ಮಂಗಳೂರು : ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ‘ನೆತ್ತೆರೆಕೆರೆ’ ತುಳು ಸಿನಿಮಾ ಆಗೋಸ್ಟ್ 29 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ನೆತ್ತರಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ ನೆತ್ತರಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ, ಪ್ರೇಕ್ಷಕರಲ್ಲಿ ಕಾತರ. ಕುತೂಹಲ ಹೆಚ್ಚಿದೆ ಸಿನಿಮಾಕ್ಕೆ ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ. ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ, ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಹುಭಾಷಾ ತಾರಾ ನಟ ಸುಮನ್ ತಲ್ಮಾರ್. ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ಯುವ ಶೆಟ್ಟಿ, ಪುಷ್ಪರಾಜ್ ಬೊಳೂರು, ಅನಿಲ್ ಉಪ್ಪಳ, ಭವ್ಯಾ ಪೂಜಾರಿ, ಪ್ರಥ್ವಿನ್ ಪೊಳಲಿ, ಉತ್ಸವ್ ವಾಮಂಜೂರು, ನೀತ್ ಪೂಜಾರಿ, ವಿಜಯ ಮಯ್ಯ ಚಂದ್ರಶೇಖರ ಸಿದ್ಧಕಟ್ಟೆ, ಮನೀಶ್ ಶೆಟ್ಟಿ ಉಪ್ಪಿರ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು, ಭಗವಾನ್, ಕೀರ್ತನ್…
Author: main-admin
ಕಾರ್ಕಳ: ಇಲ್ಲಿನ ಕುಂಟಲಪಾಡಿ ರಸ್ತೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊ*ಲೆ ಮಾಡಲಾಗಿದೆ. ಮಂಗಳವಾರ (ಆ.26) ಘಟನೆ ಬೆಳಕಿಗೆ ಬಂದಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಮೂಲಗಳ ಪ್ರಕಾರ, ನವೀನ್ ಪೂಜಾರಿ ಕಾರ್ಕಳದಲ್ಲಿ ನೆಲೆಸಿ ಹಣಕಾಸು ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕೊ*ಲೆಯ ನಿಖರ ಕಾರಣ ಮತ್ತು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿರುವ ದೂರಿನ ಆಧಾರದ ಮೇಲೆ ಉಡುಪಿ ನಗರದಲ್ಲಿರುವ ಲಾಡ್ಜ್ ಒಂದಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಣೆ ಮಾಡಿರುವ ಘಟನೆ ರವಿವಾರ ನಡೆದಿದೆ. ಉಡುಪಿ ನಗರದ ಸಮ್ಮರ್ ಪಾರ್ಕ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಕುರಿತು ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ್ ಅವರಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರ ತಂಡ ಲಾಡ್ಜ್ ನ ಎರಡನೇ ಮಹಡಿಯಲ್ಲಿರುವ 308 ಕೊಠಡಿಯಲ್ಲಿ ಮಹಿಳೆಯೊಬ್ಬರು ಪತ್ತೆಯಾಗಿದ್ದು ಈ ವೇಳೆ ವಿಚಾರಣೆ ನಡೆಸಿದ ವೇಳೆ ಮಹಿಳೆ ತನಗೆ ಕೆಲಸ ಕೊಡಿಸುವ ನೆಪದಲ್ಲಿ ಶರತ್ ಅಲಿಯಾಸ್ ಮೊಹಮ್ಮದ್ ಫಯಾಜ್ ಎಂಬ ವ್ಯಕ್ತಿ ಆ.19 ರಂದು ಉಡುಪಿಗೆ ಕರೆದುಕೊಂಡು ಬಂದು ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಮಹಿಳೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ ಪೊಲೀಸರು, ಆರೋಪಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ: ನಗರದ ಸಮೀಪ ಮಹಿಳೆಯೊಬ್ಬರಿಗೆ ಆನ್ ಲೈನ್ ಶಾಪಿಂಗ್ ಹೆಸರಿನಲ್ಲಿ ಕರೆ ಮಾಡಿ ಸಾವಿರಾರು ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ವಂಚನೆಗೊಳಾಗದ ಮಹಿಳೆ ಜಹೀನ್ ಆಯೇಶಾ ಜಾಕೀರ್ ಎಂದು ತಿಳಿದು ಬಂದಿದೆ. ಪ್ರಕರಣ ವಿವರ : ಪಿರ್ಯಾದಿದಾರರಾದ ಜಹೀನ್ ಆಯೇಶಾ ಜಾಕೀರ್(27) ಇವರು ದಿನಾಂಕ 21/08/2025 ರಂದು ಸಂಜೆ 4:30 ಗಂಟೆಗೆ ಪಿರ್ಯಾದಿದಾರರು ಮನೆಯಲ್ಲಿರುವಾಗ ಯಾರೋ ಅಪರಿಚಿತ ವ್ಯಕ್ತಿಯು ಫೋನ್ ಕರೆ ಮಾಡಿ ತಾನು ನೈಕಾ ಎಂಬ ಆನ್ ಲೈನ್ ಶಾಪಿಂಗ್ ಕಂಪನಿಯಿಂದ ಮಾತನಾಡುತ್ತಿದ್ದು, ನೀವು ಪಿನ್ ಕೋಡ್ ನಂಬರ್ ನ್ನು ಸರಿಯಾಗಿ ನಮೂದಿಸದೇ ಇರುವುದರಿಂದ ನಿಮ್ಮ ಆರ್ಡರ್ ಸ್ಥಗಿತಗೊಂಡಿದೆ ಅದನ್ನು ಚಾಲ್ತಿಗೊಳಿಸಬೇಕಾದರೆ ನೀವು ಮೊದಲು ಹಣವನ್ನು ಪಾವತಿಸಬೇಕು ನಂತರ ಆ ಹಣ ನಿಮಗೆ ಮರುಪಾವತಿ ಆಗುತ್ತದೆ ಎಂದು ಹೇಳಿದ್ದು, ಅಪರಿಚಿತ ವ್ಯಕ್ತಿಯ ಮಾತುಗಳನ್ನು ನಂಬಿದ ಪಿರ್ಯಾದಿದಾರರು ಅಪರಿಚಿತ ವ್ಯಕ್ತಿಯು ನೀಡಿದ ಬ್ಯಾಂಕ್ ಖಾತೆಗೆ ಒಟ್ಟಾರೆಯಾಗಿ 47,191.50/- ರೂಪಾಯಿ ಹಣವನ್ನು ವರ್ಗಾವಣೆ ಮಾಡಿದ್ದು, ನಂತರ ಆರೋಪಿಯು ಪಿರ್ಯಾದಿದಾರರಿಗೆ ಯಾವುದೇ ಹಣವನ್ನು…
ಪಡುಬಿದ್ರೆ: ಪಡುಬಿದ್ರೆ ಪಾದಬೆಟ್ಟು ಗ್ರಾಮದ ಕಾಮತ್ ಪೆಟ್ರೋಲ್ ಬಳಿ ಜೂ.22ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ನೌಷಾದ್ ಬಿ.ಎ.(38) ಬಂಧಿತ ಆರೋಪಿ. ಗಣೇಶ್ ಪ್ರಸಾದ್ ಶೆಟ್ಟಿ ಎಂಬವರ ಮನೆಗೆ ನುಗ್ಗಿದ ಕಳ್ಳರು, 1,45,000 ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಇಬ್ರಾಹಿಂ ಕಲಂದರ್(42) ಹಾಗೂ ರಿಯಾಜ್(32) ಎಂಬವರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಕಾರು ಹಾಗೂ 24,000ರೂ. ನಗದು ವಶ ಪಡಿಸಿಕೊಂಡಿದ್ದರು. ತನಿಖೆ ಮುಂದುವರೆಸಿದ ಪೊಲೀಸರು ಆ.22ರಂದು ನೌಷದ್‌ನನ್ನು ಮಂಗಳೂರಿನಲ್ಲಿ ಬಂಧಿಸಿ, 80000ರೂ. ಮೌಲ್ಯದ ಚಿನ್ನವನ್ನು ಹಾಗೂ 32000ರೂ. ನಗದು ವಶಪಡಿಸಿಕೊಂಡಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ಆರೋಪಿತರಿಂದ 8 ಗ್ರಾಂ ಚಿನ್ನ ಹಾಗೂ 56000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ನೌಷಾಧ್ ವಿರುದ್ಧ ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 1 ಸುಲಿಗೆ ಪ್ರಕರಣ, ದಕ್ಷಿಣ…
ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು. ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು…
ಮಂಗಳೂರು: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತ ಯುವಕ ಪಡುಪಣಂಬೂರು ಕಜಕತೋಟ ನಿವಾಸಿ ದಿ.ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ತಿಳಿದು ಬಂದಿದೆ. ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಎಂಬವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್ ಎಂಬವರ ಪುತ್ರ ಫಾಝಿಲ್ ಎಂಬವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಒಂದೇ ಕುಟುಂಬದ ಆರು ಮಂದಿ ಸಹೋದರರ ಮಕ್ಕಳು ರವಿವಾರ ಸಂಜೆ ಸಸಿಹಿತ್ಲು ಮೂಂಡಾ ಬೀಚ್‌ಗೆ ವಿಹಾರಕ್ಕೆಂದು ತೆರಳಿದ್ದರು. ಅವರು ನೀರಿನಲ್ಲಿ ಆಡುತ್ತಿದ್ದ ಸಂದರ್ಭ ಬೃಹತ್ ಅಲೆಯ ಸೆಳೆತಕ್ಕೆ ಸಿಲುಕಿ ಮುಹಮ್ಮದ್ ಸಮೀರ್, ಐಮಾನ್, ಫಾಝಿಲ್ ಸಮುದ್ರ ಪಾಲಾಗುತ್ತಿದ್ದರು. ಈ ವೇಳೆ ದಡದಲ್ಲಿದ್ದವರು ಬೊಬ್ಬೆ ಹಾಕಿದ್ದು, ಬೊಬ್ಬೆಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ಮೀನುಗಾರ ನಿವಾಸಿಗಳು ಮೂವರನ್ನೂ ರಕ್ಷಿಸಿ ಮುಕ್ಕದ ಖಾಸಗಿ…
ಮಂಗಳೂರು :ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿಯೋರ್ವನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಹಪೀಜ್ ಎಂದು ಗುರುತಿಸಲಾಗಿದೆ. ಪ್ರಕರಣದ ಸಾರಾಂಶ : ದಿನಾಂಕ 22-08-2025 ರಂದು ಮದ್ಯಾಹ್ನ 13-00 ಗಂಟೆಗೆ ಪಿರ್ಯಾದಿದಾರರಾದ ಸಾಗರ್ ದೇವಕತ್ತಿ ಪಿಸಿ ಮತ್ತು ಪಿಸಿ ಸ್ವಾಮಿ ರವರು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಮಂಗಳೂರು ನಗರದ ಪಾಂಡೇಶ್ವರ ರೈಲ್ವೇ ಹಳಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪಿ ಮೊಹಮ್ಮದ್ ಹಪೀಜ್ ಪ್ರಾಯ 20 ವರ್ಷ ವಾಸ: ಎಂ ಆರ್ ಭಟ್ ಲೇನ್ ಮಾರ್ನಮಿಕಟ್ಟೆ ಮಂಗಳೂರು ಎಂಬವರನ್ನು ಮದ್ಯಾಹ್ನ 13-20 ಗಂಟೆಗೆ ವಶಕ್ಕೆ ಪಡೆದುಕೊಂಡು ಸದ್ರಿ ವ್ಯಕ್ತಿಯು ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ತಪಾಸಣೆಗಾಗಿ ಮಂಗಳೂರು ನಗರದ ಎ.ಜೆ ಆಸ್ಪತ್ರೆಯ ವೈಧ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿ ಪರೀಕ್ಷೆಗೊಳಪಡಿಸಿದಾಗ, ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿರುವುದರಿಂದ ಆರೋಪಿಯ ವಿರುದ್ದ ಕಲಂ 27(a),…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಠಾಣೆಯ ಶೌಚಾಲಯದಲ್ಲಿ ಬಂಧಿತ ಆರೋಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನಲೆ ಎಂ.ಕೆ.ದೊಡ್ಡಿ ಠಾಣೆಯ ಎಎಸ್ಐ ನಾಗರಾಜು, ಕಾನ್ಸ್‌ಟೇಬಲ್‌ಗಳಾದ ಪ್ರತಾಪ್, ಲಕ್ಷ್ಮೀನಾರಾಯಣ ಹಾಗೂ ಸೋಮನಾಥ್ ಅಮಾನತುಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಆದೇಶಿಸಿದ್ದಾರೆ. ಕಳ್ಳತನ ಕೇಸ್‌ನಲ್ಲಿ ಆರೋಪಿ ರಮೇಶ್ ಅರೆಸ್ಟ್ ಆಗಿದ್ದ. ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದುಂಡನಹಳ್ಳಿ ನಿವಾಸಿ ರಮೇಶ್, ಆಗಸ್ಟ್ 20ರಂದು ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಹೀಗಾಗಿ ಕರ್ತವ್ಯ ಲೋಪ ಕಂಡುಬಂದ ಹಿನ್ನಲೆ ಎಎಸ್ಐ ಸೇರಿ ಮೂವರು ಪೊಲೀಸ್ ಸಿಬ್ಬಂದಿಯನ್ನ ಅಮಾನತು ಮಾಡಲಾಗಿದೆ. ನಡೆದದ್ದೇನು? ಎರಡು ತಿಂಗಳ ಹಿಂದೆ ಚನ್ನಪಟ್ಟಣ ತಾಲ್ಲೂಕಿನ ಬೊಮ್ಮನಾಯಕನಹಳ್ಳಿ ಗ್ರಾಮದ ದೇವಸ್ಥಾನವೊಂದರಲ್ಲಿ ದೇವಸ್ಥಾನದ ಬಾಗಿಲು ಒಡೆದು ಹುಂಡಿ ಕಳ್ಳತನ ಮಾಡಿದ್ದರು. ಪ್ರಕರಣ ಸಂಬಂಧ ಆರೋಪಿ ರಮೇಶ್, ಮಂಜು ಹಾಗೂ ಮಂಜುನ ಸ್ನೇಹಿತ ಶ್ರೀನಿವಾಸ್ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಆಗಸ್ಟ್ 18ರಂದು ಚನ್ನಪಟ್ಟಣದ…
ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ರ ವಯಸ್ಸಿನ ಯುವತಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಸಮೀರ್ (20) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 55 ಸಾವಿರ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ಮಾನು ಕೆ.ಎಸ್. ಶನಿವಾರ ಈ ತೀರ್ಪು ನೀಡಿದ್ದಾರೆ. ಮೂಲ್ಕಿ ಕಾರ್ನಾಡು ಲಿಂಗಪ್ಪಯ್ಯ ಕಾಡಿನ ಬಿಜಾಪುರ ಕಾಲನಿ ನಿವಾಸಿ ಸಮೀರ್ ಎಂಬಾತ ಅಪ್ರಾಪ್ತ ಯುವತಿಯ ತಾಯಿ ನಡೆಸುತ್ತಿದ್ದ ಹೊಟೇಲ್‌ಗೆ ಕೋಳಿ ಮಾಂಸದ ಲೈನ್‌ಸೇಲ್ ಮಾಡುತ್ತಿದ್ದ. ಯುವತಿ ಶಿಕ್ಷಣ ಮೊಟಕುಗೊಳಿಸಿ ಮನೆಯಲ್ಲಿದ್ದು, ಆಕೆಯ ಪರಿಚಯ ಮಾಡಿಕೊಂಡ ಆರೋಪಿ ಮದುವೆಯಾಗುವುದಾಗಿ ನಂಬಿಸಿದ್ದ. 2024ರ ಜೂ.24ರಂದು ಬಾಲಕಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಅಲ್ಲಿಂದ ಕಾರಿನಲ್ಲಿ ಆಕೆಯನ್ನು ಚಿತ್ರದುರ್ಗಕ್ಕೆ ಮತ್ತು ಬಸ್ಸಿನಲ್ಲಿ ಬೆಂಗಳೂರಿಗೆ ಕರೆದು ಕೊಂಡುಹೋಗಿದ್ದ. ನಂತರ ಖಾಸಗಿ ಬಸ್ಸಿನಲ್ಲಿ ಮುಂಬೈಗೆ ಕರೆದೊಯ್ದಿದ್ದ. ಅಲ್ಲಿ ಬಾಡಿಗೆ ಮನೆ ಹುಡುಕಾಟ ನಡೆಸಿ ಸಿಗದಿದ್ದಾಗ…










