Author: main-admin

ಬಂಟ್ವಾಳ: ರಾತ್ರಿ ನಿಗದಿತ ಸಮಯದ ನಂತರವೂ ಧ್ವನಿವರ್ಧಕಗಳನ್ನು ಬಳಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣ, ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಪುಂಜಾಲಕಟ್ಟೆ, ಅವರ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 27, 2025 ರಂದು ರಾತ್ರಿ 10.45 ರ ಸುಮಾರಿಗೆ ಬಂಗ್ಲೆ ಮೈದಾನದಲ್ಲಿ ಧ್ವನಿವರ್ಧಕಗಳನ್ನು ಬಳಸಿಕೊಂಡು ಕಾರ್ಯಕ್ರಮ ನಡೆಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐ ಅವರು ಸ್ಥಳಕ್ಕೆ ಭೇಟಿ ನೀಡಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳಿಗೆ ಧ್ವನಿವರ್ಧಕಗಳ ಬಳಕೆಯ ಕಾನೂನು ನಿಯಮಗಳ ಬಗ್ಗೆ ಮಾಹಿತಿ ನೀಡಿ, ತಕ್ಷಣವೇ ಅವುಗಳನ್ನು ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ. ಪೊಲೀಸರ ಮನವಿಯ ಮೇರೆಗೆ ಸಂಘಟಕರು ಧ್ವನಿವರ್ಧಕಗಳನ್ನು ಸ್ಥಗಿತಗೊಳಿಸಿದ್ದಾರೆ. ಆದರೆ, ರಾತ್ರಿ 11.50 ರ ಸುಮಾರಿಗೆ ಪೊಲೀಸರು ಮತ್ತೊಮ್ಮೆ ಸ್ಥಳಕ್ಕೆ ಬಂದಾಗ, ಅವರ ನಿರ್ದೇಶನವನ್ನು ಉಲ್ಲಂಘಿಸಿ ಧ್ವನಿವರ್ಧಕಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರು ಪ್ರಶ್ನಿಸಿದಾಗ, ಸಮಿತಿಯ ಅಧ್ಯಕ್ಷ ಕೌಶಿಕ್ ಶೆಟ್ಟಿ, ಪುನೀತ್ ಮಡಂತ್ಯಾರು, ತಾರನಾಥ ಕಜೆಕ್ಕಾರು, ಗುರು…

Read More

ನಿವೃತ್ತಿಗೆ ಮೂರು ದಿನ ಬಾಕಿ ಇರುವಾಗಲೇ ಐಪಿಎಸ್ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.  1997ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮಹಿಪಾಲ್ ಯಾದವ್ ಮೃತಪಟ್ಟ ದುರ್ದೈವಿ. ಆಗಸ್ಟ್ 30ರಂದು ಕೇರಳ ರಾಜ್ಯ ಸರಕಾರವು ಆನ್‌ಲೈನ್ ನಲ್ಲಿ ಅಧಿಕೃತ ವಿದಾಯ ಕಾರ್ಯಕ್ರಮ ಏರ್ಪಡಿಸುವುದಕ್ಕೂ ಮುನ್ನವೇ ಮಹಿಪಾಲ್ ಯಾದವ್ ನಿಧನರಾಗಿದ್ದಾರೆ. ಅವರು ರಾಜಸ್ಥಾನದ ಜೈಪುರದಲ್ಲಿ ನಿಧನರಾಗಿದ್ದು, ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ವಿಷಮಿಸಿದ್ದರಿಂದ, ಅವರ ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ದಿದ್ದರು.  ತಮ್ಮ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕಕ್ಕೆ ಭಾಜನರಾಗಿದ್ದ ಮಹಿಪಾಲ್ ಯಾದವ್, ಕೇರಳ ಅಬಕಾರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಅವರು ವೈದ್ಯಕೀಯ ರಜೆಯ ಮೇಲೆ ಕರ್ತವ್ಯದಿಂದ ತೆರಳುವುದಕ್ಕೂ ಮುನ್ನ, ಅವರನ್ನು ಇತ್ತೀಚೆಗಷ್ಟೇ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿತ್ತು.   ರಾಜಸ್ಥಾನದ ಅಲ್ವಾರ್ ನ ನಿವಾಸಿಯಾದ ಮಹಿಪಾಲ್ ಯಾದವ್, ನಿಯೋಜನೆಯ ಮೇಲೆ ಗಡಿ ಭದ್ರತಾ ಪಡೆ ಹಾಗೂ ಕೇಂದ್ರೀಯ ತನಿಖಾ ತಂಡ (CBI) ಗಳಲ್ಲಿ…

Read More

ಬಂಟ್ವಾಳ : ಸಜೀಪ ನಡು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಎಂಬವರು, ದಿನಾಂಕ 11.06.2025 ರಂದು ಮುಂಜಾನೆ, ಜೀಪ್ ನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ, ಸಜೀಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತರು, ತನ್ನ ಮೇಲೆ ತಲವಾರು ಬೀಸಿ ತನ್ನನ್ನು ಕೊಲೆ ಮಾಡಲು ಯತ್ನಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ .68/2025 ಕಲಂ: 109, 324(4) ಜೊತೆ 3(5) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣವನ್ನು ತನಿಖೆ ನಡೆಸಿದಾಗ, ಇದೊಂದು ಸುಳ್ಳು ಪ್ರಕರಣವೆಂದು ಸಾಬೀತಾಗಿದ್ದು, ಈ ಬಗ್ಗೆ ಮಾನ್ಯ ನ್ಯಾಯಾಲಯಕ್ಕೆ ವರದಿ ನೀಡಲಾಗಿರುತ್ತದೆ. ಮುಂದುವರಿದಂತೆ, ಸದ್ರಿ ಉಮರ್ ಪಾರೂಕ್ (48) ರವರು ಸಾರ್ವಜನಿಕರನ್ನು ಪ್ರಚೋದಿಸಿ, ಗಲಭೆ ಉಂಟಾಗುವಂತೆ ಪ್ರಚೋದಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನು ಸೃಷ್ಟಿಸಿರುವುದಲ್ಲದೇ, ಉದ್ದೇಶಪೂರ್ವಕವಾಗಿ ಸುಳ್ಳು ಆಪಾದನೆ ಮಾಡಿ, ಸುಳ್ಳು ದೂರು ನೀಡಿರುವ ಹಿನ್ನೆಲೆಯಲ್ಲಿ, ಆತನ‌ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ : 128/2025, ಕಲಂ:192,…

Read More

ಕಾರ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ (ಆ.26) ರಾತ್ರಿ ನಡೆದ ಭೀಕರ ಘಟನೆಗೆ ಕಾರ್ಕಳ ಮೂಲದ ಹೋಟೆಲ್ ಮಾಲೀಕನ ಹತ್ಯೆ ಮಾಡಿದ ಘಟನೆ ನಡೆದಿದೆ. ಹೋಟೆಲ್ ಸಿಬ್ಬಂದಿಯೊರ್ವ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಮಾಲೀಕ ಗದರಿಸಿದ್ದು ಇದೇ ಕಾರಣಕ್ಕೆ ಸಿಟ್ಟಿಗೆದ್ದ ಸಿಬ್ಬಂದಿ ಮಾಲೀಕನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹತ್ಯೆಯಾದವರು ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಸಂತೋಷ್ ಶೆಟ್ಟಿ (46) ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶ ಮೂಲದ ಹೋಟೆಲ್ ಸಿಬ್ಬಂದಿ ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿದ್ದಕ್ಕೆ ಸಂತೋಷ್ ಶೆಟ್ಟಿ ಬುದ್ಧಿವಾದ ಹೇಳಿದ್ದಾರೆ, ಇದರಿಂದ ಆಕ್ರೋಶಗೊಂಡ ಸಿಬ್ಬಂದಿ ಅಡುಗೆ ಕೋಣೆಯಿಂದ ಕತ್ತಿ ತಂದು ಶೆಟ್ಟಿಯವರ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಘಟನೆ ಮಂಗಳವಾರ ರಾತ್ರಿ ಸುಮಾರು 10 ಗಂಟೆಗೆ ನಡೆದಿದೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಬೆಳ್ತಂಗಡಿ : ಎಸ್.ಐ.ಟಿ ಅಧಿಕಾರಿಗಳ ಮುಂದೆ ಎರಡನೇ ದಿನದ ವಿಚಾರಣೆಗೆ ಸುಜಾತ ಭಟ್ ಆ.27 ರಂದು 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.

Read More

ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ತನಿಖೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಸತ್ಯ ಹೊರಗೆ ಬರಬೇಕು ಎಂದು ಕೋಟ್ಯಂತರ ಭಕ್ತರು ಕಾಯುತ್ತಿದ್ದಾರೆ. ಆರೋಪಿ ಚಿನ್ನಯ್ಯನನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಎಸ್‌ಐಟಿಯವರು ವರದಿ ನೀಡಲಿ. ಮುಂದಿನ ಚರ್ಚೆ ಆನಂತರ ಎಂದು ಹೇಳಿದರು. ಈ ವಿಚಾರದಲ್ಲಿ ಸರ್ಕಾರ ತಪ್ಪೆಸಗಿದೆ ಎಂದು ಬಿಜೆಪಿಯವರು ಯಾವ ಆಧಾರದಲ್ಲಿ ಹೇಳುತ್ತಿದ್ದಾರೆ. ಎಸ್‌ಐಟಿ ರಚಿಸಿದ್ದೇ ತಪ್ಪು ಮತ್ತು ಷಡ್ಯಂತ್ರ ಎಂದು ಹೇಳುತ್ತಿರುವುದು ವಿಪರ್ಯಾಸ. ಮಹೇಶ್ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ ನಡೆಸಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪ ಇಲ್ಲ. ಮಾಹಿತಿ ಮತ್ತು ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸುತ್ತಿದೆಯೇ ಹೊರತು, ಸರ್ಕಾರದ ನಿರ್ದೇಶನದಂತೆ ಅಲ್ಲ. ಪ್ರಕರಣದಲ್ಲಿ ಎಸ್‌ಐಟಿ ದೊಡ್ಡ ಜವಾಬ್ದಾರಿಯನ್ನು ಹೊಂದಿದ್ದು, ತನಿಖೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದೆ. ತನಿಖೆ ಬೇಗ ಮುಗಿಯುವುದು ಉತ್ತಮ ಎಂದು ಸರ್ಕಾರ ಕೂಡ…

Read More

ಉಳ್ಳಾಲ : ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಹೆಡ್ ಕಾನ್‌ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಮೂಲತಃ ಉತ್ತರ ಕರ್ನಾಟಕದ ಸಂಜೀವ (38) ಎಂದು ಗುರುತಿಸಲಾಗಿದೆ. ಇವರ ಪತ್ನಿ ಮತ್ತು ಮಕ್ಕಳು ಊರಿಗೆ ಹೋಗಿದ್ದಾಗ ಸೋಮವಾರ ತಾವು ವಾಸವಾಗಿದ್ದ ಕ್ವಾರ್ಟಸ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.

Read More

ಮಂಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು ಸತತ ಲಾಭ ಗಳಿಕೆಯೊಂದಿಗೆ, ಸದಸ್ಯರಿಗೆ ಸತತ 20% ಡಿವಿಡೆಂಡ್ ನೀಡುತ್ತಾ ಬರುತ್ತಿದೆ. ಸರ್ಕಾರದ ಅಡಿಟ್ ವರ್ಗೀಕರಣದಲ್ಲಿ ಸತತ ‘ಎ’ ವರ್ಗ ಪಡೆಯುವುದರೊಂದಿಗೆ ಉತ್ತಮ ಅಭಿವೃದ್ಧಿಗೆ ಎಸ್ ಡಿ ಸಿ ಸಿ ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಸತತ ಪಡೆಯುತ್ತಾ ಬರುತ್ತಿದೆ.ಎಲ್ಲಾ ಶಾಖೆಗಳು ಕಂಪ್ಯೂಟರಿಕೃತ ಲೆಕ್ಕಪತ್ರವ್ಯವಸ್ಥೆ ಎಲ್ಲಾ ಭದ್ರತಾ ವ್ಯವಸೆಗಳೊಂದಿಗೆ ಗ್ರಾಹಕರಿಗೆ ಉತ್ತಮ ಬ್ಯಾಂಕಿAಗ್ ಸೇವೆ ನೀಡುತ್ತಾ ಬರುತ್ತಿದೆ. ಬೆಳ್ತಂಗಡಿ ಶಾಖೆಯು ಆರಂಭದ ಕೊಡುಗೆಯಾಗಿ ಸಾಮಾನ್ಯ ಠೇವಣಿ…

Read More

ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಿಸಿರೋಡ್ ಸಮೀಪದ ತಲಪಾಡಿ ಜೋಡು ಮಾರ್ಗ ನಿವಾಸಿ ನಿಜಾಮ್ (33) ಬಂಧಿತ ಆರೋಪಿ. ಈತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 01/2023 ಕಲಂ 489 (ಬಿ) ಮತ್ತು (ಸಿ) ಜೊತೆಗೆ 34 ಭಾ.ದಂ.ಸಂ. ರಂತೆ ಪ್ರಕರಣ ದಾಖಲಾಗಿದ್ದು, ನ್ಯಾಯಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ಮಧ್ಯೆ ಆರೋಪಿಯು ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಬಳಿಕ, ಪ್ರಕರಣದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ. ನ್ಯಾಯಾಲಯವು ಈತನ ಮೇಲೆ 8 ಬಾರಿ ಬಂಧನ ವಾರಂಟ್ ಹೊರಡಿಸಿದ್ದರೂ ತಲೆಮರೆಸಿಕೊಂಡಿದ್ದ ಈತನನ್ನು, ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ವಾರಂಟ್ ಜಾರಿ ಸಿಬ್ಬಂದಿಗಳು ಆ. 25 ಸೋಮವಾರ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ…

Read More

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಬುರುಡೆ ಚಿನ್ನಯ್ಯನಿಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20 ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರಂಟ್ ಪಡೆದುಕೊಂಡು ಆರೋಪಿ ಚಿನ್ನಯ್ಯನ ಜೊತೆಯಲ್ಲಿ ಕರೆದುಕೊಂಡು ಬಂದು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ತಿಂಗಳಿಂದ ಅಶ್ರಯ ನೀಡಿದ್ದರಿಂದ ಚಿನ್ನಯ್ಯನಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಈ ದಾಳಿ ನಡೆಯುತ್ತಿದೆ ಎನ್ನಲಾಗಿದೆ.

Read More