ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪೋಸ್ಟ್ಗಳನ್ನು ಅಪ್ಲೋಡ್ ಮಾಡುವ ಮುನ್ನ ನೀವು ಜಾಗರೂಕರಾಗಿರಬೇಕಾದದ್ದು ಬಹಳ ಮುಖ್ಯ. ಈ ಬಗ್ಗೆ ಕರ್ನಾಟಕ ಪೊಲೀಸರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಯಾವುದೇ ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿಯಾಗಿ, ಅಥವಾ ಸಾರ್ವಜನಿಕ ಶಾಂತಿಭಂಗ ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಪೋಸ್ಟ್ ಹಾಕಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಸಾರ್ವಜನಿಕ ವ್ಯಕ್ತಿಗಳ ಬಗ್ಗೆ, ಸಂಸ್ಥೆಗಳ ಬಗ್ಗೆ ಅವಹೇಳನಕಾರಿಯಾಗಿ ಕಾಮೆಂಟ್ ಹಾಕುವುದು, ಆದಾದ ಬಳಿಕ ಕೇಸ್ ಹಾಕಿಸಿಕೊಂಡು ಪೊಲೀಸರಿಂದ ಬಂಧನಕ್ಕೊಳಗಾದ ಜನರು ಇದ್ದಾರೆ. ಚಿತ್ರನಟಿ ರಮ್ಯಾ ಹಾಗೂ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿರನ್ನು ಸೋಷಿಯಲ್ ಮೀಡಿಯಾಗಳಲ್ಲಿ ನಿಂದಿಸಿ ಅನೇಕರು ಈಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಜೊತೆಗೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬೇರೆಯವರನ್ನು ನಿಂದಿಸುವುದನ್ನು ಕೆಟ್ಟ ಪ್ರವೃತ್ತಿಯಾಗಿ ಬೆಳೆಸಿಕೊಂಡಿದ್ದಾರೆ. ಅಂಥವರಿಗೆ ಪೊಲೀಸ್ ಇಲಾಖೆಯ ಈ ಎಚ್ಚರಿಕೆ ಅನ್ವಯವಾಗುತ್ತೆ.
Author: main-admin
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗದಗ ಜಿಲ್ಲೆಯ ನರಗುಂದ ಮಾರುತಿ ನಗರದ ಸಂಜು ಪತ್ತಾರ್ ಯಾನೆ ಸಂಜು ಬಡಿಗೇರ್(36) ಎಂದು ಗುರುತಿಸಲಾಗಿದೆ. ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಖಚಿತ ಮಾಹಿತಿ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯ ಸಿಬಂದಿ ರಾಘವೇಂದ್ರ ಮತ್ತು ಆನಂದಯ್ಯ ಎಂಬವರು ಬೆಳಗಾವಿಯ ಅನಗೋಳಿಯ ಅಂಬೇಡ್ಕರ್‌ಗಲ್ಲಿ ಎಂಬಲ್ಲಿ ಆಗಸ್ಟ್ 30ರಂದು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೊಲ್ಪುಗುಡ್ಡೆ ಗ್ರಾಮದ ಮನೆಯೊಂದರಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದ 17 ಮಂದಿಯನ್ನು ಕಾವೂರು ಪೊಲೀಸರು ಶನಿವಾರ ರಾತ್ರಿ 11:30ಕ್ಕೆ ಬಂಧಿಸಿದ್ದಾರೆ. ಬಂಧಿತರನ್ನು ದೇರೆಬೈಲ್, ಕೊಂಚಾಡಿ, ಎಯ್ಯಾಡಿಯ ನಿವಾಸಿಗಳಾದ ದಿಕ್ಷೀತ್, ದಯಾನಂದ, ರಾಘವೇಂದ್ರ, ವೈಶಾಕ್ ಶೆಟ್ಟಿ, ಉಮೇಶ್, ಗೌತಮ್, ಫರಂಗಿಪೇಟೆಯ ಪ್ರವೀಣ್ ಕುಮಾರ್, ಕಾಪುವಿನ ಶಾಹುಲ್ ಹಮೀದ್, ಬಜ್ಪೆ ಕಟೀಲು ನಡುಗೋಡುವಿನ ತಿಲಕ್‌ರಾಜ್, ವಾಮಂಜೂರಿನ ಜಯಾನಂದ್ ಎಸ್., ಕೂಳೂರಿನ ಲಾರೆನ್ಸ್ ರಾಜಾ ಡಿಸೋಜ, ಉಳ್ಳಾಲ ಹೊಯ್ಗೆ ಗದ್ದೆಯ ಇನಸ್ ಡಿಸೋಜ, ಉಳ್ಳಾಲ ಬೈಲ್‌ನ ಮುಹಮ್ಮದ್ ಅಶ್ರಫ್, ಪೆರ್ಮನ್ನೂರಿನ ಮುಹಮ್ಮದ್ ಫಯಾಝ್, ಉಳ್ಳಾಲದ ಮುಸ್ತಫ, ಆಡಂಕುದ್ರುವಿನ ಸುನೀಲ್ ಡಿಸೋಜ, ತಮಿಳ್ ನಾಡಿನ ಕಣ್ಣನ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 1.92 ಲಕ್ಷ ರೂ. ನಗದು ಹಾಗೂ 18 ಮೊಬೈಲ್‌ಗಳನ್ನು ವಶಪಡಿಸಲಾಗಿದೆ. ಒಟ್ಟಾರೆ ವಶಪಡಿಸಿಕೊಂಡ ಸೊತ್ತಿನ ಮೌಲ್ಯ 4 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಸಹಾಯಕ ಆಯುಕ್ತ ಶ್ರೀಕಾಂತ್ ಕೆ. ಅವರ ಸೂಚನೆಯಂತೆ ಕಾವೂರು ಠಾಣೆಯ ಎಸ್ಸೈ…
ಪಡುಬಿದ್ರೆ : ಪಾದೆಬೆಟ್ಟು ಗ್ರಾಮದ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಆಗಸ್ಟ್ 30 ರಂದು ನಡೆದಿದೆ. ಮೃತ ಮಹಿಳೆಯನ್ನು ಪಾದೆ ಬೆಟ್ಟು ಗ್ರಾಮದ ನಿವಾಸಿ ರಾಮ ಎಂಬವರ ಸುಮತಿ (65) ಎಂದು ಗುರುತಿಸಲಾಗಿದೆ. ಸುಮತಿರವರಿಗೆ 7 ವರ್ಷಗಳ ಹಿಂದೆ ಗರ್ಭಕೋಶದ ಸರ್ಜರಿಯಾಗಿದ್ದು, ಮನೆಯಲ್ಲಿಯೇ ಇರುತ್ತಿದ್ದರು. ಆಗಸ್ಟ್ 30 ರಂದು ಮನೆಯಲ್ಲಿ ಊಟ ಮಾಡಿ ಎಂದಿನಂತೆ ತನ್ನ ಗಂಡ ರಾಮ ರವರೊಂದಿಗೆ ತಮ್ಮ ಕೋಣೆಯಲ್ಲಿ ಮಲಗಿದ್ದರು. ಪತಿ ರಾಮರವರಿಗೆ 2:00 ಗಂಟೆಯ ಸುಮಾರಿಗೆ ಎಚ್ಚರವಾಗಿ ನೋಡಲಾಗಿ ಸುಮತಿ ರವರು ಎಲ್ಲಿಯೂ ಕಾಣದೇ ಇದ್ದು ಬಳಿಕ ಮನೆಯವರೆಲ್ಲ ಸೇರಿ ಹುಡುಕಾಡಲಾಗಿ 4:45 ಗಂಟೆಯ ಸುಮಾರಿಗೆ ಮನೆಯ ಪಕ್ಕದ ದನದ ಹಟ್ಟಿಯಲ್ಲಿನ ಮರದ ಅಡ್ಡಜಂತಿಗೆ ನೈಲಾನ್ ಹಗ್ಗ ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ನೇತಾಡುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನೇತಾಡುತ್ತಿದ್ದ ಅವರನ್ನು ಕೆಳಗೆ ಇಳಿಸಿ ನೋಡಲಾಗಿ ಸುಮತಿ ರವರು ಮಾತನಾಡದೇ ಇದ್ದು, ಯಾವುದೇ ಉಸಿರಾಟದ ಸ್ಪಂದನೇ ಇಲ್ಲದೇ ಇದ್ದು ಸ್ಥಳಕ್ಕೆ ಬಂದ ಅಂಬುಲೆನ್ಸ್ ಸಿಬ್ಬಂದಿಯವರು ಸುಮತಿಯವರನ್ನು ಪರೀಕ್ಷಿಸಿ…
ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ತಂಡವೊಂದು ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ ಹೊಟ್ಟೆಗೆ ಇರಿದು ಗಾಯಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ಗಾಯಾಳು ಆಟೋ ಚಾಲಕನಿಂದ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈಗಾಗಲೇ ನಿಗೂಢವಾಗಿ ಸಾವನಪ್ಪಿದ ವ್ಯಕ್ತಿಗಳ ಕುರಿತಂತೆ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟೆಣ್ಣನವರ್ ದಾಖಲೆಗಳನ್ನು ಬಿಡುಗಡೆ ಮಾಡಿದ ಬಳಿಕ ಇದೀಗ ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಎಸ್ ಐಟಿ ತನಿಖೆ ಪ್ರಾರಂಭಿಸಿದೆ. ಶುಕ್ರವಾರ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಆಗಮಿಸಿದ್ದ ಗಿರೀಶ್ ಮಟ್ಟೆಣ್ಣವರ್ ವಿಶೇಷ ತನಿಖಾ ತಂಡದ ಅಧಿಕಾರಿಗಳನ್ನು ಭೇಟಿ ನೀಡಿ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಗೂಢ ಸಾವನ್ನಪ್ಪಿದ ಶವಗಳ ವಿಲೇವಾರಿ ಕ್ರಮಬದ್ಧವಾಗಿ ಆಗಿಲ್ಲ ಎಂಬುದನ್ನು ದಾಖಲೆ ಸಹಿತ ದೂರು ನೀಡಿದ್ದರು. ಇದರ ಬೆನ್ನಲ್ಲೇ ಧರ್ಮಸ್ಥಳ ಗ್ರಾಮ ಪಂಚಾಯತ್‌ನಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇತರ ಸಿಬ್ಬಂದಿಯನ್ನು ಕರೆಸಿಕೊಂಡು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ದೂರುದಾರ ನೀಡಿದ ದಾಖಲೆ ಮತ್ತು ಪಂಚಾಯಿತಿಯಲ್ಲಿರುವ ದಾಖಲೆಗಳನ್ನು ಪರಸ್ಪರ ತಾಳೆ ಮಾಡಿ ತನಿಖೆ ಆರಂಭಿಸಿದ್ದಾರೆ.
ಕಡಬ: ಫೇಸ್‌ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.30ರಂದು ಕೆ, ಅಬ್ದುಲ್ ಹಕೀಂ ಕಡಬ ತಾಲೂಕು ಎಂಬವರು ಅವರ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಖಾತೆಯನ್ನು ಪರಿಶೀಲಿಸುತ್ತಿರುವಾಗ Ibrahim Mitthodi ExMuslim ಎಂಬ Facebook ಖಾತೆಯಲ್ಲಿ ಧರ್ಮ-ಧರ್ಮಗಳ ಮದ್ಯೆ ದ್ವೇಷ ಉಂಟು ಮಾಡುವಂತೆ ಮಾಡಿ ಸಮಾಜದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಬರುವಂತೆ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿರುವ ಪ್ರಚೋದನಾಕಾರಿ ಪೋಸ್ಟ್ ಮಾಡಿರುತ್ತಾರೆ. ಈ ಬಗ್ಗೆ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2025 ಕಲಂ: 353 (2), 299 BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ವಸತಿಗೃಹದಲ್ಲಿ 2014ರ ಮಾ.1ರಂದು ನಡೆದ ಕೊಲೆ ಪ್ರಕರಣ ಸಂಬಂಧ ಆರೋಪಿಗೆ ನ್ಯಾಯಾಲಯವು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳಪ್ಪ ಎಂ. ಕಳ್ಕೊಳ್ಳಿ ಶಿಕ್ಷೆಗೊಳಗಾದ ಆರೋಪಿ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕೊಲೆ ಪ್ರಕರಣ ಸಂಬಂಧ ಠಾಣೆಯ ನಿರೀಕ್ಷಕ ಲಿಂಗಪ್ಪ ಪೂಜಾರಿ, ಬೆಳ್ತಂಗಡಿ ಸಿಜೆ ಮತ್ತು ಎಂಎಫ್‌ಸಿ ನ್ಯಾಯಾಲಯಕ್ಕೆ ದೋಷರೋಪಾಣಾ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾಹುಲ್ ಕುಮಾರ್ ಶಹಪುರ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ಆರೋಪಿ ಬಾಳಪ್ಪ ಎಂ. ಕಳ್ಕೊಳ್ಳಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಮತ್ತು 15,000 ರೂ.…
ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಾ.ಎಂ.ಎ ಸಲೀಂ ಅವರನ್ನು ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸುವ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ಒಂದು ವಾರದೊಳಗೆ ನಿಯಮಿತ ಡಿಜಿಪಿಯನ್ನು ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಇದೀಗ ಹಿರಿಯ ಐಪಿಎಸ್ ಅಧಿಕಾರಿ ಎಂ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1993 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತರಾದ ನಂತರ ಡಿಜಿಪಿ ಆಗಿ ಅಧಿಕಾರ ವಹಿಸಿಕೊಂಡರು. ಡಾ. ಸಲೀಂ ಪ್ರಸ್ತುತ ಸಿಐಡಿಯ ಡಿಜಿಪಿ ಆಗಿದ್ದಾರೆ. ಇದರ ಜೊತೆಗೆ ರಾಜ್ಯದ ಡಿಜಿಪಿ ಮತ್ತು ಐಜಿಪಿಯ ಹೆಚ್ಚುವರಿ ಜವಾಬ್ದಾರಿಯನ್ನು ಸಹ ಹೊಂದಿದ್ದಾರೆ. ಹೈಕೋರ್ಟ್ ಈ…
ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ರಾಷ್ಟ್ರೀಯ ಹೆದ್ದಾರಿ ಬದಿಯ ಡಿವೈಡರ್‌ಗೆ ಬಡಿದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಮಾವಿನ ಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಬಂದ್ಯೋಡು ಇಚ್ಲಂಗೋಡು ದಿನಾರ್ ನಗರದ ಯೂಸಫ್ (20) ಎಂದು ಗುರುತಿಸಲಾಗಿದೆ. ಯೂಸಫ್ ಶಿರಿಯ ಶಾಲೆಯ ಪ್ಲಸ್ ಟು ವಿದ್ಯಾರ್ಥಿಯಾಗಿದ್ದನು. ಶಾಲೆಯಲ್ಲಿ ನಡೆದ ಓಣಂ ಕಾರ್ಯಕ್ರಮ ಮುಗಿಸಿ ಸಹಪಾಠಿಯನ್ನು ಮೊಗ್ರಾಲ್ ನ ಮನೆಗೆ ತಲುಪಿಸಿ ಮರಳುತ್ತಿದ್ದಾಗ ಕುಂಬಳೆ ಮಾವಿನ ಕಟ್ಟೆ ಬಳಿ ನಿಯಂತ್ರಣ ತಪ್ಪಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಯೂಸಫ್ ನನ್ನು ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಮೃತಪಟ್ಟಿದ್ದರು. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.










