ಬೆಳ್ತಂಗಡಿ: ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನ ಹಿಂಬದಿಯ ಎರಡು ಚಕ್ರ ಕಳಚಿ ರಸ್ತೆಗೆ ಬಿದ್ದ ಘಟನೆ ಉಜಿರೆಯ ಟಿ.ಬಿ ಕ್ರಾಸ್‌ನ ಕುಂಟಿನಿ ಬಳಿ ನಡೆದಿದೆ. ಜ.30 ರಂದು ಬೆಳಿಗ್ಗೆ ಈ ಘಟನೆ ಕಾಣಿಸಿಕೊಂಡಿದ್ದು, ಬಳಿಕ ಬಸ್ಸಿನ ಚಾಲಕ ಮತ್ತು ಕಂಡೆಕ್ಟರ್ ಸೇರಿ ರಸ್ತೆ ಬದಿಯ ಮಣ್ಣನ್ನು ಹಾರೆಯಿಂದ ಅಗೆದು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಘಟನೆಯ ವೇಳೆ ಪ್ರಯಾಣಿಕರಿಗೆ ಯಾವೂದೇ ರೀತಿಯ ತೊಂದರೆಯಾಗಿಲ್ಲ.
Author: main-admin
ಸುರತ್ಕಲ್: ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮುಕ್ಕ ಸಮೀಪ ನಡೆದಿದೆ. ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಲಾರಿಯಡಿ ತೂರಿದೆ. ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಸ್ಕಾಂಗೆ ಸೇರಿದ ಲಾರಿ ಇದಾಗಿದ್ದು, ವಿದ್ಯುತ್ ಕಂಬಗಳನ್ನು ಸಾಗಿಸುತ್ತಿತ್ತು. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮುಖ್ಯ ಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ನೊಂದವರು ದೂರವಾಣಿ ಸಂಖ್ಯೆ 0836-2445508 ಅಥವಾ ಟೋಲ ಪ್ರೀ ನಂ: 1077 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೈಕ್ರೋಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಕಿರುಕುಳಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರಗಳಲ್ಲಿ ಕರೆಗಳನ್ನು ಸ್ವೀಕರಿಸಲು ವಾರದ ಏಳು ದಿನಗಳಲ್ಲಿ ಹಗಲು ರಾತ್ರಿ ಪಾಳೆಯಲ್ಲಿ (ಮೂರು ಶಿಫ್ಟ್‍ನಲ್ಲಿ) ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ. ಸಿಬ್ಬಂದಿಯವರು ನಿಗದಿತ ಸಮಯದಲ್ಲಿ ಸಹಾಯವಾಣಿ ಕೇಂದ್ರದಲ್ಲಿ ಹಾಜರಿದ್ದು, ದೂರವಾಣಿಯ ಮೂಲಕ ಸ್ವೀಕರಿಸುವ ಎಲ್ಲ ದೂರು ಮತ್ತು ಮಾಹಿತಿಗಳನ್ನು ಕಾರ್ಯಾಲಯದಲ್ಲಿ ನಿರ್ವಹಣೆ ಮಾಡಿದ ವಹಿಯಲ್ಲಿ ದಾಖಲಿಸಿ, ದೂರಿನ ಸಮಸ್ಯೆ ಅಂಶಗಳ ಬಗ್ಗೆ ಆಯಾ ತಾಲೂಕಿನ ತಹಶೀಲ್ದಾರರಿಗೆ ಮತ್ತು ಪೆÇಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡುವರು. ಜಿಲ್ಲಾಧಿಕಾರಿಗಳ…
ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಐಷಾರಾಮಿ ಮನೆ, ಅಪಾರ ಪ್ರಮಾಣದ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ರಾಯಚೂರು ನಗರದ ಜವಾರ್ ಕಾಲೋನಿಯಲ್ಲಿರುವ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.…
ಉಡುಪಿ: ನಗರದ ವಸತಿಗೃಹ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಯುತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಉಡುಪಿಯ ಸೆನ್ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ಕೇಶವ ಎನ್ನುವಾತ ಶಿವಮೊಗ್ಗ ಮೂಲದ ಮಹಿಳೆಯನ್ನು ಕೆಲಸ ಕೊಡುವುದಾಗಿ ಕರೆಯಿಸಿಕೊಂಡು ಹೊಟೇಲ್‌ನಲ್ಲಿ ಆಕೆಯನ್ನು ಇರಿಸಿ ಬಲವಂತವಾಗಿ ಅನೈತಿಕ ಚಟುವಟಿಕೆಗೆ ದೂಡಿದ ಆರೋಪ ಕೇಳಿ ಬಂದಿದೆ. ದಾಳಿ ವೇಳೆ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಕೃತ್ಯಕ್ಕೆ ಹೊಟೇಲ್‌ನಲ್ಲಿ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಮಾಲಕರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ತುಳು ಸಿನಿಮಾ ”ಮೀರಾ“ ದ ಟೀಸರ್ ಬಿಡುಗಡೆ ಕಾರ್ಯಕ್ರಮ ನಗರದ ಖಾಸಗಿ ಹೋಟೆಲ್ ನಲ್ಲಿ ಜರುಗಿತು. ಸಿನಿಮಾ ನಿರ್ಮಾಪಕ ಲಂಚುಲಾಲ್ ಮಾತಾಡಿ, “ಹೆಣ್ಣಿನ ಬದುಕಿನ ಕುರಿತಾದ ಕಥೆ ಎನ್ನುವ ಕಾರಣಕ್ಕೆ ಸಿನಿಮಾವನ್ನು ನಿರ್ಮಾಣ ಮಾಡಲು ಒಪ್ಪಿಕೊಂಡಿದ್ದೇನೆ. ಫೆ.21ಕ್ಕೆ ನಮ್ಮ ಮೀರಾ ಸಿನಿಮಾ ಬಿಡುಗಡೆಯಾಗಲಿದೆ. ಎಲ್ಲರೂ ಸಿನಿಮಾ ನೋಡಿ ನಮ್ಮನ್ನು ಬೆಂಬಲಿಸಿ. ಸಿನಿಮಾದ ಸಂಗೀತ, ಹಾಡುಗಳು ಬಹಳ ಚೆನ್ನಾಗಿವೆ. ಚಿತ್ರತಂಡಕ್ಕೆ ನಿಮ್ಮ ಆಶೀರ್ವಾದ ಬೇಕು” ಎಂದರು. ಸಿನಿಮಾ ಬಗ್ಗೆ ಮಾತಾಡಿದ ನಟ ಮಂಜು ರೈ ಮೂಳೂರು “ತುಳು ಭಾಷೆಯ ಮೇಲಿನ ಅಭಿಮಾನದಿಂದ ಕೇರಳದಿಂದ ಬಂದ ಅಶ್ವಥ್ ಅನ್ನುವ ನಿರ್ದೇಶಕ ಮೀರಾ ಸಿನಿಮಾ ಮಾಡಿದ್ದಾರೆ. ಈ ಸಿನಿಮಾವನ್ನು ಗೆಲ್ಲಿಸುವುದು ತುಳುವರಾದ ನಮ್ಮೆಲ್ಲರ ಕರ್ತವ್ಯ. ತುಳು ಚಿತ್ರವನ್ನು ನೋಡಲು ಸಿನಿಮಾ ಮಂದಿರಕ್ಕೆ ಜನರು ಬರುವುದಿಲ್ಲ. ಈ ವೇಳೆಯಲ್ಲಿ ಲಂಚುಲಾಲ್ ದೊಡ್ಡ ಮನಸ್ಸು ಮಾಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಆಶಿರ್ವದಿಸಿ” ಎಂದರು. ಬಾಲನಟಿ ಲಕ್ಷ್ಯ ಮಾತಾಡಿ, “ಸಿನಿಮಾದಲ್ಲಿ ನಟಿಸುವ ಬಗ್ಗೆ…
ಮಂಗಳೂರು: ಪ್ರೇತ ಕಾಟ ಅಧಿಕವಾಗಿರುವ ಹಿನ್ನೆಲೆಯಲ್ಲಿ ಅದರ ಉಚ್ಚಾಟನೆ ಮತ್ತು ಅನ್ಯಪ್ರೇತ ಉಚ್ಛಾಟನೆಗಾಗಿ ನಗರದ ಕೊಟ್ಟಾರ ಸಮೀಪ ಜ.30ರ ಮಧ್ಯರಾತ್ರಿ ರಸ್ತೆ ಸಂಚಾರವನ್ನೇ ನಿಷೇಧಿಸಲಾಗಿತ್ತು.ಕೊಟ್ಟಾರ ಸಮೀಪದ ಅಬ್ಬಕ್ಕನಗರ ಭಾಗದಲ್ಲಿ ಪ್ರೇತಕಾಟ ಅಧಿಕವಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ. ಇದರಂತೆ ತಾಂಬೂಲ ಪ್ರಶ್ನೆ ಇಟ್ಟು ಪರಿಶೀಲನೆ ನಡೆಸಿದಾಗ ಉಚ್ಚಾಟನೆ ಕ್ರಮ ಮಾಡಬೇಕೆಂದು ತಿಳಿಸಲಾಗಿತ್ತು.ಅದರಂತೆ ಪ್ರೇತ ಉಚ್ಚಾಟನೆ ಕ್ರಮವನ್ನು ನಿನ್ನೆ ರಾತ್ರಿ ಮಾಡಲಾಗಿದೆ. ದರ್ಶನ ಸೇವೆ ನಡೆಸಿದ ಬಳಿಕ ಈ ಕ್ರಮ ನೆರವೇರಿದೆ. ಈ ಸಂದರ್ಭ ಜನರ ಹಿತದೃಷ್ಟಿಯಿಂದ ರಸ್ತೆ ಸಂಚಾರವನ್ನು ಸ್ಥಳೀಯರೇ ನಿಷೇಧಿಸಿದ್ದರು.
ಉಡುಪಿ: ಕೆಂಜೂರು ಗ್ರಾಮದ ಬಲ್ಲೆಬೈಲು ಕೊಳಂಬೆ ಎಂಬಲ್ಲಿ ಸಂಜೆ ವೇಳೆ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 12 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ಪ್ರವೀಣ್ ಕುಮಾರ್ ನಾಲ್ಕೂರು (49), ಸುರೇಶ ನಡೂರು(32), ಉಮೇಶ್ ಕೆಂಜೂರು(53), ಹರೀಶ್ ಕುಮಾರ್ ಚೇರ್ಕಾಡಿ(38), ಗಣೇಶ್ ಬೊಮ್ಮರಬೆಟ್ಟು(30), ಅಜಯ್ ಹೆಬ್ರಿ(23), ಮಂಜುನಾಥ ಹೊಸೂರು(32), ದಿನೇಶ್ ಬ್ರಹ್ಮಾವರ(49), ಸದಾಶಿವ ಸಂತೆಕಟ್ಟೆ(49), ಹರೀಶ ಬ್ರಹ್ಮಾವರ(39), ರಾಘವೇಂದ್ರ ಬ್ರಹ್ಮಾವರ(34) ಎಂದು ಗುರುತಿಸಲಾಗಿದೆ.ಬ್ರಹ್ಮಾವರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ವಿಟ್ಲ: ಬಂಟ್ವಾಳ ಸಿವಿಲ್ ನ್ಯಾಯಾಲಯ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡು ಡಿಸಿಗೆ ನೋಟಿಸ್ ಜಾರಿ ಮಾಡಿದೆ. ವಿಟ್ಲ ಅಪ್ಪರಿಪಾದೆಯಲ್ಲಿ ಹೊನ್ನಮ್ಮ ಎಂಬವರು 1994ರಲ್ಲಿ ಸರ್ಕಾರದ ವಿರುದ್ಧ ವ್ಯಾಜ್ಯ ದಾಖಲಿಸಿ, ಕಸಬಾ ಗ್ರಾಮದ ಸರ್ವೇ ನಂಬರ್ 603/1ಎ2ಎ1ರಲ್ಲಿ 4.12ಎಕ್ರೆ ಜಮೀನನ್ನು ಬಲವಂತದಿಂದ ಒಕ್ಕಲೆಬ್ಬಿಸದಂತೆಯೂ ಈ ಜಮೀನಿನ ಬಗ್ಗೆ ಯಾವುದೇ ದಾಖಲೆಗಳನ್ನು ಮಾಡದಂತೆ ಶಾಶ್ವತ ಪ್ರತಿಬಂಧಕಾಜ್ಞೆ ಆದೇಶ ಪಡೆದುಕೊಂಡಿದ್ದರು. ಈ ಆದೇಶವನ್ನು ಉಲ್ಲಂಘಿಸಿ 2024 ಅಗಸ್ಟ್ 16ರಂದು 1.88ಎಕ್ರೆ ಜಮೀನನ್ನು ಸರ್ಕಾರದ ಅಧಿಸೂಚನೆಯಂತೆ ಎಫ್.ಎಸ್. ಟಿ. ಪಿ. ಪ್ಲಾಂಟ್ ನಿರ್ಮಿಸಲು ಕಾಯ್ದಿರಿಸಿ ವಿಟ್ಲ ಪಟ್ಟಣ ಪಂಚಾಯಿತಿಗೆ ಹಸ್ತಾಂತರವಾಗಿತ್ತು. ಈ ರೀತಿ ದಾಖಲೆ ಮಾಡಿರುವುದು ನ್ಯಾಯಾಲಯದ ತೀರ್ಪುನ ಉಲ್ಲಂಘನೆ ಎಂದು ಮೃತ ಹೊನ್ನಮ್ಮ ಅವರ ವಾರಸುದಾರರಾದ ವೆಂಕಪ್ಪ ನಾಕ್ ಅವರು ವಕೀಲ ಸುದರ್ಶನ ಕುಮಾರ್ ಮುಳಿಯ ಮೂಲಕ ಬಂಟ್ವಾಳ ಸಿವಿಲ್ ನ್ಯಾಯಾಲಯದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಜಿಲ್ಲಾಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದೆ.
ಮಂಗಳೂರು: ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ 8ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಬಂಧಿತ ಆರೋಪಿ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಆರೋಪಿ ಕಿಶೋರ್ ಶೆಟ್ಟಿ ಮೇಲೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನ್ಯಾಯಾಲಯದಲ್ಲಿ ಜಾಮೀನು ಪಡೆದು, ಆ ಬಳಿಕ 8 ವರ್ಷಗಳಿಂದ ನ್ಯಾಯಲಯಕ್ಕೆ ಹಾಜರಾಗದೆ ತಲೆ ಮರಿಸಿಕೊಂಡಿದ್ದಾನೆ. ಈ ಪ್ರಕರಣವನ್ನು ನ್ಯಾಯಲಯ LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೂಪಿಯ ಪತ್ತೆಯ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಐ ಗಂಗಾಧರ ಎನ್., ಹೆಚ್.ಸಿ.ಚಂದ್ರಹಾಸ್ ಸನೀಲ್ & ಹೆಚ್ ಸಿ ಪುರುಷೊತ್ತಮರವರ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ದಸ್ತಗಿರಿ ಮಾಡಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.










