nihal ಎಂಬ ಅಪರಿಚಿತ ವ್ಯಕ್ತಿ ಸೇರ್ಪಡೆಗೊಳಿಸಿದ್ದಾನೆ. ಬಳಿಕ Fidility Institutional Partners F – 101 ಗ್ರೂಪ್ ಗೆ ಸೇರಿಸಿದ್ದು, ಈ ಗ್ರೂಪ್‌ನಲ್ಲಿ ಷೇರು ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದಾರೆ. ಬಳಿಕ ತೀರ್ಥರಾಜ ಅವರು ತಮ್ಮ ಮತ್ತು ಅವರ ತಾಯಿಯ ಬ್ಯಾಂಕ್ ಖಾತೆಯಿಂದ 2024ರ ಡಿಸೆಂಬರ್ 19 ರಿಂದ 2025ರ ಜನವರಿ 7 ರವರೆಗೆ ಅಪರಿಚಿತರು…
ಉಳ್ಳಾಲ: ತಡರಾತ್ರಿ ಕೋಟೆಕಾರು ಬೀರಿ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿಯ ಕಣ್ಗಾವಲು ವ್ಯವಸ್ಥೆಯ ಎಚ್ಚರಿಕೆಯ ಮೇರೆಗೆ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿಯ ನಿವಾಸಿ ನಾಗಪ್ಪ ಕೇರಳಟ್ಟಿ (41) ಎಂದು ಗುರುತಿಸಲಾಗಿದೆ. ನಾಗಪ್ಪ (41) ಎಂಬಾತನನ್ನು ಮುಂಜಾನೆ 3 ಗಂಟೆ ಸುಮಾರಿಗೆ ಎಸ್‌ಬಿಐ ಎಟಿಎಂನಲ್ಲಿದ್ದ ಕ್ಯಾಶ್ ಬಾಕ್ಸ್ ಒಡೆಯಲು ಯತ್ನಿಸುತ್ತಿದ್ದಾಗ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೊಲೀಸರ ಪ್ರಕಾರ, ನಾಗಪ್ಪ ಬೆಳಗಿನ ಜಾವ 2:30 ರ ಸುಮಾರಿಗೆ ಎಟಿಎಂ ಒಳಗೆ ಪ್ರವೇಶಿಸಿ, ತಾನು ತಂದಿದ್ದ ಉಪಕರಣಗಳನ್ನು ಬಳಸಿ ಕ್ಯಾಶ್ ಬಾಕ್ಸ್ ಅನ್ನು ಹಾನಿಗೊಳಿಸಿದ್ದಾನೆ. ದೆಹಲಿಯಿಂದ ಹಿಡಿದು ವಿವಿಧ ಜಿಲ್ಲೆಗಳ ಎಟಿಎಂಗಳ ಮೇಲೆ ನಿಗಾ ಇಡುವ ದೆಹಲಿಯ ಕಣ್ಗಾವಲು ವ್ಯವಸ್ಥೆಯು ಈ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿದೆ. ಬಳಿಕ ಕಣ್ಗಾವಲು ಸಿಬ್ಬಂದಿ ರಂಜಿತ್ ಅವರು ಬೀರಿ ಎಟಿಎಂ ನೋಡಿಕೊಳ್ಳುವ ದೀಪಕ್ ಅಮಿನ್ ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ 112 ಗೆ ಕರೆ ಮಾಡಿದ್ದಾರೆ.…
ಮಂಗಳೂರು: ಗಸ್ತು ನಿರತ ಕಂಕನಾಡಿ ನಗರ ಠಾಣೆ ಎಎಸ್ಸೈ ಅಶೋಕ್ ಕೆ. ಮತ್ತು ಸಿಬ್ಬಂದಿ ಸುರೇಂದ್ರ ಕುಮಾರ್ ಅವರಿಗೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಹಲಸೋಗೆ ಗ್ರಾಮದ ನಿವಾಸಿ ಸುಲೈಮಾನ್ (42) ಜೀವ ಬೆದರಿಕೆ ಹಾಕಿದ ಆರೋಪಿಯಾಗಿದ್ದು, ಈತನನ್ನು ಬಂಧಿಸಲಾಗಿದೆ. ಸೆ.2ರಂದು ರಾತ್ರಿ 12:45ಕ್ಕೆ ಅಶೋಕ್ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್‌ನಲ್ಲಿದ್ದಾಗ ನಾಗುರಿಯಲ್ಲಿ ಚಿಕ್ ಗ್ರಿಲ್ ಎಂಬ ಅಂಗಡಿ ಬಳಿ ಓಣಿಯಲ್ಲಿ ಐದಾರು ದ್ವಿಚಕ್ರ ವಾಹನಗಳ ಸಮೇತ ಏಳೆಂಟು ಮಂದಿಯನ್ನು ನಿಂತಿದ್ದರು. ತಕ್ಷಣ ಎಎಸ್ಸೈ ಯಾಕೆ ಇಲ್ಲಿ ನಿಂತಿದ್ದೀರಿ ಎಂದು ಪ್ರಶ್ನಿಸಿದಾಗ ಹಿಂಬದಿಯ ಅಡುಗೆ ಕೋಣೆಯಿಂದ ಏಕಾಏಕಿ ಬಂದ ಸುಲೈಮಾನ್ ಎಂಬಾತ ನಮ್ಮನ್ನು ಕೇಳಲು ನೀವು ಯಾರು? ಎಂದು ಪ್ರಶ್ನಿಸಿ ಅಶೋಕ್ ಅವರಿಗೆ ಹಲ್ಲೆಗೆ ಯತ್ನಿಸಿದ್ದಾನೆ. ಅಲ್ಲದೆ ಎಸ್ಸೈಯ ಮೊಬೈಲ್‌ಗೆ ಅಳವಡಿಸಿದ್ದ ಫಿಂಗರ್ ಪ್ರಿಂಟ್ ಸ್ಕ್ಯಾನರನ್ನು ಆರೋಪಿ ಹಿಡಿದು ಎಳೆದು ತುಂಡು ಮಾಡಿ ನೆಲಕ್ಕೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ತಕ್ಷಣ ಪೊಲೀಸ್…
ಒಂದು ವರ್ಷದ ಹಿಂದೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾದ ನೇಹಾ ಹಿರೇಮಠ ಅವರ ಕಾಲೇಜು ಕ್ಯಾಂಪಸ್ ನಲ್ಲಿ ಹಾಡುಹಗಲೇ ನಡೆದ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಹಾಗೂ ರಾಜ್ಯಾದ್ಯಂತ ಕ್ಯಾಂಪಸ್ಗಳಲ್ಲಿ ಭಯದ ವಾತಾವರಣವನ್ನು ಹೋಗಲಾಡಿಸಲು ಸೂಕ್ತ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನಗರದ ಜೋಡುಕಟ್ಟೆಯಿಂದ ಪ್ರಾರಂಭವಾಗಿ ಸರ್ವಿಸ್ ಬಸ್ ಸ್ಟ್ಯಾಂಡ್, ಕ್ಲಾಕ್ ಟವರ್ ವರೆಗೆ ನಡೆದ ಪ್ರತಿಭಟನಾ ಜಾತದ ವಿರುದ್ಧ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಬಿವಿಪಿಯ 15 ವಿದ್ಯಾರ್ಥಿ ನಾಯಕರ ಮೇಲೆ ಐಪಿಸಿ ಕಲಂ 143, 147, 341, 290, 149 ರಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಮೊದಲ ಹಂತದಲ್ಲಿ ಉಡುಪಿಯ ನ್ಯಾಯಾಲಯದಲ್ಲಿ ವಕೀಲರಾದ ಶ್ರೀನಿಧಿ ಹೆಗ್ಡೆ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಜಾಮೀನನ್ನು ಪಡೆಯಲು ಯಶಸ್ವಿಯಾದರೆ ನಂತರ ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಅರುಣ್ ಶ್ಯಾಮ್…
ಬೆಳ್ತಂಗಡಿ :ಅಕ್ರಮವಾಗಿ ಮರಳು ಸಾಗಾಟದ ಪ್ರಕರಣವೊಂದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ ಧನಕೀರ್ತಿ ಎಂಬಾತನಾಗಿದ್ದಾನೆ. ಸೆ. 2ರಂದು ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಕೊಕ್ರಾಡಿ ಬಳಿ ನಾರಾವಿ- ವೇಣೂರು – ಸಾರ್ವಜನಿಕ ರಸ್ತೆಯಲ್ಲಿ ನಾರಾವಿ ಕಡೆಯಿಂದ ವೇಣೂರು ಕಡೆಗೆ ಬರುತ್ತಿದ್ದ 407 ಗೂಡ್ಸ್ ಮಿನಿ ಟಿಪ್ಪರ್ ನಂಬ್ರ KA 70.4468 ನೇದರಲ್ಲಿ ಮರಳು ಸಾಗಾಟ ಮಾಡುತ್ತಿರುವುದನ್ನು ಗಮನಿಸಿದ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಟಿಪ್ಪರ್ ಚಾಲಕನಲ್ಲಿ ಮರಳು ಸಾಗಾಟದ ಬಗ್ಗೆ ಯಾವುದೇ ದಾಖಲೆ/ಪರವಾನಿಗೆ ಇಲ್ಲದಿರುವುದು ಕಂಡುಬಂದಿದೆ ಅಲ್ಲದೇ ಸದ್ರಿ ಮರಳನ್ನು ಸುಲ್ಕೇರಿ ಗ್ರಾಮದ ಸುಲ್ಕೇರಿ ಎಂಬಲ್ಲಿ ಹರಿಯುವ ನದಿಯಿಂದ ತುಂಬಿಸಿ ಸಾಗಾಟ ಮಾಡುತ್ತಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿದ್ದ ಸುಮಾರು ಒಂದೂವರೆ ಯೂನಿಟ್ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ 6,000/- ಗಳಾಗಿದ್ದು…
ಮಂಗಳೂರು: ಅತ್ಯಾಚಾರ ಸಂತ್ರಸ್ಥೆಯ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾಕ್ಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಿಸಿ ರೋಡ್‌ನ ವೈದ್ಯ ಡಾ| ಸೋಮೇಶ್ ಸೊಲೊಮನ್, ಮಂಗಳೂರಿನ ಪಿಜಿ ಮಾಲಕಿ ವಿಜಯಲಕ್ಷ್ಮಿ ಆಲಿಯಾಸ್ ವಿಜಯ ಮತ್ತು ಅತ್ಯಾಚಾರ ಆರೋಪಿ ನವನೀತ್ ನಾರಾಯಣ ಬಂಧಿತರು. ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಗೆ ಇದು ಇವರ ಮಗುವಲ್ಲ ಎಂದು ತಿಳಿದು ಬಂದಿದೆ. ಅವರದಲ್ಲದ ಮಗುವಿನ ಬಗ್ಗೆ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ ಅವಿವಾಹಿತ ಮಹಿಳೆಗೆ ಹೆರಿಗೆಯಾಗಿದ್ದು, ಹಣ ನೀಡಿ ಆಸ್ಪತ್ರೆಯ ಮೂಲಕ ಮಗುವನ್ನು ಪಡೆದುಕೊಂಡು ಬಂದಿರುವುದಾಗಿ ದಂಪತಿ ಅಂಗನವಾಡಿ ಕಾರ್ಯಕರ್ತೆಗೆ ಮಾಹಿತಿ ನೀಡಿದ್ದಾರೆ . ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಶಿರ್ವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಶಿರ್ವಪೊಲೀಸರು ಪ್ರಭಾವತಿಯವರ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ ಹೆಣ್ಣು ಮಗು ಆಗಸ್ಟ್ 3 ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ…
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ನಡೆದ ಬಗ್ಗೆ ವರದಿಯಾಗಿದ್ದು, ಹನಿಟ್ರ್ಯಾಪ್ ಜಾಲವನ್ನು ಬೇಧಿಸಿದ ಕುಂದಾಪುರ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧೀ ಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್(36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್(23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್(26), ಕುಂದಾಪುರ ಎಂ.ಕೋಡಿಯ ಆಸ್ಮಾ(43) ಬಂಧಿತ ಆರೋಪಿಗಳು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಒಟ್ಟು 18 ಲಕ್ಷ ರೂ. ಮೌಲ್ಯದ ಎರಡು ಕಾರುಗಳನ್ನು ವಶಪಡಿಸಿಕೊಳ್ಳ ಲಾಗಿದೆ. ಆರೋಪಿಗಳನ್ನು ಕೋಟೇಶ್ವರ ಗ್ರಾಮದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ; ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಈ ಪ್ರಕರಣದಲ್ಲಿ…
70 ಸಾವಿರ ರೂ.ಲಂಚ ಪಡೆಯುತ್ತಿರುವಾಗಲೇ ದೇವನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಅಂಬರೀಶ್ ಎಂಬುವರ 70 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆ ಬಿದ್ದಿದ್ದಾರೆ. ಪೋಕ್ಸೋ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಯುವತಿ ಕಡೆಯವರ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಿಎಸ್ ಐ ಜಗದೇವಿ. 75 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಪಿಎಸ್ ಐ ಜಗದೇವಿ. ಈ ಹಿಂದೆ 5 ಸಾವಿರ ರೂ. ನೀಡಿದ್ದು, ಇಂದು 70 ಸಾವಿರ ರೂ. ನೀಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಎಸ್ ಐ ಜಗದೇವಿ ಪರ ಲಂಚ ಸ್ವೀಕರಿಸುತ್ತಿದ್ದ ಪಿಸಿ ಅಂಬರೀಶ್ ಲೋಕಾಯುಕ್ತ ಬಲೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬೀಳುತ್ತಿದ್ದಂತೆ ಪಿಎಸ್ ಐ ಜಗದೇವಿ, ಪಿಸಿ ಮಂಜುನಾಥ್ ಪರಾರಿಯಾಗಿದ್ದಾರೆ. ಪಿಸಿ ಅಂಬರೀಶ್ ನನ್ನು ವಶಕ್ಕೆ ಪಡೆದು ದೇವನಹಳ್ಳಿ ಠಾಣೆಯಲ್ಲಿ…
ಕಾಸರಗೋಡು: ಆಟೋರಿಕ್ಷಾದಲ್ಲಿ ಸಾಗಿಸುತಿದ್ದ 18.240 ಗ್ರಾಂ. ಎ ಡಿ. ಎಂ. ಎ ಮಾದಕ ವಸ್ತು ಸಹಿತ ಓರ್ವನನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಿಯಮ್ಮೆ ಪೂಕಟ್ಟೆ ನಿವಾಸಿ ಎಂ ಅಬ್ದುಲ್ ಅಜೀಜ್ (42) ಎಂದು ಗುರುತಿಸಲಾಗಿದೆ. ಸಾಗಾಟಕ್ಕೆ ಬಳಸಿದ ಆಟೋ ರಿಕ್ಷಾ ವಶಕ್ಕೆ ಪಡೆಯಲಾಗಿದೆ. ಮಂಗಳವಾರ ರಾತ್ರಿ ಕೊಡಿಯಮ್ಮೆಯಲ್ಲಿ ವಾಹನ ತಡೆದು ತಪಾಸಣೆ ನಡೆಸಿ ವಿಚಾರಣೆ ನಡೆಸುವಾಗ ಮಾದಕ ವಸ್ತು ಸಾಗಾಟ ಪತ್ತೆಯಗಿದೆ. ಪೊಲೀಸರನ್ನು ಕಂಡಾಗ ಆರೋಪಿ ರಿಕ್ಷಾ ಬಿಟ್ಟು ಪರಾರಿಯಾಗಲು ಯತ್ನಿಸಿದ್ದನು. ಇದರಿಂದ ಸಂಶಯಗೊಂಡ ಪೊಲೀಸರು ಆರೋಪಿಯನ್ನು ಬೆನ್ನಟ್ಟಿ ಹಿಡಿದು ವಿಚಾರಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ.









