ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಶ್ ಪಾಲ್ ಸುವರ್ಣ, ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಸಂಬಂಧ ಮಂಗಳವಾರ ಮಧ್ಯರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿದ ಕಾಂಗ್ರೆಸ್ ಮುಖಂಡರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರಿಗೆ ದೂರು ಸಲ್ಲಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವರು ನೀಡಿದ ದೂರದಂತೆ ಶಾಸಕ ಯಶ್ ಪಾಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಕೀಲರಾದ ಹಬೀಬ್ ಅಲಿ, ಹರೀಶ್ ಪಾಂಗಳ ಮೊದಲಾದವರು…
Author: main-admin
ಯುವತಿಗೆ ಮದುವೆಯ ಸುಳ್ಳು ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ಯುವಕನ ಪೋಷಕರು ಮತ್ತು ಸಹೋದರಿಯನ್ನು ವಿಚಾರಣೆಗೆ ಒಳಪಡಿಸುವುದು ಕಾನೂನಿನ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಿದೆ. ಯುವಕನೊಬ್ಬ ಯುವತಿಯೊಂದಿಗೆ ಪ್ರೇಮ ಸಂಬಂಧ ಬೆಳೆಸಿ, ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿ ನಂಬಿಕೆ ದ್ರೋಹ ಎಸಗಿದ್ದನೆಂಬ ಆರೋಪ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ಯುವಕನ ತಂದೆ, ತಾಯಿ ಹಾಗೂ ಸಹೋದರಿಯನ್ನೂ ಆರೋಪಿಗಳನ್ನಾಗಿ ಸೇರಿಸಿ ದೂರು ನೀಡಲಾಗಿತ್ತು. ತಮ್ಮ ಮೇಲಿನ ಎಫ್ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಈ ಆದೇಶ ನೀಡಿದೆ. ಮಗ ಹಾಗೂ ದೂರುದಾರೆ ಯುವತಿಯ ನಡುವಿನ ವೈಯಕ್ತಿಕ ಸಂಬಂಧ ಮತ್ತು ನೀಡಲಾದ ಭರವಸೆಗಳಿಗೆ ಪೋಷಕರು ಅಥವಾ ಸಹೋದರಿಯನ್ನು ಅಪರಾಧಕ್ಕೆ ಹೊಣೆಗಾರರನ್ನಾಗಿ ಮಾಡಲು ಬರುವುದಿಲ್ಲ. ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 69ರ…
ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ (ಜುಲೈ 27) ಅಧಿಕೃತವಾಗಿ ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತನ ಆರೋಗ್ಯ ಸ್ಥಿರಗೊಂಡ ಹಿನ್ನೆಲೆಯಲ್ಲಿ 11 ದಿನಗಳ ಬಳಿಕ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ ಎಂಬ ಯುವತಿಯನ್ನು ಆರೋಪಿ ಚೇತನ್ ಸಾರ್ವಜನಿಕ ಸ್ಥಳದಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದ. ಕೃತ್ಯ ಎಸಗಿದ ಬಳಿಕ ಕಾರಿನಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಘಟನೆ ನಡೆದ ಮರುದಿನವೇ ಪೊಲೀಸರು ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದರು. ಆದರೆ, ಕೃತ್ಯದ ಬಳಿಕ ಆರೋಪಿ ಇಲಿಪಾಷಾಣ ಸೇವಿಸಿದ್ದ ಎನ್ನಲಾದ ಹಿನ್ನೆಲೆಯಲ್ಲಿ ಆತನನ್ನು ಮೊದಲು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ಚೇತರಿಸಿಕೊಂಡ ನಂತರ…
ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಇರುವ ಶೂ ಅಂಗಡಿಯೊಂದಕ್ಕೆ ಮಂಗಳವಾರ ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಪಕ್ಕದ ಎರಡು ಅಂಗಡಿಗಳಿಗೂ ವ್ಯಾಪಿಸಿದ್ದು, ‘ಯುರೋಪ್’ ಹೆಸರಿನ ಶೂ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಬೆಳ್ತಂಗಡಿ: ಮಾನ್ಯ ಬೆಳ್ತಂಗಡಿ ನ್ಯಾಯಾಲಯದ CC No. 688/2023 ಪ್ರಕರಣದಲ್ಲಿ ವಾರಂಟ್ ಆಸಾಮಿಯಾಗಿದ್ದ ವರದಾಕ್ಷ ಆಚಾರ್ಯ ಎಂಬವರನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ, ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಾರಂಟ್ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು ಕಾನೂನು ಕ್ರಮ ಅನುಸರಿಸಿ ದಸ್ತಗಿರಿ ನಡೆಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು: 2014ರಲ್ಲಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೀನಕಳಿಯಾ ಗಣೇಶ್ ಶಿಪ್ಪಿಂಗ್ ಗೋಡೌನ್ ಸಮೀಪ ನಡೆದ ಗಂಗಾಧರ ಪಾಂಗಾಳ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತೀಶ್ ಬೈಕಂಪಾಡಿ ಸೇರಿದಂತೆ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿರುವ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2014ರ ಮೇ 15ರಂದು ಗಂಗಾಧರ ಪಾಂಗಾಳ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಆರೋಪಿಗಳಾದ ಸತೀಶ್ ಬೈಕಂಪಾಡಿ, ಪುಷ್ಪರಾಜ್, ಹರೀಶ್ ಬೈಕಂಪಾಡಿ ಹಾಗೂ ಭಾಸ್ಕರ್ ಬೈಕಂಪಾಡಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ಪೂರ್ವನಿಯೋಜಿತ ಸಂಚು ರೂಪಿಸಿ ಬೊಲೆರೋ ವಾಹನದಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಕೊಲೆ ಮಾಡಿದ್ದರು. ಬಳಿಕ ಘಟನೆಯನ್ನು ರಸ್ತೆ ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದರು. ಆದರೆ ತನಿಖೆಯಲ್ಲಿ ಇದು ಕೊಲೆ ಪ್ರಕರಣ ಎಂಬುದು ಬಹಿರಂಗವಾಗಿದ್ದು, ಪಣಂಬೂರು ಠಾಣೆಯಲ್ಲಿ IPC ಕಲಂ 302, 201, 109, 120(B) ಹಾಗೂ 34ರಡಿ ಪ್ರಕರಣ ದಾಖಲಾಗಿತ್ತು. ತನಿಖೆಯಲ್ಲಿ, ಮೊಗವೀರ ಮಹಾಸಭೆಯ ಸದಸ್ಯತ್ವದಿಂದ ಸತೀಶ್ ಬೈಕಂಪಾಡಿಯನ್ನು ಅಮಾನತುಗೊಳಿಸಲು ಗಂಗಾಧರ ಪಾಂಗಾಳ…
ಶ್ರೀಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಹಾಗೂ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಂಬ್ಳೆ ನಿವಾಸಿ ಸುರೇಶ್ ಹಾಗೂ ಶಾಂತಿಯಂಗಡಿ ನಿವಾಸಿ ಅಬ್ದುಲ್ ರಝಾಕ್ ಬಂಧಿತರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಕೆಲ ದಿನಗಳ ಹಿಂದೆ ದೇವಸ್ಥಾನದಲ್ಲಿ ಭಕ್ತರು ಸುಮಾರು ನಾಲ್ಕು ದಶಕಗಳಿಂದ ಸಮರ್ಪಿಸಿದ್ದ ತಾಮ್ರ ಹಾಗೂ ಪಿತ್ತಳದ ಪೂಜಾ ಪರಿಕರಗಳು ಕಳವಾಗಿರುವುದು ಬೆಳಕಿಗೆ ಬಂದಿತ್ತು. ಕಳವಾದ ವಸ್ತುಗಳಲ್ಲಿ ಹಳೆಯ ಕೊಪ್ಪರಿಗೆ, ಆರು ದೀಪಗಳು, ಸುಮಾರು 20 ಗಿಂಡೆಗಳು, ಹರಿವಾಣ ತಟ್ಟೆ, ಭಜನಾ ತಾಳ, ತಾಮ್ರದ ಕೊಡಪಾನ, ತಾಮ್ರದ ಅಕ್ಕಿ ಸೋಸುವ ಪಾತ್ರೆ ಸೇರಿದಂತೆ ಹಲವು ಪೂಜಾ ಸಾಮಗ್ರಿಗಳು ಸೇರಿದ್ದವು. ಘಟನೆಯ ಸಂದರ್ಭದಲ್ಲಿ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಮೂವರು ವ್ಯಕ್ತಿಗಳು ಗೋಣಿಯಲ್ಲಿ ಸಾಮಗ್ರಿಗಳನ್ನು ತುಂಬಿಕೊಂಡು ಸಾಗಿಸುತ್ತಿರುವ ದೃಶ್ಯಗಳು ಸೆರೆಯಾಗಿದ್ದವು. ಅಲ್ಲದೆ, ದೇವಸ್ಥಾನ ಆವರಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕೆಲವರನ್ನು ಸ್ಥಳೀಯರು ಪ್ರಶ್ನಿಸಿದಾಗ, ದೇವಸ್ಥಾನದ ಪರವಾಗಿ ಕೆಲಸಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿತ್ತು.…
ಪುತ್ತೂರು: ಕಣಿಯೂರು ಗ್ರಾಮದ ಅಡೆಂಜದಲ್ಲಿ ಪತ್ತೆಯಾದ ನಕಲಿ ನೋಟು ಮುದ್ರಣ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಆರೋಪಿ ಅಬ್ದುಲ್ ಶಕೀಲ್ ಹಾಗೂ ಬಂಧಿತ ಆರೋಪಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಸಂದೀಪ್ ಪುಂಡಲೀಕ್ ಶೋಳಂಬಿ ವಾಸವಾಗಿದ್ದ ಪಿಲಿಚಂಡಿಕಲ್ಲಿನ ಬಾಡಿಗೆ ಮನೆಯಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಪ್ರಿಂಟರ್, ರಾಸಾಯನಿಕ ದ್ರಾವಣವಿದ್ದ ಬಾಟಲಿಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜುಲೈ 16ರಂದು ಕಣಿಯೂರು ಗ್ರಾಮದ ಅಡೆಂಜದಲ್ಲಿರುವ ಇದ್ರೀಸ್ ಎಂಬುವರಿಗೆ ಸೇರಿದ ಮನೆಯಲ್ಲಿ ನಕಲಿ ನೋಟುಗಳನ್ನು ಮುದ್ರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ನಕಲಿ ಕರೆನ್ಸಿ ನೋಟುಗಳು ಹಾಗೂ ಅವುಗಳನ್ನು ಮುದ್ರಿಸಲು ಬಳಸಲಾಗುತ್ತಿದ್ದ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದರು. ಬಳಿಕ ನಡೆದ ತನಿಖೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಬೆಳಕಿಗೆ ಬಂದಿದೆ.ಈ ಪ್ರಕರಣದಲ್ಲಿ ಇದುವರೆಗೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರು ಕಸಬಾ ಗ್ರಾಮದ ಇಬ್ರಾಹಿಂ (60), ಕಾಸರಗೋಡು ಜಿಲ್ಲೆಯ ಚಂಗುಲ ಗ್ರಾಮದ ಶರೀಫ್ (51), ಉತ್ತರ ಕನ್ನಡ ಜಿಲ್ಲೆಯ…
ಮಣಿಪಾಲ: ಪಾದಚಾರಿಯನ್ನು ರಕ್ಷಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಈಚರ್ ಲಾರಿಯೊಂದು ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು, ಬಳಿಕ ಮನೆಯೊಂದರ ಅಂಗಳಕ್ಕೆ ನುಗ್ಗಿದ ಘಟನೆ ಪೆರಂಪಳ್ಳಿಯ ಮೀನು ಮಾರುಕಟ್ಟೆ ಸಮೀಪ ಜುಲೈ 25 ರ ರಾತ್ರಿ ಸಂಭವಿಸಿದೆ. ಕಾರ್ಕಳ ಮೂಲದ ಉಮೇಶ್ ಎಂಬುವವರು ಲಾರಿಯನ್ನು ಮಣಿಪಾಲದಿಂದ ಪೆರಂಪಳ್ಳಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ರಸ್ತೆ ದಾಟಿದ್ದಾರೆ. ಅವರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ತಕ್ಷಣವೇ ಲಾರಿಯನ್ನು ಎಡಕ್ಕೆ ತಿರುಗಿಸಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಟ್ರಾನ್ಸ್‌ಫಾರ್ಮರ್‌ಗೆ ಸೈಡ್ ಹೊಡೆದು, ಸ್ಥಳೀಯ ನಿವಾಸಿ ರವಿ ಪೂಜಾರಿ ಎಂಬವರ ಮನೆಯ ಅಂಗಳಕ್ಕೆ ನುಗ್ಗಿದೆ. ಅಪಘಾತದ ರಭಸಕ್ಕೆ ರವಿ ಅವರ ಮನೆಯಂಗಳದ ಸಿಮೆಂಟ್ ಶೀಟ್‌ಗೆ ಹಾನಿಯಾಗಿದ್ದು, ಲಾರಿಯ ಮುಂಭಾಗ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಅಪಘಾತ ಸಂಭವಿಸಿದ ಸಮಯದಲ್ಲಿ ರಸ್ತೆ ಬದಿಯಲ್ಲಾಗಲಿ ಅಥವಾ ಮನೆಯ ಅಂಗಳದಲ್ಲಾಗಲಿ ಯಾರೂ ಇಲ್ಲದಿದ್ದರಿಂದ ಭಾರಿ…
ಮಂಗಳೂರು : ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಿದೇಶಿ ನಗದು, ಐಫೋನ್, ಪಾಸ್‌ಪೋರ್ಟ್ ಹಾಗೂ ಚಿನ್ನದ ಉಂಗುರವನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಮಯಪ್ರಜ್ಞೆಯಿಂದ ಮಾಲೀಕರಿಗೆ ಸುರಕ್ಷಿತವಾಗಿ ತಲುಪಿಸಿದೆ. ಜುಲೈ 26 ರಂದು ಬೆಳಿಗ್ಗೆ ಸುಮಾರು 6:15 ರ ಸುಮಾರಿಗೆ ವಿಮಾನ ನಿಲ್ದಾಣದ ಕೆಳ ಅಂತಸ್ತಿನ ಪಾರ್ಕಿಂಗ್ ಪ್ರದೇಶದಲ್ಲಿದ್ದ ಲಗೇಜ್ ಟ್ರಾಲಿಯೊಂದರ ಮೇಲೆ ಕಪ್ಪು ಬಣ್ಣದ ಸಣ್ಣ ಪರ್ಸ್ ಅನ್ನು ಸೆಕ್ಯುರಿಟಿ ಸಿಬ್ಬಂದಿ ವಿಠಲ್ ಹೊಸಮನಿ ಗಮನಿಸಿದ್ದಾರೆ. ತಕ್ಷಣವೇ ಅವರು ಸಿಐಎಸ್‌ಎಫ್ ಪಡೆಯ ಕ್ಯೂಆರ್‌ಟಿ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (BDDS) ಹಾಗೂ ಶ್ವಾನ ದಳ ತಪಾಸಣೆ ನಡೆಸಿ, ಅಪಾಯಕಾರಿ ವಸ್ತುಗಳಿಲ್ಲ ಎಂದು ಖಚಿತಪಡಿಸಿಕೊಂಡವು. ಪರ್ಸ್ ತೆರೆದು ಪರಿಶೀಲಿಸಿದಾಗ ಅದರಲ್ಲಿ ನಿಶಾಲ್ ಶಹೀಕ್ ಹೆಸರಿನ ಪಾಸ್‌ಪೋರ್ಟ್, ಐಫೋನ್, ಒಂದು ಚಿನ್ನದ ಉಂಗುರ, 10,000 ಅಮೆರಿಕನ್ ಡಾಲರ್…










