Author: main-admin

ಮಂಗಳೂರು: ಸಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಷರತ್ತು ವಿದಿಸಿರುವುದನ್ನು ಖಂಡಿಸಿ, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಸಂಘಟನೆಗಳ ನಿರ್ಧಾರದ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬಹಿಷ್ಕಾರ ಸೇರಿದಂತೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರು ಸ್ವತಂತ್ರರಾಗಿದ್ದಾರೆ. ಆದರೆ ಕಾನೂನು ಸ್ಪಷ್ಟವಾಗಿದ್ದು, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಸಾರ್ವಜನಿಕರು, ಹಿರಿಯ ನಾಗರಿಕರು, ರೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಆಚರಣೆಗಳು ನಡೆಯುವಂತೆ ನೋಡಿಕೊಳ್ಳಲು ಅದಕ್ಕೆ ತಕ್ಕಂತೆ ಹೊಂದಿಕೊಳ್ಳುವ ಕೆಲವು ವ್ಯವಸ್ಥೆಗಳನ್ನು ಮಾಡುತ್ತೇವೆ ಎಂದು ಭರವನೆ ನೀಡಿದ್ದಾರೆ. ಗಣೇಶ ಹಬ್ಬದ ಆಯೋಜಕರ ಸಭೆ ಇಂದು ನಡೆಯಲಿದ್ದು, ಈ ಸಭೆಯಲ್ಲಿ ಡಿಸಿಪಿ, ಹೆಚ್ಚುವರಿ ಎಸ್ಪಿ ಡಿಕೆ ಮತ್ತು ಎಸಿಪಿಗಳು ಭಾಗವಹಿಸಲಿದ್ದು, ಇಲ್ಲಿ ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ನಿಯಮಗಳಿವೆ ನಿಜ, ಆದರೆ ನಿಯಮಗಳಿಗೆ ಕೆಲವು ವಿನಾಯಿತಿಗಳನ್ನು ಸಮರ್ಥನೀಯ ಕಾರಣಗಳಿಗಾಗಿ ನೀಡಬಹುದು. ಆದರೆ ವಿನಾಯಿತಿಗಳೇ ನಿಯಮಗಳಾಗಲು ಸಾಧ್ಯವಿಲ್ಲ ಎಂದು ಕಮೀಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ನಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಶಬ್ದವನ್ನು 50 ಡೆಸಿಬಲ್‌ಗೆ ಸೀಮಿತಗೊಳಿಸಬೇಕು…

Read More

ಪುತ್ತೂರು: ದೂರು ವಾಪಸ್ ಪಡೆದುಕೊಳ್ಳುವಂತೆ ಹೇಳಿ ವ್ಯಕ್ತಿಯೋರ್ವರಿಗೆ ಬೆದರಿಕೆಯೊಡ್ಡಿರುವ ಕುರಿತು ಪೋಲಿಸರಿಗೆ ದೂರು ನೀಡಲಾಗಿದೆ. ಕಲ್ಲಾರೆ ರಾಘವೇಂದ್ರ ಮಠದ ಬಳಿಯ ನಿವಾಸಿ ಗುರುಪ್ರಸಾದ್ ನಾಯಕ್ ಎನ್(45ವ) ಎಂಬವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಆ.19 ರಂದು ಸಂಜೆ ಆರೋಪಿಗಳಾದ ಸಂತ ಫಿಲೋಮಿನಾ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ರೇಶ್ಮಾ ಮರಿಯಾ ರೆಬೆಲ್ಲೋ ಮತ್ತು ಅದೇ ಶಾಲೆಯ ಶಿಕ್ಷಕ ಪತಿ ಕ್ಲೆಮೆಂಟ್ ಪಿಂಟೊ ಎಂಬವರು ನಮ್ಮ ಮನೆಯ ಆವರಣದೊಳಗೆ ಅಕ್ರಮವಾಗಿ ಪ್ರವೇಶಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ನಿನ್ನ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ಕೊಡುತ್ತೇವೆ, ನೀನು ದೂರನ್ನು ವಾಪಸ್ಸು ಪಡೆಯಬೇಕು ಎಂದು ಹೇಳಿ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ. ಶಿಕ್ಷಕಿ ರೇಷ್ಮಾ ಮೇರಿ ರೆಬೆಲ್ಲೋರವರು ಪುತ್ತೂರು ಸಂತ ಫಿಲೋಮಿನಾ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದು , ಇವರು ಕರ್ನಾಟಕ ಸರಕಾರದ ಸುಮಾರು ಎಂಟು ಲಕ್ಚಕ್ಕೂ ಅಧಿಕ ಮೊತ್ತವನ್ನು ವಂಚಿಸಿರುವ ಬಗ್ಗೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಕ್ರಮ, ಜೊತೆಗೆ ಅವರ ಸೇವಾ ವಿವರಗಳನ್ನು ಮಾಹಿತಿ…

Read More

ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯ ಬಂಧನದ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌ ನಿಯೋಜಿಸಲಾಗಿದೆ. ಗುರುವಾರ ಉಡುಪಿ ಜಿಲ್ಲೆಯ ಪೊಲೀಸರು ಧರ್ಮಸ್ಥಳಕ್ಕೆ ತೆರಳಿ ವಶಕ್ಕೆ ಬಂಧಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದು, ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಜಾಮೀನು ರಹಿತ ಪ್ರಕರಣವಿದೆ. ಇಲಾಖೆಯಿಂದ ನೀಡಿದ ಎರಡು ನೋಟಿಸ್‌ಗೆ ಉತ್ತರ ನೀಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿ ಇರಲಿಲ್ಲ. ಈತ ಪುನರಾವರ್ತಿತ ಆರೋಪಿ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಇದೀಗ ಅವರ ವಕೀಲರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಠಾಣೆಯ ಸುತ್ತ ಬಿಗಿ ಬಂದೋಬಸ್ತು ಏರ್ಪಡಿಸಲಾಗಿದೆ.

Read More

ಮಂಗಳೂರು ನಗರದ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಈ ಕಳ್ಳತನ ಪ್ರಕರಣದಲ್ಲಿ ಈಗಾಗಲೇ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಗಾಡ್ ನ ಆರ್ಷದ್ ಎಂಬಾತರು ದಸ್ತಗಿರಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್ ಕಳ್ಳತನದ ಮುಖ್ಯ ಸಂಚುಕೋರನಾದ ಅಬ್ದುಲ್ ಲತೀಫ್ @ ಲತೀಫ್ ಪ್ರಾಯ 47 ವರ್ಷ ತಂದೆ : ಕುಂಜಿ ಅಬ್ದುಲ್ಲಾ ವಾಸ: ಮಂಡಿಯಾನ್ ಮನೆ, ಅರಿಕಾರ ಅಂಚೆ ಬಳಲಿ, ತಾಲ್ಲೂಕು : ವೆಲ್ಲರಿಕುಂಡು, ಜಿಲ್ಲೆ : ಕಾಸರಗೋಡು, ಕೇರಳ ರಾಜ್ಯ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಅಬ್ದುಲ್ ಲತೀಫ್ @ ಲತೀಫ್ ಎಂಬಾತನ ಮೇಲೆ ಈ…

Read More

ಬಂಟ್ವಾಳ : ಮಂಗಳವಾರ ನಡೆದ ನಾಟಕೀಯ ಘಟನೆಯಲ್ಲಿ, ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿಯೊಬ್ಬ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾಗ, ಮಂಚಿ ಬಳಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದ. ಶಿಬಿನ್ ಮತ್ತು ಸೈಯದ್ ಮೊಹಮ್ಮದ್ ಅಮೀನ್ ಅವರೊಂದಿಗೆ ಮೊಹಮ್ಮದ್ ರಾಝಿಕ್ ಎಂಬ ಆರೋಪಿಗಳು ಮಂಜೇಶ್ವರ ಪ್ರದೇಶದಿಂದ ಮಂಚಿ ಮಾರ್ಗವಾಗಿ ಟಾಟಾ ಪಂಚ್ ಕಾರಿನಲ್ಲಿ ಹೋಗಿದ್ದರು. ಬಂಟ್ವಾಳ ಕಡೆಗೆ ವೇಗವಾಗಿ ಹೋಗುತ್ತಿದ್ದಾಗ, ರಾಝಿಕ್ ಕಾರು ಮಂಚಿ ಬಳಿ ಮಾರುತಿ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ವಾಹನವನ್ನು ನಿಕಟವಾಗಿ ಹಿಂಬಾಲಿಸುತ್ತಿದ್ದ ಮಂಜೇಶ್ವರ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದರು. ಡಿಕ್ಕಿಯ ನಂತರ, ರಾಝಿಕ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು, ಆದರೆ ಅಂತಿಮವಾಗಿ ಪೊಲೀಸರು ಆತನನ್ನು ಬಂಧಿಸಿದರು. ಕಾರಿನಲ್ಲಿದ್ದ ಇತರ ಇಬ್ಬರು ಆರೋಪಿಗಳನ್ನು ಸ್ಥಳದಲ್ಲೇ ಬಂಧಿಸಲಾಯಿತು. ಅಪಘಾತದಲ್ಲಿ ಎರಡೂ ಕಾರುಗಳು ಹಾನಿಗೊಳಗಾಗಿವೆ; ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಮಾತ್ರ ರಾಝಿಕ್ ಆರೋಪಿಯಲ್ಲ, ಹಿಂದಿನ ವಾರಂಟ್…

Read More

ಪುತ್ತೂರು : ಸಹಪಾಠಿ ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್ ವಿರುದ್ಧ ಮಹತ್ವದ ಬೆಳವಣಿಗೆ ನಡೆದಿದೆ. ಸಂತ್ರಸ್ತೆ ಜೂನ್ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಹಿನ್ನೆಲೆಯಲ್ಲಿ, ಮಗು 50 ದಿನಗಳಾದ ನಂತರ ಇಂದು (ಆ.19) ಪುತ್ತೂರಿನ ನ್ಯಾಯಾಲಯದಲ್ಲಿ ಸಂತ್ರಸ್ತೆ, ಮಗು ಹಾಗೂ ಆರೋಪಿ ಮೂವರ ಡಿಎನ್‌ಎ ಪರೀಕ್ಷೆ ನಡೆಯಿತುಮಂಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಪೊಲೀಸರು ಮಧ್ಯಾಹ್ನ ನ್ಯಾಯಾಲಯಕ್ಕೆ ಕರೆ ತಂದರು. ಈ ಸಂದರ್ಭದಲ್ಲಿ ಸಂತ್ರಸ್ತೆ ಯುವತಿ, ಮಗು ಮತ್ತು ಯುವತಿಯ ತಾಯಿ ಹಾಜರಿದ್ದರು. ನ್ಯಾಯಾಧೀಶರ ಸಮ್ಮುಖದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯರ ನೇತೃತ್ವದಲ್ಲಿ ವಿಧಿವಿಜ್ಞಾನ ಇಲಾಖೆಯ ಸಿಬ್ಬಂದಿ ಮೂವರ ರಕ್ತದ ಮಾದರಿಗಳನ್ನು ಸಂಗ್ರಹಿಸಿದರು. ಸಂಗ್ರಹಿಸಿದ ಮಾದರಿಗಳನ್ನು ಡಿ.ಎನ್‌ಎ ಪರೀಕ್ಷೆಗಾಗಿ ಬೆಂಗಳೂರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ಬಸ್ ಮೂಲಕ ಅವುಗಳನ್ನು ಬೆಂಗಳೂರಿಗೆ ಸಾಗಿಸಿದರು. ಸಂತ್ರಸ್ತೆಯ ತಾಯಿಯೂ ಮಾದರಿಗಳ ಭದ್ರತೆಗಾಗಿ ಅವರೊಂದಿಗೆ ತೆರಳಿದ್ದಾರೆ. ಈ…

Read More

ನವದೆಹಲಿ: ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯ ಸಚಿವರು ಬಂಧನಕ್ಕೊಳಗಾದರೆ, ಅವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಬುಧವಾರ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಂವಿಧಾನ (130ನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಸರ್ಕಾರ (ತಿದ್ದುಪಡಿ) ಮಸೂದೆ ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ರಚನೆ (ತಿದ್ದುಪಡಿ) ಮಸೂದೆ– 2025 ಅನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಇಂದು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಈ ಮೂರೂ ಮಸೂದೆಗಳನ್ನು ಹೆಚ್ಚಿನ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಒಪ್ಪಿಸುವ ಗೊತ್ತುವಳಿಯನ್ನೂ ಅಮಿತ್ ಶಾ ಅವರು ಮಂಡಿಸಲಿದ್ದಾರೆ. ಮಸೂದೆಯ ಪ್ರಕಾರ, 30 ದಿನಗಳ ಕಾಲ ನಿರಂತರ ಬಂಧನದಲ್ಲಿದ್ದವರನ್ನು 31ನೇ ದಿನ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸಲಾಗುತ್ತದೆ. ಆದರೆ, ಬಂಧನದಿಂದ ಬಿಡುಗಡೆ ಆದವರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿ ಅಥವಾ ಸಚಿವರನ್ನಾಗಿ ನೇಮಿಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಗಂಭೀರ ಸ್ವರೂಪದ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಅಥವಾ ರಾಜ್ಯಗಳ ಸಚಿವರನ್ನು ಬಂಧಿಸಿ, ನ್ಯಾಯಾಂಗ…

Read More

ಬೆಂಗಳೂರು : ಕರ್ನಾಟಕದಲ್ಲಿ ಕಳೆದ 5 ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಹೌದು, ಕರ್ನಾಟಕದಲ್ಲಿ 5 ವರ್ಷಗಳಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದು, ಈ ಪೈಕಿ 1,336 ಮಕ್ಕಳು ಇನ್ನೂ ನಿಗೂಢವಾಗಿದ್ದಾರೆ. ಕಿಡ್ನಾಪ್ ಹಾಗೂ ನಿಗೂಢ ಆದವರ ಪೈಕಿ ಹೆಣ್ಣು ಮಕ್ಕಳೇ ಹೆಚ್ಚಾಗಿದ್ದಾರೆ ಎಂದು ರಾಜ್ಯ ಸರ್ಕಾರದ ಮಾಹಿತಿ ಹೊರಬಿದ್ದಿದೆ. ಈ ವರ್ಷ ಜುಲೈ ಅಂತ್ಯಕ್ಕೆ 2,170 ಮಕ್ಕಳು ನಾಪತ್ತೆಯಾಗಿದ್ದಾರೆ. ಕಾಣೆಯಾದವರ ಮಕ್ಕಳ ಪೈಕಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ದಾವಣಗೆರೆ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಚಿತ್ರದುರ್ಗ, ತುಮಕೂರು, ಮೈಸೂರು ನಂತರ ಸ್ಥಾನದಲ್ಲಿವೆ. 2020ರಿಂದ ಈವರೆಗೂ ರಾಜ್ಯದಲ್ಲಿ 14,878 ಮಕ್ಕಳು ನಾಪತ್ತೆ ಪ್ರಕರಣ ದಾಖಲಾಗಿದ್ದು, ಈ ಪೈಕಿ 13,542 ಪ್ರಕರಣಗಳಲ್ಲಿ ಮಕ್ಕಳು ಪೋಷಕರ ಮಡಿಲಿಗೆ ಸೇರಿದ್ಧಾರೆ. ಬಾಕಿ 1,336 ಮಕ್ಕಳು ನಿಗೂಢವಾಗಿದ್ದಾರೆ. ಅಪಹರಣಕ್ಕೆ ಒಳಗಾದ 10,792 ಹೆಣ್ಣು ಮಕ್ಕಳ ಪೈಕಿ 1,003 ಕಾಣೆಯಾಗಿದ್ದಾರೆ. 4,086 ಗಂಡು ಮಕ್ಕಳ ಪೈಕಿ…

Read More

ಮಂಗಳೂರು: Brand Protectors India Pvt. Ltd  ನ South India regional head ಸ್ಟೀಫನ್ ರಾಜ್‍ ರವರ ದೂರಿನ ಪ್ರಕಾರ ಉಳ್ಳಾಲ ಠಾಣಾ ವ್ಯಾಪ್ತಿಯ SPORTS WINNER ಅಂಗಡಿ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದೇವ್ ಸ್ಪೋಟ್ಸ್‍ ಸೆಂಟರ್‍ ನಲ್ಲಿ COSCO, NIVIA  & YONEX ಬ್ರಾಂಡ್ ಎಂದು ಹಾಕಿರುವ ನಕಲಿ ಫುಟ್ ಬಾಲ್‍ಗಳು, ವಾಲಿಬಾಲ್ ಗಳು ಹಾಗೂ ಬ್ಯಾಡ್ಮಿಂಟನ್ ರಾಕೆಟ್‍ಗಳು ಮಾರಾಟವಾಗುತ್ತಿರುವ ಬಗ್ಗೆ ದೂರು ನೀಡಿದ ಮೇರೆಗೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ   ಮತ್ತು ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 18-8-2025 ರಂದು ಮತ್ತು ಮಂಗಳೂರು ಉತ್ತರ ಠಾಣೆ ವ್ಯಾಪ್ತಿಯಲ್ಲಿ ದಿನಾಂಕ 19-8-2025 ರಂದು ದಾಳಿ ಮಾಡಿ ಸುಮಾರು 300 ನಕಲಿ ವಾಲಿಬಾಲ್‍ಗಳು, ಫುಟ್‍ ಬಾಲ್‍ಗಳು ಹಾಗೂ ಬ್ಯಾಡ್ಮಿಂಟನ್ ರಾಕೆಟ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Read More

ಮಂಗಳೂರು: ಉಪ್ಪಿನಂಗಡಿ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಸರಗಳ್ಳತನದ ಆರೋಪಿಯೊಬ್ಬನನ್ನು ಬಂಧಿಸಿ ರೂ 5,05,000 ಮೌಲ್ಯದ ಸೊತ್ತು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.4 ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಆರೋಪಿ ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪುತ್ತೂರಿನ ನೆಕ್ಕಿಲಾಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿತನಿಂದ ಅಂದಾಜು ರೂ 4,54,000/-ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ…

Read More