ಬೆಂಗಳೂರು: ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಡಿಜೆ ಬಳಕೆ ನಿಷೇಧಿಸಿ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸ್ ಜಂಟಿ ಆಯುಕ್ತರು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠವು ಅರ್ಜಿ ವಿಚಾರಣೆ ನಡೆಸಿತು. ಅರ್ಜಿದಾರ ಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮೆರವಣಿಗೆ ಮತ್ತು ಸಾರ್ವಜನಿಕ ಮಂಟಪಗಳಲ್ಲಿ ಡಿಜೆ ನಿಷೇಧದ ಪೊಲೀಸರ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದೆ. ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ ಪದಾಧಿಕಾರಿಯಾಗಿದ್ದ ಶಂಕರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರ ಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಗೌರಿ-ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬಕ್ಕೆ ಡಿಜೆ ನಿಷೇಧ ವಿಚಾರದಲ್ಲಿ ಪೊಲೀಸರ ನಿರ್ಧಾರಕ್ಕೆ ಅಸ್ತು ಅಂದಿದೆ.
Author: main-admin
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಸ್ಕ್‌ಮ್ಯಾನ್ ಚಿನ್ನಯ್ಯನ ಅಣ್ಣ ತಾನಾಸಿಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ತಾನಾಸಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮಾಡುತ್ತಿದ್ದ ಜಾಗಕ್ಕೆ ಹೋಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಸ್‌ಐಟಿ (SIT) ವಿಚಾರಣೆಯ ಸಂದರ್ಭದಲ್ಲಿ ಚಿನ್ನಯ್ಯ ಅಣ್ಣ ತಾನಾಸಿಯ ಬಗ್ಗೆ ಕೆಲ ಮಾಹಿತಿ ತಿಳಿಸಿದ್ದ ಹಿನ್ನೆಲೆಯಲ್ಲಿ ಈಗ ಅಣ್ಣನನ್ನು ವಶಕ್ಕೆ ಪಡೆದಿದೆ. ಎಸ್‌ಐಟಿ ಚಿನ್ನಯ್ಯನ ವಿಚಾರಣೆ ನಡೆಸುತ್ತಿದ್ದ ವೇಳೆ ತಾನು ಹೆಣ ಹೂಳುತ್ತಿರುವ ವಿಚಾರ ಅಣ್ಣ ತಾನಾಸಿಗೂ ತಿಳಿದಿತ್ತು ಎಂದು ಹೇಳಿದ್ದ. ಈ ಕಾರಣಕ್ಕೆ ತಾನಾಸಿಯನ್ನು ಎಸ್‌ಐಟಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಬೆಳ್ತಂಗಡಿ ಕೋರ್ಟ್ ಈಗ ಚಿನ್ನಯ್ಯನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಶುಕ್ರವಾರ ವಿಚಾರಣೆಗೆ ಬಂದಿದ್ದ ಚಿನ್ನಯ್ಯನಿಗೆ ಎಸ್‌ಐಟಿ ಪೊಲೀಸರು ನಿರಂತರ ಪ್ರಶ್ನೆ ಕೇಳಿದ್ದರು. ರಾತ್ರಿಯೂ ಬೆಳ್ತಂಗಡಿ ಠಾಣೆಯಲ್ಲೇ ಇದ್ದ ಚಿನ್ನಯ್ಯನನ್ನು ಇಂದು ಬೆಳಗ್ಗೆ ಬಂಧಿಸಿದ್ದರು.
ಬೆಳ್ತಂಗಡಿ: ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನು ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಅಧಿಕಾರಿಗಳು ಶುಕ್ರವಾರ (ಆ.22) ದೂರುದಾರ ಮತ್ತು ಈ ಹಿಂದೆ ಅನಾಥ ಶವಗಳ ಪೋಸ್ಟ್ ಮಾರ್ಟಂ ಮಾಡಿದ್ದ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದರು. ಇದರ ಮುಂದುವರಿದ ಭಾಗವಾಗಿ ಶನಿವಾರ ಪ್ರಮುಖ ದೂರುದಾರ ಮಾಸ್ಕ್ ಮ್ಯಾನ್ ನನ್ನು ಬಂಧಿಸಿದ್ದಾರೆ. ಇದೀಗ ಈ ದೂರುದಾರನ ಗುರುತು ಬಹಿರಂಗವಾಗಿದೆ. ಮಂಡ್ಯ ಜಿಲ್ಲೆಯ ಸಿ.ಎನ್.ಚಿನ್ನಯ್ಯ ಎಂಬ ಹೆಸರಿನ ಈ ವ್ಯಕ್ತಿ ದೂರು ನೀಡಿದಾತ…
ಕಾಪು: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ವೇಳೆ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ ನಡೆದಿದೆ. ಮೃತರನ್ನು ಬೆಳ್ಮಣ್ ನ ಮಾರ್ವಿನ್ ಮೆಂಡೊನ್ಸಾ ಎಂದು ಗುರುತಿಸಲಾಗಿದೆ. ಸಿನಿಮಾಟೋಗ್ರಾಫರ್ ಆಗಿದ್ದ ಮರ್ವಿನ್ ಡಿ ಜೆ ವೃತ್ತಿಯನ್ನು ಮಾಡುತ್ತಿದ್ದರು. ಗಾಯಾಳುಗಳಾದ ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಗೆ ಹೋಗುತ್ತಿದ್ದಾಗ ನಾಯಿಯೊಂದು ಕಾರಿಗೆ ಅಡ್ಡ ಬಂದಿದೆ ಎನ್ನಲಾಗಿದೆ. ಇದರ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಚ್ಚಿಲ ಹಾಗೂ ಮೂಳೂರಿನ ಎಸ್‌ಡಿಪಿಐ ಆಂಬುಲೆನ್ಸ್ ಗಳು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಾರ್ವೀನ್…
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಅನಾಮಿಕ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಮಾಸ್ಕ್‌ಮ್ಯಾನ್‌ನ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ನಂತರ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧನವಾಗಿದೆ. ಮಾಸ್ಕ್‌ಮ್ಯಾನ್ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ. ತಲೆಬುರುಡೆ ಕೇಸ್ನಲ್ಲಿ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.
ಮಂಗಳೂರು: ನಗರದ ಮಣ್ಣಗುಡ್ಡಯಲ್ಲಿರುವ ದ.ಕ. ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್ ಹಾಗು ಪೊಲೀಸ್ ನಿರೀಕ್ಷಕಿಯರಾದ ಭಾರತಿ ಜಿ, ರವಿ ಪವಾರ್ ನೇತೃತ್ವದ ತಂಡವು ಶುಕ್ರವಾರ ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಸಾಕಷ್ಟು ಲೋಪದೋಷಗಳು ಕಂಡುಬಂದಿದೆ. ಮುಖ್ಯವಾಗಿ ವಸತಿಗೃಹದ ಅಡುಗೆ ಕೋಣೆಯಲ್ಲಿ ಶುಚಿತ್ವ ಇರಲಿಲ್ಲ. ಧವಸಧಾನ್ಯಗಳ ಸ್ಟಾಕ್ ಇರಲಿಲ್ಲ. ಅಕ್ಕಿಯಲ್ಲಿ ಹುಳುಗಳು ಕಂಡುಬಂದಿದೆ. ಸ್ಟಾಕ್ ರಿಜಿಸ್ಟರ್ ಕೂಡ ಇರಲಿಲ್ಲ. ಅಡುಗೆಗೆ ಕಡಿಮೆ ಗುಣಮಟ್ಟದ ಹೆಚ್ಚು ಪ್ಯಾಟ್ ಇರುವ ಪಾಮೋಲಿನ್ ಅಡುಗೆ ಎಣ್ಣೆಯನ್ನು ಬಳಸುವುದು ಕಂಡುಬಂದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ವಸತಿ ಗೃಹದಲ್ಲಿ 33 ಮಕ್ಕಳಿದ್ದರು. ಅವರಿಗೆ ಪೌಷ್ಟಿಕಯುಕ್ತ ಆಹಾರ ನೀಡಿಲ್ಲ. ಊಟದ ಹಾಲ್‌ನಲ್ಲಿ ಹೆಚ್ಚಿನ ಸ್ಥಳವಕಾಶ ಇಲ್ಲದಿದ್ದರೂ ಕೂಡ ಎರಡು ವಸತಿ ಗೃಹದಲ್ಲಿನ ಬಾಲಕ ಮತ್ತು ಬಾಲಕಿಯರಿಗೆ ಒಂದೇ ಕಡೆಯಲ್ಲಿ ಊಟದ ವ್ಯವಸ್ಥೆ ಕಲ್ಪಿಸುವುದು ಕಂಡುಬಂದಿದೆ. ಸ್ಕಾಲರ್‌ಶಿಪ್ ಪಡೆದು ವಿದ್ಯಾಭ್ಯಾಸ ಮಾಡುವ ಹೆಚ್ಚಿನ ಮಕ್ಕಳು…
ಉಡುಪಿ: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ವಿರುದ್ದ ಎನ್ ಡಿಪಿಎಸ್ ಕಾಯ್ದೆಯಡಿ ಗೂಂಡಾ ಕಾಯ್ದೆಯಡಿಯ ಹೈಕೋರ್ಟ್ ಬಂಧನ ಆದೇಶವನ್ನು ಎತ್ತಿ ಹಿಡಿದಿದೆ. ಜಿಲ್ಲೆಯಲ್ಲೇ ಮೊದಲ ಬಾರಿಗೆ ಎನ್‌ಡಿಪಿಎಸ್ ಕಾಯ್ದೆಯಡಿ ಇಬ್ಬರನ್ನು ಬಂಧಿಸಲಾಗಿದ್ದು, ಕುಖ್ಯಾತ ಗರುಡ ಗ್ಯಾಂಗ್‌ನ ಸಕ್ರೀಯ ಸದಸ್ಯ ಕಬೀರ್ ಅಲಿಯಾಸ್ ಕಬೀರ್ ಹುಸೇನ್ ಮತ್ತು ಕೃಷ್ಣ ಆಚಾರಿ ಅಲಿಯಾಸ್ ಕೃಷ್ಣ ಜಲಗಾರ ವಿರುದ್ದ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಗರುಡ ಗ್ಯಾಂಗ್ ಸದಸ್ಯ ಹಾಗೂ ಉಡುಪಿ ಸೇರಿ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಹ ತನ್ನ ಅಪರಾಧಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಕುಖ್ಯಾತ ಆರೋಪಿ ಕಬೀರ್ ವಿರುದ್ದ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಲು ಮನವಿ ಸಲ್ಲಿಸಲಾಗಿತ್ತು. ಈತನ ವಿರುದ್ಧ 2005ನೇ ಸಾಲಿನಿಂದ ಇಲ್ಲಿಯವರೆಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಎರಡು ಪ್ರಕರಣಗಳಲ್ಲಿ ಸಜೆಯಾಗಿದ್ದು, ಎಂಟು ಪ್ರಕರಣಗಳಲ್ಲಿ ಸಾಕ್ಷಿದಾರರು ಪ್ರತಿಕೂಲ ಸಾಕ್ಷಿ ನುಡಿದದ್ದರಿಂದ ಖುಲಾಸೆ, ಮೂರು ಪ್ರಕರಣಗಳು ರಾಜಿಯಲ್ಲಿ ಮುಕ್ತಾಯವಾಗಿದ್ದು, 02…
ಉಡುಪಿ: ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವ ಸಂದರ್ಭದಲ್ಲಿ ಅವರ ಬೆಂಬಲಿಗರೆನ್ನಲಾದ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕಾರಿಗೆ ಗುದ್ದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಜಿರೆಯ ನಿವಾಸಿಗಳಾದ ಸೃಜನ್ ಎಲ್., ಹಿತೇಶ್ ಶೆಟ್ಟಿ, ಸಹನ್ ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜೊತೆಗೆ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಎಲ್ ಸಂತೋಷ್ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನಲೆ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಅರೆಸ್ಟ್ ಮಾಡಿದ್ದರು. ಅವರನ್ನು ಉಜಿರೆಯಿಂದ ಬ್ರಹ್ಮಾವರಕ್ಕೆ ಕರೆತರುತಿದ್ದಾಗ, ಅವರ ಬೆಂಬಲಿಗರನ್ನೆಲಾದ ಕೆಲವರು ಪೊಲೀಸ್ ವಾಹನ ಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು,…
ಬೆಂಗಳೂರು: ಟ್ರಾಫಿಕ್ ಉಲ್ಲಂಘನೆ ದಂಡ ಪಾವತಿ ಮಾಡಲು ಸಾರಿಗೆ ಇಲಾಖೆ ಮತ್ತೊಮ್ಮೆ ರಿಯಾಯಿತಿ ಘೋಷಿಸಿ ಆದೇಶಿಸಿದೆ. ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟದ ವಾಹನ ಮಾಲೀಕರಿಗೆ ಬರೋಬ್ಬರಿ ಶೇಕಡಾ 50ರಷ್ಟು ರಿಯಾಯಿತಿ ನೀಡಲಾಗಿದೆ. ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅಧಿಕೃತ ಆದೇಶ ಹೊರಡಿಸಿದ್ದು, ದಂಡದ ಅರ್ಧದಷ್ಟು ಹಣ ತುಂಬಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದ್ದು, 50% ರಷ್ಟು ದಂಡ ಪಾವತಿ ಮಾಡಲು ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಫಿಫ್ಟಿ ಪರ್ಸೆಂಟ್ ಡಿಸ್ಕೌಂಟ್ ಆಫರ್ 2023ರ ಫೆಬ್ರವರಿ 11ರವರೆಗೆ ದಾಖಲಾದ ಪ್ರಕರಣಗಳಿಗೆ ಅನ್ವಯವಾಗಲಿದೆ. 2023ರ ಫೆಬ್ರವರಿ 12ರ ನಂತರದ ಪ್ರಕರಣಗಳಿಗೆ ಇದು ಅನ್ವಯವಾಗುವುದಿಲ್ಲ. ಯಾಕಂದ್ರೆ, ಬಹಳ ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಬಾಕಿ ಉಳಿಸಿಕೊಂಡವರಿಗೆ ಈ ಆಫರ್ ನೀಡಲಾಗಿದೆ. ಇನ್ನುಳಿದಂತೆ 2023ರ ಫೆಬ್ರವರಿ 12ರ ನಂತರದ ಕೇಸ್ ಗಳಿಗೆ ಮುಂದಿನ ವರ್ಷ ಆಫರ್ ನೀಡುವ ಸಾಧ್ಯತೆಗಳಿವೆ. ದಂಡ…
ಕಾರ್ಕಳ: ಚಲಿಸುತ್ತಿರುವಾಗಲೇ ಮಾರುತಿ 800 ಕಾರು ಹೊತ್ತಿ ಉರಿದ ಘಟನೆ ಸಾಣೂರು ಪೆಟ್ರೋಲ್ ಬಂಕ್ ಎದುರು ರಸ್ತೆಯಲ್ಲಿ ನಡೆದಿದೆ. ಬಂಗ್ಲೆಗುಡ್ಡೆ ನಿವಾಸಿಯೊಬ್ಬರು ಈ ಹಳೆಯ ಕಾರನ್ನು ಬಳಸುತ್ತಿದ್ದರು. ಇಂಧನ ಟ್ಯಾಂಕಿನಿಂದ ಪೆಟ್ರೋಲ್ ಸೋರಿಕೆ ಆರಂಭವಾಗಿದ್ದು ಅದು ಅವರ ಗಮನಕ್ಕೆ ಬಂದಿರಲಿಲ್ಲಿ. ಸಾಣೂರಿಗೆ ತಲುಪಿದಾಗಿ ಎಂಜಿನಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸೋರುತ್ತಿದ್ದ ಪೆಟ್ರೋಲ್‌ಗೆ ಬೆಂಕಿ ತಗಲಿದೆ. ತತ್‌ಕ್ಷಣವೇ ಅವರು ಕಾರಿನಿಂದ ಇಳಿದು ಪ್ರಣಾಪಾಯದಿಂದ ಪಾರಾಗಿದ್ದಾರೆ. ಕಾರು ಬೆಂಕಿಗಾಹುತಿಯಾಗಿದೆ. ಮಾಹಿತಿ ತಿಳಿದ ಕೂಡಲೆ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಪ್ರಮುಖರಾದ ಅಚ್ಯುತ ಕರ್ಕೇರ, ಹರಿಪ್ರಸಾದ್, ಜಯ ಮೂಲ್ಯ, ದಿನೇಶ್ ಕಾರ್ಯಾಚರಣೆ ನಡೆಸಿದರು.










