ಸುಳ್ಯ : ಮಾಣಿ ಮೈಸೂರು, ಹೆದ್ದಾರಿಯಲ್ಲಿ ಬೈಕ್ ಅಪಘಾತವಾಗಿ ಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಸುಳ್ಯ ಅರಂತೋಡು ಸಮೀಪ ನಡೆದಿದೆ. ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ.ಗಾಯಗೊಂಡವರನ್ನು ಮಂಗಳೂರು ಕಂಕನಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಎಂದು ಗುರುತಿಸಲಾಗಿದೆ.
Author: main-admin
ಮಂಗಳೂರು: ನಗರದ ಬಿಜೈನಲ್ಲಿರುವ ಕಲರ್ ಯೂನಿಸೆಕ್ಸ್ ಮಸಾಜ್ ಪಾರ್ಲರ್ ದಾಳಿ ಪ್ರಕರಣದ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ರಾಮಸೇನಾ ಕರ್ನಾಟಕ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 11 ಮಂದಿಗೆ ಜಾಮೀನು ನೀಡಲಾಗಿದೆ. ಜನವರಿ 23ರಂದು ಮಂಗಳೂರಿನ ಬಿಜೈನಲ್ಲಿರುವ ಕಲರ್ಸ್ ಯುನಿಸೆಕ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ್ದ ರಾಮಸೇನಾ ಸಂಘಟನೆಯ ಕಾರ್ಯಕರ್ತರು ಅನೈತಿಕ ಚಟುವಟಿಕೆ ನಡೆಯುತ್ತಿರುವ ಎಂದು ಆರೋಪದ ಮೇಲೆ ದಾಂಧಲೆ ನಡೆಸಿದ್ದರು. ಈ ಬಗ್ಗೆ ಮಸಾಜ್ ಪಾರ್ಲರ್ ಮಾಲೀಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದಾಳಿಯ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬರ್ಕೆ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಂಧಿತರಿಗೆ ಮಂಗಳೂರು 6ನೇ ಜೆಎಂಎಫ್‌ಸಿ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಆರೋಪಿಗಳ ಪರ ವಕೀಲರು ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.…
ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ಟ್ರೈ ತಿಂಡಿ ಇನ್ಸ್ಟಾಗ್ರಾಮ್ ಪೇಜ್ ಸಹಭಾಗಿತ್ವದಲ್ಲಿ ಫೆಬ್ರವರಿ 7, 8 ಮತ್ತು 9ರಂದು 3 ದಿನಗಳ ಐಸ್ ಕ್ರೀಮ್ ಪರ್ಬವನ್ನು ಅಯೋಜಿಸಲಾಗಿದೆ. 2ನೇ ಆವ್ರತ್ತಿಯ ಐಸ್ ಕ್ರೀಮ್ ಪರ್ಬ ಇದಾಗಿದ್ದು ಮೂರೂ ದಿನ ಕೂಡ ಬೆಳಗ್ಗೆ 11ರಿಂದ ರಾತ್ರಿ 9 ರವರೆಗೆ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಕಿರಣ್ ಶೆಣೈ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಮಂಗಳೂರನ್ನು ಐಸ್ ಕ್ರೀಮ್ ಕ್ಯಾಪಿಟಲ್ ಆಫ್ ಇಂಡಿಯಾ ಎಂದು ಕರೆಯುವ ಈ ಸಂದರ್ಭದಲ್ಲಿ ಎಲ್ಲಾ ಐಸ್ ಕ್ರೀಮ್ ಸಂಸ್ಥೆಗಳನ್ನ ಒಂದೇ ಸೂರಿನಡಿ ಸೇರಿಸಬೇಕು ಅನ್ನುವ ಆಲೋಚನೆ ಆಯೋಜಕರದ್ದು, ಹಾಗಾಗಿ ಈ ಬಾರಿ 14 ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ಭಾಗವಹಿಸುವ ಐಸ್ ಕ್ರೀಮ್ ಸಂಸ್ಥೆಗಳು ಐಡಿಯಲ್ – ಪಬ್ಬಾಸ್ , ಹ್ಯಾಂಗ್ಯೋ, ಮ್ಯಾಂಗೋ ಬೆರ್ರಿಸ್ , ಎಂಚಿ ಕ್ರಂಚಿ – ದಿ ಮಿಲೆಟ್ ಹೌಸ್ , ಸ್ಕೂಪ್ಸೊ , ಕೈಲಾರ್ಸ್ , ಸ್ವಿರ್ಲಿಯೊ…
ಕೋಟ:ಕಲ್ಲು ಕೋರೆಯೊಂದರಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಒಡೆದ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸಿಬಂದಿ ವಿರುದ್ಧ ಎಸ್‌ಪಿ ಕ್ರಮ ಕೈಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೇದೆ ಸಂತೋಷ್ ಅವರನ್ನು ಅಮಾನತುಗೊಳಿಸಲಾಗಿದ್ದು, ಪಿ.ಎಸ್.ಐ. ಅಶೋಕ್ ಅವರನ್ನು ಒಒಡಿ ಮೇಲೆ ಪಡುಬಿದ್ರಿ ಠಾಣೆಗೆ ವರ್ಗಾಯಿಸಲಾಗಿದೆ.ಗರಿಕೆಮಠದ ಕಲ್ಲುಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಒಡೆಯುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಕಾರ್ಮಿಕ ಸೆಂಥಿಲ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಿದಾಗ ಪ್ರಕರಣಕ್ಕೆ ಸಂಬಂಧಿಸಿಮಹಮ್ಮದ್ ಬಶೀರ್ ಅವರು ಒಂದು ಎಕ್ರೆ ವಿಸ್ತೀರ್ಣದ ತಮ್ಮ ಕಲ್ಲುಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಬಳಸಿದ್ದು ತಿಳಿದುಬಂದಿತ್ತು. ಬಳಿಕ ಗರಿಕೆಮಠ ನಿವಾಸಿ, ಕಲ್ಲುಕೋರೆ ಕಾರ್ಮಿಕ ರಾಜು ಎಂಬಾತನನ್ನು ಸ್ಫೋಟಕ್ಕೆ ಮದ್ದುಗಳನ್ನು ಬಳಸಲು ಸಹಕಾರ ನೀಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಮುಖ್ಯ ಆರೋಪಿ ಬಶೀರ್‌ನನ್ನು ಬಂಧಿಸಲು ತೆರಳಿದ ಸಂದರ್ಭದಲ್ಲಿ ಆತ ಪೊಲೀಸರ ಎದುರೇ ಮನೆಯಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ. ಪ್ರಕರಣದ ವಿಚಾರಣೆ ಹಾಗೂ ಆರೋಪಿಗಳ ಬಂಧಿಸುವಲ್ಲಿ ಕರ್ತವ್ಯಲೋಪವಾಗಿದೆ…
ಬಂಟ್ವಾಳ : ಸೂಪರ್ ಬಜಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ತೊಕೊಟ್ಟು – ಕಲ್ಲಾಪು ನಿವಾಸಿ ಅನ್ಸಾರ್ ಎಂಬವರ ಮಾಲಕತ್ವದ ಕಲ್ಕಡ್ಕ ಸೂಪರ್ ಬಜಾರ್ ಇದಾಗಿದ್ದು, ಮಂಗಳವಾರ ರಾತ್ರಿ ವೇಳೆ ಶಟರ್ ನ ಬೀಗವನ್ನು ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಡ್ರಾಯರ್ ನಲ್ಲಿರಿಸಿದ್ದ ರೂ.58 ಸಾವಿರ ನಗದು ಕಳ್ಳತನ ಮಾಡಿದ್ದು, ಜೊತೆಗೆ ಅಂಗಡಿಯಲ್ಲಿರುವ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದಾಗಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸುಮಾರು ಮೂರು ತಿಂಗಳ ಹಿಂದೆ ಇಲ್ಲಿನ ಪ್ರಸಿದ್ಧ ಕೆ.ಟಿ.ಹೋಟೆಲ್ ನಿಂದ ಕಳ್ಳತನ ವಾಗಿದ್ದು, ಕಳವು ಮಾಡುವ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿತ್ತು. ಇದೀಗ ಮತ್ತೆ ಕಲ್ಲಡ್ಕದಲ್ಲಿ ಅಂಗಡಿಯಿಂದ ಕಳ್ಳರ ಹಾವಳಿ ಶುರುವಾಗಿದ್ದು, ಕಲ್ಲಡ್ಕದ ಜನರನ್ನು ನಿದ್ದೆಗೆಡಿಸಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾಸರಗೋಡು: ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಮವ್ವಾರ್‌ನ ಸುಂದರ (49) ಮತ್ತು ಮುರ್ಷಿದಾಬಾದ್‌ನ ರೋಶನ್ ರಾಯ್ (19) ಎಂದು ಗುರುತಿಸಲಾಗಿದೆ. ಇಬ್ಬರು ಬೇಕಲ ಬೀಚ್‌ನ ಕಾರ್ಮಿಕರಾಗಿದ್ದಾರೆ. ಮಂಗಳವಾರ ಮಧ್ಯಾಹ್ನ 2.45 ರ ಸುಮಾರಿಗೆ ಮಂಗಳೂರು ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ಬೇಕಲ ಸಮೀಪ ಕಲ್ಲೆಸೆದಿದ್ದು, ಪ್ರಯಾಣಿಕರು ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದರು. ಪೊಲೀಸರು ನಡೆಸಿದ ತನಿಖೆಯಿಂದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ರೊಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನವದೆಹಲಿ : ಇತ್ತೀಚೆಗೆ, ಸಾಮಾಜಿಕ ಮಾಧ್ಯಮಗಳಲ್ಲಿ ಕರೆನ್ಸಿಯ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಕೆಲವು ವರ್ಷಗಳ ಹಿಂದೆ, ನಕಲಿ 500 ರೂಪಾಯಿ ನೋಟುಗಳು ಮಾರುಕಟ್ಟೆಗೆ ಬಂದಿವೆ ಮತ್ತು ಆರ್‌ಬಿಐ ಅವುಗಳನ್ನ ನಿಷೇಧಿಸುತ್ತಿದೆ ಎಂಬ ಸುದ್ದಿ ವೈರಲ್ ಆಗಿತ್ತು. ಅದೇ ರೀತಿ, ಆರ್‌ಬಿಐ 350 ರೂಪಾಯಿ ನೋಟುಗಳನ್ನು ಮುದ್ರಿಸುತ್ತಿದೆ ಎಂಬ ಸುದ್ದಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಹಲವು ಸುದ್ದಿಗಳು ಹೊರಬರುತ್ತಿರುವುದರಿಂದ ಜನರು ಗೊಂದಲಕ್ಕೊಳಗಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್’ಗಳಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೆ ಆರ್‌ಬಿಐ ಉತ್ತರಿಸಿದೆ. ಕೆಲವು ಜನರು ನಕಲಿ ನೋಟುಗಳನ್ನ ಚಲಾವಣೆ ಮಾಡುತ್ತಿದ್ದಾರೆ ಮತ್ತು ದೊಡ್ಡ ಮುಖಬೆಲೆಯ ನೋಟುಗಳನ್ನ ಮತ್ತೆ ಅಮಾನ್ಯಗೊಳಿಸಲಾಗುವುದು ಎಂಬ ಸುದ್ದಿಗಳಿಂದ ಜನರು ಚಿಂತಿತರಾಗಿದ್ದು, ಆರ್‌ಬಿಐ ನೇರವಾಗಿ ಪ್ರತಿಕ್ರಿಯಿಸಿದ್ದು, ಸತ್ಯವನ್ನ ಬಹಿರಂಗಪಡಿಸಿದೆ. ಇಂತಹ ಹಲವು ಪ್ರಕರಣಗಳಲ್ಲಿ ಆರ್‌ಬಿಐ, ಕೇಂದ್ರ ಸರ್ಕಾರಿ ಅಧಿಕಾರಿಗಳು, ಹಣಕಾಸು ಇಲಾಖೆ ಸಚಿವರು ಮತ್ತು ಇತರ ಸಿಬ್ಬಂದಿ ಪ್ರತಿಕ್ರಿಯಿಸಿ, ನಕಲಿ ನೋಟುಗಳ ಚಲಾವಣೆ, ಹೊಸ ಕರೆನ್ಸಿ ಮುದ್ರಣ ಇತ್ಯಾದಿಗಳ ಬಗ್ಗೆ ವೈರಲ್ ಆಗುತ್ತಿರುವ ಸುದ್ದಿ ನಿಜವೋ…
ಕಾಪು: ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ಸಂಭವಿಸಿದೆ.ಶಿರ್ವದಿಂದ ಕಟಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಗುಚಿಬಿದ್ದ ಟಿಪ್ಪರ್ ನಿಂದ ಅದರ ಚಾಲಕ ಹೊರಕ್ಕೆ ಹಾರಿದ್ದಾರೆ. ದುರಾದೃಷ್ಟವಶಾತ್ ಟಿಪ್ಪರ್‌ನ ಅಡಿಗೆ ಬಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯ್ಕ (55) ಎಂದು ಗುರುತಿಸಲಾಗಿದೆ. ಅತಿ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.
ಮಂಗಳೂರು: ಕರಾವಳಿಯಲ್ಲಿ ತಾಪಮಾನ ಏರಿಕೆಯಾಗುತ್ತಿರುವುದರ ಮಧ್ಯೆ ಹಲವೆಡೆ ಚಿಕನ್ ಪಾಕ್ಸ್ ಆತಂಕ ಎದುರಾಗಿದ್ದು, ಇದೀಗ ಕಡಬ ತಾಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಮಾಹಿತಿ ಪ್ರಕಾರ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು 9 ಮಕ್ಕಳಿಗೆ, ಸುಬ್ರಹ್ಮಣ್ಯದಲ್ಲಿ 6 ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು ಮಗುವಿಗೆ, ಲಾವತ್ತಡ್ಕದಲ್ಲಿ ಒಂದು ಮಗುವಿಗೆ, ಗೊಳಿತ್ತೊಟ್ಟುವಿನಲ್ಲಿ ಒಂದು ಮಗುವಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಹರಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಪುತ್ತೂರು: ಮುರ ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ನಡೆದಿದೆ.ಘಟನೆ ಪರಿಣಾಮ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.










