Author: main-admin

ಮಂಗಳೂರು : ಮೂರು ಕಳವು ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಲಯಕ್ಕೆ ಹಾಜರಾಗದೆ 12 ತಲೆಮರೆಸಿಕೊಂಡ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕೋನಾಲು ನಿವಾಸಿ ಅಬ್ದುಲ್ ಹಮೀದ್(50) ಬಂಧಿತ ಆರೋಪಿ. 1999ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ 2012ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 3 ಕಳವಯ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಬ್ದುಲ್ ಹಮೀದ್ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ. ಆ ಬಳಿಕ ವಿಚಾರಣೆಗೆ ಹಾಜರಾಗದೇ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಧರ್ಮಸ್ಥಳದ ಬಳಿಯಲ್ಲಿ ವಶಕ್ಕೆ ದಸ್ತಗಿರಿ ಮಾಡುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಆತನನ್ನು ಮುಂದಿನ ಕ್ರಮಕ್ಕಾಗಿ ಸಿಸಿಬಿ ಪೊಲೀಸರು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ.

Read More

ಮಂಗಳೂರು: ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ಫೆಬ್ರವರಿ 7 ರಂದು ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಕೆಎ-02ಎಸಿ 5994 ನೊಂದಣೆ ಸಂಖ್ಯೆಯ ವಾಹನದಲ್ಲಿದ್ದ ವಿವಿದ ಜಾತಿಯ 26 ದಿಮ್ಮಿಗಳನ್ನು ಸೇರಿ ಒಟ್ಟು 6 ಲಕ್ಷ ಬೆಲೆಬಾಳುವ ಸೊತ್ತುಗಳನ್ನು ಸರಕಾರದ ಪರ ಅಮಾನತು ಪಡಿಸಿ, ಕುಂದಾಪುರ ತಾಲೂಕಿನ ಮೊಹಮ್ಮದ್ ಸಿರಾಜ್ ಎಂಬವರ ವಿರುದ್ಧ ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಪತ್ತೆಹಚ್ಚಿ ಅರಣ್ಯ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ್, ವಲಯ ಅರಣ್ಯ ಅಧಿಕಾರಿ(ಪ್ರಭಾರ) ಪ್ರಶಾಂತ್, ಉಪ ವಲಯ ಅರಣ್ಯ ಅಧಿಕಾರಿ ಶಿವಾನಂದ ಸದೇಪ ಮಾದರ, ಉಪ ವಲಯ ಅರಣ್ಯ ಅಧಿಕಾರಿ ವಿನಯ ಕುಮಾರ್, ವಾಹನ ಚಾಲಕರು ಜಯಪ್ರಕಾಶ್ ಕೆ, ಮತ್ತು ಜಯಪ್ರಕಾಶ್ ಭಾಗವಹಿಸಿದ್ದರು. ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಎಂ.ಖಣದಾಳಿ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಇವರು ಮುಂದಿನ ತನಿಖೆಯನ್ನು…

Read More

ಉಡುಪಿ : ಇತ್ತೀಚೆಗೆ ಶರಣಾಗಿದ್ದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರನ್ನು ಮೂರು ಪ್ರಕರಣಗಳಿಗೆ ಸಂಬಂಧಿಸಿ ವಿಚಾರಣೆಗೆ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿದ್ದ ಲಕ್ಷ್ಮೀ ತೊಂಬಟ್ಟು ಅವರನ್ನು ಪೊಲೀಸರು ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಅದರಂತೆ ನ್ಯಾಯಾಧೀಶರು ಲಕ್ಷ್ಮಿ ಅವರನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು. ಇದೀಗ ಪೊಲೀಸರು ಲಕ್ಷ್ಮೀ ಅವರನ್ನು ವಶಕ್ಕೆ ಪಡೆದುಕೊಂಡಿದ್ದು ಕುಂದಾಪುರ ಡಿವೈಎಸ್ಪಿ ಎಚ್‌.ಡಿ ಕುಲಕರ್ಣಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಅಮಾಸೆಬೈಲು ಠಾಣೆ ವ್ಯಾಪ್ತಿಗೊಳಪಡುವ 3 ಪ್ರಕರಣಗಳಲ್ಲಿ ಲಕ್ಷ್ಮೀ ತನಿಖೆ ನಡೆಯಲಿದೆ.

Read More

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ನಂಬಿಸಿ 46,00,000 ರೂ. ಹಣವನ್ನು ವಂಚಿಸಿರುವ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಕೇರಳ ಮೂಲದ ಜುನೈದ ವಿ ಕೆ ಎಂಬಾತನನ್ನು ಪತ್ತೆ ಮಾಡಿ ದಸ್ತಗಿರಿ ಕ್ರಮ ಜರುಗಿಸಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಯಾರೋ ಅಪಚಿರಿತ ವ್ಯಕ್ತಿ ವಾಟ್ಸ್ ಆ್ಯಫ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿ ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ, ದೂರುದಾರರಿಂದ ಹಂತ ಹಂತವಾಗಿ ಒಟ್ಟು 46,00,000 ರೂ. ಹಣವನ್ನು ಪಡೆದು ವಂಚನೆ ಮಾಡಿರುವುದಾಗಿದೆ. ದೂರುದಾರು ನೀಡಿದ ದೂರಿನಂತೆ ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕಲಂ 66(ಸಿ) 66(ಡಿ) ಐಟಿ ಆಕ್ಟ್ ಮತ್ತು 308(2), 318(2), 336(3), 112 ಬಿ.ಎನ್.ಎಸ್ ಅಡಿ ಪ್ರಕರಣ ದಾಖಲಾಗಿರುತ್ತದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರವನ್ನು ಸಂಗ್ರಹಿಸಿ ನೋಡಿದಾಗ ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಗೆ 10,00,000ರೂ. ಹಣ ವರ್ಗಾವಣೆಯಾಗಿದೆ. ನಂತರ…

Read More

ಗುರುಪುರ: ಮಣ್ಣು ಸಾಗಿಸುತ್ತಿದ್ದ ಲಾರಿಯೊಂದು ಬಸ್ ತಂಗುದಾಣ ಮತ್ತು ಶ್ರೀ ಶನೀಶ್ವರ ಪೂಜಾ ಸಮಿತಿಯ ಕಚೇರಿಗೆ ಡಿಕ್ಕಿ ಹೊಡೆದಿದ್ದು, ಬಸ್ ತಂಗುದಾಣ ಮತ್ತು ಕಚೇರಿ ಸಂಪೂರ್ಣ ಜಖಂಗೊಂಡ ಘಟನೆ ಗುರುಪುರ ಜಂಕ್ಷನ್ ನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು,ಗಾಯಗೊಂಡ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನ ಕಡೆಗೆ ಹೋಗುತಿದ್ದ ಲಾರಿ ಕೇರಳದತ್ತ ಮಣ್ಣು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.ಘಟನೆಯಲ್ಲಿ ಬಸ್ ತಂಗುದಾಣ ಸಂಪೂರ್ಣ ನುಜ್ಜುಗುಜ್ಜಾಗಿದ್ದು , ಅದೃಷ್ಟವಶಾತ್ ದುರ್ಘಟನೆ ಸಂಭವಿಸಿದ ವೇಳೆ ಬಸ್ ತಂಗುದಾಣದಲ್ಲಿ ಜನರಿರಲಿಲ್ಲ. ಅಪಘಾತ ನಡೆದ ಬಳಿಕ ಚಾಲಕ ಲಾರಿಯನ್ನು ನಿಲ್ಲಿಸದೆ ಹೋಗಿದ್ದು,ಸ್ಥಳೀಯರು ಬೆನ್ನಟ್ಟಿ ಅಲೈಗುಡ್ಡೆಯಲ್ಲಿ ತಡೆದು ನಿಲ್ಲಿಸಿದ್ದಲ್ಲದೆ, ಚಾಲಕನಿಗೆ ಥಳಿಸಿದ್ದಾರೆ ಎನ್ನಲಾಗಿದೆ. ಬಜ್ಪೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ.

Read More

ಮಂಗಳೂರು: ಅರ್ಚಕರೊಬ್ಬರನ್ನು ಎಫ್‌ಬಿಯಲ್ಲಿ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊಂಡು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೊಳಂಬೆ ನಿವಾಸಿ ಅಶ್ವಥ್ ಆಚಾರ್ಯ (33) ಬಂಧಿತ ವ್ಯಕ್ತಿ. ಅಶ್ವತ್ಥ್ ಆಚಾರ್ಯ ಫೇಸ್ ಬುಕ್‌ನಲ್ಲಿ ಕಾಸರಗೋಡು ಮೂಲದ ಅರ್ಚಕರೊಬ್ಬರೊಂದಿಗೆ ತಾನು ಯಕ್ಷಗಾನ ಕಲಾವಿದ ಎಂದು ಪರಿಚಯಿಸಿಕೊಂಡು ಫ್ರೆಂಡ್ ಆಗಿದ್ದ. ಬಳಿಕ ಇಬ್ಬರೂ ಆನ್‌ಲೈನ್‌ನಲ್ಲಿ ಸಂಪರ್ಕದಲ್ಲಿದ್ದು, ಲೈಂಗಿಕವಾಗಿ ಆಕರ್ಷಿಸಿ ಸೆಕ್ಸ್ ಸಂಬಂಧಿಸಿ ಇಬ್ಬರೂ ಚಾಟ್ ಮಾಡುತ್ತಿದ್ದರು. ಇದೇ ವೇಳೆ ಒಬ್ಬರಿಗೊಬ್ಬರು ಫೋಟೋ, ವಿಡಿಯೋ ಷೇರ್ ಮಾಡಿಕೊಂಡಿದ್ದು, ಇದನ್ನೇ ಮುಂದಿಟ್ಟು ಅರ್ಚಕನನ್ನು ಅಶ್ವಥ್ ಆಚಾರ್ಯ ಬ್ಲಾಕೇಲ್ ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೆ, ತಾನು ಯುವತಿಯಾಗಿ ಲಿಂಗ ಬದಲಾಯಿಸಿಕೊಳ್ಳುತ್ತೇನೆ, ಅದಕ್ಕಾಗಿ ಅಗತ್ಯವಿದೆ ಎಂದೂ ನಂಬಿಸಿದ್ದಾನೆ. ಹಣದ ಬ್ಲಾಕ್ಮೇಲ್ ಒಳಗಾದ ಅರ್ಚಕ ಕಳೆದ ನವೆಂಬರ್ ತಿಂಗಳಿನಿಂದ 10.50 ಲಕ್ಷ ರೂ. ಹಣವನ್ನು ಮೊಬೈಲ್ ಆ್ಯಪ್ ಮತ್ತು ಬ್ಯಾಂಕ್ ಮೂಲಕ ಆರೋಪಿ ಖಾತೆಗೆ…

Read More

ರಾಜ್ಯದಲ್ಲಿ ಸಾಲಗಾರರ ಮೇಲೆ ಮೈಕ್ರೋ ಫೈನಾನ್ಸ್‌ ಸಾಲ ನೀಡಿದವರ ಕಿರುಕುಳವನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಲು ಮುಂದಾಗಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ತಿರಸ್ಕರಿಸಿದ್ದಾರೆ. ಮರುಪರಿಶೀಲನೆಗೆ ಸೂಚಿಸಿದ್ದಾರೆ. ಇತ್ತೀಚೆಗೆ, ಮೈಕ್ರೋ ಫೈನಾನ್ಸ್‌ ಹಾವಳಿ, ಕಿರುಕುಳದಿಂದಾಗಿ ಹಲವಾರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ವರದಿಗಳಾಗಿವೆ. ಅಲ್ಲದೆ, ಹೆಚ್ಚಿನ ಮಂದಿ ಊರು ತೊರೆದು ಹೋಗುತ್ತಿದ್ದಾರೆ. ಇದೆಲ್ಲವನ್ನೂ ಗಂಭೀರವಾಗಿ ಪರಿಗಣಿಸಿದ್ದ ರಾಜ್ಯದ ಕಾಂಗ್ರೆಸ್ ಸರ್ಕಾರವು, ವಿಶೇಷ ಸಚಿವ ಸಂಪುಟ ಸಭೆ ಕರೆದು, ಹಲವಾರು ನಿಯಮಗಳೊಂದಿಗೆ ಸುಗ್ರೀವಾಜ್ಞೆ ಮಸೂದೆ ರಚಿಸಿತ್ತು. ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಕಳಿಸಿತ್ತು. ಆದರೆ, ಇದೀಗ, ರಾಜ್ಯಪಾಲರು ಹಲವು ಕಾರಣಗಳನ್ನು ಉಲ್ಲೇಖಿಸಿ ಸುಗ್ರೀವಾಜ್ಞೆಯ ಮಸೂದೆಯನ್ನು ವಾಪಸ್‌ ಕಳಿಸಿದ್ದಾರೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ. ಸರ್ಕಾರ ಸಿದ್ದಪಡಿಸಿದ್ದ ಸುಗ್ರೀವಾಜ್ಞೆ ಮಸೂದೆಯಲ್ಲಿ ಸಾಲ ಕೊಟ್ಟವರ ಬಗ್ಗೆ ಯಾವುದೇ ಕಾಳಜಿಯನ್ನು ಉಲ್ಲೇಖಿಸಲಾಗಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ ಎಂದು ವರದಿಯಾಗಿದೆ. 10 ವರ್ಷಗಳ ಶಿಕ್ಷೆ ಮತ್ತು 5 ಲಕ್ಷ ದಂಡ ಅತಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಅಸ್ತಿತ್ವದಲ್ಲಿರುವ…

Read More

ಬೆಂಗಳೂರು: ಕರ್ನಾಟಕದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲು ಕಾನೂನು ಇಲಾಖೆ ಮುಂದಾಗಿದೆ. ಹೌದು.. ರಾಜ್ಯದಲ್ಲಿ ದ್ವೇಷ ಭಾಷಣ ಸಾಬೀತಾದರೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ನಗದು ದಂಡ ವಿಧಿಸಲು ಅವಕಾಶ ಮಾಡಿಕೊಡುವಂಥ ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ (ಹೋರಾಟ, ತಡೆಗಟ್ಟುವಿಕೆ ಮತ್ತು ಶಿಕ್ಷೆ) ವಿಧೇಯಕ-2025 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸುತ್ತಿದೆ. ಇದರಡಿ ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುದನ್ನು ಕರಡಿನಲ್ಲಿ ಪ್ರಸ್ತಾಪಿಸಲಾಗಿದೆ. ಈಗಾಗಲೇ ಭಾರತೀಯ ನಾಗರಿಕ ದಂಡ ಸಂಹಿತೆಯಲ್ಲಿ ದ್ವೇಷ ಭಾಷಣ ನಿಷಿದ್ಧವಾದರೂ ಇದಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ವಿಸ್ತೃತವಾಗಿ…

Read More

ಮಂಗಳೂರು: ಸ್ನ್ಯಾಪ್‌ಚಾಟ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್‌ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಬಾಲಕಿಯ ದೂರಿನ ಮೇರೆಗೆ ಬೆದರಿಕೆ ಹಾಕಿದವನ ವಿರುದ್ಧ ಮಂಗಳೂರಿನ ಸೆನ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನ ಸ್ನ್ಯಾಪ್‌ಚಾಟ್‌ ಖಾತೆಗೆ ಓರ್ವ ವ್ಯಕ್ತಿ ಆತನ ಸ್ನ್ಯಾಪ್‌ಚಾಟ್‌ ಖಾತೆಯಿಂದ ಅಶ್ಲೀಲತೆಯ ವೀಡಿಯೋ ಕಾಲ್‌ನ ಸ್ಕ್ರೀನ್‌ ರೆಕಾರ್ಡ್‌ ಮಾಡಿರುವ ವೀಡಿಯೋ ಫೈಲ್‌ ಅನ್ನು ಕಳುಹಿಸಿ ಬೆದರಿಕೆ ಹಾಕಿದ್ದಾನೆ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿ ನ್ಯಾಷನಲ್‌ ಸೈಬರ್‌ ಕ್ರೈಂ ರಿಪೋರ್ಟಿಂಗ್‌ ಪೋರ್ಟಲ್‌ಗೆ (ಎನ್‌ಸಿಸಿಆರ್‌ಪಿ) ದೂರು ನೀಡಿದ್ದಳು.ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ನ್ಯಾಯಾಲಯದ ಆದೇಶದಂತೆ ಠಾಣೆಯಲ್ಲಿರುವ ವಾಹನ ಬಿಡಿಸಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿದ್ದ ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ್‌ಗೆ ಜಾಮೀನು ಲಭಿಸಿದೆ. ಜ.27 ರಂದು ವಾಹನ ಬಿಡಿಸಲು ಹೋದ ವಾಹನ ಮಾಲಕನಿಗೆ ಉತ್ತರ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ಮುಹಮ್ಮದ್ ಶರೀಫ್ ಲಂಚದ ಬೇಡಿಕೆ ಇಟ್ಟಿದ್ದರು. ದೂರುದಾರ ಲಂಚವನ್ನು ನೀಡದಿದ್ದ ಹಿನ್ನೆಲೆಯಲ್ಲಿ ವಾಹನ ಬಿಡಿಸಲು ಸತಾಯಿಸಲಾಗಿತ್ತು. ಆದ್ದರಿಂದ ಅವರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ಬಳಿಕ ಆ ವ್ಯಕ್ತಿಯಿಂದ ಮುಹಮ್ಮದ್ ಶರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ 3000ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಇಬ್ಬರನ್ನು ಜ.28ರಂದು ಬಂಧಿಸಿದ್ದರು. ಆರೋಪಿ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು ಅರ್ಜಿಯನ್ನು ಪರಿಗಣಿಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಅವರು ಇಬ್ಬರಿಗೂ ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ. ಆರೋಪಿಗಳ ಪರವಾಗಿ ಖ್ಯಾತ ವಕೀಲರಾದ…

Read More