ಕಾರ್ಕಳ : ಮಹಿಳೆ ವಿರುದ್ದ ಸುಳ್ಳು ಆರೋಪಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಮಾನನಷ್ಟ ಪರಿಹಾರ ನೀಡುವಂತೆ ಕಾರ್ಕಳ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯವು ತೀರ್ಪು ನೀಡಿದೆ. ಮಾಳ ಗ್ರಾಮದ ನಿವಾಸಿ ಚಂದ್ರಾವತಿ ಮತ್ತು ಅವರ ಗಂಡ ಮೋನಪ್ಪ ಗೌಡ ಎಂಬವರು ಮುಡಾರು ಗ್ರಾಮದ ಲಕ್ಷ್ಮೀ ಎಂಬವರ ಮನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಲಕ್ಷ್ಮೀ ಅವರು ಕೆಲಸದವರು ತೋಟದಲ್ಲಿ ಅಡಿಕೆ ಕಳ್ಳತನ ಮಾಡಿದ್ದಾರೆ ಎಂದು ತನ್ನ ಮಗಳು ಆರತಿ ಅಶೋಕ್ ಮೂಲಕ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ವೇಳೆ ದೂರಿನಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂಬ ಕಾರಣಕ್ಕೆ ಅಂದಿನ ಠಾಣಾಧಿಕಾರಿ ಪ್ರಕರಣ ಮುಕ್ತಾಯಗೊಳಿಸಿದ್ದರು. ಆದರೆ, ಲಕ್ಷ್ಮೀ ಮತ್ತು ಆಕೆಯ ಮಗಳು ಆರತಿ ಅಶೋಕ್ ನೀಡಿದ ಸುಳ್ಳು ದೂರಿನ ಪರಿಣಾಮ ನನ್ನ ಘನತೆಗೆ ಧಕ್ಕೆಯಾಗಿದೆ. ಅಲ್ಲದೆ ಇದರಿಂದಾಗಿ ಮಗಳ ಮದುವೆಗೂ ತೊಂದರೆಯಾಗಿದೆ ಎಂದು ತಮಗಾಗಿರುವ ಮಾನನಷ್ಟಕ್ಕೆ ಚಂದ್ರಾವತಿ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಪರಿಹಾರ ಕೇಳಿ ವ್ಯಾಜ್ಯ ಸಲ್ಲಿಸಿದ್ದರು. ನ್ಯಾಯಾಲಯವು ವಿಚಾರಣೆ ನಡೆಸಿ,…
Author: main-admin
ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿ, ಪಾರ್ಲರ್ ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ಮಂಗಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬಿಜೈ ಬಳಿಯ ಕಲರ್ಸ್ ಬ್ಯೂಟಿ ಪಾರ್ಲರ್ ನಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಮಸಾಜ್ ಸೆಂಟರ್ ಗೆ ದಾಳಿ ನಡೆಸಿ ಶ್ರೀರಾಮ ಸೇನೆ ಗಲಾಟೆ ನಡೆಸಿದ್ದು, ಸ್ಪಾ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬಿಜೈ ಬಳಿಯ ಕಲರ್ಸ್ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ದಾಳಿ ಮಾಡಿ ಅನೈತಿಕ ಪುಂಡಾಟಗೆ ನಡೆಸಿದೆ.ಮಸಾಜ್ ಸೆಂಟರ್ ಮೇಲೆ ಶ್ರೀರಾಮ ಸೇನೆ ದಾಳಿ ಮಾಡಿದೆ ಮಂಗಳೂನ ಬಿಜೆ ಕೆಎಸ್ಆರ್ಟಿಸಿ ಬಳಿ ಇರುವ ಮಸಾಲ್ ಸೆಂಟರ್ ಬಳಿ ಶ್ರೀರಾಮ ಸೇನೆ ಅನೈತಿಕ ಪೊಲೀಸ್ ಗಿರಿ ನಡೆಸಿದೆ. ಸೆಂಟರ್ ಮೇಲೆ ದಾಳಿ ನಡೆಸಿ ಪಿಟೋಪಕರಣ ದುಹಂಸ ಮಾಡಿದೆ.ಅನೈತಿಕ…
ಮೂಡುಬಿದಿರೆ: ಬಸ್ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಬಸ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಮಹಿಳೆಯರು ಪ್ರತಿನಿತ್ಯ ಶಾಲೊಮ್ ಬಸ್ ನಲ್ಲಿ ಕೆಲಸಕ್ಕೆ ಬರುತ್ತಿದ್ದರು, ಕೆಲವೊಮ್ಮೆ ಬೇರೆ ಬಸ್ ಗಳಲ್ಲಿ ಸಂಚರಿಸುತ್ತಿದ್ದರು. ಈ ನಡುವೆ ಬಸ್ ಕಂಡಕ್ಟರ್ ಪ್ರಶಾಂತ್ ಪೂಜಾರಿ ಪ್ರತಿ ದಿನ ಇದೇ ಬಸ್ಸಿನಲ್ಲಿ ಬರದಿದ್ದರೆ ರಿಯಾಯಿತಿ ದರದಲ್ಲಿ ಟಿಕೆಟ್ ನೀಡಲು ಆಗದು ಎಂದು ನಿರಾಕರಿಸಿದ್ದಾನೆ ಎಂದು ಹೇಳಲಾಗಿದ್ದು, ಇದೇ ವಿಚಾರಕ್ಕೆ ಮಹಿಳಾ ಪ್ರಯಾಣಿರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ವಿಷಯಕ್ಕೆ ಮಹಿಳೆ ಜತೆ ವಾಗ್ವಾದ ನಡೆಸಿದ್ದ ನಿರ್ವಾಹಕ ಆಕೆಗೆ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ. ಆತನ ವಿರುದ್ಧ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಕಳ: ಕಾರ್ಕಳದ ಸನೂರಿನಲ್ಲಿ ಗುರುವಾರ ಬೆಳಿಗ್ಗೆ ನಿಂತಿದ್ದ ಟೆಂಪೋಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಳಗಾವಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಚಿಕ್ಕೋಡಿ ಡಿಪೋದಿಂದ ಹೊರಟಿದ್ದ ಸರ್ಕಾರಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಸನೂರಿನ ರಾಮ ಮಂದಿರದ ಬಳಿ ಈ ಘಟನೆ ನಡೆದಿದೆ.ಪರಿಣಾಮ ಬಸ್‌ನ ಮುಂಭಾಗದ ಭಾಗವು ತೀವ್ರವಾಗಿ ಹಾನಿಗೊಳಗಾಗಿದ್ದು, ಹಲವಾರು ಪ್ರಯಾಣಿಕರು ಮತ್ತು ಚಾಲಕರಿಗೆ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಉಡುಪಿ : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ದೂರದಾರರು 9/11 ದಾಖಲೆ ಮಾಡಿಕೊಡಲು ಗಂಗೊಳ್ಳಿ ಗ್ರಾಮಪಂಚಾಯತ್ ಗೆ ತೆರಳಿದ್ದರು, ಈ ವೇಳೆ ಗ್ರಾಮ ಪಂಚಾಯತ್ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರು 27 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, ಆದರೆ ಹಣ ನೀಡಲು ಹಿಂದೇಟು ಹಾಕಿದ ದೂರುದಾರರು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಿಗೆ ದೂರು ನೀಡಿರುತ್ತಾರೆ. ನಿನ್ನೆ ಬೆಳಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಕಚೇರಿಯಲ್ಲಿ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ರೂ.22,000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಸದರಿ ಅಧಿಕಾರಿಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ. ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್…
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಗಾಯಾಳು ಬೈಕ್ ಸವಾರನನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಉಡುಪಿ: ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಂಶ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಬಾಪ್ಟಿಸ್ ಮೌರಿಸ್ ಲೋಬೋ ಎಂಬವರ ಖಾತೆಯಿಂದ ಡಿಸೆಂಬರ್ 2ರಿಂದ ಜನವರಿ 6ರವರೆಗೆ ಒಟ್ಟು 21,39,903ರೂ. ಹಣವನ್ನು ತಮ್ಮ ಖಾತೆಗೆ ಹಾಕಿಕೊಂಡು ಹಣವನ್ನಾಗಲೀ ಅಥವಾ ಲಾಭಾಂಶವನ್ನಾಗಲೀ ನೀಡದೇ ನಂಬಿಸಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್ ಮಹಾಝ್ ಬಂಧಿತರು. ದೂರುದಾರ ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿಧ್ಯಾಭ್ಯಾಸನ್ನು ಯುಕೆ ಯಲ್ಲಿ ಮಾಡಲು ಬಯಸಿದ್ದರು. ಇವರು ದುಬೈಗೆ ತೆರಳಿ ಅಫ್ತಾಬ್ ನನ್ನು ಭೇಟಿ ಮಾಡಿದ್ದು , ನಂತರ UK ಯಲ್ಲಿ M.PH ವಿಧ್ಯಾಭ್ಯಾಸಕ್ಕಾಗಿ ಸೀಟಿಗೆ 18 ಲಕ್ಷಕ್ಕೆ ಇಬ್ಬರ ನಡುವೆ ಒಪ್ಪಂದವಾಗಿತ್ತು.ಅಫ್ತಾಬ್ ವಿದ್ಯಾರ್ಥಿಗೆ ಸೀಟನ್ನು ಖಾಯಂ ಮಾಡಲು ಮೊದಲಿಗೆ 8.5 ಲಕ್ಷವನ್ನು ನೀಡುವಂತೆ ಕೇಳಿದ್ದ.ಅದನ್ನು ವಿದ್ಯಾರ್ಥಿ ನೀಡಿದ್ದ. ನಂತರ ಆರೋಪಿಗಳು ವಿದ್ಯಾರ್ಥಿಯ ಕರೆಯನ್ನು ಸ್ವೀಕರಿಸದೇ ಯುಕೆಯಲ್ಲಿ M.PH ವಿಧ್ಯಾಭ್ಯಾಸಕ್ಕೆ ಸೀಟನ್ನೂ ಕೊಡಿಸದೇ ವಂಚಿಸಿದ್ದಾಗಿ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಮೂವರನ್ನು ಬಂಧಿಸಿರುವ ಪೊಲೀಸರು ಅವರಿಂದ 5 ಲಕ್ಷ ನಗದು , ಇನ್ನೋವಾ ಕಾರು ಮತ್ತು 2 ಮೊಬೈಲ್ ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ…
ವಿಟ್ಲ: ಅಡುಗೆ ಕೋಣೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅನಂತಾಡಿ ಗ್ರಾಮದ ಶಾಕೊಟ್ಟೆ ನಿವಾಸಿ ದಿ. ಹೊನ್ನಪ್ಪ ಗೌಡ ಅವರ ಪತ್ನಿ ಸುಶೀಲ(76) ಮೃತಪಟ್ಟ ಮಹಿಳೆ. ಕೆಲವು ದಿನಗಳ ಹಿಂದೆ ಸುಶೀಲ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬಂಧಿತ ವ್ಯಕ್ತಿ ಅತೀಕ್ ಅಹ್ಮದ್ ನನ್ನು ಜನವರಿ 20 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಎಂದು ಗುರುತಿಸಲಾದ ಅಹ್ಮದ್, ಜುಲೈ 2022 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನಡೆದ ಕೊಲೆಯ ನಂತರ ತಲೆಮರೆಸಿಕೊಂಡಿದ್ದ. ಜುಲೈ 2022 ರಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಎಂಬಾತನನ್ನು ಬರ್ಬರವಾಗಿ ಕೊಂದ ಪ್ರಕರಣದಲ್ಲಿ ಅತೀಕ್ ಅಹಮದ್ 21 ನೇ ಆರೋಪಿಯಾಗಿದ್ದಾನೆ. ಪ್ರಕರಣದ ಹಿನ್ನೆಲೆಬಿಜೆಪಿ ಯುವ ಮೋರ್ಚಾದ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೇಲೆ ಜುಲೈ 26, 2022 ರಂದು ರಾತ್ರಿ…










