Author: main-admin

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣ ದೊರಕಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚಿಸಿದ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಣಿಪಾಲದ ವಿನೋದಾ ಅವರು ನ.2ರಂದು ಪಿಎಂಎಲ್ ಎಂಬ ಸ್ಟಾಕ್ ಮಾರ್ಕೆಟ್‌ಗೆ ಸಂಬಂಧಿಸಿದ ಸಂಸ್ಥೆ ಬಗ್ಗೆ ಆನ್‌ಲೈನ್‌ನಲ್ಲಿ ತಿಳಿದುಕೊಂಡು ನ.27ರಂದು ಪಿಎಂಎಲ್ ಮ್ಯಾಕ್ಸ್ ಮತ್ತು ಪಿಎಂಎಲ್ ಪ್ರೊ ಮೊಬೈಲ್ ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿದ್ದರು. ಆರಂಭದಲ್ಲಿ ಹೂಡಿಕೆ ಮಾಡಿದ ಹಣವನ್ನು ಐಪಿಒ ಪ್ರಕಾರ ಹಿಂದಿರುಗಿಸಿದ್ದು, ಬಳಿಕ ಹೂಡಿದ ಹಣವನ್ನು ಹಿಂಪಡೆಯಲು ಸಾಧ್ಯವಾಗಿಲ್ಲ. ಈ ಬಗ್ಗೆ ಕಂಪೆನಿಯವರಲ್ಲಿ ವಿಚಾರಿಸಿದಾಗ ನೀವು ಇನ್ನೂ ಹಣ ಹೂಡಿಕೆ ಮಾಡಿದರೆ ಮಾತ್ರ ಹಿಂಪಡೆಯಲು ಸಾಧ್ಯ ಎಂದು ತಿಳಿಸಿದ್ದರು. ಅದನ್ನು ನಂಬಿ ವಿನೋದಾ ಡಿ.24ರ ವರೆಗೆ 20,17,754 ರೂ.ಗಳನ್ನು ಕಂಪೆನಿಯ ಬೇರೆ ಬೇರೆ ಬ್ಯಾಂಕ್‌ಗಳ ಖಾತೆಗಳಿಗೆ ಜಮೆ ಮಾಡಿದ್ದರು. ಆದರೂ ಕಂಪೆನಿಯವರು ಹಣವನ್ನು ಮರಳಿಸದೆ ಮೋಸ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ. ಆರೋಪಿ ಹೋಮ್‌ಗಾರ್ಡ್‌ ಆಗಿದ್ದು, ಪೊಲೀಸ್ ಅಧಿಕಾರಿಯಂತೆ ಯುವತಿಯರ ರೂಮ್‍ಗೆ ರಾತ್ರಿ ವೇಳೆ ನುಗ್ಗುತ್ತಿದ್ದ. ಅಲ್ಲದೇ ಯುವತಿಯರ ಬಳಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ಕೊಡುತ್ತಿದ್ದ. ಕೇರಳದಿಂದ ಬೆಂಗಳೂರಿಗೆ ಬಂದು ಕಾಲೇಜೊಂದರಲ್ಲಿ 2ನೇ ವರ್ಷದ ಬಿಎಸ್‍ಸಿ ಓದುತ್ತಿದ್ದ ವಿದ್ಯಾರ್ಥಿನಿ ಮೂವರು ಸ್ನೇಹಿತೆಯರ ಜೊತೆ ರೂಮ್ ಮಾಡಿಕೊಂಡಿದ್ದಳು. ಜ.25ರಂದು ಊಟ ಮಾಡಿ ಮಲಗಿದ್ದಾಗ ಆರೋಪಿ ಬಾಗಿಲು ತಟ್ಟಿದ್ದ. ಬಾಗಿಲು ತೆಗೆದಾಗ ನಾನು ಪೊಲೀಸ್ ಅಂತ ಹೇಳಿ ಒಳಗಡೆ ಹೋಗಿದ್ದ. ಆತ ಒಳಗೆ ಬರುತ್ತಿದ್ದಂತೆ ಯುವತಿ ಆಕೆಯ ಸ್ನೇಹಿತನಿಗೆ ಕರೆ ಮಾಡಿ ಪೊಲೀಸರು ಬಂದಿದ್ದಾರೆ ಎಂದು ತಿಳಿಸಿದ್ದಳು. ಆರೋಪಿ ಡೋರ್ ಲಾಕ್ ಮಾಡಿ, ಎಲ್ಲರ ಮೊಬೈಲ್‍ನ್ನು ಹೆದರಿಸಿ ಕಸಿದುಕೊಂಡಿದ್ದ. ಬಳಿಕ ಯುವತಿ ಕೈಯಲ್ಲಿದ್ದ ಹಾವಿನ ಟ್ಯಾಟೋ ನೋಡಿ ಅಶ್ಲಿಲವಾಗಿ ಮಾತನಾಡಿದ್ದ. ಅಲ್ಲದೇ ಯುವತಿ ಕರೆ ಮಾಡಿದ್ದಕ್ಕೆ ಬಂದಿದ್ದ ಆಕೆಯ ಸ್ನೇಹಿತರ ಮೊಬೈಲ್ ವಶಕ್ಕೆ…

Read More

ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬಳಿಕ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮಿ ಇಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾರೆ. ಬಿಗಿ ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮಿ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ ಸಮಿತಿಯ ಸದಸ್ಯರು ಇದ್ದರು. ಎಸ್ ಪಿ ಡಾ.ಕೆ ಅರುಣ್, ಹೆಚ್ಚುವರಿ ಎಸ್ಪಿ ಎಸ್ ಟಿ ಸಿದ್ದಲಿಂಗಪ್ಪ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆಯು ನಡೆಯಿತು ನಕ್ಸಲ್ ಚಳವಳಿಯಲ್ಲಿ ಉಡುಪಿ ಜಿಲ್ಲೆಯ ವಿಕ್ರಂ ಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು. ಇದರಲ್ಲಿ ಇತ್ತೀಚೆಗೆ ನಡೆದ ಪೊಲೀಸ್‌ ಎನ್ ಕೌಂಟರ್ ನಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದರು. ಇದೀಗ ಲಕ್ಷ್ಮಿ ಪೊಲೀಸರಿಗೆ ಶರಣಾಗಿದ್ದಾರೆ. ಲಕ್ಷ್ಮಿ ಕಳೆದ ಹಲವು ವರ್ಷಗಳಿಂದ ಆಂಧ್ರಪ್ರದೇಶದಲ್ಲಿ ತನ್ನ ಪತಿ, ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.

Read More

ಮಂಗಳೂರು: ರಸ್ತೆ ಅಪಘಾತದಲ್ಲಿ 21 ವರ್ಷದ ಯುವಕನ ಸಾವಿಗೆ ಕಾರಣನಾದ ಆರೋಪಿ ಬುಲೆಟ್ ಟ್ಯಾಂಕರ್ ಚಾಲಕನಿಗೆ 6 ತಿಂಗಳು ಜೈಲು ವಾಸ ಹಾಗೂ 7,500 ರೂಪಾಯಿ ದಂಡ ವಿಧಿಸಿ ಜೆಎಂಎಫ್‌ಸಿ ಮೂರನೇ ನ್ಯಾಯಾಲಯದ ನ್ಯಾಯಾಧೀಶ ಸುರೇಶ್ ಇ.ಎಸ್. ತೀರ್ಪು ನೀಡಿದ್ದಾರೆ. ತಮಿಳುನಾಡಿನ ಪುದುಕೊಟ್ಟಾಯಿಯ ಅಯ್ಯಪ್ಪನ್ ಡಿ( 32) ಶಿಕ್ಷೆಗೊಳಗಾದ ಅಪರಾಧಿ‌. 2020 ಫೆಬ್ರವರಿ 13ರಂದು ಸಂಜೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರ್ತಿಕ್ ಮಲ್ಯ ಎಂಬ ಯುವಕ ಬೈಕ್‌ನಲ್ಲಿ ಪದುವಾದಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದರು. ಈ ವೇಳೆ ಬುಲ್ಲೆಟ್ ಟ್ಯಾಂಕರ್ ಅನ್ನು ಚಾಲಕ ಅಯ್ಯಪ್ಪನ್ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಕಾರ್ತಿಕ್ ಮಲ್ಯನ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಬೈಕ್ ಸಹಿತ ಕಾರ್ತಿಕ್ ಮಲ್ಯ ರಸ್ತೆಗೆ ಬಿದ್ದಿದ್ದು, ಬುಲ್ಲೆಟ್ ಟ್ಯಾಂಕರ್ ಮುಂಭಾಗದ ಎಡಬದಿಯ ಚಕ್ರ ಕಾರ್ತಿಕ್ ಮಲ್ಯನ ತಲೆ ಮತ್ತು ಎದೆಯ ಮೇಲೆ ಹರಿದು ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದನು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಸಂಪೂರ್ಣ ತನಿಖೆಯನ್ನು ನಡೆಸಿದ ಸಂಚಾರ ಪೂರ್ವ ಪೊಲೀಸ್ ಠಾಣೆಯ…

Read More

ಮಂಗಳೂರು: 13 ಗಂಭೀರ ಪ್ರಕರಣಗಳ ಆರೋಪಿಯನ್ನು ಸುರತ್ಕಲ್ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಂಧಿತನನ್ನು ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಬಂಧಿತ ಆರೋಪಿ. ಬಂಧಿತ ಭರತ್ ಶೆಟ್ಟಿ ವಿರುದ್ಧ ಕಳೆದ ವರ್ಷ ಮೀಲಾದುನ್ನಬಿ ಸಂದರ್ಭ ಕಾಟಿಪಳ್ಳ 3ನೇ ಬ್ಲಾಕ್‌ನ ಮಸೀದಿಗೆ ಕಲ್ಲೆಸೆದ ಪ್ರಕರಣ, ಎಮ್ಮೆಕೆರೆ ನಿವಾಸಿ ರಾಹುಲ್ ಕೊಲೆ ಪ್ರಕರಣ ಸೇರಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ನಾಲ್ಕು ಕೊಲೆ ಯತ್ನ, ಡಕಾಯಿತಿ, ಕಾನೂನುಬಾಹಿರ ಸಭೆ, ಹಲ್ಲೆ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಒಟ್ಟು 13 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಭರತ್ ಶೆಟ್ಟಿ ವಿರುದ್ಧದ ಕಾನೂನು ಕ್ರಮ ಇದ್ದರೂ, ಅದರ ನಡುವೆಯೇ ಈತ ಕ್ರಿಮಿನಲ್ ಚಟುವಟಿಕೆಗಳನ್ನು ಮುಂದುವರೆಸಿದ್ದಾನೆ. ಈ ಮೂಲಕ ಸಾರ್ವಜನಿಕ ಸುವ್ಯವಸ್ಥೆ ಮತ್ತು ಶಾಂತಿಗೆ ಗಂಭೀರ ಬೆದರಿಕೆಯನ್ನು…

Read More

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಎಸ್ಕೇಪ್ ಆಗಲು ಯತ್ನಿಸಿದ ವೇಳೆ ಪೊಲೀಸರು ಗುಂಡುಹಾರಿಸಿದ್ದಾರೆ. ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮುರುಗನ್ ದೇವರ್ ನನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದರು. ಈಗಾಗಲೇ ಬ್ಯಾಂಕ್ ದರೋಡೆ ಪ್ರಕರಣದ ಪ್ರಮಖ ಎಲ್ಲಾ ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಇದೀಗ ತನಿಖೆ ಮುಂದಿನ ಭಾಗವಾಗಿ ಆರೋಪಿಗಳನ್ನು ಸ್ಥಳ ಮಹಜರು ಮಾಡಲು ಕೊಂಡೊಯ್ಯಲಾಗುತ್ತಿದೆ. ಇಂದು ಮಧ್ಯಾಹ್ನ ಸ್ಥಳ ಮಹಜರು ಉದ್ದೇಶಕ್ಕಾಗಿ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸದ್ಯ ಗಾಯಾಳು ಆರೋಪಿಯನ್ನು ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಯಲ್ಲಿ…

Read More

ಉಪ್ಪಳ: ಉಪ್ಪಳ ಗೇಟ್‌ ಬಳಿಯ ಅಪಾರ್ಟ್‌ಮೆಂಟೊಂದರ ನಾಲ್ಕನೇ ಮಹಡಿಯ ಫ್ಲ್ಯಾಟ್‌ನಲ್ಲಿ ಸಿಲುಕಿದ್ದ 1 ವರ್ಷ 8 ತಿಂಗಳ ಮಗುವನ್ನು ಅಗ್ನಿಶಾಮಕ ದಳ ರಕ್ಷಿಸಿದೆ. ತಾಯಿ ಮತ್ತು ಮಗು ಫ್ಲ್ಯಾಟ್‌ನ ಹೊರಗಿದ್ದರು. ಈ ಸಂದರ್ಭ ತಾಯಿಯ ಕಣ್ತಪ್ಪಿಸಿ ಮಗು ಒಳಗೆ ಹೋಗಿ ಬಾಗಿಲು ಮುಚ್ಚಿ ಚಿಲಕ ಹಾಕಿತ್ತು. ಸ್ಥಳೀಯರು ಎಷ್ಟೇ ಪ್ರಯತ್ನಿಸಿದರೂ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ. ಕೊನೆಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಈ ಘಟನೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿ ಚಿಲಕವನ್ನು ಮುರಿದು ಬಾಗಿಲು ತೆರೆದು ಮಗುವನ್ನು ರಕ್ಷಿಸಿದರು.

Read More

ರವೀಂದ್ರ ಇಂದು ಜಿಲ್ಲಾಡಳಿತದ ಮುಂದೇ ಶರಣಾಗಲಿದ್ದಾನೆಂದು ಖಚಿತ ಮೂಲಗಳು ತಿಳಿಸಿವೆ. ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರು ರವೀಂದ್ರನ ಜತೆ ಮಾತುಕತೆ ನಡೆಸಿ ಆತನ ಮನವೊಲಿಸಿದ್ದು, ಶರಣಾಗತಿಗೆ ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ. ಜ.8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರ ಸಮ್ಮುಖದಲ್ಲಿ ಆರು ಜನ ನಕ್ಸಲರು ಶರಣಾಗಿದ್ದರು. ಆದರೆ, ರವೀಂದ್ರ ಮಾತ್ರ ಶರಣಾಗಿರಲಿಲ್ಲ. ಶೃಂಗೇರಿ ತಾಲೂಕು ಕಿಗ್ಗಾ ಸಮೀಪದ ಕೋಟೆಹೊಂಡ ಮರಾಠಿ ಕಾಲನಿಯ ರವೀಂದ್ರನ ಸಂಪರ್ಕಕ್ಕಾಗಿ ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರು ಸಂಪರ್ಕಕ್ಕಾಗಿ ಶ್ರಮಿಸಿದ್ದರು. ಆದರೆ ಅವರ ಸುಳಿವು ಸಿಕ್ಕಿರಲಿಲ್ಲ ದಿನಗಳ ಹಿಂದೆ ರವೀಂದ್ರ ವೇದಿಕೆಯ ಸಂಪರ್ಕಕ್ಕೆ ನದ್ದು ಆತನೊಂದಿಗೆ ಚರ್ಚಿಸಿದ ಬಳಿದ ಶರಣಾಗತಿಗೆ ಒಪ್ಪಿಗೆ ಸೂಚಿಸಿದ್ದಾನೆ ಅದರಂತೆ ಇಂದು ಜಿಲ್ಲಾಡಳಿತ ಮುಂದೇ ಶರಣಾಗಲಿದ್ದಾನೆ. ಇದರೊಂದಿಗೆ ಮುಕ್ತ ರಾಜ್ಯವಾಗಲಿದೆ

Read More

ಕೋರ್ಟ್ ವಾರೆಂಟ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಹಿಡಿಯಲು ಪೊಲೀಸರು ಮನೆಯ ಬಳಿ ತೆರಳಿದಾಗ ಆರೋಪಿ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಯನ್ನು ಅರೆಸ್ಟ್ ಮಾಡಿರುವ ಘಟನೆ ಬೆಂಗಳೂರಿನ ಜೆಬಿ ನಗರದ ನ್ಯೂ ತಿಪ್ಪಸಂದ್ರದಲ್ಲಿ ನಡೆದಿದೆ. ಎಚ್ ಎ ಎಲ್ ಪೋಲಿಸರಿಂದ ಇದೀಗ ರೌಡಿ ಶೀಟರ್ ಸೈಕೋ ಕಿರಣ್ ನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಆರೋಪಿ ಸೈಕೋ ಕಿರಣ್ ಬಂಧಿಸಲು ಮನೆಯ ಬಳಿ ತೆರಳಿದ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ದ್ಯಾಗರ್ ಮೂಲಕ ಪೊಲೀಸ್ ಸಿಬ್ಬಂದಿ ಮೇಲೆ ಸೈಕೋ ಕಿರಣ ದಾಳಿ ನಡೆಸಿದ್ದಾನೆ. ಈ ವೇಳೆ ಇನ್ಸ್ಪೆಕ್ಟರ್ ಅಜರುದ್ದಿನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಪೊಲೀಸರು ಸೂಚಿಸಿದ್ದಾರೆ. ನಂತರ ರೌಡಿಶೀಟರ್ ಸೈಕೋ ಕಿರಣ್ ನನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಸೈಕೋ ಕಿರಣ್ ವಿರುದ್ಧ ಪ್ರಕರಣ ದಾಖಲಾಗಿದೆ.

Read More

ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲ್ ರು ಬೆಂಗಳೂರಿನ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾಗಿದ್ದರು. ಇದೀಗ ಮತ್ತೊಬ್ಬ ನಕ್ಸಲ್ ರವೀಂದ್ರ ಎನ್ನುವವನು ಇಂದು ನಕ್ಸಲ್ ಕಮಿಟಿ ಎದುರು ಶರಣಾಗಲಿದ್ದಾನೆ ಎಂದು ತಿಳಿದುಬಂದಿದೆ. ಹೌದು ಚಿಕ್ಕಮಂಗಳೂರಿನಲ್ಲಿ ನಕ್ಸಲ್ ರವೀಂದ್ರ ಶರಣಾಗತಿಯಾಗಲಿದ್ದಾನೆ. ಚಿಕ್ಕಮಂಗಳೂರು ಜಿಲ್ಲಾ ಡಳಿತದ ಮುಂದೆ ನಕ್ಸಲ್ ರವೀಂದ್ರ ಶರಣಾಗಲಿದ್ದಾನೆ. ಕಳೆದ 18 ವರ್ಷಗಳಿಂದ ನಕ್ಸಲ್ ರವೀಂದ್ರ ಭೂಗತನಾಗಿದ್ದ. ಇಂದು ಎಸ್ ಪಿ ವಿಕ್ರಂ ಆಮ್ಟೆ, ಡಿಸಿ ವೀಣಾ ನಾಗರಾಜ್ ಮುಂದೆ ಶರಣಾಗಲಿದ್ದಾನೆ. ಸದ್ಯ ನಕ್ಸಲ್ ಶರಣಾಗತಿ ಕಮಿಟಿ ಜೊತೆಗೆ ರವೀಂದ್ರ ಇದ್ದಾನೆ. ವಿಕ್ರಂ ಗೌಡ ಎನ್ಕೌಂಟರ್ ಬಳಿಕ ರವೀಂದ್ರ ನಾಪತ್ತೆಯಾಗಿದ್ದ ಈತ ಶೃಂಗೇರಿ ತಾಲೂಕಿನ ಕಿಗ್ಗ ಸಮೀಪದ ಕೋಟೆಹೋಂಡ ನಿವಾಸಿ ಎಂದು ತಿಳಿದುಬಂದಿದೆ. ನಕ್ಸಲ್ ಶರಣಾಗತಿ ಕಮಿಟಿ ಶ್ರೀಪಾಲನ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾನೆ.

Read More